Honorary Award: ಸಾಧಕ ಮಹನೀಯರಿಗೆ ಪುರಸ್ಕಾರದ ಗೌರವ
ಉತ್ತರ ಕನ್ನಡ ಜಿಲ್ಲೆಯ ಪ್ರಪ್ರಥಮ ದೈನಿಕ ಲೋಕಧ್ವನಿಯು ಜಿಲ್ಲೆಯ ಪತ್ರಿಕೋದ್ಯಮ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ನಮ್ಮ ಹೆಮ್ಮೆಯ ಸಾಧಕರು ಪ್ರಶಸ್ತಿ ಪ್ರದಾನ ಎಂಬ ಕಾರ್ಯಕ್ರಮವನ್ನು ಆಯೋಜಿ ಸಿತ್ತು. ಉತ್ತರ ಕನ್ನಡ, ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಪ್ರಶಸ್ತಿ ನೀಡಿ ಗೌರವಿಸಿದರು.