ʼಕಾಂತಾರ ಚಾಪ್ಟರ್ 1ʼ ಚಿತ್ರದ ಜೂನಿಯರ್ ಆರ್ಟಿಸ್ಟ್ ಸಾವು?
ಆರಂಭದಲ್ಲೇ ಒಂದಲ್ಲ ಒಂದು ವಿಘ್ನಗಳನ್ನು ಎದುರಿಸುತ್ತಲೇ ಬಂದ ʼಕಾಂತಾರ ಚಾಪ್ಟರ್ 1ʼ ಚಿತ್ರತಂಡಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ʼಕಾಂತಾರ ಚಾಪ್ಟರ್ 1ʼ ಸಿನಿಮಾದಲ್ಲಿ ನಟಿಸುತ್ತಿದ್ದ ಜೂನಿಯರ್ ಕಲಾವಿದರೊಬ್ಬರು ನದಿಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.