ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ; 2037ರ ವೇಳೆಗೆ ರಾಜ್ಯದ ಆರ್ಥಿಕತೆ 1 ಟ್ರಿಲಿಯನ್‌ಗೆ ಹೆಚ್ಚಿಸುವ ಮಹಾ ಸಂಕಲ್ಪ ಮಾಡಿದ ಸಿಎಂ

ರಾಜ್ಯದ ಆರ್ಥಿಕತೆ 1 ಟ್ರಿಲಿಯನ್‌ಗೆ ಹೆಚ್ಚಿಸುವ ಮಹಾ ಸಂಕಲ್ಪ ಮಾಡಿದ ಸಿಎಂ

CM DK Shivakumar: ಎಲ್ಲಾ 224 ಶಾಸಕರು, 75 ಪರಿಷತ್ ಸದಸ್ಯರು, 28 ಲೋಕಸಭೆ ಸದಸ್ಯರು ಹಾಗೂ 12 ರಾಜ್ಯಸಭೆ ಸದಸ್ಯರು ಒಟ್ಟಾಗಿ ರಾಜ್ಯದ ಪ್ರಗತಿಗೆ ದುಡಿಯಲು ಈ ಸರ್ಕಾರ ಕೆಲಸ ಮಾಡಲಿದೆ. ಯಾರು ಸಹಕಾರ ನೀಡಲಿ ಬಿಡಲಿ, ನಾವು ಸಂವಿಧಾನ ಬದ್ಧವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲಸ ಮಾಡುವುತ್ತೇವೆ ಎಂದು ಮಾತು ನೀಡುತ್ತೇನೆ. ರಾಗ, ದ್ವೇಷ, ಅಸೂಯೆ ಇಟ್ಟುಕೊಳ್ಳದೆ, ಸರ್ವರಿಗೂ ಸಮಪಾಲು, ಸಮಬಾಳು ಎಂದು ಕರ್ನಾಟಕದ ಪ್ರಗತಿಯ ರಥವನ್ನು ಮುನ್ನಡೆಸಲು ನಾನು ನಿಮ್ಮ ಮುಂದೆ ನಿಂತಿರುವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಅಪರೂಪದ ಕ್ಷಣಗಳಿಗೆ ಸಾಕ್ಷಿಯಾದ 100 ದಿನಗಳ ದೃಢ ಕರ್ನಾಟಕದ ಸಂಕಲ್ಪ ಸಮಾರಂಭ; ಗ್ಯಾರಂಟಿ ಫಲಾನುಭವಿಗಳೊಂದಿಗೆ ಭೋಜನ ಸವಿದ ಸಿಎಂ ಡಿಕೆಶಿ

ಅಪರೂಪದ ಕ್ಷಣಗಳಿಗೆ ಸಾಕ್ಷಿಯಾದ ದೃಢ ಕರ್ನಾಟಕದ ಸಂಕಲ್ಪ ಸಮಾರಂಭ

DK Shivakumar govt marks 100 days: ನಾಡಿನ ಜನರ ಬೆಂಬಲವೇ ನಮ್ಮ ಶಕ್ತಿ, ಜನರ ವಿಶ್ವಾಸವೇ ನಮ್ಮ ಬೆನ್ನೆಲುಬು. ಜನರ ಬದುಕಿನಲ್ಲಿ ಬದಲಾವಣೆ ತಂದು, ಕರ್ನಾಟಕವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯುವುದೇ ನಮ್ಮ ಧ್ಯೇಯ. ಪ್ರಜಾಸೇವಕನಾಗಿ ‘ಟೀಮ್‌ ಕರ್ನಾಟಕ’ದೊಂದಿಗೆ ನಿಮ್ಮ ಮುಂದಿದ್ದೇನೆ. ಕೃಷಿ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ ಹಾಗೂ ಜೀವನಮಟ್ಟ ಸುಧಾರಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ನಾವು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Dasoha Ratna Award: ಬಸವ ಸಮಿತಿಯಿಂದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರಿಗೆ 'ದಾಸೋಹ ರತ್ನ' ಪ್ರಶಸ್ತಿ ಪ್ರದಾನ

ಸದ್ಗುರು ಶ್ರೀ ಮಧುಸೂದನ ಸಾಯಿ ಅವರಿಗೆ 'ದಾಸೋಹ ರತ್ನ' ಪ್ರಶಸ್ತಿ ಪ್ರದಾನ

Sadguru Sri Madhusudan Sai: ಅಕ್ಷರ, ಆರೋಗ್ಯ ಮತ್ತು ಪೌಷ್ಟಿಕ ಆಹಾರ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್‌ನ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರಿಗೆ ಬಸವ ಸಮಿತಿಯಿಂದ ಪ್ರತಿಷ್ಠಿತ ‘ದಾಸೋಹ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಡಿಕೆಶಿ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ; ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಕಿವಿಮಾತು

ಡಿಕೆಶಿ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ: ಸಿದ್ದರಾಮಯ್ಯ ಮೆಚ್ಚುಗೆ

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ "ದೃಢ ಕರ್ನಾಟಕದ ಸಂಕಲ್ಪ - 100 ದಿನಗಳ ಯಶಸ್ವಿ ಪೂರೈಕೆ" ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದಾರೆ. ಪ್ರಣಾಳಿಕೆಯಲ್ಲಿ ಇರುವ ಭರವಸೆಗಳನ್ನು ಒಂದೇ ವರ್ಷದಲ್ಲಿ ಜಾರಿ ಮಾಡಬೇಕು ಎಂದೇನಿಲ್ಲ. 5 ವರ್ಷಗಳು ಅವಕಾಶವಿದೆ. ಅಷ್ಟರೊಳಗೆ ಎಲ್ಲ ಭರವಸೆಗಳನ್ನು ಈಡೇರಿಸುವಂತಹ ಕೆಲಸವನ್ನು ಮಾಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಲಹೆ ನೀಡಿದ್ದಾರೆ.

ರಾಜಕೀಯ ರಂಗದಲ್ಲಿ ಆಧುನಿಕತೆ, ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ. ಶಿವಕುಮಾರ್ ಎಂದ ಡಿಸಿಎಂ ಪರಮೇಶ್ವರ್

ರಾಜಕೀಯ ರಂಗದಲ್ಲಿ ಆಧುನಿಕತೆ, ಹೋರಾಟಕ್ಕೆ ಇನ್ನೊಂದು ಹೆಸರೇ ಡಿಕೆಶಿ

Dr G Parameshwara: ಇತ್ತೀಚಿನ ರಾಜಕೀಯ ರಂಗದಲ್ಲಿ ಬಹುಶಃ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರು ಇದ್ದರೆ ಅದು ನಮ್ಮ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು. ಅವರು ಅಧಿಕಾರ ವಹಿಸಿಕೊಂಡ ನಂತರ ಅನೇಕ ಜನಪರವಾದ ಕಾರ್ಯಕ್ರಮಗಳನ್ನು ಕೇವಲ ನೂರು ದಿನಗಳಲ್ಲಿ ರಾಜ್ಯದ ಜನರಿಗೆ ಕೊಡುವ ಕೆಲಸ ಮಾಡಿದ್ದಾರೆ ಎಂದು ಡಿಸಿಎಂ ಹಾಗೂ ಕಂದಾಯ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಪೊಲೀಸ್ ವಾಹನ ವ್ಯವಸ್ಥೆ ಆಧುನೀಕರಣಕ್ಕೆ ರಾಜ್ಯ ಸರ್ಕಾರ ಹೊಸ ಚಿಂತನೆ; ಬಾಡಿಗೆ ಮಾದರಿಯ ಸಾಧ್ಯತೆ ಪರಿಶೀಲನೆ

ಪೊಲೀಸ್ ವಾಹನ ವ್ಯವಸ್ಥೆ ಆಧುನೀಕರಣಕ್ಕೆ ಹೊಸ ಚಿಂತನೆ: ಪ್ರಿಯಾಂಕ್ ಖರ್ಗೆ

Priyank Kharge: ವೇಗವಾಗಿ ಬದಲಾಗುತ್ತಿರುವ ಸಾಮಾಜಿಕ ಹಾಗೂ ಕಾನೂನು-ಸುವ್ಯವಸ್ಥೆಯ ಸವಾಲುಗಳಿಗೆ ಪೊಲೀಸ್ ಇಲಾಖೆ ಇನ್ನಷ್ಟು ಸಜ್ಜಾಗಬೇಕಿದೆ. ಅದಕ್ಕಾಗಿ ವಾಹನ ವ್ಯವಸ್ಥೆ ಸೇರಿದಂತೆ ಇಲಾಖೆಯ ಪ್ರತಿಯೊಂದು ಕಾರ್ಯಾಚರಣಾ ಮೂಲಸೌಕರ್ಯವನ್ನು ಆಧುನೀಕರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮಬದ್ಧವಾಗಿ ಕೆಲಸ ಮಾಡುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Vande Mataram: ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ 'ವಂದೇ ಮಾತರಂ' ಗೀತೆಯ ಮೊದಲ ಎರಡು ಚರಣ ಮಾತ್ರ ಹಾಡಲು ಆದೇಶ

ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ 2 ಚರಣ ಮಾತ್ರ ಹಾಡಲು ಆದೇಶ

ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ "ವಂದೇ ಮಾತರಂ" ರಾಷ್ಟ್ರೀಯ ಗೀತೆಯ ವಾದನ, ಗಾಯನಕ್ಕೆ ಸಂಬಂಧಿಸಿ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರ ಕಾಯ್ದುಕೊಳ್ಳುವ ಅಗತ್ಯವನ್ನು ರಾಜ್ಯ ಸರ್ಕಾರವು ಪರಿಗಣಿಸಿ ಈ ನಿರ್ಧಾರವನ್ನು ಕೈಗೊಂಡಿದೆ.

ಭಾರತ್ ಜೋಡೋ ಯಾತ್ರೆ ಜನಸಾಮಾನ್ಯರ ಸಂಕಷ್ಟಕ್ಕೆ ಪರಿಹಾರದ ಅಡಿಪಾಯ: ಸಿಎಂ

ಭಾರತ್ ಜೋಡೋಗೆ 5ನೇ ವರ್ಷದ ಸಂಭ್ರಮ

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಭಾರತ್ ಜೋಡೋ ಪಾದಯಾತ್ರೆಯ ಐದನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಕರ್ನಾಟಕದಲ್ಲಿ 21 ದಿನಗಳ ಕಾಲ 500 ಕಿ.ಮೀ. ಪಾದಯಾತ್ರೆ ನಡೆದಿದ್ದು, ರಾಷ್ಟ್ರಮಟ್ಟದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಸುಮಾರು 4 ಸಾವಿರ ಕಿ.ಮೀ.ಯಾತ್ರೆ ನಡೆದಿದೆ.

ಕೆಪಿಎಸ್‌ಸಿ: ಇಬ್ಬರ ಸಿಐಡಿ ತನಿಖೆ ಅಂತ್ಯ, ವಶಕ್ಕೆ ನೀಡಲು ಕೋರ್ಟ್‌ಗೆ ಇಡಿ ಅರ್ಜಿ

ಸಿಐಡಿ ಮುಗೀತು, ಇನ್ನು ಜ್ಞಾನೇಂದ್ರ, ಕನ್ನಾಳೆಗೆ ಇಡಿ ಬಿಸಿ

ಜಾಮೀನು ಅರ್ಜಿಯ ವಿಚಾರಣೆಯೂ ಗುರುವಾರ ನಡೆಯಲಿದೆ. ಶಾಂತ ಹೊಸಮನಿ ಮನೆಗಳಲ್ಲಿ ಸಿಐಡಿ ಶೋಧ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಮತ್ತೊಬ್ಬ ಆರೋಪಿ ಶಾಂತ ಹೊಸಮನಿ ಅವರ ನಗರದ ಹೊಸಕೆರೆಹಳ್ಳಿ ಹಾಗೂ ನಾಗರಬಾವಿಯಲ್ಲಿರುವ ನಿವಾಸಗಳ ಮೇಲೆ ಸಿಐಡಿ ಅಧಿಕಾರಿಗಳು ಬುಧವಾರ ಶೋಧ ನಡೆಸಿದರು. ದಾಳಿ ಸಂದರ್ಭದಲ್ಲಿ ಶಾಂತ ಹೊಸಮನಿ ಮನೆಯಲ್ಲಿ ಇರಲಿಲ್ಲ.

ಬಡವರಿಗೆ ಡಿಕೆಶಿ‌ ಸರಕಾರದಿಂದ 15 ಲಕ್ಷ ಉಚಿತ ನಿವೇಶನ ಹಂಚಿಕೆ

ಬಡವರಿಗೆ ಡಿಕೆಶಿ‌ ಸರಕಾರದಿಂದ 15 ಲಕ್ಷ ಉಚಿತ ನಿವೇಶನ ಹಂಚಿಕೆ

ಸರಕಾರಕ್ಕೆ ಗುರುವಾರ 100 ದಿನಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯ ನಂತರ ಡಿಸಿಎಂ ಪರಮೇಶ್ವರ್ ಈ ಮಾಹಿತಿಯನ್ನು ಹಂಚಿಕೊಂಡರು. ಒಂದು ಕಾಲಕ್ಕೆ ವಿದ್ಯಾರ್ಥಿ ಗಳಲ್ಲಿ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ವಿದ್ಯಾರ್ಥಿ ಸಂಘದ ಚುನಾವಣೆಯನ್ನು 3 ದಶಕಗಳ ನಂತರ ನಡೆಸಲು ರಾಜ್ಯ ಸರಕಾರ ಅನುಮೋದನೆ ನೀಡಿದೆ.

Padayatra: ಇಂದು ಬಳ್ಳಾರಿಯಲ್ಲಿ ಸಮಾರೋಪ ಯಾತ್ರೆ

ಇಂದು ಬಳ್ಳಾರಿಯಲ್ಲಿ ಸಮಾರೋಪ ಯಾತ್ರೆ

ರಾಯಚೂರಿನ ಲಿಂಗಸೂಗೂರಿನಿಂದ ಆರಂಭವಾದ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜನರ ಸಮಸ್ಯೆಗಳನ್ನು ಆಲಿಸುತ್ತಾ ಸರಕಾರದ ವಿರುದ್ಧ ಹೋರಾಟ ರೂಪಿಸಿದ್ದಾರೆ. ಗುರುವಾರದ ಸಮಾರೋಪ ದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ಸಂಸದರು, ಶಾಸಕರು ಹಾಗೂ 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸ ಲಿದ್ದಾರೆ.

3 ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ ಸರ್ಕಾರದಿಂದಲೇ ಉಳುಮೆ; ಮುಖ್ಯಮಂತ್ರಿ ನೇಗಿಲಯೋಗಿ ಯೋಜನೆಗೆ ಸಚಿವ ಸಂಪುಟ ಅಸ್ತು

3 ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿದ್ದರೆ ಸರ್ಕಾರದಿಂದಲೇ ಉಳುಮೆ

Karnataka Cabinet Meeting: ಮುಖ್ಯಮಂತ್ರಿ ನೇಗಿಲಯೋಗಿ ಯೋಜನೆಯಡಿ ಸರ್ಕಾರದ ವತಿಯಿಂದಲೇ ಟ್ರ್ಯಾಕ್ಟರ್‌ಗಳನ್ನು ಬಾಡಿಗೆಗೆ ಪಡೆದು ರೈತರ ಜಮೀನುಗಳಲ್ಲಿ ಉಚಿತವಾಗಿ ಉಳುಮೆ ಮಾಡಿಕೊಡಲಾಗುತ್ತದೆ. 3 ಎಕರೆ ಕಡಿಮೆ ಕೃಷಿ ಭೂಮಿ ಹೊಂದಿರುವ ಬಡ ರೈತರಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ.

ಫ್ರಾನ್ಸ್‌ನಲ್ಲಿ ಸಚಿವ ಎಂ.ಬಿ. ಪಾಟೀಲ್‌; ಲಿಸಿ ಏರೋಸ್ಪೇಸ್, ಆರ್ಕೆಮಾ ಕಂಪನಿಗಳ ಜತೆ ಮಹತ್ವದ ಮಾತುಕತೆ

ಫ್ರಾನ್ಸ್‌ನಲ್ಲಿ ಪ್ರಮುಖ ಕಂಪನಿಗಳ ಜತೆ ಸಚಿವ ಎಂ.ಬಿ. ಪಾಟೀಲ್‌ ಮಾತುಕತೆ

MB Patil: ಫ್ರಾನ್ಸ್ ಪ್ರವಾಸದಲ್ಲಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ್ ‌ಅವರು ಮೂರನೇ ದಿನವಾದ ಬುಧವಾರ ಲಿಸಿ ಏರೋಸ್ಪೇಸ್, ಆಬರ್ಟ್ ಅಂಡ್ ಡುವಲ್‌ ಮತ್ತು ಆರ್ಕೆಮಾ ಕಂಪನಿಗಳ ಜತೆ ಮಹತ್ತ್ವದ ಮಾತುಕತೆ ನಡೆಸಿದ್ದಾರೆ.

Drone Testing Facility: ಚಿಕ್ಕಬಳ್ಳಾಪುರದಲ್ಲಿ ಡ್ರೋನ್ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ: ಪ್ರಿಯಾಂಕ್ ಖರ್ಗೆ

ಚಿಕ್ಕಬಳ್ಳಾಪುರದಲ್ಲಿ ಡ್ರೋನ್ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಸಂಪುಟ ಅನುಮೋದನೆ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಜೀಡರಹಳ್ಳಿ ಗ್ರಾಮದಲ್ಲಿ ಡ್ರೋನ್ ಪರೀಕ್ಷಾ ಕೇಂದ್ರ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸುಮಾರು 19.26 ಎಕರೆ ಸರ್ಕಾರಿ ಜಮೀನಿನಲ್ಲಿ ಸ್ಥಾಪನೆಯಾಗಲಿರುವ ಈ ಕೇಂದ್ರಕ್ಕೆ ರಾಜ್ಯ ಸರ್ಕಾರವು ಒಟ್ಟು ₹42.83 ಕೋಟಿ ನೆರವು ನೀಡಲಿದೆ.

ಜಗತ್ತಿನ ವಿವಿಧ ದೇಶಗಳ ತಜ್ಞರನ್ನು ಒಂದೇ ವೇದಿಕೆಗೆ ತರಲಿರುವ ಎಸ್‌.ಡಿ.ಎಂ ಆಯುರ್ವೇದ ಕಾಲೇಜಿನ ಆರನೇ ಅಂತರರಾಷ್ಟ್ರೀಯ ಸಮ್ಮೇಳನ

ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕ್ಷಮತ್ವಂ 2026

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌.ಡಿ.ಎಂ) ಆಯುರ್ವೇದ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ, ಉಡುಪಿ ಕ್ಷಮತ್ವಂ-2026 ರಲ್ಲಿ ಆಟೋಇಮ್ಯೂನ್ ಕಾಯಿಲೆಗಳ ಕುರಿತ ಆಯುರ್ವೇದದ ಆರನೇ ಅಂತರರಾಷ್ಟ್ರೀಯ ಸಮ್ಮೇಳನವನ್ನು 2026ರ ಸೆ.30 ಮತ್ತು ಅಕ್ಟೋಬರ್ 1 ರವರೆಗೆ, ಉಡುಪಿಯ ಭಾವಪ್ರಕಾಶ ಸಭಾಂಗಣದಲ್ಲಿ ಆಯೋಜಿಸಿದೆ.

Chikkaballapur News: ಎಚ್‌.ಎನ್‌.ವ್ಯಾಲಿ ನೀರು ಅಕ್ರಮ ಬಳಕೆದಾರರ ವಿರುದ್ಧ ಕಾನೂನು ಕ್ರಮ: ಜಿಲ್ಲಾಧಿಕಾರಿ ಜಿ.ಪ್ರಭು

ಎಚ್‌.ಎನ್‌.ವ್ಯಾಲಿ ನೀರು ಅಕ್ರಮ ಬಳಕೆದಾರರ ವಿರುದ್ಧ ಕಾನೂನು ಕ್ರಮ

ಎಚ್‌.ಎನ್‌. ವ್ಯಾಲಿ ನೀರನ್ನು ಕೃಷಿ ಸೇರಿದಂತೆ ಇತರ ನೇರ ಬಳಕೆಗೆ ಪಡೆಯುವುದನ್ನು ನಿಷೇಧಿಸ ಲಾಗಿದ್ದು, ಅಕ್ರಮವಾಗಿ ನೀರು ಪಡೆಯುವುದನ್ನು ತಡೆಯಲು ಕಂದಾಯ, ಪೊಲೀಸ್, ಸಣ್ಣ ನೀರಾವರಿ ಹಾಗೂ ಬೆಸ್ಕಾಂ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಜಿಲ್ಲಾ ಮತ್ತು ತಾಲೂಕು ಮಟ್ಟದ ಕಾರ್ಯ ಪಡೆಗಳನ್ನು ರಚಿಸಲಾಗಿದೆ.

Bengaluru to Belagavi Train: ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಸಿಹಿ ಸುದ್ದಿ; ಬೆಂಗಳೂರು- ಬೆಳಗಾವಿ ನಡುವೆ ವಿಶೇಷ ರೈಲುಗಳ ಸಂಚಾರ

ಗಣೇಶ ಹಬ್ಬದ ಹಿನ್ನೆಲೆ ಬೆಂಗಳೂರು- ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗಲು ನೈರುತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲುಗಳ ವೇಳಾಪಟ್ಟಿ ಇಲ್ಲಿದೆ.

Gauribidanur News: ಅಭಿವೃದ್ಧಿಗಿಂತ ಶಾಸಕರಿಗೆ ಪ್ರಚಾರವೇ ಮುಖ್ಯ: ಮಂಜುನಾಥ್ ಆರೋಪ

ಅಭಿವೃದ್ಧಿಗಿಂತ ಶಾಸಕರಿಗೆ ಪ್ರಚಾರವೇ ಮುಖ್ಯ

ಶಾಸಕರ ಬೆಂಬಲಿಗರು ವಿವಿಧ ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳಂತೆ ಕಾರ್ಯನಿರ್ವಹಿಸು ತ್ತಿದ್ದಾರೆ ಎಂಬ ದೂರುಗಳ ಬಗ್ಗೆಯೂ ತನಿಖೆ ಅಗತ್ಯವಿದೆ. ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾದ ಅನುದಾನ, ವಿವಿಧ ಕಾಮಗಾರಿಗಳಿಗೆ ಖರ್ಚಾದ ಮೊತ್ತದ ಸಂಪೂರ್ಣ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು

Chinthamani News: ನೀರಿನ ಅಭಾವ, ಯುಜಿಡಿ ಸಮಸ್ಯೆ: ಉಗ್ರ ಹೋರಾಟದ ಎಚ್ಚರಿಕೆ

ನೀರಿನ ಅಭಾವ, ಯುಜಿಡಿ ಸಮಸ್ಯೆ: ಉಗ್ರ ಹೋರಾಟದ ಎಚ್ಚರಿಕೆ

ನಗರದಲ್ಲಿರುವ ಬೋರ್‌ವೆಲ್‌ಗಳ ಸಂಖ್ಯೆ, ಕಾರ್ಯ ನಿರ್ವಹಿಸುತ್ತಿರುವ ಹಾಗೂ ನಿಷ್ಕ್ರಿಯವಾಗಿರುವ ಬೋರ್‌ವೆಲ್‌ಗಳ ಕುರಿತು ಅಧಿಕಾರಿಗಳ ಬಳಿ ಸಮರ್ಪಕ ಮಾಹಿತಿ ಇಲ್ಲ. ನೀರಿನ ಪ್ರಮಾಣ ತಿಳಿಯಲು ನೀರಿನ ಹರಿವಿನ ಮಾಪಕ ಅಳವಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು

Tumkur News: ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಕ್ರಮ: ಹಿರೇಹಳ್ಳಿ ಕೆರೆ ಒತ್ತುವರಿ ತೆರವು ಆರಂಭ

ತುಮಕೂರಿನ ಹಿರೇಹಳ್ಳಿ ಕೆರೆ ಒತ್ತುವರಿ ತೆರವು ಆರಂಭ

Tumkur News: ತುಮಕೂರು ತಾಲೂಕಿನ ಊರ್ಡಿಗೆರೆ ಹೋಬಳಿ ಹಿರೇಹಳ್ಳಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ತೀವ್ರಗೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರ ಕಟ್ಟುನಿಟ್ಟಿನ ಸೂಚನೆ ಹಾಗೂ ಇತ್ತೀಚಿನ ಸ್ಥಳ ಪರಿಶೀಲನೆಯ ಬೆನ್ನಲ್ಲೇ, ತೆರವು ಕಾರ್ಯಾಚರಣೆ ತೀವ್ರಗೊಂಡಿದೆ.

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ: ರಾಘವೇಶ್ವರ ಭಾರತೀ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ

Sri Raghaveshwara Bharathi Swamiji: ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ. ಬಹಳಷ್ಟು ಚರ್ಚೆಗಳು ನಡೆದು, ವಿಮರ್ಶೆಗಳ ನಂತರ ಸಿದ್ಧವಾಗುವುದಕ್ಕೆ ಸಿದ್ಧಾಂತ ಎಂದು ಹೆಸರು. ಸಿದ್ಧಾಂತ ಎಂಬುದು ಸಾರ್ವಕಾಲಿಕ ಸತ್ಯ. ಆಧುನಿಕ ಚಿಂತನೆಗಳಂತೆ ಅದು ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವುದಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಬೆಂಗಳೂರಿನ ರಸ್ತೆಬದಿಯ ಅಂಗಡಿಯಿಂದ ಮಧ್ಯರಾತ್ರಿ ಗಣೇಶ ವಿಗ್ರಹ ಕಳವು: ಸಿಸಿಟಿವಿ ದೃಶ್ಯ ವೈರಲ್

ಬೆಂಗಳೂರಿನಲ್ಲಿ ಅಘಾತಕಾರಿ ಘಟನೆ: ರಸ್ತೆಬದಿ ಮಳಿಗೆಯಿಂದ ಗಣೇಶ ಮೂರ್ತಿ ಕಳವು

Viral News: ರಸ್ತೆಬದಿಯ ಮಳಿಗೆಯಿಂದಲೇ ಗಣೇಶ ಮೂರ್ತಿಯನ್ನು ತಡರಾತ್ರಿ ಕಳ್ಳತನ ಮಾಡಿರುವ ಘಟನೆಯೊಂದು ವರದಿಯಾಗಿದೆ. ಬೆಂಗಳೂರಿನ ದಾಸರಹಳ್ಳಿ ಪ್ರದೇಶದ ರಸ್ತೆ ಬದಿಯ ಅಂಗಡಿಯಲ್ಲಿ ಮಾರಾಟಕ್ಕೆ ಇಡಲಾಗಿದ್ದ ಗಣೇಶ ವಿಗ್ರಹವನ್ನು ಕಳ್ಳತನ ಮಾಡಲಾಗಿದ್ದು ಈ ಸಂಪೂರ್ಣ ಕೃತ್ಯ ಹತ್ತಿರದ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿದೆ.

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ; ನಾಳೆ ವಿಧಾನಸೌಧದಲ್ಲಿ ʼಶತಕದ ಪಥ, ಪ್ರಗತಿಯ ರಥʼ ವಿಶೇಷ ಕಾರ್ಯಕ್ರಮ

ಡಿಕೆಶಿ ಸರ್ಕಾರಕ್ಕೆ 100 ದಿನ; ನಾಳೆ ʼಶತಕದ ಪಥ, ಪ್ರಗತಿಯ ರಥʼ ಕಾರ್ಯಕ್ರಮ

DK Shivakumar's government: ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ 'ದೃಢ ಕರ್ನಾಟಕದ ಸಂಕಲ್ಪ - ಶತಕದ ಪಥ, ಪ್ರಗತಿಯ ರಥ' ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ.

Cabinet Meeting: ಕರ್ನಾಟಕದ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆ ಸಂಪುಟ ಒಪ್ಪಿಗೆ

Student Union Elections: ರಾಜ್ಯದ ಕಾಲೇಜು ಕ್ಯಾಂಪಸ್‌ಗಳಲ್ಲಿ ಹೆಚ್ಚುತ್ತಿದ್ದ ಹಿಂಸಾಚಾರ, ಗೂಂಡಾಗಿರಿ ಮತ್ತು ರಾಜಕೀಯ ಹಸ್ತಕ್ಷೇಪದ ಹಿನ್ನೆಲೆಯಲ್ಲಿ 1989ರಲ್ಲಿ ವೀರೇಂದ್ರ ಪಾಟೀಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಿಷೇಧಿಸಿತ್ತು. ಇದೀಗ ಕಾಲೇಜುಗಳಲ್ಲಿ ಮತ್ತೆ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಲು ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.

Loading...