ಪದಕ ವಿಜೇತರಿಗೆ ನಗದು ಬಹುಮಾನ ಹೆಚ್ಚಳ: ಸಿಎಂ ಘೋಷಣೆ!
ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ನೀಡುವ ನಗದು ಬಹುಮಾನವನ್ನು ಹೆಚ್ಚಿಸಲಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಗುರುವಾರ ನೃಪತುಂಗ ರಸ್ತೆಯಲ್ಲಿರುವ ಯವನಿಕಾದಲ್ಲಿ ನಡೆದಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಈ ಮಹತ್ವದ ವಿಷಯವನ್ನು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.