ಶತಕದ ಜತೆಯಾಟದಲ್ಲಿ ದಾಖಲೆ ಬರೆದ ಗಿಲ್-ಸುದರ್ಶನ್ ಜೋಡಿ
ಗುಜರಾತ್ ತಂಡದ ನಾಯಕ ಶುಭಮನ್ ಗಿಲ್ ಅವರು ಐಪಿಎಲ್ ಇತಿಹಾಸದಲ್ಲಿ 3500 ರನ್‌ಗಳನ್ನು ಪೂರ್ಣಗೊಳಿಸಿದ ಅತ್ಯಂತ ಕಿರಿಯ ಆಟಗಾರ ಮತ್ತು 25 ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.
IPL
ಹಾಲಿ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡುವ ಮೂಲಕ 10 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನದಲ್ಲಿದೆ. ಇನ್ನುಳಿದ 6 ಪಂದ್ಯಗಳ ಪೈಕಿ ಕನಿಷ್ಠ ಮೂರು ಪಂದ್ಯ ಗೆದ್ದರೂ ತಂಡ ಪ್ಲೇ ಆಫ್ ಪ್ರವೇಶಿಸಲಿದೆ. ಆದರೆ ತಂಡಕ್ಕೆ ತವರಿನ ತಂದ್ಯಗಳು ಕಂಟಕವಾಗುತ್ತಿದೆ. ಆಡಿದ ಎಲ್ಲ ಮೂರು ಪಂದ್ಯಗಳನ್ನು ಸೋತಿದೆ.
129 ಇನ್ನಿಂಗ್ಸ್‌ಗಳಲ್ಲಿ 4,949 ರನ್ ಗಳಿಸಿರುವ ರಾಹುಲ್, ಲಕ್ನೋ ವಿರುದ್ಧ 51 ರನ್ ಬಾರಿಸಿದರೆ ಡೇವಿಡ್ ವಾರ್ನರ್ ಮತ್ತು ವಿರಾಟ್ ಕೊಹ್ಲಿ ಸೇರಿ ಹಲವು ದಿಗ್ಗಜ ಆಟಗಾರರ ದಾಖಲೆಯನ್ನು ಮುರಿದು ಐಪಿಎಲ್‌ನಲ್ಲಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ವೇಗವಾಗಿ 5,000 ಐಪಿಎಲ್ ರನ್ ಗಳಿಸಿದ ಆಟಗಾರ ಎನಿಸಿಕೊಳ್ಳಲಿದ್ದಾರೆ.
ನ್ಯೂಸ್ 18 ರಾಜಸ್ಥಾನಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಬಿಹಾನಿ, ತಂಡಕ್ಕೆ ಗೆಲ್ಲಲು ಕೆಲವೇ ರನ್‌ಗಳ ಅಗತ್ಯವಿದ್ದರೂ ರಾಜಸ್ಥಾನ್ ಸೋಲು ಕಂಡಿತ್ತು. ಇಲ್ಲಿ ಏನೋ ತಪ್ಪು ನಡೆದಿದೆ. 2013 ರಲ್ಲಿ ರಾಜಸ್ಥಾನ್ ತಂಡದ ಆಟಗಾರರು ಸ್ಪಾಟ್ ಫಿಕ್ಸಿಂಗ್‌ನಲ್ಲಿ ಸಿಕ್ಕಿಬಿದ್ದರು. ಇದೀಗ ಈ ಆವೃತ್ತಿಯಲ್ಲಿಯೂ ಫಿಕ್ಸಿಂಗ್ ನಡೆಸಿದಂತೆ ಕಾಣುತ್ತಿದೆ ಎಂದು ಬಿಹಾನಿ ಗಂಭೀರ ಆರೋಪ ಮಾಡಿದ್ದಾರೆ.
ರಹಾನೆ ಹೇಳಿಕೆಯನ್ನು ಮುಂದಿಟ್ಟುಕೊಂಡು ಕ್ರಿಕೆಟ್ ವೆಬ್‌ಸೈಟ್‌ವೊಂದರ ಕ್ರಿಕೆಟ್ ವಿಶ್ಲೇಷಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನ್ಯೂಜಿಲ್ಯಾಂಡ್‌ನ ವೀಕ್ಷಕ ವಿವರಣೆಗಾರ ಸೈಮನ್ ಡೂಲ್ ಮತ್ತು ಭಾರತದ ಖ್ಯಾತ ಕಾಮೆಂಟೇಟರ್ ಹರ್ಷಾ ಭೋಗ್ಲೆ ಅವರು ತವರು ತಂಡಕ್ಕೆ ಅನುಕೂಲವಾಗುಂತಹ ಪಿಚ್ ನೀಡಲು ಬಂಗಾಳ ಕ್ರಿಕೆಟ್ ಸಂಸ್ಥೆ (ಸಿಎಬಿ) ನಿರಾಕರಿಸುತ್ತಿದ್ದರೆ, ಕೆಕೆಆರ್ ತಂಡ ತನ್ನ ತವರು ಮೈದಾನವನ್ನು ಬದಲಿಸಬೇಕು ಎಂದಿದ್ದರು.
ಟಾಸ್ ವೇಳೆ ಮೊರಿಸ್ಸನ್, ಶುಭಮನ್ ಗಿಲ್ ಬಳಿ, 'ಬಹಳ ಹ್ಯಾಂಡ್‌ಸಮ್ ಆಗಿ ಕಾಣುತ್ತಿದ್ದೀರಿ. ಸದ್ಯದಲ್ಲಿ ಮದುವೆ ಆಗುತ್ತೀರಾ, ಹೇಗೆ? ಮದುವೆ ಸಿದ್ಧತೆ ನಡೆಯತ್ತಿದೆಯೇ?’ ಎಂದು ಪ್ರಶ್ನಿಸಿದರು. ಇದಕ್ಕೆ ನಗುತ್ತಲೇ ಉತ್ತರಿಸಿದ ಗಿಲ್, ‘ಇಲ್ಲ, ಅದೆಲ್ಲಾ ಏನೂ ಇಲ್ಲ' ಎಂದರು. ಕ್ರಿಕೆಟ್ ಮೈದಾನದಲ್ಲಿ ಈ ರೀತಿಯ ಪ್ರಶ್ನೆ ಕೇಳುವುದು ಎಷ್ಟು ಸರಿ ಎಂದು ಕ್ರಿಕೆಟ್ ಅಭಿಮಾನಿಗಳು ಪ್ರಶ್ನಿಸಿದ್ದಾರೆ.
ಹಾಲಿ ಆವೃತ್ತಿಯಲ್ಲಿ ರಾಜಸ್ಥಾನ್ ತಂಡ ಆಡಿದ 8 ಪಂದ್ಯಗಳಲ್ಲಿ ಕೇವಲ 2 ಪಂದ್ಯಗಳನ್ನು ಗೆದ್ದು 4 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಕ್ಷೀಣ ಪ್ಲೇ-ಆಫ್ ಅವಕಾಶ ಹೊಂದಿರುವ ರಾಜಸ್ಥಾನ್‌ಗೆ ಇನ್ನು 6 ಪಂದ್ಯಗಳು ಬಾಕಿ ಉಳಿದಿವೆ. ಈ ಪೈಕಿ ಒಂದು ಪಂದ್ಯ ಸೋತರೂ ತಂಡ ಪ್ಲೇ-ಆಫ್ ರೇಸ್‌ನಿಂದ ಬಹುತೇಕ ಹೊರಬೀಳಲಿದೆ.
ಪಂಜಾಬ್ ಕಿಂಗ್ಸ್ 4ನೇ ಸ್ಥಾನದಲ್ಲಿದರೆ, ಲಕ್ನೋ ಸೂಪರ್ ಜೈಂಟ್ಸ್ 5ನೇ ಸ್ಥಾನಿಯಾಗಿದೆ. ಮುಂಬೈ ಇಂಡಿಯನ್ಸ್ (6), ರಾಜಸ್ಥಾನ್ ರಾಯಲ್ಸ್(8), ಸನ್‌ರೈಸರ್ಸ್ ಹೈದರಾಬಾದ್(9) ಮತ್ತು ಚೆನ್ನೈ ಸೂಪರ್ ಕಿಂಗ್ಸ್(10) ನೇ ಸ್ಥಾನದಲ್ಲಿದೆ. ಆರೆಂಜ್ ಕ್ಯಾಪ್ ಸಾಯಿ ಸುದರ್ಶನ್(417 ರನ್) ಮತ್ತು ಪರ್ಪಲ್ ಕ್ಯಾಪ್ ಪ್ರಸಿದ್ಧ್ ಕೃಷ್ಣ(16 ವಿಕೆಟ್) ಬಳಿ ಇದೆ.
GT vs KKR Match Highlights: ಶುಭಮನ್ ಗಿಲ್ (90 ರನ್) ಸ್ಪೋಟಕ ಬ್ಯಾಟಿಂಗ್ ಹಾಗೂ ರಶೀದ್ ಖಾನ್ ಸ್ಪಿನ್ ಮೋಡಿಯ ಬಲದಿಂದ ಗುಜರಾತ್ ಟೈಟನ್ಸ್ ತಂಡ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 39ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ 39 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ 12 ಅಂಕಗಳೊಂದಿಗೆ ಅಗ್ರ ಸ್ಥಾನವನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿತು.
ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದಿದ್ದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಜಿಟಿ ಪರ ನಾಯಕ ಶುಭಮನ್ ಗಿಲ್ ಅದ್ಭುತ ಬ್ಯಾಟ್ ಮಾಡಿ 55 ಎಸೆತಗಳಲ್ಲಿ 90 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆ ಮೂಲಕ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಬಾರಿ 90 ರನ್‌ಗಳಿಗೆ ವಿಕೆಟ್ ಒಪ್ಪಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯ ಅಗತ್ಯ ದಾಖಲೆಯನ್ನು ಸರಿಗಟ್ಟಿದ್ದಾರೆ.
Virender Sehwag on Maxwell, Livingstone: ಪ್ರಸ್ತುತ ನಡಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತುರುವ ಪಂಜಾಬ್ ಕಿಂಗ್ಸ್‌ನ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಹ್ ಟೀಕಿಸಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು 2024-25ರ ಸಾಲಿನ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಏಪ್ರಿಲ್ 21 ರಂದು ಪ್ರಕಟಿಸಿದ್ದು, ಶ್ರೇಯಸ್ ಅಯ್ಯರ್ ಹಾಗೂ ಇಶಾನ್ ಕಿಶನ್‌ಗೆ ಸ್ಥಾನ ಕಲ್ಪಿಸಲಾಗಿದೆ. ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಒಟ್ಟು 34 ಆಟಗಾರರಿಗೆ ಸ್ಥಾನ ನೀಡಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ನಾಲ್ವರು ಆಟಗಾರರಿಗೆ ಎ+ ಗ್ರೇಡ್‌ನಲ್ಲಿ ಸ್ಥಾನವನ್ನು ನೀಡಲಾಗಿದೆ.
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 73 ರನ್‌ಗಳ ಅದ್ಭುತ ಇನಿಂಗ್ಸ್‌ನೊಂದಿಗೆ ಆರ್‌ಸಿಬಿ ಗೆಲುವಿಗೆ ನೆರವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಪ್ರಶಸ್ತಿಯೊಂದಿಗೆ ಅವರು ರೋಹಿತ್ ಶರ್ಮಾ ಅವರ 19 ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಸರಿಗಟ್ಟಿದ್ದರು. ಇದಾದ ಕೆಲವೇ ಗಂಟೆಗಳನ್ನು ಕೊಹ್ಲಿಯನ್ನು ರೋಹಿತ್ ಶರ್ಮಾ ಹಿಂದಿಕ್ಕಿದ್ದಾರೆ.
MS Dhoni on CSK's loss against MI: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರದರ್ಶನ ನಿರಾಶಾದಾಯಕವಾಗಿದೆ. ಆರಂಭಿಕ ಗೆಲುವಿನ ನಂತರ, ಸಿಎಸ್‌ಕೆ ಸತತ ಸೋಲುಗಳನ್ನು ಅನುಭವಿಸಿದೆ. 8 ಪಂದ್ಯಗಳಿಂದ ಕೇವಲ 4 ಅಂಕಗಳೊಂದಿಗೆ ಚೆನ್ನೈ ಪಾಯಿಂಟ್ಸ್ ಟೇಬಲ್‌ನ್ಲಿ ಕೊನೆಯ ಸ್ಥಾನದಲ್ಲಿದೆ. ಭಾನುವಾರ ಮುಂಬೈ ಇಂಡಿಯನ್ಸ್ ಎದುರು ಸೋಲಿನ ನಂತರ ಎಂಎಸ್ ಧೋನಿ, ತಮ್ಮ ತಂಡದ ಮುಂದಿನ ಆವೃತ್ತಿಯ ಯೋಜನೆಯ ಬಗ್ಗೆ ಮಾತನಾಡಿದ್ದಾರೆ.
CSK's playoffs Scenario: ಭಾನುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು ಚೆನ್ನೈ ಸೂಪರ್ ಕಿಂಗ್ಸ್ 9 ವಿಕೆಟ್‌ಗಳ ಸೋಲು ಅನುಭವಿಸಿದೆ. ಆ ಮೂಲಕ ಸಿಎಸ್‌ಕೆ ತಂಡದ ಪ್ಲೇಆಫ್ಸ್ ಹಾದಿ ಕಠಿಣವಾಗಿದೆ. ಆದರೂ ಚೆನ್ನೈ ತಂಡದ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಬೇಕೆಂದರೆ ಎಷ್ಟು ಪಂದ್ಯಗಳನ್ನು ಗೆಲ್ಲಬೇಕೆಂದು ಇಲ್ಲಿ ವಿವರಿಸಲಾಗಿದೆ.
Virat Kohli took 4 Runs by Running:ಫಿಟ್ನೆಸ್ ವಿಷಯದಲ್ಲಿ ಹಲವು ಯುವ ಆಟಗಾರರು ವಿರಾಟ್ ಕೊಹ್ಲಿಗಿಂತ ಬಹಳ ಹಿಂದಿದ್ದಾರೆ. ಅವರ ಫಿಟ್ನೆಸ್ ಅನ್ನು ಎಲ್ಲರೂ ಹೊಗಳುತ್ತಾರೆ. ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಅದ್ಭುತವಾಗಿ ಬ್ಯಾಟ್ ಮಾಡಿದರು. ಅಲ್ಲದೆ ಬ್ಯಾಟಿಂಗ್ ವೇಳೆ ಕೊಹ್ಲಿ 4 ರನ್‌ಗಳನ್ನು ಓಸುವ ಮೂಲಕ ತಮ್ಮ ಫಿಟ್ನೆಸ್ ಅನ್ನು ಅವರು ಸಾಬೀತುಪಡಿಸಿದ್ದಾರೆ.
Rajat Patidar on RCB's win against PBKS: ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭಾನುವಾರ೭ ವಿಕೆಟ್‌ಗಳಿಂದ ಗೆಲುವು ಪಡೆಯಿತು. ಈ ಪಂದ್ಯದ ಬಳಿಕ ಮಾತನಾಡಿದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಸಂತಸ ವ್ಯಕ್ತಪಡಿಸಿದರು. ಅಲ್ಲದೆ ಈ ಗೆಲುವಿನ ಶ್ರೇಯ ಬೌಲರ್‌ಗಳಿಗೆ ಸಲ್ಲಬೇಕೆಂದು ಹೇಳಿದ್ದಾರೆ.
ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರ ಬಿರುಗಾಳಿಯ ಅರ್ಧಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 9 ವಿಕೆಟ್‌ಗಳಿಂದ ಮಣಿಸಿತು. ಈ ಗೆಲುವಿನ ಮೂಲಕ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ಪಡೆದು, ಟೂರ್ನಿಯ ಅಂಕಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಜಿಗಿದಿದೆ. ಸೋತ ಸಿಎಸ್‌ಕೆ 10ನೇ ಸ್ಥಾನಕ್ಕೆ ಕುಸಿದಿದೆ.
Virat Kohli on his Man of the match award: ಪಂಜಾಬ್ ಕಿಂಗ್ಸ್ ವಿರುದ್ಧ ಅಜೇಯ 73 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 7 ವಿಕೆಟ್‌ಗೆ ನೆರವಾದರು. ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಪಂದ್ಯದ ಬಳಿಕ ಮಾತನಾಡಿದ ಅವರು, ಪಂದ್ಯ ಶ್ರೇಷ್ಠ ಪ್ರಶಸ್ತಿ ನನಗೆ ನೀಡಿದ್ದು ಅಚ್ಚರಿಯಾಗಿದ್ದು,ಇದು ದೇವದತ್ ಪಡಿಕ್ಕಲ್‌ಗೆ ನೀಡಬೇಕಿತ್ತು ಎಂದಿದ್ದಾರೆ.
ಕೃಣಾಲ್ ಪಾಂಡ್ಯ ಮತ್ತು ಸುಯಾಶ್ ಶರ್ಮಾ ಅವರ ಅದ್ಭುತ ಬೌಲಿಂಗ್ ಹಾಗೂ ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅವರ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಏಳು ವಿಕೆಟ್‌ಗಳಿಂದ ಸೋಲಿಸಿತು. 158 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ಸುಲಭವಾಗಿ ಗೆದ್ದಿತು. ಪಂದ್ಯದ ಗೆಲುವಿನ ಬಳಿಕ ಶ್ರೇಯಸ್ ಅಯ್ಯರ್‌ಗೆ ಕೊಹ್ಲಿ ತಿರುಗೇಟು ನೀಡಿದ್ದಾರೆ.
Virat Kohli Breaks David Warner Record: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಅಧಿಕ ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಬರೆದಿದ್ದಾರೆ. ಆ ಮೂಲಕ ಆಸ್ಟ್ರೇಲಿಯಾ ಮಾಜಿ ಆರಂಭಿಕ ಡೇವಿಡ್ ವಾರ್ನರ್ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಕೊಹ್ಲಿ 8 ಶತಕಗಳು ಹಾಗೂ 59 ಅರ್ಧಶತಕಗಳನ್ನು ಸಿಡಿಸಿದ್ದಾರೆ. ವಾರ್ನರ್ 4 ಶತಕ ಹಾಗೂ 62 ಅರ್ಧಶತಕಗಳು ಸೇರಿ 66 ಬಾರಿ 50ಕ್ಕೂ ಅಧಿಕ ರನ್ ಗಳಿಸಿದ್ದಾರೆ.
RCB vs PBKS Match Highlights: ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ಅಧಿಕಾರಯುತ ಪ್ರದರ್ಶನ ತೋರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 37ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ 7 ವಿಕೆಟ್‌ಗಳ ಭರ್ಜರಿ ಗೆಲುವು ಪಡೆದಿದೆ. ಆ ಮೂಲಕ ಪಂಜಾಬ್ ಎದುರು ಬೆಂಗಳೂರಿನ ಸೋಲಿನ ಸೇಡನ್ನು ಆರ್‌ಸಿಬಿ ತೀರಿಸಿಕೊಂಡಿತು.