ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಬಳ್ಳಾರಿ ಎಸ್‌ಪಿ ಅಮಾನತು
ಬಳ್ಳಾರಿಯಲ್ಲಿ ವಾಲ್ಮೀಕಿ ಮಹರ್ಷಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆ ನಡೆದಿತ್ತು. ಈ ವೇಳೆ ಕಲ್ಲು ತೂರಾಟ ಸೇರಿ ಅಹಿತಕರ ಘಟನೆಗಳು ನಡೆದಿದ್ದವು. ಪರಿಸ್ಥಿತಿಯನ್ನು ನಿಭಾಯಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿಲ್ಲ ಎಂದು ನೂತನ ಎಸ್‌ಪಿ ಪವನ್ ನೆಜ್ಜೂರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.