ಮಡಿವಾಳ ಸಮಾಜದ ಬೇಡಿಕೆಗಳಿಗೆ ಸ್ಪಂದಿಸಲು ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
DK Shivakumar: ಮಡಿವಾಳ ಸಮುದಾಯ ಸದಾ ನಮ್ಮ ಬೆಂಬಲಕ್ಕೆ ನಿಂತಿದೆ. ಅವರ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Missing case: ಗಂಡ ಮತ್ತೊಂದು ಮದುವೆಯಾಗಿದ್ದರಿಂದ ಮನನೊಂದು ಮಹಿಳೆ ಮನೆ ಬಿಟ್ಟು ಹೋಗಿದ್ದಳು. ಮಗಳನ್ನು ಹುಡುಕಿಕೊಡುವಂತೆ ತಾಯಿ ದೂರು ನೀಡಿದ್ದರು. ಈ ನಡುವೆ ರಾಯಚೂರಿನ ಮುತ್ಯಾ, ನಿಮ್ಮ ಮಗಳು ಸಿದ್ಧಗಂಗಾ ಮಠದಲ್ಲಿದ್ದಾಳೆ ಎಂದು ಹೇಳಿದ ಹಿನ್ನೆಲೆಯಲ್ಲಿ ಮಗಳನ್ನು ಹುಡುಕುತ್ತಾ ತುಮಕೂರಿನ ಕುಟುಂಬ ಆಗಮಿಸಿದೆ.
CET 2025: ಬೀದರ್ ಹಾಗೂ ಶಿವಮೊಗ್ಗದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಜನಿವಾರ ಧರಿಸಿದ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನೀಡದಿರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಹೀಗಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರು ಪರೀಕ್ಷೆ ಮಾರ್ಗಸೂಚಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಮುಸ್ಲಿಮರಲ್ಲಿ ಹಾಗೂ ಕ್ರೈಸ್ತರಲ್ಲಿ ಎಷ್ಟು ಉಪ ಜಾತಿಗಳು ಇವೆ ಎಂಬ ವಿಚಾರವನ್ನೂ ಜಾತಿ ಗಣತಿ ವರದಿಯಲ್ಲಿ (Caste census report) ಉಲ್ಲೇಖ ಮಾಡಲಾಗಿದೆ. ಇದರ ಪ್ರಕಾರ ಮುಸ್ಲಿಮರಲ್ಲಿ ಬರೋಬ್ಬರಿ 99 ಜಾತಿಗಳಿವೆ ಎನ್ನೋದು ಗೊತ್ತಾಗಿದೆ. ಹಾಗೆಯೇ ಕ್ರೈಸ್ತರಲ್ಲೂ 57 ಜಾತಿಗಳಿವೆ ಅಂತ ವರದಿಯಲ್ಲಿ ಹೇಳಲಾಗಿದೆ.
ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಈ ರೀತಿ ನಿರ್ದೇಶನ ಕೊಡುವ ಅಧಿಕಾರ ಯಾರಿಗೂ ಇಲ್ಲ. ಅಲ್ಲದೆ ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಹಾಗಾಗಿ ಸಂಬಂಧಪಟ್ಟ ಇಲಾಖೆ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳಲಾಗುತ್ತದೆ. ನನ್ನ ಇಲಾಖೆ ಇಲ್ಲ ಅಂದರೂ ಕೂಡ ಸಂಬಂಧಪಟ್ಟ ಇಲಾಖೆಗೆ ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಆಗಿರುವುದರಿಂದ ಕಠಿಣವಾದ ಕ್ರಮ ತೆಗೆದುಕೊಳ್ಳುವ ಸೂಚನೆ ನೀಡಿದ್ದೇನೆ ಎಂದರು.
ಆರ್ಬಿಟಲ್ ಅಥೆರೆಕ್ಟಮಿ ವಿಧಾನ ಅನುಸರಿ ಸಿರುವುದು ಕ್ಲಿಷ್ಟಕರ ಹೃದಯ ಸಂಬಂಧಿ ಸಮಸ್ಯೆಯನ್ನು ಗುಣಪಡಿಸುವ ನಮ್ಮ ಸಾಮರ್ಥ್ಯದ ಎತ್ತರವನ್ನು ಬಿಂಬಿಸುತ್ತದೆ. ಈ ಆಧುನಿಕ ವಿಧಾನ ಅನೇಕ ಕ್ಯಾಲ್ಶಿಯಮ್ ಬ್ಲಾಕೇಜ್‌ನಂತಹ ಸಮಸ್ಯೆಯನ್ನು ಯಶಸ್ವಿಯಾಗಿ ಗುಣಪಡಿಸಿ, ರೋಗಿಯ ಜೀವನದ ಗುಣಮಟ್ಟವನ್ನು ಎತ್ತರಿಸಲು ನೆರವಾಗಿದೆ.
ವಾಹನ ಸಂಚಾರ ಹೆಚ್ಚಾಗಿರುವ ಎಸ್.ಜೆ.ಪಾರ್ಕ್ ಬಳಿಯ ರಸ್ತೆಯಲ್ಲಿ ಮಾರ್ಗ ಮಧ್ಯದಲ್ಲಿಯೇ ಈ ವ್ಯಕ್ತಿ ಚೇರ್ ಹಾಕಿಕೊಂಡು ಕುಳಿತು ಟೀ ಕುಡಿಯುತ್ತಾ ರೀಲ್ಸ್ ಮಾಡಿದ್ದ. ಅದನ್ನು ತನ್ನ ಇನ್‌ಸ್ಟಾಗ್ರಾಮ್ ಖಾತೆ simbu_str_123 ನಲ್ಲಿ ಅಪ್ಲೋಡ್ ಮಾಡಿದ್ದು, ಅದು ವೈರಲ್ ಆಗಿತ್ತು. ಪೊಲೀಸರು ಇದನ್ನು ಗಮನಿಸಿದ್ದರು.
Gold Price Today on 18th April 2025: ಬೆಂಗಳೂರಿನಲ್ಲಿ ಶುಕ್ರವಾರ (ಏ. 18) 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗಿ 8,945 ರೂ.ಗೆ ತಲುಪಿದೆ. ಇತ್ತ 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಹೆಚ್ಚಾಗಿದ್ದ, ಪ್ರಸ್ತುತ 9,758 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,560 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,450 ರೂ. ಮತ್ತು 100 ಗ್ರಾಂಗೆ 8,94,500 ರೂ. ನೀಡಬೇಕಾಗುತ್ತದೆ.
ಎಲೆಬಿಚ್ಚಾಲಿ ಗುರುರಾಯರ ಏಕಶಿಲಾ ವೃಂದಾವನ ದರ್ಶನಕ್ಕೆ ಬೆಂಗಳೂರಿನಿಂದ 15 ಜನ ಸ್ನೇಹಿತರ ತಂಡ ಆಗಮಿಸಿತ್ತು. ಈ ವೇಳೆ ಮುತ್ತುರಾಜ್ ಮತ್ತು ಮದನ್ ನದಿಯಲ್ಲಿ ಈಜಲು ತೆರಳಿದ್ದಾರೆ. ನದಿಯಲ್ಲಿ ತಗ್ಗು ಪ್ರದೇಶದಲ್ಲಿ ಸಿಲುಕಿ ಒದ್ದಾಡಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಫೇಸ್ಬುಕ್ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಾ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆನೇಕಲ್ ಪಟ್ಟಣದ ಎಸ್‌ವಿಎಂ ಸ್ಕೂಲ್ ಬಳಿ ಈ ಘಟನೆ ನಡೆದಿದೆ. ಸಾವಿಗೆ ಕಾರಣರಾದವರ ಹೆಸರುಗಳನ್ನು ವಿಡಿಯೋದಲ್ಲಿ ರೆಕಾರ್ಡ್ ಮಾಡಿರುವ ಪ್ರವೀಣ್, ಇವರುಗಳಿಗೆ ಶಿಕ್ಷೆ ಆಗಬೇಕು ಎಂದು ಕೋರಿದ್ದಾರೆ.
RCB vs PBKS: ಪಂದ್ಯವನ್ನು ನೋಡಲು ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವಿಶೇಷ ಬಸ್ ಸೇವೆ ಒದಗಿಸಿದೆ. ಜತೆಗೆ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಕೂಡ ಎಲ್ಲ ನಾಲ್ಕು ಮೆಟ್ರೊ ಟರ್ಮಿನಲ್‌ಗಳಿಂದ ಕೊನೆಯ ಮೆಟ್ರೊ ರೈಲು ಸೇವೆಯನ್ನು ರಾತ್ರಿ 12.30ರವರೆಗೆ ವಿಸ್ತರಿಸಿದೆ.
ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್‌ಗೆ ಗಂಭೀರವಾದ ಗಾಯಗಳಾಗಿವೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಾಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ಕುರಿತು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿಭಟನೆ ವೇಳೆ ರಸ್ತೆ ಸಂಚಾರ ನಿರ್ಬಂಧಿಸದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಎನ್ಹೆಚ್ 73 ಬಂದ್ ಮಾಡಿ ಪ್ರತಿಭಟನೆ ನಡೆಸುವಂತಿಲ್ಲ. ಸರ್ಕಾರ ಅನುಮತಿ ನೀಡಿದ ಸ್ಥಳದಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು. ಸರ್ಕಾರ ಅನುಮತಿ ನೀಡುವಾಗ ಸುಪ್ರೀಂ ಕೋರ್ಟ್ ವಿಚಾರಣೆ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಪೀಠ ಹೇಳಿದೆ.
ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.
Trends Footwear: ಟ್ರೆಂಡ್ಸ್ ಫುಟ್‌ವೇರ್‌ನಿಂದ ‘ಪವರ್ ಪ್ಲೇʼ ಎಂಬ ಸ್ಪರ್ಧೆಯನ್ನು ಪರಿಚಯಿಸುತ್ತಿದೆ. ಇದು ಸೀಮಿತವಾದ ಅವಧಿಯಾಗಿದ್ದು, ಇದರಲ್ಲಿ ಯಾವ ಗ್ರಾಹಕರು ಮೂರು ಸಾವಿರ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ಖರೀದಿ ಮಾಡುತ್ತಾರೋ ಅಂಥವರು ಎಕ್ಸ್‌ಕ್ಲೂಸಿವ್ ಆಗಿ ಜೋಡಿ ಟಿಕೆಟ್‌ಗಳು ಮತ್ತು ಅತ್ಯಾಕರ್ಷಕವಾದ ಗಿಫ್ಟ್ ವೋಚರ್‌ಗಳನ್ನು ಗೆಲ್ಲುವ ಅವಕಾಶಗಳನ್ನು ಪಡೆದುಕೊಳ್ಳುತ್ತಾರೆ. ಈ ಕುರಿತ ವಿವರ ಇಲ್ಲಿದೆ.
H.K. Patil: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಮೇ 2ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುತ್ತದೆ ಎಂದಿದ್ದಾರೆ.
ವಿಶ್ವಾದ್ಯಂತ ಪ್ರತೀ 10 ಜನರಲ್ಲಿ ಒಬ್ಬರು ತಮ್ಮ ಜೀವನ ದಲ್ಲಿ ಯಾವುದಾದರೂ ಒಂದು ಸಂದರ್ಭ ದಲ್ಲಿ ವರ್ಟಿಗೋ ಸಮಸ್ಯೆ ಎದುರಿಸುತ್ತಾರೆ. ತಲೆಸುತ್ತು, ಅಸ್ಥಿರತೆ, ಮತ್ತು ವಾಕರಿಕೆಯಂತಹ ಆರಂಭಿಕ ಲಕ್ಷಣಗಳನ್ನು ಕಾಣಬಹುದಾದರೆ ಆ ಲಕ್ಷಣಗಳನ್ನು ಸಾಮಾನ್ಯವಾಗಿ ನಿರ್ಲಕ್ಷಿಸಲಾಗುತ್ತದೆ. ಆರಂಭಿಕ ಹಂತದಲ್ಲಿಯೇ ಈ ಸಮಸ್ಯೆ ಪತ್ತೆ ಹಚ್ಚುವುದರಿಂದ ಮತ್ತು ಸೂಕ್ತ ಚಿಕಿತ್ಸೆ ನೀಡುವುದರಿಂದ ಭವಿಷ್ಯ ದಲ್ಲು ಉಂಟಾಗುವ ಹೆಚ್ಚಿನ ಸಮಸ್ಯೆಗಳನ್ನು ತಡೆಯಬಹುದು
ನೀರಿನ ಮರುಬಳಕೆ ಮತ್ತು ಮರುಬಳಕೆ ಪರಿಸರ ವ್ಯವಸ್ಥೆಯ ಪ್ರಮುಖ ಪಾಲುದಾರರನ್ನು ಒಟ್ಟು ಗೂಡಿಸುವುದು ಈ ಕಾರ್ಯಕ್ರಮದ ಹಿಂದಿನ ಉದ್ದೇಶವಾಗಿದೆ. ಬೆಂಗಳೂರಿನ ನೀರಿನ ಕೊರತೆಯ ಸಮಸ್ಯೆಯನ್ನು ಪರಿಹರಿಸಲು ಈ ಮೌಲ್ಯಯುತ ಸರಪಳಿಯ ಪ್ರತಿಯೊಬ್ಬ ಸದಸ್ಯನು ಅಂದರೆ ಮೂಲದಿಂದ ಅಂತಿಮ ಗ್ರಾಹಕರವರೆಗೆ ಎಲ್ಲರೂ ಮುಖ ಪಾತ್ರ ವಹಿಸುತ್ತಾರೆ