ಮಣಿಪಾಲದಲ್ಲಿ ಶಾಲಾ ಬಸ್ ಪಲ್ಟಿಯಾಗಿ 7 ವಿದ್ಯಾರ್ಥಿಗಳಿಗೆ ಗಾಯ
ಉಡುಪಿ ಜಿಲ್ಲೆಯ ಮಣಿಪಾಲದ ಕೊಡಂಗೆ ದೇವಸ್ಥಾನದ ಸಮೀಪ ಶುಕ್ರವಾರ ಬೆಳಗ್ಗೆ ಅಪಘಾತ ನಡೆದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.