ಉಗ್ರರ ದಾಳಿ ಕೇಂದ್ರದ ಪೂರ್ವ ನಿಯೋಜಿತ ಕೃತ್ಯ ಎಂದ ವ್ಯಕ್ತಿ ವಿರುದ್ಧ ಕೇಸ್
Pahalgam Terror Attack: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ಉಗ್ರರು ಪ್ರವಾಸಿಗರ ಮೇಲೆ ದಾಳಿ ಮಾಡಿದ್ದರು. ಆದರೆ, ಇದು ಬಿಹಾರ ಚುನಾವಣೆಯಲ್ಲಿ ಹಿಂದೂ ಮತಗಳ ಕ್ರೋಡೀಕರಿಸಲು ಮೋದಿ ಸರ್ಕಾರದ ಪೂರ್ವ ನಿಯೋಜಿತ ಕೃತ್ಯ ಎಂದು ವ್ಯಕ್ತಿ ಹೇಳಿದ್ದ. ಯೂಟ್ಯೂಬ್ ಚಾನೆಲ್ನಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಹಿನ್ನೆಲೆಯಲ್ಲಿ ವ್ಯಕ್ತಿ ವಿರುದ್ದ ಪ್ರಕರಣ ದಾಖಲಾಗಿದೆ.