ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ 14 ದಿನ ನ್ಯಾಯಾಂಗ ಬಂಧನ
ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ರಾಜೀವ್ ಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಕೈ ಮುಖಂಡ ತಲೆಮರೆಸಿಕೊಂಡಿದ್ದ. ಆರೋಪಿ ಪತ್ತೆಗಾಗಿ ಮೂರು ತಂಡ ರಚಿಸಲಾಗಿತ್ತು. ಜಿಪಿಎಸ್, ಫಾಸ್ಟ್ ಟ್ಯಾಗ್ ಆಧರಿಸಿ ಆರೋಪಿಗಳನ್ನು ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿದ್ದರು.