ಬೆಂಗಳೂರಿನಲ್ಲಿ ಶಾಸಕ ಬೈರತಿ ಬಸವರಾಜು ಅರೆಸ್ಟ್
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
DK Shivakumar: ನಿಮ್ಮ ಭೇಟಿ ಫಲಪ್ರದವಾಗಿದೆಯೇ, ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್‌ನಿಂದ ಸ್ಪಷ್ಟನೆ ಸಿಕ್ಕಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ನಾವು ಈ ವಿಚಾರವಾಗಿ ಚರ್ಚೆ ಮಾಡಿಲ್ಲ. ಪಕ್ಷ ತನ್ನದೇ ಆದ ಗುರಿ ಹೊಂದಿದ್ದು, ಪಕ್ಷದ ಯಶಸ್ಸು ಹಾಗೂ ಪಕ್ಷದ ಹಿತಾಸಕ್ತಿ, ಕರ್ನಾಟಕ ಹಾಗೂ ದೇಶದ ಹಿತದೃಷ್ಟಿ ಆಧಾರದ ಮೇಲೆ ನಮ್ಮ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೂಕ್ತ ಸಮಯದಲ್ಲಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.
DK Shivakumar: ಬೆಂಗಳೂರಿನಲ್ಲಿ ಫೆಬ್ರವರಿ 13 ಹಾಗೂ 14ರಂದು ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನವನ್ನು ಆಯೋಜಿಸಲಾಗಿದೆ. ಅಣೆಕಟ್ಟು ಸುರಕ್ಷತೆ ವಿಚಾರದಲ್ಲಿ 46 ಸಂಶೋಧನಾ ವರದಿಗಳನ್ನು ಮಂಡಿಸಲು ಈ ಸಮ್ಮೇಳನದಲ್ಲಿ ನಾವು ಅನುಮತಿ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
BESCOM News: ಜಾಲಹಳ್ಳಿ ವಿಭಾಗದ 66/11 ಕೆವಿಎ ಗೋಕುಲ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಫೆ.14ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
28,405 ಕೋಟಿ ರೂ. ಬೃಹತ್ ಮೊತ್ತದ ಡಿಪಿಆರ್ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ರೆಡ್ ಲೈನ್ ಯೋಜನೆಯನ್ನು ಮರುಪರಿಶೀಲನೆ ಮಾಡಲು ಸೂಚಿಸಲಾಗಿದ್ದು, ಅನುಮೋದನೆಯನ್ನು ಸದ್ಯ ಸ್ಥಗಿತಗೊಳಿಸಲಾಗಿದೆ. ಡಬಲ್ ಡೆಕ್ಕರ್ ವ್ಯವಸ್ಥೆ ಮಾಡಿದರೆೆ, ಮೆಟ್ರೋದಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಕಡಿಮೆಯಾಗಲಿರುವ ಕಾರಣ, ಅದಕ್ಕೂ ಆಯ್ದ ಜಂಕ್ಷನ್‌ಗಳಲ್ಲಿ ಮಾತ್ರ ಮಾಡಲು ಸೂಚಿಸಲಾಗಿದೆ.
ಎಲ್ಲೆಲ್ಲಿ ಅಗತ್ಯವಿದೆಯೋ ಆ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಪ್ಲ್ಯಾನ್ ಕೂಡ ಜಲಮಂಡಳಿ ಮಾಡಿಕೊಂಡಿದೆ. ಕಾವೇರಿ ನೀರಿನಲ್ಲಿ ಬೈಕ್, ಕಾರು ತೊಳೆಯೋದು, ನೀರನ್ನ ಬೇಕಾಬಿಟ್ಟಿ ಪೋಲು ಮಾಡಿದರೆ ಜಲಮಂಡಳಿ ದಂಡ ಹಾಕಲು ಕೂಡ ಸಿದ್ಧತೆ ಮಾಡಿಕೊಂಡಿದೆ. ಇದಕ್ಕಾಗಿ ವೀಕ್ಷಕರು ಮತ್ತು ಬ್ಲೂಫೋರ್ಸ್ ಕೂಡ ಕಾರ್ಯಾಚರಣೆ ಮಾಡಲಿದೆ.
ಶಿಕ್ಷಣ ವಿನಯ, ವಿನಮ್ರತೆ, ಮಾನವೀಯ ಮೌಲ್ಯ ಗಳನ್ನು ಕಲಿಸುತ್ತದೆ. ದಶವಂತ ಸಮುದಾಯ ಅತ್ಯೆಂತ ಕಡಿಮೆಯುಳ್ಳ ಜನಾಂಗ ಆದರೆ ಇವರ ಬದುಕು, ಆದರ್ಶ ಅತ್ಯಂತ ಎತ್ತರಕ್ಕೆ ಬೆಳೆಸಿಕೊಂಡಿ ದ್ದಾರೆ. ಮಾನವ ಸಂಪನ್ಮೂಲ ಇಲಾಖೆ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಯೋಜನೆಗಳು ಮಾಡಿವೆ.
ಈ ಭಾಗ ಗಡಿಭಾಗವಾಗಿರುವ ಕಾರಣ ಇಲ್ಲಿನ ಜನರಿಗೆ ಆಸ್ಪತ್ರೆಯ ಅವಶ್ಯಕತೆಯಿತ್ತು. ಹಾಗಾಗಿ ಸರ್ಕಾರ ಇಲ್ಲಿಗೆ ನೂತನ ಕಟ್ಟಡಕ್ಕೆ ಮಂಜೂರಾತಿ ನೀಡಿದ ಕಾರಣ ಇಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಕಟ್ಟಡವೊಂದು ನಿರ್ಮಾಣವಾದರೇ ಸಾಲದು ಇಲ್ಲಿ ಕೆಲಸ ಮಾಡುವಂತಹ ವೈದ್ಯರು, ನರ್ಸ್ ಹಾಗೂ ಎಲ್ಲ ಸಿಬ್ಬಂದಿಯಿದ್ದು ಈ ಭಾಗದ ಜನರಿಗೆ ಅನುಕೂಲವಾಗಬೇಕು
ಮೈಸೂರಿನ ಬ್ಯೂಟಿ ಪಾರ್ಲರ್‌ನ ಮಹಿಳೆಯೊಬ್ಬರಿಂದ ಈ ಆರೋಪ ಕೇಳಿಬಂದಿತ್ತು. ತನಿಖೆ ನಡೆಸಿದ್ದ ಮೈಸೂರಿನ ಸರಸ್ವತಿ ಪುರಂ ಪೊಲೀಸರು, ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಮಸಾಜ್ ಮಾಡಿಸಿಕೊಳ್ಳುವಾಗ ಲೈಂಗಿಕ ದೌರ್ಜನ್ಯ ಮಾಡಿದ್ದರೆಂದು ಆರೋಪ ಮಾಡಲಾಗಿತ್ತು. ಈ ಪ್ರಕರಣ ರದ್ದು ಕೋರಿ ಇಬ್ಬರೂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಬೈರತಿ ಬಸವರಾಜು ಬಂಧನಕ್ಕೆ ಸಿಐಡಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಬೈರತಿ ಬಸವರಾಜು ಅವರು ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿರುವ ಶಂಕೆಯಿದ್ದು, ಸಿಐಡಿ ಪೊಲೀಸ್ ಅಧಿಕಾರಿಗಳು ಮಹಾರಾಷ್ಟ್ರದ ವಿವಿಧೆಡೆ ಪತ್ತೆ ಕಾರ್ಯ ಮುಂದುವರಿಸಿದ್ದಾರೆ. ಈ ಮಧ್ಯೆ ಬೈರತಿ ಬಸವರಾಜು ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಅವರ ವಿರುದ್ಧ ಲುಕೌಟ್ ನೋಟಿಸ್ ಹೊರಡಿಸಿದ್ದಾರೆ.
ಕಡೂರು ತಾಲೂಕು ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಇಕ್ಬಾಲ್ ನಾಪತ್ತೆಯಾಗಿದ್ದಾರೆ. ಶಾಸಕ ಕೆ.ಎಸ್.ಆನಂದ್ ಅವರ ಆಪ್ತ ಸಹಾಯಕ ಮಂಜುನಾಥ್, ತಹಶೀಲ್ದಾರ್ ಪೂರ್ಣಿಮಾ ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಿವಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಕಲ್ಲೇಶ್ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ.
ಗಾಡಿ ಟಚ್ ಆಗಿದ್ದಕ್ಕೆ ಗಲಾಟೆ ಶುರುವಾಗಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ವಾಗ್ವಾದ ನಡೆಸುತ್ತಾ ಗೂಡ್ಸ್ ಚಾಲಕ ಕಾರಿನ ಬ್ಯಾನೆಟ್ ಮೇಲೆ ಕುಳಿತಿದ್ದಾನೆ. ಈ ಸಂದರ್ಭದಲ್ಲಿ ಗೂಡ್ಸ್ ಚಾಲಕ ಸಹ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಗೊತ್ತಾಗಿದೆ. ಸಿಟ್ಟಿನಿಂದ ಕಾರು ಚಾಲಕ ಹಾಗೆಯೇ ಕಾರು ಚಲಾಯಿಸಿ, ಗೂಡ್ಸ್ ಚಾಲಕನನ್ನು ಎಳೆದೊಯ್ದಿದ್ದಾನೆ.
ಹಲವು ರಾಜ್ಯಗಳಲ್ಲಿ ಪ್ರತಿಭಟನಾಕಾರರು ರಸ್ತೆಗಿಳಿದು ಹೋರಾಟದ ಮಾಡುವ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗಲಿದೆ. ಭಾರತ್ ಬಂದ್ ಎಫೆಕ್ಟ್ ಕರ್ನಾಟಕಕ್ಕೂ ತಟ್ಟಬಹುದು. ಹಲವೆಡೆ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದೆ. ಸಂಚಾರದಲ್ಲೂ ಅಸ್ತವ್ಯಸ್ತ ಉಂಟಾಗುವ ಸಾಧ್ಯತೆ ಇದೆ. ಆದರೆ ಕರ್ನಾಟಕದಲ್ಲಿ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.
ಪ್ರಸ್ತುತ ಜಿಲ್ಲೆಯ 13 ಗ್ರಾಮಗಳಲ್ಲಿ, 24 ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಪ್ರಸ್ತುತ ಖಾಸಗಿ ಕೊಳವೆ ಬಾವಿ ಮಾಲೀಕರ ಸಹಕಾರ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ. ಈವರೆಗೆ ಯಾವುದೇ ಪ್ರದೇಶದಲ್ಲಿ ಟ್ಯಾಂಕರ್ ಗಳ ಮೂಲಕ ನೀರು ಪೂರೈಸುವ ಪರಿಸ್ಥಿತಿ ತಲೆದೋರಿಲ್ಲ. ಮುಂದಿನ ದಿನಗಳಲ್ಲಿ 42 ಗ್ರಾಮಗಳಲ್ಲಿ, 21 ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗ ಬಹುದಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು
ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಸಮರ್ಥವಾಗಿ ಕಟ್ಟುವ ಉದ್ದೇಶದಿಂದ ಕಷ್ಟ ಬಿದ್ದು ದುಡ್ಡು ತಂದು ಖರ್ಚು ಮಾಡಿ ಪಕ್ಷ ಕಟ್ಟಿಲ್ಲವಾ? ಪಕ್ಷಕ್ಕಾಗಿ ಅವರವರ ಯೋಗ್ಯತೆಗೆ ತಕ್ಕಂತೆ ಸಹಾಯ ಮಾಡಿದ್ದಾರೆ. ಒಬ್ಬ ಒಂದು ರೂಪಾಯಿ ಕೊಟ್ಟಿರಬಹುದು, ಮತ್ತೊಬ್ಬ ಕೋಟಿ ರೂಪಾಯಿ ಕೊಟ್ಟಿರಬಹುದು. ಮೊದಲು ಕಾರ್ಯಕರ್ತರಿಗೆ ಗೌರವ ಕೊಡುವುದು ಕಲಿಯಿರಿ
ಭಾರತದ ಮಾದರಿ ಅಲ್ಲದ ನಗರಗಳಿಂದ ಶೇ. 70 ಕ್ಕಿಂತ ಹೆಚ್ಚು ಹೊಸ ಪ್ರೈಮ್ ಸದಸ್ಯತ್ವದ ನೋಂದಣಿ ಗಳು ಮುಂದುವರಿದಿದ್ದು, ಪ್ರೈಮ್ ಸದಸ್ಯರು ಸಾಮಾನ್ಯ ಸದಸ್ಯರಿಗಿಂತ ಐದು ಪಟ್ಟು ಹೆಚ್ಚು ಬಾರಿ ಶಾಪಿಂಗ್ ಮಾಡುತ್ತಿದ್ದಾರೆ. ಅಮೆಜಾನ್ ತನ್ನ ಅಲ್ಟ್ರಾ-ಫಾಸ್ಟ್ ವಿತರಣಾ ಸೇವೆಯಾದ 'ಅಮೆಜಾನ್ ನೌ' ಅನ್ನು ಬೆಂಗಳೂರು, ದೆಹಲಿ-NCR ಮತ್ತು ಮುಂಬೈನ ಕೆಲವು ಭಾಗಗಳಲ್ಲಿ ನಿಮಿಷಗಳ ಅವಧಿಯ ವಿತರಣೆಯೊಂದಿಗೆ ನೀಡುತ್ತಿದೆ.
ದಾಖಲೆಯ ಮಧ್ಯಂತರ ಲಾಭಾಂಶ ಘೋಷಣೆಯು Q3FY26 ಮತ್ತು 9MFY26 ರಲ್ಲಿ ದೃಢವಾದ ಹಣಕಾಸು ಕಾರ್ಯಕ್ಷಮತೆಯನ್ನು ಅನುಸರಿಸುತ್ತದೆ, ಇದು ಪ್ರಮುಖ ಲಂಬಗಳಲ್ಲಿ ಆರೋಗ್ಯಕರ ವ್ಯವಹಾರದ ಆವೇಗವನ್ನು ಪ್ರತಿಬಿಂಬಿಸುತ್ತದೆ. Q3FY26 ಆದಾಯವು 736 ಕೋಟಿ ರೂ.ಗೆ ಏರಿದೆ, ಇದು 43.6% YoY ಹೆಚ್ಚಾಗಿದೆ, ಇದು ವೀಸಾ ಮತ್ತು ಕಾನ್ಸುಲರ್ ಸೇವೆಗಳು ಮತ್ತು ಡಿಜಿಟಲ್ ಸೇವೆಗಳ ವಿಭಾಗ ಗಳಲ್ಲಿ ಬಲವಾದ ಕಾರ್ಯಗತಗೊಳಿಸುವಿಕೆಯಿಂದ ಪ್ರೇರಿತವಾಗಿದೆ