ಅಸ್ವಸ್ಥಗೊಂಡು ಕುಸಿದುಬಿದ್ದ ಎನ್. ಸಂತೋಷ್ ಹೆಗ್ಡೆ; ಆಸ್ಪತ್ರೆಗೆ ದಾಖಲು
ಬೆಂಗಳೂರಿನ ಅರಮನೆ ರಸ್ತೆಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಆಯುಕ್ತ ಪಿಜಿಆರ್ ಸಿಂಧ್ಯ ಅವರ ಅಭಿನಂದನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಂತೋಷ್ ಹೆಗ್ಡೆ ಅವರನ್ನು ಆಹ್ವಾನಿಸಲಾಗಿತ್ತು. ಈ ವೇಳೆ ಸಂತೋಷ್ ಹೆಗ್ಡೆ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.