ಭಾರಿ ಮಳೆ ಮುನ್ಸೂಚನೆ; ಇಂದು ಉತ್ತರ ಕನ್ನಡ, ಉಡುಪಿಗೆ ರೆಡ್ ಅಲರ್ಟ್
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 21°C ಇರುವ ಸಾಧ್ಯತೆಯಿದೆ.