ಮುಳುಗಡೆಯಾಗುವ ಪ್ರತಿ ಎಕರೆ ಭೂಮಿಗೆ 30-40 ಲಕ್ಷ ಪರಿಹಾರ ನಿಗದಿ: ಡಿಕೆಶಿ
DK Shivakumar: ನ್ಯಾಯಯುತ ಪರಿಹಾರ, ಭೂಸ್ವಾಧೀನ ಪಾರದರ್ಶಕತೆ ಹಕ್ಕು ಕಾಯ್ದೆಯ ಸೆಕ್ಷನ್ 51ರ ಅಡಿಯಲ್ಲಿ ಭೂಸ್ವಾಧೀನ, ಪುನಶ್ಚೇತನ ಹಾಗೂ ಪರಿಹಾರ ಪ್ರಾಧಿಕಾರ ರಚಿಸಲು ಅವಕಾಶವಿದೆ. ಹೀಗಾಗಿ ರಾಜ್ಯ ಸರ್ಕಾರ ಮೊದಲ ಬಾರಿಗೆ ಈ ಪ್ರಾಧಿಕಾರವನ್ನು ರಚಿಸಲಿದೆ. ಮುಖ್ಯನ್ಯಾಯಮೂರ್ತಿಗಳು ನೇಮಕ ಮಾಡುವ ನ್ಯಾಯಾಧೀಶರ ನೇತೃತ್ವದಲ್ಲಿ ಈ ಪ್ರಾಧಿಕಾರವನ್ನು ರಚಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.