ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Lorry strike: ಲಾರಿ ಮಾಲೀಕರ ಸಂಘದ ಜತೆ ಸಿಎಂ ಸಭೆ; ಮುಷ್ಕರ ಕೈಬಿಡಲು ಮನವಿ

ಲಾರಿ ಮಾಲೀಕರ ಸಂಘದ ಜತೆ ಸಿಎಂ ಸಭೆ; ಮುಷ್ಕರ ಕೈಬಿಡಲು ಮನವಿ

Lorry strike: ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಲಾರಿ ಮತ್ತು ಟ್ರಕ್ ಮಾಲೀಕ ಸಂಘಟನೆಗಳ ಮುಖಂಡರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮುಖ್ಯಮಂತ್ರಿ ಅವರು ಮನವಿ ಮಾಡಿದ್ದಾರೆ.

Haveri Rain: ಹಾವೇರಿಯಲ್ಲಿ ಭಾರಿ ಮಳೆ; ನೆಲಕ್ಕುರುಳಿದ ಮರಗಳು, ವಿದ್ಯುತ್‌ ಕಂಬ ಬಿದ್ದು ಹಲವು ಬೈಕ್‌ ಜಖಂ

ಹಾವೇರಿಯಲ್ಲಿ ಭಾರಿ ಮಳೆಗೆ ನೆಲಕ್ಕುರುಳಿದ ಮರ, ವಿದ್ಯುತ್‌ ಕಂಬಗಳು

Haveri Rain: ಹಾವೇರಿಯ ಶಹರದ ಶಿವಾಜಿ ನಗರದಲ್ಲಿ ತೆಂಗಿನ ಮರ ಬಿದ್ದ ಹಿನ್ನೆಲೆ ನಾಲ್ಕು ವಿದ್ಯುತ್‌ ಕಂಬಗಳು ಉರುಳಿ, ಹಲವು ಬೈಕ್‌ಗಳು ಜಖಂಗೊಂಡಿವೆ. ಬಿರುಗಾಳಿ, ಗುಡುಗು ಸಹಿತ ಆಲಿಕಲ್ಲು ಮಳೆಯಿಂದ ಹಾವೇರಿಯಿಂದ ಗುತ್ತಲ ಕಡೆಗೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ನಾಲ್ಕೈದು ದೊಡ್ಡ ಮರಗಳು ಉರುಳಿದ್ದರಿಂದ ಮೂರು ಗಂಟೆಗಳ ಕಾಲ‌ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

Karnataka Rain: ರೈತರಿಗೆ ಗುಡ್‌ ನ್ಯೂಸ್‌; ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆ!

ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆ: ಹವಾಮಾನ ಇಲಾಖೆ ಮಾಹಿತಿ

Karnataka Rain: ಕರ್ನಾಟಕ ಸೇರಿ ದೇಶದಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ನಾಲ್ಕು ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ನಿರೀಕ್ಷೆ ಇದೆ. ಈ ಬಾರಿ ಶೇ. 105ರಷ್ಟು ಮಳೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Hubballi murder case: ಮೃತ ಬಾಲಕಿ ಕುಟುಂಬಕ್ಕೆ 25 ಲಕ್ಷ ಪರಿಹಾರ ಕೊಡಬೇಕು: ಜಗದೀಶ್ ಶೆಟ್ಟರ್ ಆಗ್ರಹ

ಮೃತ ಬಾಲಕಿ ಕುಟುಂಬಕ್ಕೆ 25 ಲಕ್ಷ ಪರಿಹಾರ ಕೊಡಬೇಕು: ಜಗದೀಶ್ ಶೆಟ್ಟರ್

Hubballi murder case: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಹತ್ಯೆ ಹಿನ್ನೆಲೆಯಲ್ಲಿ ಮೃತ ಬಾಲಕಿ ಮನೆಗೆ ಸಂಸದ ಹಾಗೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಮಂಗಳವಾರ ಭೇಟಿ ನೀಡಿ, ಬಾಲಕಿ ತಂದೆ-ತಾಯಿಗೆ ಸಾಂತ್ವನ ಹೇಳಿ ಮಾತನಾಡಿದ್ದಾರೆ.

lorry strike: ಲಾರಿ ಮುಷ್ಕರ; ರಸ್ತೆಗಿಳಿಯದ ಲಾರಿಗಳು, ಸರಕು ಸಾಗಣೆಯಲ್ಲಿ ಭಾರಿ ವ್ಯತ್ಯಯ

ಲಾರಿ ಮುಷ್ಕರ; ರಸ್ತೆಗಿಳಿಯದ ಲಾರಿಗಳು, ಸರಕು ಸಾಗಣೆಯಲ್ಲಿ ಭಾರಿ ವ್ಯತ್ಯಯ

lorry strike: ಮಾರುಕಟ್ಟೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಎಲ್ಲೆಡೆ ಲಾರಿಗಳು, ಗೂಡ್ಸ್ ವಾಹನಗಳು ನಿಂತಲ್ಲೇ ನಿಂತಿವೆ. ಜಲ್ಲಿ, ಮರಳು, ಕಲ್ಲು, ಸಿಮೆಂಟು, ಕಬ್ಬಿಣ, ತರಕಾರಿ, ಆಹಾರ ಪದಾರ್ಥ ಮತ್ತಿತರೆ ವಸ್ತುಗಳ ಸಾಗಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.

‌Viral Video: ಲಾರಿ ಓವರ್‌ಟೇಕ್‌ ಮಾಡಲು ಹೋದ ಟ್ಯಾಂಕರ್; ಕೊನೆಗೆ ಆಗಿದ್ದೇನು? ಶಾಕಿಂಗ್‌ ವಿಡಿಯೊ ವೈರಲ್

ನಡುರಸ್ತೆಯಲ್ಲಿ ಪಲ್ಟಿ ಹೊಡೆದ ಟ್ಯಾಂಕರ್; ವಿಡಿಯೊ ವೈರಲ್‌

ಬೆಂಗಳೂರಿನ ರಸ್ತೆಯಲ್ಲಿ ಲಾರಿಯನ್ನು ಓವರ್‌ಟೇಕ್‌ ಮಾಡಲು ಹೋಗಿ ನೀರಿನ ಟ್ಯಾಂಕರ್ ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ. ಮುಂದೆ ಹೋಗುತ್ತಿದ್ದ ವಾಹನದ ಹಿಂಭಾಗದಲ್ಲಿ ಇರಿಸಲಾಗಿದ್ದ ಡ್ಯಾಶ್ ಕ್ಯಾಮರಾದಲ್ಲಿ ಈ ಅಪಘಾತದ ದೃಶ್ಯ ಸೆರೆಯಾಗಿದ್ದು, ಸದ್ಯ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

Muda Case: ಮುಡಾ ಹಗರಣ; ತನಿಖೆ ಮುಂದುವರಿಸಲು ಲೋಕಾಯುಕ್ತಕ್ಕೆ ಕೋರ್ಟ್‌ ಸೂಚನೆ, ಮೇ 7ಕ್ಕೆ ವಿಚಾರಣೆ ಮುಂದೂಡಿಕೆ

ಮುಡಾ ಹಗರಣ; ತನಿಖೆ ಮುಂದುವರಿಸಲು ಲೋಕಾಯುಕ್ತಕ್ಕೆ ಕೋರ್ಟ್‌ ಸೂಚನೆ

Muda Case: ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರಿಗೆ ತನಿಖೆಗೆ ಮುಂದುವರಿಸಲು ಸೂಚಿಸಿದ್ದು, ಸಂಪೂರ್ಣ ವರದಿ ಸಲ್ಲಿಸಿದ ಬಳಿಕ ಮುಂದಿನ ಆದೇಶ ನೀಡಲಿದೆ. ಇನ್ನು ಇದೇ ಪ್ರಕರಣ ಸಂಬಂಧ ಇ.ಡಿ.ಗೆ ತಕರಾರು ಅರ್ಜಿ ಸಲ್ಲಿಸಲು ಕೋರ್ಟ್ ಅನುಮತಿ ನೀಡಿದೆ.

Caste Census: ಜಾತಿ ಗಣತಿ ವರದಿ ಜಾರಿಯಾದ್ರೆ ಸರ್ಕಾರ ಬಿದ್ದೇ ಬೀಳುತ್ತೆ: ಒಕ್ಕಲಿಗರ ಸಂಘ ಎಚ್ಚರಿಕೆ

ಜಾತಿ ಗಣತಿ ವರದಿ ಜಾರಿಯಾದ್ರೆ ಸರ್ಕಾರ ಬೀಳುತ್ತೆ: ಒಕ್ಕಲಿಗರ ಸಂಘ

Caste Census: ಸರ್ಕಾರ ಕಾಂತರಾಜು ಆಯೋಗದ ವರದಿ ಜಾರಿ ಮಾಡಲು ಹೊರಟಿದೆ. ಆದರೆ ಅದರ ವಿರುದ್ಧ ಹೋರಾಟ ಮಾಡಲು ಒಕ್ಕಲಿಗ ಸಂಘದ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ. ಮುಂದಿನ ಹಂತದಲ್ಲಿ ಯಾವ ರೀತಿ ಹೋರಾಟ ಮಾಡುವುದರ ಕುರಿತು ಇಂದು ಚರ್ಚಿಸಲಾಗಿದೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ತಿಳಿಸಿದ್ದಾರೆ.

Murder Case: ಅಥಣಿಯಲ್ಲಿ ಅಪಘಾತ ವಿಚಾರಕ್ಕೆ ತಾಯಿ-ಮಗನ ಕತ್ತು ಹಿಸುಕಿ ಕೊಲೆ!

ಅಥಣಿಯಲ್ಲಿ ಅಪಘಾತ ವಿಚಾರಕ್ಕೆ ತಾಯಿ-ಮಗನ ಕತ್ತು ಹಿಸುಕಿ ಕೊಲೆ!

Murder Case: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಡಗಾನೂರ ಗ್ರಾಮದ ಗಾನಖೋಡಿಯ ಗದ್ದೆಯಲ್ಲಿ ಘಟನೆ ನಡೆದಿದೆ. ಅಪಘಾತ ಪ್ರಕರಣವೊಂದರಲ್ಲಿ ಸಂಧಾನಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ತಾಯಿ-ಮಗನ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ಯವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೊಲೀಸ್ ಮತ್ತು ನ್ಯಾಯಾಂಗ ಎರಡರಲ್ಲೂ ಕೋಟಾ: ಏಕೈಕ ರಾಜ್ಯ ಕರ್ನಾಟಕ

ಇಂಡಿಯಾ ಜಸ್ಟಿಸ್ ರಿಪೋರ್ಟ್ 2025ನಲ್ಲಿ 18 ರಾಜ್ಯಗಳ ಪೈಕಿ ಮೊದಲನೇ ಸ್ಥಾನ

ನ್ಯಾಯವನ್ನು ಪಡೆದುಕೊಳ್ಳುವ ದಂಡ ಪ್ರಕ್ರಿಯೆಯು ವ್ಯಕ್ತಿಯು ವ್ಯವಸ್ಥೆಯೊಡನೆ ಮೊಟ್ಟಮೊದಲ ಬಾರಿಗೆ ಭೇಟಿಯಾಗುವುದರಿಂದ ಆರಂಭವಾಗುತ್ತದೆ. ಮುನ್ನೆಲೆ ನ್ಯಾಯ ಒದಗಿಸುವವರನ್ನು, ಅಂದರೆ, ಪೊಲೀಸ್ ಠಾಣೆಗಳು, ಕಾನೂನು ನೆರವು ಒದಗಿಸುವವರು, ಮತ್ತು ಜಿಲ್ಲಾ ನ್ಯಾಯಾಲಯಗಳನ್ನು ಸಜ್ಜುಗೊಳಿಸಿ ಅವರನ್ನು ಸರಿಯಾಗಿ ತರಬೇತುಗೊಳಿಸುವ ನಮ್ಮ ವೈಫಲ್ಯದೊಂದಿಗೆ ನಾವು ಸಾರ್ವ ಜನಿಕ ವಿಶ್ವಾಸವನ್ನು ಮುರಿಯುತ್ತಿದ್ದೇವೆ

Hubballi news: ʼಇನ್ನಷ್ಟು ಸಿಸಿಟಿವಿ ಅಳವಡಿಸಿʼ: ಹುಬ್ಬಳ್ಳಿಯ ಮೃತ ಬಾಲಕಿ ಮನೆಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಭೇಟಿ

ಹುಬ್ಬಳ್ಳಿಯ ಮೃತ ಬಾಲಕಿ ಮನೆಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಭೇಟಿ

ಈಗಷ್ಟೇ ಹುಟ್ಟಿದ ಮಕ್ಕಳನ್ನು ಸಹ ಕಾಮುಕರು ಬಿಡುತ್ತಿಲ್ಲ. ನಮ್ಮ ಮಕ್ಕಳನ್ನು ನಾವು ಕಣ್ಣಲ್ಲಿ ಕಣ್ಣಿಟ್ಟು ಕಾಪಾಡಿಕೊಳ್ಳಬೇಕು. ಅದು ನಮ್ಮ ಜವಾಬ್ದಾರಿ ಕೂಡ ಹೌದು ಎಂದರು. ನಂತರ ಕೆಎಂಸಿಆರ್‌ಐಗೆ ಭೇಟಿ ನೀಡಿ ವೈದ್ಯರ ಜತೆ ಚರ್ಚಿಸಿದರು. ಗಾಯಗೊಂಡ ಪೊಲೀಸರ ಆರೋಗ್ಯ ವಿಚಾರಿಸಿದರು.

SK Shyam Sundar: ಹಿರಿಯ ಪತ್ರಕರ್ತ ಶ್ಯಾಮ್‌ಸುಂದರ್‌ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಹಿರಿಯ ಪತ್ರಕರ್ತ ಶ್ಯಾಮ್‌ಸುಂದರ್‌ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘಕಾಲ ಪತ್ರಕರ್ತರಾಗಿ ದುಡಿದವರು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.

300 ಆಸನಗಳುಳ್ಳ ಹೊಸ ಕಚೇರಿಯೊಂದಿಗೆ ಬೆಂಗಳೂರಿನಲ್ಲಿ ತನ್ನ ಅಸ್ತಿತ್ವ ಮತ್ತಷ್ಟು ಬಲಪಡಿಸಿದ ಯು ಎಸ್ ಟಿ

300 ಆಸನಗಳುಳ್ಳ ಹೊಸ ಕಚೇರಿ: ಯು ಎಸ್ ಟಿ ಅಸ್ತಿತ್ವ ಮತ್ತಷ್ಟು ದೃಢ

ನಗರದ ಪ್ರಮುಖ ತಂತ್ರಜ್ಞಾನ ಕೇಂದ್ರಗಳಲ್ಲಿ ಉಪಗ್ರಹ ಕಚೇರಿಗಳೊಂದಿಗೆ, ನಾವು ನಮ್ಮ ಉದ್ಯೋಗಿ ಗಳಿಗೆ ಅವರ ಮನೆಗೆ ಸಮೀಪದಲ್ಲಿ ಅನುಕೂಲಕರ ಕೆಲಸದ ಸ್ಥಳ ಒದಗಿಸುವ ಗುರಿ ಹೊಂದಿದ್ದೇವೆ, ಪ್ರಯಾಣದ ಆಯಾಸವನ್ನು ಕಡಿಮೆ ಮಾಡುತ್ತೇವೆ ಮತ್ತು ಅವರು ನಾವೀನ್ಯತೆ ಮತ್ತು ಉತ್ಪಾದಕತೆಯ ಮೇಲೆ ಹೆಚ್ಚು ಗಮನ ಹರಿಸಲು ಅನುವು ಮಾಡಿಕೊಡುತ್ತೇವೆ

Caste census: ಇನ್ನೊಮ್ಮೆ ಸಮೀಕ್ಷೆ ಮಾಡಿ: ಜಾತಿ ಗಣತಿ ವರದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಕ್ಷೇಪ

ಜಾತಿ ಗಣತಿ ವರದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಂದಲೇ ಆಕ್ಷೇಪ

'ಜಾತಿ ಗಣತಿಗೆ ನಮ್ಮ ವಿರೋಧ ಯಾವತ್ತೂ ಇಲ್ಲ. ಆದರೆ ಈ ಜಾತಿ ಗಣತಿಯಲ್ಲಿ ವೀರಶೈವ- ಲಿಂಗಾಯತರನ್ನು ಪ್ರತ್ಯೇಕ ಮಾಡಿ ಗಣತಿ ಮಾಡಲಾಗಿದೆ. ಹಾಗಾಗಿ ಜಾತಿ ಗಣತಿಯನ್ನು ಇನ್ನೊಮ್ಮೆ ವೀರಶೈವ-ಲಿಂಗಾಯತರನ್ನು ಒಟ್ಟಾಗಿ ಪರಿಗಣಿಸಿ ಮಾಡಬೇಕು’ ಎಂದು ರಾಜ್ಯ ಸರ್ಕಾರವನ್ನು ಸಚಿವೆ ಆಗ್ರಹಿಸಿದರು.

ಆರ್ಯವೈಶ್ಯ ಸಮಾಜಕ್ಕೆ ಸರ್ಕಾರದ ಬೆಂಬಲ ಸದಾ ಇರಲಿದೆ: ಎಸ್‌.ಇ.ಸುಧೀಂದ್ರ

ಆರ್ಯವೈಶ್ಯ ಸಮಾಜಕ್ಕೆ ಸರ್ಕಾರದ ಬೆಂಬಲ ಸದಾ ಇರಲಿದೆ

ಸಿದ್ದರಾಮಯ್ಯ ಅವರ ಸರ್ಕಾರ ಆರ್ಯವೈಶ್ಯ ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ, ಈ ಸಮಾಜದ ಏನೇ ಅಗತ್ಯಗಳಿದ್ದರೂ ಅದಕ್ಕೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಆರ್ಯ ವೈಶ್ಯ ಮಹಾಸಭಾ ಖಾಸಗಿಯಾಗಿ ತಮ್ಮ ಸಮಾಜದಲ್ಲಿ ಬಡವರಿಗೆ, ವಿಶೇಷ ಚೇತನರಿಗೆ, ವಿಧವಾ ಮಹಿಳೆಯರು ಹಾಗೂ ಬಡ ವಿದ್ಯಾರ್ಥಿಗಳಿಗೆ ಸಾಕಷ್ಟು ನೆರವು ನೀಡುತ್ತಿರು ವುದು ಶ್ಲಾಘನೀಯ.

Inner Reservation: ನೆರೆ ರಾಜ್ಯದಲ್ಲಿ ಒಳ ಮೀಸಲು ಜಾರಿ, ರಾಜ್ಯದಲ್ಲೂ ಹೆಚ್ಚಿದ ಒತ್ತಡ

ನೆರೆ ರಾಜ್ಯದಲ್ಲಿ ಒಳ ಮೀಸಲು ಜಾರಿ, ರಾಜ್ಯದಲ್ಲೂ ಹೆಚ್ಚಿದ ಒತ್ತಡ

ತೆಲಂಗಾಣ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಒಳಮೀಸಲು ನೀಡಬೇಕೆಂಬ ಒತ್ತಡ ಭವಿಷ್ಯ ದಲ್ಲಿ ಸರಕಾರ ಮುಂದೆ ಬರಲಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕದಲ್ಲಿ ಒಳ ಮೀಸಲು ಜಾರಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಈಗಾಗಲೇ ನಾಗಮೋಹನ್ ದಾಸ್ ನೇತೃತ್ವ ದಲ್ಲಿ ಸಮೀಕ್ಷೆ ನಡೆಸಲು ಈಗಾಗಲೇ ವಿಚಾರಣಾ ಆಯೋಗವನ್ನು ರಚಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ

PSI Annapoorna: ಲೇಡಿ ಸಿಂಗಂಗೆ ಮೆಚ್ಚುಗೆಯ ಮಹಾಪೂರ

ಲೇಡಿ ಸಿಂಗಂಗೆ ಮೆಚ್ಚುಗೆಯ ಮಹಾಪೂರ

ಹುಬ್ಬಳ್ಳಿಯ ಅಶೋಕ ನಗರದಲ್ಲಿ ಐದು ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಬಾಲಕಿಯನ್ನು ಕೊಲೆ ಮಾಡಿದ್ದ ಆರೋಪಿ ಬಿಹಾರ ಮೂಲದ ರಿತೇಶ್‌ನನ್ನು ಪ್ರಕರಣ ನಡೆದ ದಿನವೇ ಎನ್‌ಕೌಂಟರ್ ಮಾಡಲಾಗಿದೆ. ಆ ಮೂಲಕ ಶೀಘ್ರವೇ ನ್ಯಾಯ ಕೊಡಿಸಿದ್ದಾರೆ ಎಂದು ಜನರು ಅವರಿಗೆ ಲೇಡಿ ಸಿಂಗಂ ಎಂದು ಬಿರುದು ನೀಡಿದ್ದಾರೆ.

Namma Metro: 2026ರಲ್ಲಿ ನೀಲಿ ಮಾರ್ಗದ ಮೊದಲ ಹಂತದ ಉದ್ಘಾಟನೆ  ?

2026ರಲ್ಲಿ ನೀಲಿ ಮಾರ್ಗದ ಮೊದಲ ಹಂತದ ಉದ್ಘಾಟನೆ ?

ಕೆಐಎ ಸಂಪರ್ಕಿಸುವ ನಮ್ಮ ಮೆಟ್ರೋದ 58.19 ಕಿ.ಮೀ ವಿಸ್ತೀರ್ಣದ ನೀಲಿ ಮಾರ್ಗವನ್ನು 2 ಹಂತದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಮೊದಲನೇ ಹಂತ 2 ಎ ಇದು ಸಿಲ್ಕ್ ಬೋರ್ಡ್‌ನಿಂದ ಕೆ.ಆರ್ ಪುರಕ್ಕೆ ಮತ್ತು 2 ಬಿ ಕೆಆರ್ ಪುರದಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುತ್ತದೆ. ಒಟ್ಟು 31 ನಿಲ್ದಾಣ ಇದೆ.

Self Harming: ಪರೀಕ್ಷೆಯ ಭಯದಿಂದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಪರೀಕ್ಷೆಯ ಭಯದಿಂದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ, ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದರು. ಸೌಮ್ಯ ತಂದೆ ಗಣೇಶ್ ನಾರಾಯಣ್​ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.

Karnataka Rain: ಇಂದಿನ ಹವಾಮಾನ; ಬೆಂಗಳೂರು, ಚಿಕ್ಕಬಳ್ಳಾಪುರ ಸೇರಿ ದಕ್ಷಿಣ ಒಳನಾಡಿನಲ್ಲಿ ಬಿರುಸಿನ ಮಳೆ!

ಇಂದು ಬೆಂಗಳೂರು, ಚಿಕ್ಕಬಳ್ಳಾಪುರ ಸೇರಿ ದಕ್ಷಿಣ ಒಳನಾಡಿನಲ್ಲಿ ಬಿರುಸಿನ ಮಳೆ!

Karnataka Rain: ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Cyber Crime: ಮಹಿಳಾ ಟೆಕ್ಕಿಯ ಅಶ್ಲೀಲ ಫೋಟೋ ಸೃಷ್ಟಿಸಿ ಬ್ಲ್ಯಾಕ್‌ಮೇಲ್‌

ಮಹಿಳಾ ಟೆಕ್ಕಿಯ ಅಶ್ಲೀಲ ಫೋಟೋ ಸೃಷ್ಟಿಸಿ ಬ್ಲ್ಯಾಕ್‌ಮೇಲ್‌

ಇತ್ತೀಚೆಗೆ ದೂರುದಾರೆಯ ಇ-ಮೇಲ್‌ ಹ್ಯಾಕ್‌ ಮಾಡಿರುವ ದುಷ್ಕರ್ಮಿಗಳು, ಗೂಗಲ್‌ ಲಿಂಕ್‌ ಬಳಸಿಕೊಂಡು ದೂರುದಾರೆಯ ವೈಯಕ್ತಿಕ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಮಾರ್ಫ್‌ ಮಾಡಿ ವಿಡಿಯೋ ಸೃಷ್ಟಿಸಿದ್ದಾರೆ. ವೈಟ್‌ಫೀಲ್ಡ್‌ ವಿಭಾಗದ ಸೈಬರ್‌ ಕ್ರೈಂ (Cyber Crime) ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Self Harming: ಕೌಟುಂಬಿಕ ಕಲಹ, ಮಕ್ಕಳನ್ನು ಬಾವಿಗೆ ನೂಕಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹ, ಮಕ್ಕಳನ್ನು ಬಾವಿಗೆ ನೂಕಿ ತಾಯಿ ಆತ್ಮಹತ್ಯೆ

ಮೊದಲು ಮಕ್ಕಳನ್ನು ( Children) ಬಾವಿಗೆ ತಳ್ಳಿ ಬಳಿಕ ಸುಶೀಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನ ಮಾಲೀಕ ಬಾವಿಗೆ ನೀರು ತರಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ಮಾಡಿದ್ದಾರೆ. ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

CM Siddaramaiah: ದೇಶದಲ್ಲೇ ಅತಿ ಎತ್ತರದ ಅಂಬೇಡ್ಕರ್‌ ಪ್ರತಿಮೆ ಬೆಂಗಳೂರಿನಲ್ಲಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಅತಿ ಎತ್ತರದ ಅಂಬೇಡ್ಕರ್‌ ಪ್ರತಿಮೆ ಬೆಂಗಳೂರಿನಲ್ಲಿ: ಸಿಎಂ ಸಿದ್ದರಾಮಯ್ಯ

ಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ 134ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), ನಾವು ರಾಜ್ಯದಲ್ಲಿ ಜಾರಿಗೆ ತಂದಿರುವ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲು ನಿಮ್ಮಿಂದ ಸಾಧ್ಯವೇ ನರೇಂದ್ರ ಮೋದಿ ಅವರೇ ಎಂದು ಸವಾಲೆಸೆದರು.

ಪ್ರಾಥಮಿಕ ಶಾಲೆ ಶಿಕ್ಷಕರನ್ನು 1ರಿಂದ 5ನೇ ವರ್ಗಕ್ಕೆ ಸೀಮಿತಗೊಳಿಸುವುದು ಸರಿಯಲ್ಲ: ಕಾನೂನು ಇಲಾಖೆ

ಪ್ರಾ.ಶಾ. ಶಿಕ್ಷಕರನ್ನು 1ರಿಂದ 5ನೇ ವರ್ಗಕ್ಕೆ ಸೀಮಿತಗೊಳಿಸುವುದು ಸರಿಯಲ್ಲ

2016ಕ್ಕೂ ಪೂರ್ವದಲ್ಲಿ ನೇಮಕಗೊಂಡ ಪ್ರಾಥಮಿಕ ಶಾಲಾ ಶಿಕ್ಷಕರನ್ನು 2017ರ ವೃಂದ ಮತ್ತು ನೇಮಕಾತಿ ನಿಯಮಗಳಂತೆ 1ರಿಂದ 5ನೇ ವರ್ಗಕ್ಕೆ ಸೀಮಿತಗೊಳಿಸಿ ಪೂರ್ವಾನ್ವಯಗೊಳಿಸುವುದು ಸರಿಯಾದ ಕ್ರಮವಲ್ಲ ಎಂದು ಸರ್ಕಾರದ ಕಾನೂನು ಇಲಾಖೆ ಅಭಿಪ್ರಾಯಪಟ್ಟಿದೆ ಎಂದು ಸಂಘದ ಅಧ್ಯಕ್ಷ ಕೆ. ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.