ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಸರ್ಕಾರಿ ವೈದ್ಯನ ನಿರ್ಲಕ್ಷ್ಯದಿಂದ ಸಾವು ಬದುಕಿನ ನಡುವೆ ಬಾಣಂತಿ ಹೋರಾಟ; ಹಾವೇರಿಯಲ್ಲಿ ದೂರು ದಾಖಲು

ಹೆರಿಗೆ ಬಳಿಕ ಸೂಕ್ತ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ; ವೈದ್ಯನ ವಿರುದ್ಧ ದೂರು

Haveri News: ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯ ಡಾ. ಪ್ರದೀಪ ಬಿ ಅವರ ವಿರುದ್ಧ ಹಾವೇರಿ ಶಹರ ಠಾಣೆಯಲ್ಲಿ ದೂರು ದಾಖಲಾಗಿದೆ. ಹೆರಿಗೆ ನಂತರ ಸೂಕ್ತ ಚಿಕಿತ್ಸೆ ನೀಡದ ಕಾರಣ ಮಹಿಳೆ ಸಾವು ಬದುಕಿನ ನಡುವೆ ಹೋರಾಟ ನಡೆಸುವಂತಾಗಿದೆ. ಈ ಬಗ್ಗೆ ಪತಿ ದೂರು ನೀಡಿದ್ದಾರೆ.

ಜೈಲುಗಳ ಆಧುನೀಕರಣ, ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಸಿಎಂ ಡಿಕೆಶಿ ಮನವಿ

ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗಿ; ಅಮಿತ್‌ ಶಾಗೆ ಸಿಎಂ ಮನವಿ

CM DK Shivakumar: ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಕರ್ನಾಟಕ ಸಿಎಂ ಡಿ.ಕೆ.ಶಿವಕುಮಾರ್‌ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪೊಲೀಸ್‌ ಇಲಾಖೆಯ ಮೂಲ ಸೌಕರ್ಯ ಸುಧಾರಣೆಗೆ ಕೇಂದ್ರ ಸರ್ಕಾರ ನೆರವಾಗಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಕೋರಿದ್ದಾರೆ.

POCSO: ಬಾಲ ಕಾರ್ಮಿಕತೆ, ಪೋಕ್ಸೋ ಪ್ರಕರಣ ತಡೆಗೆ ತಂಡದ ರೀತಿ ಕೆಲಸ ಮಾಡಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುಳ ಸಲಹೆ

ಬಾಲ ಕಾರ್ಮಿಕತೆ, ಪೋಕ್ಸೋ ಪ್ರಕರಣ ತಡೆಗೆ ತಂಡದ ರೀತಿ ಕೆಲಸ ಮಾಡಿ

ಬಾಲ ಕಾರ್ಮಿಕತೆ, ಪೋಕ್ಸೋ ಹಾಗೂ ಬಾಲ್ಯವಿವಾಹ ಪ್ರಕರಣಗಳನ್ನು ತಡೆಗಟ್ಟುವುದು ಕೇವಲ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ ಯ ಕೆಲಸ ಎಂದು ಭಾವಿಸಬಾರದು. ಎಲ್ಲ ಇಲಾಖೆ ಯವರು ತಮ್ಮ ಇಲಾಖೆಯ ಕಾರ್ಯ ವ್ಯಾಪ್ತಿಯಲ್ಲಿ ಸಂಪರ್ಕಕ್ಕೆ ಬರುವವರ ಬಗ್ಗೆ ನಿಗಾವಹಿಸಬೇಕು. ಒಂದು ವೇಳೆ ಇಂತಹ ಪ್ರಕರಣ ಗಳು ಕಂಡು ಬಂದರೆ ಸಕ್ಷಮ ಪ್ರಾಧಿಕಾರಿ ಗಳಿಗೆ ಮಾಹಿತಿ ನೀಡುವ ಜೊತೆಗೆ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ಆಗುವಂತೆ ಮಾಡಬೇಕು.

MLC Naseer Ahmed: ಸಾವಿರಾರು ಕೋಟಿ ಸಾಲದ ಹಿನ್ನೆಲೆ ಕಾಂಗ್ರೆಸ್ ನಾಯಕ ನಸೀರ್ ಅಹ್ಮದ್ 'ದಿವಾಳಿ'; ಎಂಎಲ್‌ಸಿ  ಸ್ಥಾನಕ್ಕೆ ಕುತ್ತು!

ಕಾಂಗ್ರೆಸ್ ನಾಯಕ ನಸೀರ್ ಅಹ್ಮದ್ ʼದಿವಾಳಿʼ; ಎಂಎಲ್‌ಸಿ ಸ್ಥಾನಕ್ಕೆ ಕುತ್ತು!

ಬೆಂಗಳೂರಿನಲ್ಲಿರುವ ಮೆಸರ್ಸ್ ಸ್ಕಾಟ್ಸ್ ಗಾರ್ಮೆಂಟ್ಸ್ ಲಿಮಿಟೆಡ್ ಕಂಪನಿಯು ಪಡೆದಿದ್ದ 1,454 ಕೋಟಿಗೂ ಅಧಿಕ ಮೊತ್ತದ ಬಾಕಿ ಸಾಲದ ವಸೂಲಾತಿಗಾಗಿ ಕಳೆದ 2019ರಿಂದಲೇ ಈ ಕಾನೂನು ಪ್ರಕ್ರಿಯೆ ನಡೆದಿತ್ತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್‌ಗಳ ಒಕ್ಕೂಟ 2019ರಿಂದಲೇ ಕಾನೂನು ಪ್ರಕ್ರಿಯೆ ನಡೆಸಿತ್ತು.

Free Bus Pass: ಹೊರ ರಾಜ್ಯದ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗೂ ಉಚಿತ ಬಸ್ ಪಾಸ್

ಹೊರ ರಾಜ್ಯದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗೂ ಉಚಿತ ಬಸ್ ಪಾಸ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಗಳನ್ನು ಉಪಯೋಗಿಸಿ ಹೊರ ರಾಜ್ಯಗಳ ಶಿಕ್ಷಣ ಸಂಸ್ಥೆ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಪ್ರಯಾಣಿ ಸಲು ಅವಕಾಶ ಕಲ್ಪಿಸಲಾಗಿದೆ.

Sirsi News: ಶಿರಸಿಯಲ್ಲಿ ಆಘಾತಕಾರಿ ಘಟನೆ; ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ!

ಹಾಸ್ಟೆಲ್‌ನಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ!

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತೋಡದಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ. ಬಾಲಕಿ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಳಾಗಿದ್ದಳು. ಈ ವೇಳೆ ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮಣಿಪಾಲ್ ಆಸ್ಪತ್ರೆಯಿಂದ ಮಾನವೀಯ ಕಾಳಜಿಯ ಆರೋಗ್ಯ ಸೇವೆಗೆ ಹೊಸ ಮುನ್ನುಡಿ: ಭಾರತದ ಪ್ರಥಮ 'ಚೈಲ್ಡ್ ಲೈಫ್' ವಿಚಾರ ಸಂಕಿರಣ ಯಶಸ್ವಿ

ಭಾರತದ ಪ್ರಥಮ 'ಚೈಲ್ಡ್ ಲೈಫ್' ವಿಚಾರ ಸಂಕಿರಣ ಯಶಸ್ವಿ

ಈ ಕಾರ್ಯಕ್ರಮದಲ್ಲಿ ಪ್ರಮುಖ ಮಕ್ಕಳ ವೈದ್ಯರು, ಮನಶ್ಶಾಸ್ತ್ರಜ್ಞರು, ಆರೋಗ್ಯ ರಂಗದ ಆಡಳಿತಾಧಿಕಾರಿಗಳು, ದಾದಿಯರು ಹಾಗೂ ಮಕ್ಕಳ ಜೀವನ ನಿರ್ವಹಣಾ ತಜ್ಞರು ಭಾಗವಹಿಸಿ ದ್ದರು. ಅನಾರೋಗ್ಯ ಮತ್ತು ಆಸ್ಪತ್ರೆಗೆ ದಾಖಲಾಗುವ ಸಮಯದಲ್ಲಿ ಮಕ್ಕಳು ಹಾಗೂ ಅವರ ಕುಟುಂಬಗಳು ಎದುರಿಸುವ ಭಾವನಾತ್ಮಕ ಸವಾಲುಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು.

ಕೇಂದ್ರ ಜಲಶಕ್ತಿ ಸಚಿವರಿಂದ ತುಂಗಭದ್ರಾ ಅಣೆಕಟ್ಟು ನೂತನ ಗೇಟ್ ಉದ್ಘಾಟನೆ: ಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸಚಿವರಿಂದ ಟಿಬಿ ಡ್ಯಾಂ ನೂತನ ಗೇಟ್ ಉದ್ಘಾಟನೆ: ಡಿ.ಕೆ. ಶಿವಕುಮಾರ್

CM DK Shivakumar: ತುಂಗಭದ್ರಾ ಅಣೆಕಟ್ಟಿನ ನೂತನ ಗೇಟ್‌ಗಳ ಉದ್ಘಾಟನೆಗೆ ಕೇಂದ್ರ ಜಲಶಕ್ತಿ ಸಚಿವರು ಆಗಮಿಸುತ್ತಿದ್ದು, ನೆರೆ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆ ಇದೆ. ನ್ಯಾಯ ನೀಡುವ ಸ್ಥಾನದಲ್ಲಿ ಕೂತು ಅವರು ಅನ್ಯಾಯ ಮಾಡುವುದಿಲ್ಲ ಎಂಬ ವಿಶ್ವಾಸ ನಮಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸಿಎಂ ಡಿಕೆಶಿ; ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ

ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್‌

CM DK Shivakumar: ಕರ್ನಾಟಕ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ.

Veeraloka pustaka santhe: ತುಮಕೂರಿನಲ್ಲಿ ಜೂ.26ರಿಂದ 3 ದಿನ ʼವೀರಲೋಕ ಪುಸ್ತಕ ಸಂತೆʼ; ಲೋಗೋ ಬಿಡುಗಡೆ ಮಾಡಿದ ಡಿಸಿ ಶುಭ ಕಲ್ಯಾಣ್

ತುಮಕೂರಿನಲ್ಲಿ ಜೂ.26ರಿಂದ 3 ದಿನ ʼವೀರಲೋಕ ಪುಸ್ತಕ ಸಂತೆʼ

Tumkur News: ತುಮಕೂರು ನಗರದ ಗಾಜಿನ ಮನೆಯಲ್ಲಿ ಇದೇ ಜೂನ್‌ 26, 27 ಮತ್ತು 28 ರಂದು ವೀರಲೋಕ ಪ್ರತಿಷ್ಠಾನ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರದೊಂದಿಗೆ ಹಮ್ಮಿಕೊಂಡಿರುವ 5ನೇ ಆವೃತ್ತಿಯ ಬೃಹತ್ ‘ವೀರಲೋಕ ಪುಸ್ತಕ ಸಂತೆ' ಸಾಂಸ್ಕೃತಿಕ ಹಬ್ಬದ ಲೋಗೋವನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗುರುವಾರ ಬಿಡುಗಡೆ ಮಾಡಿದರು.

Tamil Nadu CM Vijay: ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್‌; 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಣೆ

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್‌

Kollur Mookambika Temple: ತಮಿಳುನಾಡು ಸಿಎಂ ವಿಜಯ್ ಅವರ ಆಗಮನ ಹಿನ್ನೆಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇಗುಲದ ಸುತ್ತಮುತ್ತ ಹಾಗೂ ಅವರು ತೆರಳು ಮಾರ್ಗದಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ದೇವಿಯ ದರ್ಶನದ ಬಳಿಕ ಅವರು ಚೆನ್ನೈಗೆ ನಿರ್ಗಮಿಸಿದರು.

ಜಯನಗರದಲ್ಲಿ ಸೂರ್ಯಗಾಯತ್ರಿ ಅವರಿಂದ ಸಂಗೀತ ಕಾರ್ಯಾಗಾರ: ಜೂ.12ರಿಂದ 2 ದಿನಗಳ ಅಪೂರ್ವ ಅವಕಾಶ!

ಜೂ.12ರಿಂದ ಸೂರ್ಯಗಾಯತ್ರಿ ಅವರಿಂದ ಸಂಗೀತ ಕಾರ್ಯಾಗಾರ:

Bengaluru News: 'ಪರಮ್ ಕಲ್ಚರ್' ಹಾಗೂ 'ಹರಿವಂಶ ಗ್ರೂಪ್' ಸಹಯೋಗದೊಂದಿಗೆ ಬೆಂಗಳೂರಿನ ಜಯನಗರದ ಯುವಕ ಸಂಘದಲ್ಲಿ ಜೂನ್ 12 ಮತ್ತು 13ರಂದು ಸಂಜೆ 6 ರಿಂದ 8ಗಂಟೆಯವರೆಗೆ ಎರಡು ದಿನಗಳ ವಿಶೇಷ ಪ್ರಿ-ಕನ್ಸರ್ಟ್ ಸಂಗೀತ ಕಾರ್ಯಾಗಾರ ‘ಭಜ ಮನʼ ವನ್ನು ಹಮ್ಮಿಕೊಳ್ಳಲಾಗಿದೆ. ಖ್ಯಾತ ಯುವ ಶಾಸ್ತ್ರೀಯ ಗಾಯಕಿ ಸೂರ್ಯಗಾಯತ್ರಿ ಈ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ.

Tamil Nadu CM Vijay: ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್‌; ರಸ್ತೆ ಮಾರ್ಗದ ಮೂಲಕ ಕೊಲ್ಲೂರಿಗೆ ಪ್ರಯಾಣ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್‌

Kollur Mookambika temple: ಮಂಗಳೂರು ವಿಮಾನ ನಿಲ್ದಾಣದಿಂದ ಹೊರಬಂದ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಭದ್ರತಾ ದೃಷ್ಟಿಯಿಂದ ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಸಂಜೆ ವೇಳೆಗೆ ಅವರು ಕೊಲ್ಲೂರಿಗೆ ತಲುಪಲಿದ್ದಾರೆ.

ಮಾವಿನ ಹಣ್ಣು ತಿಂದು ಇಬ್ಬರು ಸಹೋದರಿಯರು ಸಾವು; ಕುಟುಂಬಸ್ಥರು ಅಸ್ವಸ್ಥ

ಮಾವಿನ ಹಣ್ಣು ತಿಂದು ಇಬ್ಬರು ಸಹೋದರಿಯರು ಸಾವು

ಮಾವಿನ ಹಣ್ಣನ್ನು ತಿಂದ ಬಳಿಕ ಸಹೋದರಿಯರಿಬ್ಬರು ಸಾವನ್ನಪ್ಪಿದ ಘಟನೆ ಬೀದರ್‌ನಲ್ಲಿ ನಡೆದಿದೆ. ಮನೆಯಲ್ಲಿ ಊಟದ ಬಳಿಕ ಮಾವಿನ ಹಣ್ಣು ತಿಂದ ಇಬ್ಬರು ಸಹೋದರಿಯರು ತೀವ್ರ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜೂನ್ 15 ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

ಮಳೆಗಾಲದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ(Agumbe ghat) ಜೂನ್ 15 ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಕಂದಮ್ಮ ದುರ್ಮರಣ: ಶೋಕದಲ್ಲಿ ಮುಳುಗಿದ ಗ್ರಾಮಸ್ಥರು

ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಕಂದಮ್ಮ ದುರ್ಮರಣ

toddler dies after coconut falls: ತೆಂಗಿನಕಾಯಿ ತಲೆ ಮೇಲೆ ಬಿದ್ದು ಪುಟ್ಟ ಒಂದೂವರೆ ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಹೆರಂಜೆ ಗ್ರಾಮದಲ್ಲಿ ನಡೆದಿದೆ. ತಾಯಿ ಸುಚಿತ್ರಾ ತಮ್ಮ ಹಿರಿಯ ಪುತ್ರಿಯನ್ನು ಶಾಲೆಗೆ ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಧರ್ಮಸ್ಥಳ ʼಬುರುಡೆʼ ನಾಟಕ: ಪ್ರಕಾಶ್ ರಾಜ್ ಪಾತ್ರಧಾರಿ?

ಧರ್ಮಸ್ಥಳ ʼಬುರುಡೆʼ ನಾಟಕ: ಪ್ರಕಾಶ್ ರಾಜ್ ಪಾತ್ರಧಾರಿ?

ಸಂಚಿನ ಕುರಿತು ಸಮಗ್ರ ತನಿಖಾ ವರದಿ ಸಲ್ಲಿಕೆ ಕೋರಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚಿನ್ನ ಅಲಿಯಾಸ್ ಚಿನ್ನಯ್ಯ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾನೆ. ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಪ್ರಭಾವಿ ವ್ಯಕ್ತಿಗಳು ಹಾಗೂ ಯೂ ಟ್ಯೂಬರ್ʼಗಳ ಹೆಸರುಗಳು ಉಖವಾಗಿರು ವುದು ತೀವ್ರ ಸಂಚಲನ ಮೂಡಿಸಿದೆ.

Shivashri Tejaswi Surya Awarded: ಶಿವಶ್ರೀಗೆ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ

ಶಿವಶ್ರೀಗೆ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ

ಶಿವಶ್ರೀ ತೇಜಸ್ವಿ ಸೂರ್ಯ ಅವರನ್ನು ಸಂಗೀತ ವಿಭಾಗದಲ್ಲಿ ಈ ಪ್ರಶಸ್ತಿಗೆ ಆಯ್ಕೆ ಮಾಡ ಲಾಗಿದ್ದು, ಕರ್ನಾಟಕ ಸಂಗೀತ ಕೃತಿಗಳು, ಭಜನೆಗಳು ಮತ್ತು ಅಭಂಗಗಳ ತಮ್ಮ ಭಾವಪೂರ್ಣ ಗಾಯನದ ಮೂಲಕ, ಅವರು ಭಾರತ ಮತ್ತು ಪ್ರಪಂಚದಾದ್ಯಂತದ ಅನೇಕ ಗೋಷ್ಠಿಗಳಲ್ಲಿ ಪಾಲ್ಗೊಂಡು ಹೆಸರು ವಾಸಿಯಾಗಿದ್ದಾರೆ. ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆ ಯನ್ನು ಸಮಕಾಲೀನ ಪ್ರೇಕ್ಷಕರಿಗೆ ತಲುಪಿಸುವ ಕಾರ್ಯದಲ್ಲಿಯೂ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ.

BESCOM staff protest: ಬೆಸ್ಕಾಂ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ವಿಭಾಗೀಯ ಕಚೇರಿ ಎದುರು ನೌಕರರಿಂದ ಸಂಘಟಿತ ಪ್ರತಿಭಟನೆ ದಾಖಲು

ವಿದ್ಯುತ್ ಖಾಸಗೀಕರಣವಾದಲ್ಲಿ ಸಾಮಾಜಿಕ ನ್ಯಾಯ ಅರಣ್ಯರೋಧವಾಗಲಿದೆ

ವಿದ್ಯುತ್ ಖಾಸಗೀಕರಣವಾದಲ್ಲಿ ಉದ್ಯೋಗಿಗಳಲ್ಲಿ ಅಭದ್ರತೆ ಸೃಷ್ಟಿಯಾಗಿ ನಿರುದ್ಯೋಗ ತಲೆಯೆತ್ತಲಿದೆ. ಸರಕಾರದಿಂದ ಬರುವ ಯಾವೊಂದು ಸಬ್ಸಿಡಿ, ಉಚಿತ ಯೋಜನೆಗಳು ಹಳ್ಳಹಿಡಿಯಲಿವೆ. ವಿಶೇಷವಾಗಿ ರೈತರು ದೀನದಲಿತರ ಪಾಲಿಗೆ ಮರಣಶಾಸನವಾಗಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಸರಕಾರ ಖಾಸಗಿ ವಿತರಣೆಗೆ ಅವಕಾಶ ಮಾಡಿಕೊಡ ಬಾರದು ಎಂದು ತಮ್ಮ ಅಸಮಾಧಾನ ಹೊರ ಹಾಕಿದರು.

Free Bus Pass for Students: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ: ಐತಿಹಾಸಿಕ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ

ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ

ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಂಡುಮಕ್ಕಳಿಗೂ ಈ ಸೌಲಭ್ಯವನ್ನು ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದರು. ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಬಿಡುಗಡೆ ಮಾಡಲಾಗುವುದು

Chikkaballapur News: ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚುರುಕುಗೊಂಡ ಸ್ವಚ್ಛತಾ ಅಭಿಯಾನ

ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚುರುಕುಗೊಂಡ ಸ್ವಚ್ಛತಾ ಅಭಿಯಾನ

ರಸ್ತೆಗಳ ಎರಡೂ ಬದಿಗಳಲ್ಲಿ ಬಿದ್ದಿರುವ ಕಲ್ಲು, ಮಣ್ಣುಗುಡ್ಡೆಗಳು ಮುಂತಾದ ತ್ಯಾಜ್ಯ ಹಾಗೂ ಉಪಯೋಗಿಸದೇ ಬಿಟ್ಟಿರುವ ತಳ್ಳುವ ಬಂಡಿಗಳನ್ನು ತೆಗೆಸಿ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ರಾಜಕಾಲುವೆಗಳು, ಕೆಳಸೇತುವೆಗಳು ಹಾಗೂ ತೆರೆದ ಚರಂಡಿ ಗಳನ್ನು ಸ್ವಚ್ಛಗೊಳಿಸುತ್ತಿರುವುದರಿಂದ ಮಳೆಯಿಂದ ಯಾವುದೇ ರೀತಿಯ ಅಡಚಣೆ ಯಾಗುವುದನ್ನು ತಡೆಯಲಾಗುತ್ತಿದೆ.

ಸಿಎಂ ಆದ ಬಳಿಕ ಮೊದಲ ಭೇಟಿಯಲ್ಲೇ ಪಿಎಂ ನರೇಂದ್ರ ಮೋದಿಗೆ 18 ಬೇಡಿಕೆಗಳ ಪಟ್ಟಿ ಸಲ್ಲಿಸಿದ ಡಿ.ಕೆ. ಶಿವಕುಮಾರ್‌

ಪಿಎಂ ಮೋದಿಗೆ 18 ಬೇಡಿಕೆಗಳ ಅಹವಾಲು ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್‌

CM DK Shivakumar: ನೀರಾವರಿ ಯೋಜನೆಗಳಿಗೆ ಸಹಕಾರ, ಕೇಂದ್ರದ ಬಾಕಿ ಅನುದಾನ, ಬೆಂಗಳೂರಿಗೆ ವಿಶೇಷ ಅನುದಾನ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸೇರಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಹಕರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ 18 ಬೇಡಿಕೆಗಳ ಪಟ್ಟಿ ಸಲ್ಲಿಸಿದ್ದಾರೆ.

Gubbi News: ಲಿಂಕ್ ಕೆನಾಲ್ ಕಾಮಗಾರಿ ಮಾಡಲು ಬಿಡಲ್ಲ, ಯಾರು ಬರಲಿ ಬಿಡಲಿ ಹೋರಾಟಕ್ಕೆ ಸಿದ್ಧ ಎಂದ ರೈತರು..!!

ಯಾರು ಬರಲಿ ಬಿಡಲಿ ಹೋರಾಟಕ್ಕೆ ಸಿದ್ಧ ಎಂದ ರೈತರು..!!

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿ ವೇದಿಕೆಯ ಪೂರ್ವಭಾವಿ ಸಭೆಯಲ್ಲಿ ರೈತರು ಶಾಸಕರು, ಸಂಸದರು ಈ ಹೋರಾಟಕ್ಕೆ ಬರಬೇಕು. ಜಿಲ್ಲೆಯ ನಮ್ಮ ನೀರು ನಮ್ಮ ಹಕ್ಕು ಪ್ರತಿಪಾದಿಸಲು ಹೋರಾಟಕ್ಕೆ ಯಾರೊಬ್ಬರ ನೇತೃತ್ವಕ್ಕಿಂತ ಸಾಮೂಹಿಕ ನೇತೃತ್ವದಲ್ಲಿ ಯಾರು ಬರಲಿ ಬಿಡಲಿ ಹೋರಾಟ ಸಾವಿರಾರು ರೈತರೊಟ್ಟಿಗೆ ನಡೆಯಲಿದೆ.

Bangarpet MLA S.N.Narayanaswamy: ಚಿಕ್ಕಬಳ್ಳಾಪುರದಲ್ಲಿ ಬೃಹತ್ ಮೆರವಣಿಗೆ – “ನಮ್ಮ ನಾಯಕರಿಗೆ ಸಚಿವ ಸ್ಥಾನ ನೀಡಲೇಬೇಕು” ಎಂದು ಹೈಕಮಾಂಡ್‌ಗೆ ಎಚ್ಚರಿಕೆ

ಸಚಿವ ಸ್ಥಾನಕ್ಕೆ ಎಸ್.ಎನ್.ಎನ್ ಪರ ಬಲಗೈ ಸಮುದಾಯದ ಶಕ್ತಿ ಪ್ರದರ್ಶನ

ನಗರದ ಜೈ ಭೀಮ್ ಹಾಸ್ಟೆಲ್ ಆವರಣದಿಂದ ಅಂಬೇಡ್ಕರ್ ವೃತ್ತದವರೆಗೆ ಸಾಗಿದ ಮೆರವಣಿಗೆ ಯಲ್ಲಿ ನೂರಾರು ಕಾರ್ಯಕರ್ತರು ಮತ್ತು ಸಮುದಾಯದ ಮುಖಂಡರು ಭಾಗವಹಿಸಿ, ಎಸ್.ಎನ್.ನಾರಾಯಣಸ್ವಾಮಿ ಅವರ ಭಾವಚಿತ್ರಗಳಿರುವ ಫಲಕಗಳನ್ನು ಹಿಡಿದು ಸಚಿವ ಸ್ಥಾನ ನೀಡುವಂತೆ ಘೋಷಣೆಗಳನ್ನು ಕೂಗಿದರು.

Loading...