ಬಂಡಿಪುರ, ನಾಗರಹೊಳೆಯಲ್ಲಿ ಸಫಾರಿ ಅನಿರ್ದಿಷ್ಟಾವಧಿ ಬಂದ್, ಚಾರಣ ಸ್ಥಗಿತ
Human- wildlife conflict: ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರೆಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸಚಿವರು ಸ್ಪಷ್ಟ ಸೂಚನೆ ನೀಡಿದ್ದಾರೆ.