ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Gubbi News: ಗುಬ್ಬಿ ಶಾಸಕರಿಗೆ ನೀರಿನ ಶಾಪ-ಮಂತ್ರಿಗಿರಿ ಕೈ ತಪ್ಪಿದೆ..! : ಎಸ್.ಡಿ.ದಿಲೀಪ್ ಕುಮಾರ್

ಗುಬ್ಬಿ ಶಾಸಕರಿಗೆ ನೀರಿನ ಶಾಪ-ಮಂತ್ರಿಗಿರಿ ಕೈ ತಪ್ಪಿದೆ..!

ತಾಲ್ಲೂಕಿನ ರೈತರ ಅಳಲು ಅಜ್ಜಯ್ಯ ಅವರಿಗೆ ತಲುಪಿ ಅವರ ಮುಖಾಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಲುಪಿ ಸಚಿವ ಸ್ಥಾನ ಸಿಕ್ಕಿಲ್ಲ. ನೀರಿನ ಶಾಪ ತಟ್ಟುವ ಮೊದಲು ರೈತರ ಹೋರಾಟಕ್ಕೆ ಧುಮುಕಬೇಕಿತ್ತು. ಅಂದು ಚಾನಲ್ ಮೇಲೆ ಮಲಗಿ ನೀರು ಬಿಡಿಸಿದ್ದೆ ಎನ್ನುವ ಶಾಸಕರು ಇಂದು ಡಿಕೆಶಿ ಮನೆ ಮುಂದೆ ಮಲಗಿ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲಿ ನೋಡೋಣ ಎಂದು ಸವಾಲೆಸೆದರು

ಕೊಡಗಿನಲ್ಲಿ ದಾರುಣ ಘಟನೆ; ಶೌಚಾಲಯದ ಗುಂಡಿಗೆ ಬಿದ್ದ ಮಹಿಳೆ, ರಕ್ಷಿಸಲು ಹೋದ ವ್ಯಕ್ತಿಯೂ ಸಾವು!

ಶೌಚಾಲಯದ ಗುಂಡಿಗೆ ಬಿದ್ದ ಮಹಿಳೆ, ರಕ್ಷಿಸಲು ಹೋದ ವ್ಯಕ್ತಿಯೂ ಸಾವು!

ಗದ್ದೆಯಲ್ಲಿ ಶುಂಠಿ ತೆಗೆದುಕೊಂಡು ಬರಲು ಮಹಿಳೆಯು ಹಳೆಯ ಶೌಚಾಲಯದ ಗುಂಡಿ ಏಕಾಏಕಿ ಕುಸಿದ ಪರಿಣಾಮ ಅದರೊಳಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಮುಂದಾದ ವ್ಯಕ್ತಿಯೂ ಕೊನೆಯುಸಿರೆಳೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

MLA K H Puttaswamy Gowda: ಅಭಿವೃದ್ಧಿ ಕಾರ್ಯ ಮೆಚ್ಚಿ ವಿವಿಧ ಪಕ್ಷಗಳ ಮುಖಂಡರ ಸೇರ್ಪಡೆ: ಕೆ.ಎಚ್.ಪುಟ್ಟಸ್ವಾಮಿಗೌಡ

ಅಭಿವೃದ್ಧಿ ಕಾರ್ಯ ಮೆಚ್ಚಿ ವಿವಿಧ ಪಕ್ಷಗಳ ಮುಖಂಡರ ಸೇರ್ಪಡೆ

ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಸುಮಾರು 600 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕಗಳು, ಚರಂಡಿ ಅಭಿವೃದ್ಧಿ, ಹೈಮಾಸ್ಟ್ ದೀಪಗಳ ಅಳವಡಿಕೆ, ಅಂತರ್ಜಲ ಮಟ್ಟ ಹೆಚ್ಚಿಸಲು ಚೆಕ್‌ಡ್ಯಾಂಗಳ ನಿರ್ಮಾಣ, ಅಗತ್ಯವಿರುವ ಕಡೆ ಶಾಲಾ ಕೊಠಡಿಗಳು ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣ ಮತ್ತು ಬಸ್ ಪ್ರಯಾಣಿಕರ ತಂಗುದಾಣ ಸೇರಿದಂತೆ ಹಲವು ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ

Chikkaballapur News: ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ: ಡಾ.ಚೇತನ್

ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ವೈಯಕ್ತಿಕ ನೈರ್ಮಲ್ಯದ ಕೊರತೆ, ಅಶುದ್ಧ ನೀರು ಹಾಗೂ ಕಲುಷಿತ ಆಹಾರದಿಂದ ಜಂತುಹುಳು ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳಲಿದ್ದು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ಯಲ್ಲಿ ಅಂಗನವಾಡಿ, ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಮಕ್ಕಳಿಗೆ ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಮಾತ್ರೆ ವಿತರಿಸುವುದರೊಂದಿಗೆ ಜಂತುಹುಳು ಸೋಂಕಿನ ಕುರಿತು ಅರಿವು ಮೂಡಿಸಲಾಗುತ್ತಿದೆ

Pro-tem Speaker: ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣ ನೇಮಕ

ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣ ನೇಮಕ

MLC Puttanna: ಕರ್ನಾಟಕ ವಿಧಾನ ಪರಿಷತ್‌ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಹಂಗಾಮಿ ಸಭಾಪತಿಯಾಗಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ನೇಮಿಸಲಾಗಿದೆ. ನೂತನ ಸಭಾಪತಿಯನ್ನು ಚುನಾಯಿಸುವವರೆಗೆ ಸಭಾಪತಿ ಸ್ಥಾನದಲ್ಲಿಇವರು ಮುಂದುವರಿಯಲಿದ್ದಾರೆ.

Bengaluru News: ಬೆಂಗಳೂರಿನ ತಾಜ್‌ ಹೋಟೆಲ್‌ನಲ್ಲಿ ಘೋರ ಘಟನೆ; ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಯತ್ನ!

ಬೆಂಗಳೂರಿನಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಯತ್ನ!

ಬೆಂಗಳೂರು ವಿಮಾನ ನಿಲ್ದಾಣ ಬಳಿಯ ತಾಜ್ ಹೋಟೆಲ್‌ನ 4ನೇ ಮಹಡಿಯ ರೂಮ್‌ನಲ್ಲಿ ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್‌ ಆಗಿರುವ ವ್ಯಕ್ತಿ, ತನ್ನ 5 ಹಾಗೂ 10 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ, ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Annabrahma Chaturmasya: ದೃಢ ಸಂಕಲ್ಪದಿಂದ ಹಸಿವನ್ನು ಗೆಲ್ಲಲು ಸಾಧ್ಯ: ರಾಘವೇಶ್ವರ ಭಾರತೀ ಶ್ರೀ

ದೃಢ ಸಂಕಲ್ಪದಿಂದ ಹಸಿವನ್ನು ಗೆಲ್ಲಲು ಸಾಧ್ಯ: ರಾಘವೇಶ್ವರ ಭಾರತೀ ಶ್ರೀ

Shri Raghaveshwara Bharathi Swamiji: ಆಹಾರ ದೇಹದಲ್ಲಿದಾಗ ಮನಸ್ಸಿನಲ್ಲಿ ಆಲೋಚನೆಗಳ ಅಲೆ ಏಳುವುದು ಸಾಮಾನ್ಯ. ಏಕೆಂದರೆ ಆಹಾರಕ್ಕೆ ತಾಮಸ ಗುಣವಿದೆ. ಉಪವಾಸವು ತಾಮಸವನ್ನು ದೂರವಿಡುವ ಪ್ರಕ್ರಿಯೆಯಾಗಿದ್ದು, ಖಾಲಿ ಹೊಟ್ಟೆಯು ಧ್ಯಾನಾದಿಗಳಿಗೆ ಪ್ರಶಸ್ತವಾಗಿದೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

BJP-JDS Padayatra: ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ; ಆ ಹುಡುಗನ ರಾಜಕೀಯ ಭವಿಷ್ಯಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದ ಸಿಎಂ

ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ ಎಂದ ಸಿಎಂ

ಬಿಡದಿ ಟೌನ್ ಶಿಪ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರತಿಕ್ರಿಯಿಸಿದ್ದಾರೆ. ಬೇರೆ ಕ್ಷೇತ್ರದಲ್ಲಿರುವ ಪಕ್ಷದ ಕಾರ್ಯಕರ್ತರನ್ನು ಕರೆದುಕೊಂಡು ಬಂದು ಪಾದಯಾತ್ರೆ ಮಾಡುತ್ತಿದ್ದಾರೆ. ಹೋರಾಟ ಮತ್ತು ಪ್ರತಿಭಟನೆ ಮಾಡುವುದಕ್ಕೆ ನಾನು ಬೇಡ ಎನ್ನುವುದಿಲ್ಲ ಎಂದು ಸಿಎಂ ತಿಳಿಸಿದ್ದಾರೆ.

ಕನಿಷ್ಠ ವೇತನ ಪರಿಷ್ಕರಣೆ ಆದೇಶ ಜಾರಿಗೆ ಆಗ್ರಹ; ತುಮಕೂರು ಡಿಸಿ ಕಚೇರಿ ಎದುರು ಹೊರಗುತ್ತಿಗೆ ನೌಕರರ ಪ್ರತಿಭಟನೆ

ಕನಿಷ್ಠ ವೇತನ ಆದೇಶ ಜಾರಿಗೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ

Tumkur News: ಕನಿಷ್ಠ ವೇತನ ಪರಿಷ್ಕರಣೆ ಕುರಿತು ಹೊರಡಿಸಿರುವ ಆದೇಶವನ್ನು ಕೂಡಲೇ ದೃಢೀಕರಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕು ಹಾಗೂ ಪರಿಷ್ಕೃತ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸರ್ಕಾರದ ಹೊರಗುತ್ತಿಗೆ ನೌಕರರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

Yettinahole Project: 2027ರ ವೇಳೆಗೆ ಎತ್ತಿನಹೊಳೆ ಯೋಜನೆ ಮೂಲಕ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ಕೆರೆಗಳಿಗೆ ನೀರು: ಸಿಎಂ ಡಿಕೆಶಿ

2027ಕ್ಕೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ಯೋಜನೆ ನೀರು: ಸಿಎಂ

CM DK Shivakumar: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಸುಮಾರು 3,200 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಭಾಗಿಯಾಗಿ, ಮಾತನಾಡಿದ್ದಾರೆ.

Tumkur News: ಸಂಗೀತ ವಿಶ್ವದ ಭಾಷೆ, ಅದಕ್ಕೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ: ವೀರೇಶಾನಂದ ಸ್ವಾಮೀಜಿ

ಸಂಗೀತಕ್ಕೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ: ವೀರೇಶಾನಂದ ಸ್ವಾಮೀಜಿ

Tumkur News: ಭಾರತೀಯ ಸಂಗೀತ ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಇಂದಿನ ಕಲಾವಿದರು, ಗುರುಗಳು ಮತ್ತು ಸಂಗೀತ ಸಂಸ್ಥೆಗಳ ಮೇಲಿದೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ತಿಳಿಸಿದ್ದಾರೆ.

JDS Padayatra: ಬೆಂಗಳೂರು ಪ್ರವೇಶಿಸದಂತೆ ಜೆಡಿಎಸ್‌ ಪಾದಯಾತ್ರೆಗೆ ಪೊಲೀಸರ ತಡೆ; ನಿಖಿಲ್‌ ಕುಮಾರಸ್ವಾಮಿ ವಶಕ್ಕೆ ಯತ್ನ, ಸ್ಥಳದಲ್ಲಿ ಹೈಡ್ರಾಮಾ!

ಬೆಂಗಳೂರು ಪ್ರವೇಶಿಸದಂತೆ ಜೆಡಿಎಸ್‌ ಪಾದಯಾತ್ರೆಗೆ ಪೊಲೀಸರ ತಡೆ

ರಾಮನಗರ ಬಳಿಯ ಕಣಿಮಿಣಿಕೆ ಟೋಲ್‌ ಬಳಿ ಪಾದಯಾತ್ರೆಯನ್ನು ಬೆಂಗಳೂರು ಪೊಲೀಸರು ತಡೆದರು. ಬೆಂಗಳೂರು ಪ್ರವೇಶಿಸದಂತೆ ಜೆಡಿಎಸ್‌ ಪಾದಯಾತ್ರೆಯನ್ನು ತಡೆದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಜೆಡಿಎಸ್‌ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಬಳಿಕ ಜೆಡಿಎಸ್‌ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

B Nagendra: ಸಚಿವ ಬಿ. ನಾಗೇಂದ್ರಗೆ ಮತ್ತಷ್ಟು ರಿಲೀಫ್‌; ರಾಜ್ಯ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್

ಸಚಿವ ಬಿ. ನಾಗೇಂದ್ರಗೆ ಮತ್ತಷ್ಟು ರಿಲೀಫ್‌; ಷರತ್ತು ಸಡಿಲಿಸಿದ ಹೈಕೋರ್ಟ್

Valmiki Corporation scam: ಸಚಿವ ಬಿ.ನಾಗೇಂದ್ರ ಅವರಿಗೆ ಕೋರ್ಟ್ ಅನುಮತಿಯಿಲ್ಲದೇ ರಾಜ್ಯ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತಿಗೆ ಹೈಕೋರ್ಟ್ ತಡೆ ನೀಡಿದೆ. ಇದೀಗ ಜಾಮೀನು ಷರತ್ತು ಸಡಿಲಗೊಂಡ ಹಿನ್ನೆಲೆಯಲ್ಲಿ ಇತರ ರಾಜ್ಯಗಳಿಗೆ ಅವರು ಪ್ರಯಾಣಿಸಬಹುದಾಗಿದೆ.

ರಾಜ್ಯದಲ್ಲಿ ಬರ, ಬೆಳೆ ಹಾನಿ ಕುರಿತು ಸಚಿವ ಸಂಪುಟ‌ ಸಭೆಯಲ್ಲಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

ಬರ, ಬೆಳೆ ಹಾನಿ ಕುರಿತು ಸಚಿವ ಸಂಪುಟ‌ ಸಭೆಯಲ್ಲಿ ಚರ್ಚೆ: ಪ್ರಿಯಾಂಕ್ ಖರ್ಗೆ

Priyank Kharge: ರಾಜ್ಯದಲ್ಲಿನ ಬರದ ಸ್ಥಿತಿ ಕುರಿತು ಈಗಾಗಲೇ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಕೇಂದ್ರಕ್ಕೆ ಪತ್ರ ಬರೆದು ಮನವರಿಕೆ‌ ಮಾಡಿಕೊಟ್ಟಿದ್ದಾರೆ. ಕೇಂದ್ರದ ಕಠಿಣ ಎನ್.ಡಿ.ಆರ್.ಎಫ್ ನಿಯಮಾವಳಿಯಿಂದ ರೈತರಿಗೆ‌ ನ್ಯಾಯಯುತ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ, ಇದನ್ನು ಸರಳಿಕರಣ ಮಾಡುವಂತೆ ರಾಜ್ಯದ ಬೇಡಿಕೆ ಇದ್ದು, ಅದನ್ನು ಕೇಂದ್ರ ಸರ್ಕಾರ ಪುರಸ್ಕರಿಸಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ; 20 ಮಂದಿಗೆ ಗಾಯ

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ; 20 ಮಂದಿಗೆ ಗಾಯ

Bus Accident: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡು, ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. 18 ವರ್ಷದ ಬಾವರಸಿಂಗ್ ರಜಪೂತ್ ಮೃತ ಪ್ರಯಾಣಿಕ.

ಸಚಿವರಿಗೆ ಖಾತೆ ಹಂಚಿಕೆ ಬಹುತೇಕ ಫೈನಲ್; ಇಂದು ಘೋಷಣೆ ಆಗುತ್ತಾ?

ಸಚಿವರಿಗೆ ಖಾತೆ ಹಂಚಿಕೆ ಬಹುತೇಕ ಫೈನಲ್; ಇಂದು ಘೋಷಣೆ ಆಗುತ್ತಾ?

ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಬಹುತೇಕ ಅಂತಿಮ ಹಂತ ತಲುಪಿದ್ದು, ಇಂದು ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಹಿರಿಯ ನಾಯಕರು ಹಾಗೂ ಹೈಕಮಾಂಡ್ ಮಟ್ಟದಲ್ಲಿ ಸಮಾಲೋಚನೆ ನಡೆಸುತ್ತಿದ್ದು, ಖಾತೆಗಳ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ.

ಯುಬಿ ಸಿಟಿಯ ಹೋಟೆಲ್‌ಗಳ ಮೇಲೆ ದಾಳಿ;  45 ಕೆಜಿ ಕೊಳೆತ ಮಾಂಸ ಪತ್ತೆ, ಕಿಚನ್‌ ಸೀಜ್‌

ಆಹಾರ ಇಲಾಖೆಯಿಂದ ಯುಬಿ ಸಿಟಿಯ ಹೋಟೆಲ್‌ಗಳ ಮೇಲೆ ದಾಳಿ

ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಐಷಾರಾಮಿ ಹೊಟೆಲ್‌ಗಳ ಬಂಡವಾಳ ಬಯಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಗರದ ಹಲವೆಡೆ ಏಕಕಾಲಕ್ಕೆ ದಾಳಿ ನಡೆಸಲಾಯಿತು.

ರಾಜ್ಯದ ಹಲವೆಡೆ ವರುಣನ ಅಬ್ಬರ; ಬೆಂಗಳೂರು ಸೇರಿ ಅನೇಕ ಕಡೆ ಮಳೆ ಎಚ್ಚರಿಕೆ

ಬೆಂಗಳೂರು ಸೇರಿ ಅನೇಕ ಕಡೆ ಮಳೆ ಎಚ್ಚರಿಕೆ

karnataka Weather: ಕರ್ನಾಟಕದ್ಯಂತ ಮುಂಗಾರು ಮಳೆ ಚುರುಕುಗೊಂಡಿದೆ. ಆಗಸ್ಟ್ 13ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.

NETF ಅಧ್ಯಕ್ಷರನ್ನು ಭೇಟಿಯಾದ ಸಚಿವ ಪ್ರಲ್ಹಾದ್‌ ಜೋಶಿ; ಪರೀಕ್ಷಾ ವ್ಯವಸ್ಥೆ ಸುಧಾರಣೆ ಕ್ರಮಗಳ ಬಗ್ಗೆ ಚರ್ಚೆ

ಪರೀಕ್ಷಾ ಸುಧಾರಣೆ ಕ್ರಮಗಳ ಬಗ್ಗೆ NETF ಅಧ್ಯಕ್ಷರ ಜತೆ ಸಚಿವ ಜೋಶಿ ಚರ್ಚೆ

NETF ಅಧ್ಯಕ್ಷ ಪ್ರೊ.ಅನಿಲ್ ದತ್ತಾತ್ರೇಯ ಸಹಸ್ರಬುಧೆ ಅವರ ನಿವಾಸಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಭೇಟಿ ನೀಡಿ, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ. ಅಲ್ಲದೆ NETF ಅಧ್ಯಕ್ಷರಿಂದ ಅಗತ್ಯ ಸಲಹೆ, ಮಾರ್ಗದರ್ಶನ ಪಡೆದಿದ್ದಾರೆ.

ಪದವೀಧರರ ಕ್ಷೇತ್ರ ಗೆಲುವಿಗೆ ಬಿಜೆಪಿ ರಣತಂತ್ರ; ಬರ, ರೈತರ ಸಮಸ್ಯೆ ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ

ಕೆ.ಎಂ.ಸುರೇಶ್‌ರನ್ನು ಭಾರಿ ಅಂತರದಿಂದ ಗೆಲ್ಲಿಸಿ: ವಿಜಯೇಂದ್ರ ಕರೆ

Chikkaballapur News: ಚಿಕ್ಕಬಳ್ಳಾಪುರ ನಗರದ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಭಾನುವಾರ ಆಯೋಜಿಸಿದ್ದ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿದ್ದಾರೆ.

ಉದ್ಯೋಗದ ಸ್ಥಳದಲ್ಲಿ ಮಾನಸಿಕ ಕಿರುಕುಳ: ಡೆತ್‌ನೋಟ್‌ನಲ್ಲಿ ಸೂಪರ್‌ವೈಸರ್ ಹೆಸರು ಬರೆದಿಟ್ಟು ಮಹಿಳೆ ಆತ್ಮಹತ್ಯೆ

ಸೂಪರ್‌ವೈಸರ್ ಹೆಸರು ಬರೆದಿಟ್ಟು ಮಹಿಳೆ ಆತ್ಮಹತ್ಯೆ

Self-harming: ಉದ್ಯೋಗದ ಸ್ಥಳದಲ್ಲಿ ಕಿರುಕುಳ ತಾಳಲಾರದೆ 45 ವರ್ಷದ ಮಹಿಳೆಯೊಬ್ಬರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಘಟನಾ ಸ್ಥಳದಿಂದ ವಶಪಡಿಸಿಕೊಂಡ ಡೆತ್‌ನೋಟ್‌ನಲ್ಲಿ, ಹೊಸದಾಗಿ ನೇಮಕಗೊಂಡ ಡಾಲಿ ಎಂಬ ಮೇಲ್ವಿಚಾರಕನಿಂದ ತೀವ್ರ ಮಾನಸಿಕ ಕಿರುಕುಳವನ್ನು ಅನುಭವಿಸಿರುವುದಾಗಿ ಆರೋಪಿಸಿದ್ದಾರೆ.

ಊಟ ಮಾಡದಿರುವುದು ಉಪವಾಸವಲ್ಲ, ಹಸಿವಾದರೂ ವ್ರತ ಭಂಗವಾದಂತೆಯೇ: ರಾಮಚಂದ್ರಾಪುರ ಶ್ರೀ

ಊಟ ಮಾಡದಿರುವುದು ಉಪವಾಸವಲ್ಲ: ರಾಮಚಂದ್ರಾಪುರ ಶ್ರೀ

Raghaveshwara Bharati Swamiji: ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಮಾತನಾಡಿದ್ದಾರೆ. ಉಪವಾಸವನ್ನು ಯಾರೋ ಮಹಾತ್ಮರು ಮಾತ್ರ ಆಚರಿಸುವುದಲ್ಲ. ಸಾಮಾನ್ಯ ಜನರೂ ಕೂಡ ಆಚರಿಸಬಹುದು ಎಂದು ಅವರು ತಿಳಿಸಿದ್ದಾರೆ.

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್ ವೇಳೆ ದುರಂತ; ಓಡುತ್ತಿದ್ದಾಗಲೇ ಕುಸಿದು ಬಿದ್ದು ಕ್ರೀಡಾಪಟು ಸಾವು

ನಂದಿ ಹಿಲ್ಸ್ ಮ್ಯಾರಥಾನ್‌ನಲ್ಲಿ ಓಡುತ್ತಿದ್ದಾಗಲೇ ಕ್ರೀಡಾಪಟು ಸಾವು

ಭಾನುವಾರ ನಡೆದ ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ಸುಮಾರು 4,500 ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಪೈಕಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಖಾಸಗಿ ಕಂಪನಿಯೊಂದರ ಉದ್ಯೋಗಿ ಕೂಡ 21 ಕಿ.ಮೀ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದರು. ಅರ್ಧ ಭಾಗದಷ್ಟು ಓಟವನ್ನು ಪೂರ್ಣಗೊಳಿಸಿದ್ದ ವೇಳೆ ವ್ಯಕ್ತಿ ಏಕಾಏಕಿ ಕುಸಿದು ಬಿದ್ದು, ಮೃತಪಟ್ಟಿದ್ದಾರೆ.

ಮಕ್ಕಳಿಗೆ ಅಂಕಗಳು ಮಾತ್ರವಲ್ಲ ಕೌಶಲ್ಯವೂ ಮುಖ್ಯ: ಶಾಸಕ ಜಿ.ಬಿ. ಜ್ಯೋತಿಗಣೇಶ್

ಮಕ್ಕಳಿಗೆ ಅಂಕಗಳು ಮಾತ್ರವಲ್ಲ ಕೌಶಲ್ಯವೂ ಮುಖ್ಯ: ಶಾಸಕ ಜಿ.ಬಿ. ಜ್ಯೋತಿಗಣೇಶ್

ತುಮಕೂರು ​ನಗರದ ಕುಂಚಶ್ರೀ ಪ್ಯಾಲೇಸ್‌ನಲ್ಲಿ 'ಕುಂಚಶ್ರೀ ಮಹಿಳಾ ಬಳಗ'ದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ-2026 ಕಾರ್ಯಕ್ರಮದಲ್ಲಿ ಶಾಸಕ ಜ್ಯೋತಿಗಣೇಶ್‌ ಅವರು ಮಾತನಾಡಿದ್ದಾರೆ. ಪೋಷಕರು ಮಕ್ಕಳನ್ನು ಕೇವಲ ಮೆಡಿಕಲ್ ಅಥವಾ ಎಂಜಿನಿಯರಿಂಗ್‌ ಕ್ಷೇತ್ರಗಳಿಗೆ ಮಾತ್ರ ಸೀಮಿತಗೊಳಿಸದೆ, ಇತರೆ ನವೀನ ಕ್ಷೇತ್ರಗಳ ಕಡೆಗೂ ಗಮನಹರಿಸುವಂತೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದ್ದಾರೆ.

Loading...