ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Vishwavani Impact: ಕೊಪ್ಪಳ ವಿವಿಯ ಅಕ್ರಮ ತನಿಖೆ: ವಿಶ್ವವಾಣಿ ವರದಿಯ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರಕಾರ

ಕೊಪ್ಪಳ ವಿವಿಯ ಅಕ್ರಮ ತನಿಖೆ

ಸೆ.14ರಂದು ವಿಶ್ವವಾಣಿಯ ಮುಖಪುಟದಲ್ಲಿ (3ನೇ ಪುಟ) ಕೊಪ್ಪಳ ವಿವಿ ಅಕ್ರಮದ ಬಗ್ಗೆ ‘ಕೆಪಿಎಸ್‌ಸಿ ಯನ್ನೂ ಮೀರಿಸಿದೆ ಕೊಪ್ಪಳ ವಿವಿ ನೇಮಕಾತಿ ಅಕ್ರಮ, ಲಂಚವೇ ಪರಪಂಚ’ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯಗಳು) ಸರಕಾರ ಉಪ ಕಾರ್ಯದರ್ಶಿ ಟಿ.ವಿ.ರಾಜ್ಯಶ್ರೀ, ಸಮಿತಿ ರಚನೆ ಆದೇಶದಲ್ಲಿ ವಿಶ್ವವಾಣಿ ಪತ್ರಿಕೆ ವರದಿ ಉಲ್ಲೇಖಿಸಿದ್ದಾರೆ.

ಗಣಪತಿ ವಿಸರ್ಜನೆ ವೇಳೆ ಭಟ್ಕಳದ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ

ಗಣಪತಿ ವಿಸರ್ಜನೆ ವೇಳೆ ಭಟ್ಕಳದ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ

ಬುಧವಾರ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟದ ಆರೋಪ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೇಳಿ ಬಂದಿದೆ. ತಲಾಂದದಿಂದ ಹೊರಟ ಮೆರವಣಿಗೆಯು ಗುಳ್ಳೆ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದಾಗ, ಮಾರ್ಗಮಧ್ಯದಲ್ಲಿದ್ದ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

Extension of the Loan Repayment: ಸಾಧಾರಣ ಬರ: 36 ತಿಂಗಳು, ತೀವ್ರ ಬರ ತಾಲೂಕುಗಳಲ್ಲಿ 5 ವರ್ಷ ಅವಧಿ: ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆ

ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆ

ರಾಜ್ಯದ ಬರಪೀಡಿತ ತಾಲೂಕುಗಳ ರೈತರಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಸಾಲಗಳ ಮರುಪಾವತಿ ಯಲ್ಲಿ ರಾಜ್ಯಮಟ್ಟದ ಬ್ಯಾಂಕ್‌ಗಳ ಸಮಿತಿ ಪರಿಹಾರ ಕ್ರಮಗಳನ್ನು ಪ್ರಕಟಿಸಿದೆ. ರಾಜ್ಯದ 24 ಜಿಲ್ಲೆಗಳ 101 ತಾಲೂಕುಗಳನ್ನು ಬರಪೀಡಿತ ಎಂದು ಸರಕಾರ ಘೋಷಿಸಿದ್ದು, ಈ ಪೈಕಿ 89 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 12 ತಾಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ವರ್ಗೀಕರಿಸಲಾಗಿದೆ.

IT Park at Kalaburagi: ಸ್ಪೋರ್ಟ್ಸ್ ಸಿಟಿ, ಕೆಆರ್‌ಐಎ, ಕೋಟಿ ವೃಕ್ಷ ಅಭಿಯಾನ ಸೇರಿ ಹಲವು ಯೋಜನೆ: ಕಲಬುರಗಿಗೆ ಐಟಿ ಪಾರ್ಕ್, 50 ಸಾವಿರ ನಿವೇಶನ

ಕಲಬುರಗಿಗೆ ಐಟಿ ಪಾರ್ಕ್, 50 ಸಾವಿರ ನಿವೇಶನ

ಕಲಬುರಗಿಯಲ್ಲಿ ಈಗಾಗಲೇ 120ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಸ್ಥಾಪನೆಯಾಗಿದ್ದು, 2030ರ ವೇಳೆಗೆ 500ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳ ಸ್ಥಾಪನೆಯ ಗುರಿ ಹೊಂದಲಾಗಿದೆ. ಯುವ ಉದ್ಯಮಿ ಗಳು ಹಾಗೂ ನವೋದ್ಯಮಿಗಳಿಗೆ ಉತ್ತೇಜನ ನೀಡಲು ಕೆಆರ್‌ಐಎ (Kalaburagi Research, Innovation and Youth Accelerator) ಸ್ಥಾಪಿಸಲಾಗುವುದು ಎಂದರು.

ರಾಜ್ಯದ ಶೇ.95ರಷ್ಟು ಪೆಟ್ರೋಲ್‌ ಬಂಕಲ್ಲಿ ವಂಚನೆ: ಪೆಟ್ರೋಲ್, ಡೀಸೆಲ್ ಹಾಕುವಾಗ 60-100 ಎಂಎಲ್ ಕಡಿಮೆ ತೈಲ ಪೂರೈಕೆ

ರಾಜ್ಯದ ಶೇ.95ರಷ್ಟು ಪೆಟ್ರೋಲ್‌ ಬಂಕಲ್ಲಿ ವಂಚನೆ

ರಾಜ್ಯದ ಶೇ.95ರಷ್ಟು ಪೆಟ್ರೋಲ್ ಬಂಕ್‌ಗಳಲ್ಲಿ ನಿಖರತೆಯ ಕೊರತೆ ಪತ್ತೆಯಾಗಿದೆ ಎನ್ನುವ ಅಂಶ ವನ್ನು ಸ್ವತಃ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಿಜ್ವಾನ್ ಅರ್ಷದ್ ಬಹಿರಂಗಪಡಿಸಿದ್ದಾರೆ. ವಿಕಾಸಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 5946 ಪೆಟ್ರೋಲ್ ಬಂಕ್‌ಗಳಿವೆ.

ಇಂದು ಪ್ರಧಾನಿ ಮೋದಿ ಹುಟ್ಟುಹಬ್ಬ: ಒಂದು ತಿಂಗಳು ನಿರಂತರ ಸೇವಾ ಸಂಕಲ್ಪ

ಇಂದು ಪ್ರಧಾನಿ ಮೋದಿ ಹುಟ್ಟುಹಬ್ಬ: ಒಂದು ತಿಂಗಳು ಸೇವಾ ಸಂಕಲ್ಪ

ಅಭಿಯಾನದ ಭಾಗವಾಗಿ ಶಾಲಾ ಮಕ್ಕಳಿಗೆ ವಿಕಸಿತ ಭಾರತ ಕುರಿತು ಚಿತ್ರಕಲೆ, ಭಾಷಣ ಸ್ಪರ್ಧೆ, ನಮೊ ಸೇವಾ ಗಾಥಾ, ಬೀದಿ ನಾಟಕ ಪ್ರದರ್ಶನ, ಅಂಗನ ವಾಡಿ ಉತ್ಸವ, ಸೇವಾ ಜ್ಯೋತಿ ಯಾತ್ರೆ, ಬೈಕ್ ರ‍್ಯಾಲಿ, ಸಸಿ ನೆಡುವುದು, ರಕ್ತದಾನ, ಜಲಮೂ ಲಗಳ ಸ್ವಚ್ಛತೆ, ಹ್ಯಾಕಥಾನ್ ಸೇರಿ ವಿವಿಧ ಕಾರ್ಯಕ್ರಮಗಳು ಒಂದು ತಿಂಗಳು ನಡೆಯಲಿವೆ.

79th Kalyana Karnataka Utsava Day: 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ

79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಪ್ರತಿಮೆಗೆ ಮಾಲಾರ್ಪಣೆ

ಸಿಎಂ ಡಿ.ಕೆ ಶಿವಕುಮಾರ್ ಅವರು 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಗುರುವಾರ ಮಾಲಾರ್ಪಣೆ ಮಾಡಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ ವೈ ಪಾಟೀಲ್, ಬಿ.ಆರ್ ಪಾಟೀಲ್, ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಜಗದೇವ ಗುತ್ತೇದಾರ್, ಪ್ರವೀಣ್ ಪಾಟೀಲ್ ಹರವಾಳ, ಹೋರಾಟಗಾರ ಲಕ್ಷ್ಮಣ ದಸ್ತಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಇಂದು ಕಲಬುರಗಿಯಲ್ಲಿ 801 ಕಾಮಗಾರಿಗಳಿಗೆ ಮುಖ್ಯಮಂತ್ರಿ ಚಾಲನೆ: 3 ದಿನ, ಅರ್ಧರಾಜ್ಯ: ಡಿಕೆ ಮಿಂಚು

3 ದಿನ, ಅರ್ಧರಾಜ್ಯ: ಡಿಕೆ ಮಿಂಚು

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಶಿವಕುಮಾರ್ ಗುರುವಾರ ಕಲಬುರಗಿಯಲ್ಲಿ, ಸುಮಾರು 1775 ಕೋಟಿ ರು. ಮೊತ್ತದ 801 ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅದಕ್ಕೂ ಮೊದಲು ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಪೊಲೀಸ್ ಪೆರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಎಫ್‌ಕೆಸಿಸಿಐ ವತಿಯಿಂದ ಗೀತಾಂಜಲಿ ವಿಕ್ರಂ ಕಿರ್ಲೋಸ್ಕರ್ ಅವರಿಗೆ ‘ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ 2026’ ವಿತರಣೆ

ಗೀತಾಂಜಲಿ ವಿಕ್ರಂ ಕಿರ್ಲೋಸ್ಕರ್ ಅವರಿಗೆ ಪ್ರಶಸ್ತಿ

ಕಿರ್ಲೋಸ್ಕರ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕಿ ಗೀತಾಂಜಲಿ ವಿಕ್ರಂ ಕಿರ್ಲೋಸ್ಕರ್ ಅವರಿಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘವು (ಎಫ್‌ಕೆಸಿಸಿಐ) ನೀಡುವ ಪ್ರತಿಷ್ಠಿತ ‘ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ 2026’ ಪ್ರದಾನ ಮಾಡಲಾಗಿದೆ. ಎಫ್‌ಕೆಸಿಸಿಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆದ ಸಮಾರಂಭದಲ್ಲಿ ಉದ್ಯಮ, ವ್ಯಾಪಾರ ಮತ್ತು ಸಮಾಜಕ್ಕೆ ನೀಡಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಿನಿಮೀಯ ರೀತಿಯಲ್ಲಿ ಯುವತಿಯ ಕಿಡ್ನ್ಯಾಪ್‌ಗೆ ಯತ್ನ; ಬೆಂಗಳೂರಿನಲ್ಲಿ ರಾಜಸ್ಥಾನದ ಗ್ಯಾಂಗ್‌ಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

ಯುವತಿ ಕಿಡ್ನ್ಯಾಪ್‌ಗೆ ಯತ್ನಿಸಿದ ಗ್ಯಾಂಗ್‌ಗೆ ಹಿಗ್ಗಾಮುಗ್ಗಾ ಥಳಿತ!

Bengaluru Kidnap Case: ಬೆಂಗಳೂರಿನಲ್ಲಿ ರಾಜಸ್ಥಾನ ಮೂಲದ ಯುವತಿಯನ್ನು ಮಾರಕಾಸ್ತ್ರಗಳಿಂದ ಬೆದರಿಸಿ, ಅಪಹರಿಸಲು ಯತ್ನಿಸಿದ ಘಟನೆ ನಡೆದಿದೆ. ಕಿಡ್ನ್ಯಾಪ್‌ಗೆ ಯತ್ನಿಸಿದ ಮೂವರು ಕೂಡ ರಾಜಸ್ಥಾನದವರೆಂದು ತಿಳಿದುಬಂದಿದೆ. ವಿಜಯನಗರದ ಹೊಸಹಳ್ಳಿ ಬಳಿ ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಥಳಿಸಿದ್ದಾರೆ.

UPI: ಯುಪಿಐ ಶುಲ್ಕದ ಚರ್ಚೆ: ಸಣ್ಣ ವ್ಯಾಪಾರಿಗಳಲ್ಲಿ ಆತಂಕ: ಕೆಲವು ವ್ಯಾಪಾರಿ ವಹಿವಾಟುಗಳಿಗೆ MDR ಜಾರಿ; ಲಾಭಾಂಶದ ಮೇಲೆ ಪರಿಣಾಮದ ಭೀತಿ

ಯುಪಿಐ ಶುಲ್ಕದ ಚರ್ಚೆ: ಸಣ್ಣ ವ್ಯಾಪಾರಿಗಳಲ್ಲಿ ಆತಂಕ

ದೊಡ್ಡ ಮೊತ್ತದ ವಹಿವಾಟುಗಳಿಗೆ MDR ಅನ್ವಯಿಸಿದರೆ ವೆಚ್ಚ ಹೆಚ್ಚಾಗಬಹುದು. ಈ ವೆಚ್ಚವನ್ನು ಗ್ರಾಹಕರಿಂದ ವಸೂಲು ಮಾಡಬಾರದು ಎಂಬ ನಿಯಮವಿದ್ದರೂ, ವ್ಯಾಪಾರಿಗಳ ಲಾಭಾಂಶದ ಮೇಲೆ ಪರೋಕ್ಷ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೋಟೆಲ್ ಮಾಲೀಕ ಸಂತೋಷ್ ಅಭಿಪ್ರಾಯ ಪಟ್ಟರು. ಹಾಲು ಮತ್ತು ಇತರ ಅಗತ್ಯ ವಸ್ತುಗಳ ಖರೀದಿಯಲ್ಲಿ ಡಿಜಿಟಲ್ ಪಾವತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶುಲ್ಕವು ಸಣ್ಣ ಅಂಗಡಿಗಳ ಮೇಲೂ ಪರಿಣಾಮ ಬೀರಬಹುದು.

Chinthamani News: ಅಂಬೇಡ್ಕರ್ ಪ್ರತಿಮೆಗೆ ಪೂಜೆಗಿಂತ ಆಶಯಗಳ ಅಳವಡಿಕೆಯೇ ನಿಜವಾದ ಗೌರವ: ಇಒ ಆನಂದ್

ಅಂಬೇಡ್ಕರ್ ಪ್ರತಿಮೆಗೆ ಪೂಜೆಗಿಂತ ಆಶಯಗಳ ಅಳವಡಿಕೆಯೇ ನಿಜವಾದ ಗೌರವ

ನಗರದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಹೆಸರನ್ನು ಗೌರವದಿಂದ ಉಚ್ಚರಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಅವರ ಚಿಂತನೆ, ಹೋರಾಟದ ಉದ್ದೇಶ ಹಾಗೂ ಸಂವಿಧಾನದ ಮೂಲ ಆಶಯಗಳನ್ನು ಅರ್ಥಮಾಡಿ ಕೊಳ್ಳುವ ಪ್ರಯತ್ನ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ

Chikkaballapur News: ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರಿಗೆ ಸದ್ಗುರು ಶ್ರೀ ಮಧುಸೂದನ ಸಾಯಿ ನಮನ

ಗ್ರಾಮೀಣ ಯುವಕರಿಗೆ ಜಾಗತಿಕ ಅವಕಾಶ ಕಲ್ಪಿಸುವುದೇ ವಿಶ್ವೇಶ್ವರಯ್ಯ ಕನಸು

ಮುದ್ದೇನಹಳ್ಳಿಯಂತಹ ಗ್ರಾಮೀಣ ಪ್ರದೇಶದಿಂದಲೇ ಅಚಲ ಸಂಕಲ್ಪ, ಶಿಸ್ತು ಮತ್ತು ಪರಿಶ್ರಮದ ಮೂಲಕ ದೇಶ ಹೆಮ್ಮೆಪಡುವ ಎಂಜಿನಿಯರ್ ಆಗಿ ವಿಶ್ವೇಶ್ವರಯ್ಯ ಬೆಳೆದರು. ಅವರ ಬದುಕು, ಸಾಧನೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ಪ್ರೇರಣೆಯಾಗಿದ್ದು, ಗ್ರಾಮೀಣ ಪ್ರತಿಭೆಗೂ ಸೂಕ್ತ ಅವಕಾಶ ದೊರೆತರೆ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂಬುದನ್ನು ಅವರ ಜೀವನ ತೋರಿಸಿಕೊಟ್ಟಿದೆ

Praja Seve: ಪ್ರಜಾ ಸೇವೆಯಲ್ಲಿ ಜನರ ಆಕ್ರೋಶ: ಅರ್ಜಿಗಳಿಗಷ್ಟೇ ಸೀಮಿತವೇ...ಪ್ರಜಾ ಸೇವೆಯಲ್ಲಿ ಸಮಸ್ಯೆಗಳಿಗೆ ಪರಿಹಾರ ಯಾವಾಗ?

ಪ್ರಜಾ ಸೇವೆಯಲ್ಲಿ ಜನರ ಆಕ್ರೋಶ: ಅರ್ಜಿಗಳಿಗಷ್ಟೇ ಸೀಮಿತವೇ...

ಅರ್ಜಿಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಅರ್ಜಿಗಳು ಬುಟ್ಟಿಗೆ ಹೋಗುತ್ತಿವೆ” ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸ ದಿದ್ದರೆ ಸರ್ಕಾರಿ ಕಚೇರಿಗಳಿಗೆ ಕುರಿ-ಮೇಕೆಗಳನ್ನು ತಂದು ಹಾಕಿ ಬೀಗ ಹಾಕುವ ಹೋರಾಟ ನಡೆಸಬೇಕಾಗುತ್ತದೆ

ಅಮಾವಾಸ್ಯೆ ಪೂಜೆ ನೆಪದಲ್ಲಿ ಒಡವೆ ಪಡೆದು ವಂಚಿಸಿದ ಜ್ಯೋತಿಷಿ; 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳೆದುಕೊಂಡ ಬೆಂಗಳೂರಿನ ಮಹಿಳೆ!

ಅಮಾವಾಸ್ಯೆ ಪೂಜೆ ನೆಪದಲ್ಲಿ ಒಡವೆ ಪಡೆದು ಮಹಿಳೆಗೆ ವಂಚಿಸಿದ ಜ್ಯೋತಿಷಿ!

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಬಳಿಯ ಜ್ಯೋತಿಷಿ ಮಾತು ನಂಬಿ, ಸುಮಾರು 40 ಲಕ್ಷ ರೂ. ಮೌಲ್ಯದ ಒಡವೆಗಳನ್ನು ನೀಡಿ ಮಹಿಳೆಯೊಬ್ಬರು ಮೋಸ ಹೋಗಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Gauribidanur News: ಗೌರಿಬಿದನೂರಿನಲ್ಲಿ ತಾರಕಕ್ಕೇರಿದ ಹಾಲಿ-ಮಾಜಿ ಶಾಸಕರ ವಾಕ್ಸಮರ

ಗೌರಿಬಿದನೂರಿನಲ್ಲಿ ತಾರಕಕ್ಕೇರಿದ ಹಾಲಿ-ಮಾಜಿ ಶಾಸಕರ ವಾಕ್ಸಮರ

ಪೊಲೀಸ್ ಠಾಣೆಗಳಲ್ಲಿ ಸಾಮಾನ್ಯ ಜನರಿಗೆ ನ್ಯಾಯ ಸಿಗುತ್ತಿಲ್ಲ. ರೌಡಿಗಳು ಹಾಗೂ ದಂಧೆಕೋರರಿಗೆ ಪೊಲೀಸರು ಬೆಂಬಲ ನೀಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ವಿಫಲ ವಾಗಿದೆ ಎಂದು ದೂರಿದರು. ವ್ಯವಸ್ಥೆ ಸರಿಪಡಿಸದಿದ್ದರೆ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

Chikkaballapur News: ಅರಿತ್‌ಮೆಟಿಕ್ ಜೀನಿಯಸ್ ಸ್ಪರ್ಧೆಯಲ್ಲಿ 1800 ವಿದ್ಯಾರ್ಥಿಗಳ ಭಾಗಿ

ಅರಿತ್‌ಮೆಟಿಕ್ ಜೀನಿಯಸ್ ಸ್ಪರ್ಧೆಯಲ್ಲಿ 1800 ವಿದ್ಯಾರ್ಥಿಗಳ ಭಾಗಿ

ಮೆದುಳಿನ ಚುರುಕುತನ ಹೆಚ್ಚಿಸಿಕೊಳ್ಳಲು ಅನುಸರಿಸಬಹುದಾದ ಹಲವು ಸರಳ ವಿಧಾನಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದ ಅವರು, ಗಣಿತದ ಲೆಕ್ಕಾಚಾರಗಳನ್ನು ಸುಲಭವಾಗಿ ಮಾಡುವ ವಿವಿಧ ಸೂತ್ರಗಳು ಮತ್ತು ತಂತ್ರಗಳನ್ನು ಪರಿಚಯಿಸಿದರು. ಸ್ಪರ್ಧಾತ್ಮಕ ಪರೀಕ್ಷೆಗಳ ದೃಷ್ಟಿಯಿಂದ ವಿದ್ಯಾರ್ಥಿ ಗಳು ವೇಗ ಮತ್ತು ನಿಖರತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು

Tiptur News: ಜಿಲ್ಲಾಮಟ್ಟದ ಕ್ರೀಡಾಕೂಟ; ತಿಪಟೂರು ತಾಲೂಕು ವಿದ್ಯಾರ್ಥಿಗಳ ಉತ್ತಮ ಸಾಧನೆ

ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತಿಪಟೂರು ವಿದ್ಯಾರ್ಥಿಗಳ ಸಾಧನೆ

Tiptur News: ತಿಪಟೂರು ತಾಲೂಕಿನ ಶ್ರೀ ವಿದ್ಯಾಪೀಠ ಎಸ್‌ವಿಪಿ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರಮಾಣಪತ್ರ, ಪದಕ ಹಾಗೂ ಕಪ್‌ಗಳನ್ನು ನೀಡಿ ಗೌರವಿಸಿ ಅಭಿನಂದಿಸಲಾಯಿತು.

Chikkanayakanahalli News: ಅಬಕಾರಿ ಇಲಾಖೆ ಕಾರ್ಯಾಚರಣೆಯ ಮಾಹಿತಿ ಚಾಲಕನಿಂದಲೇ ಸೋರಿಕೆ; ಅಧಿಕಾರಿ ಅಸಹಾಯಕತೆ

ಅಬಕಾರಿ ಇಲಾಖೆ ಕಾರ್ಯಾಚರಣೆಯ ಮಾಹಿತಿ ಚಾಲಕನಿಂದಲೇ ಸೋರಿಕೆ

Chikkanayakanahalli News: ಎತ್ತಿನಹೊಳೆ ಯೋಜನೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಅ.21ರೊಳಗೆ ಟ್ರಯಲ್ ನಡೆಸಲಾಗುವುದು ಎಂದು ಶಾಸಕ ಸಿ.ಬಿ. ಸುರೇಶ್‌ಬಾಬು ತಿಳಿಸಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದ್ದಾರೆ.

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ: ರಾಘವೇಶ್ವರ ಭಾರತೀ ಶ್ರೀ

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಉಷಃಪಾನವನ್ನು ಒಂದನೇ ವಯಸ್ಸಿಗೇ ಆರಂಭಿಸಬಹುದಾಗಿದ್ದು, ಹಂತಹಂತವಾಗಿ ನೀರಿನ ಸೇವನೆಯನ್ನು ಹೆಚ್ಚಿಸುತ್ತಾ ಹೋಗಬೇಕು. ಹದಿನಾರನೇಯ ವಯಸ್ಸಿಗೆ ಬರುವಾಗ ಅದು ಎಂಟು ಬೊಗಸೆ ಆಗುವಂತೆ ಹೊಂದಿಸಿಕೊಳ್ಳುಬೇಕು. ಈ ಕ್ರಿಯೆಗಾಗಿ ನೀರನ್ನು ರಾತ್ರಿ ಶೇಖರಿಸಿಡುವಾಗ ತಾಮ್ರ ಅಥವಾ ಯಾವುದಾದರೂ ಉತ್ತಮ ಪಾತ್ರೆಯಲ್ಲಿಯೇ ನೀರನ್ನು ಶೇಖರಿಸಿಡಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ.

Bengaluru Infrastructure Crisis: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಮಾಜಿ ಪಿಡಬ್ಲ್ಯೂಡಿ ಕಾರ್ಯದರ್ಶಿ ಡಾ. ಕೃಷ್ಣ ರೆಡ್ಡಿ ವಿನೂತನ ಸಲಹೆ

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಡಾ. ಕೃಷ್ಣ ರೆಡ್ಡಿ ವಿನೂತನ ಸಲಹೆ

Dr Krishna Reddy: ನಾವು ನಿನ್ನೆಯ ಬೆಂಗಳೂರಿನ ಬಗ್ಗೆ ಅಲ್ಲ, 2050ರ ಬೆಂಗಳೂರಿನ ಬಗ್ಗೆ ಯೋಜನೆ ರೂಪಿಸಬೇಕು. ಬೆಂಗಳೂರಿನ ದಟ್ಟಣೆಯನ್ನು ಮ್ಯಾಜಿಕ್ ನಂತೆ ಸರಿಪಡಿಸುವ ಯಾವುದೇ ಅದ್ಭುತ ಯೋಜನೆಯಿಲ್ಲ. ಆದರೆ ಒಂದು ಪರಿಹಾರವಿದೆ -ಸಮಗ್ರ ಯೋಜನೆ, ದೊಡ್ಡ ಪ್ರಮಾಣದ ಮೂಲಭೂತ ಸೌಕರ್ಯ ಮತ್ತು ಅದನ್ನು ಕಾರ್ಯಗತಗೊಳಿಸುವ ರಾಜಕೀಯ ಇಚ್ಛಾಶಕ್ತಿ. ನಾವು ಇಂದಿನ ನಿರ್ಧಾರಗಳನ್ನು ಮುಂದೂಡಿದರೆ, ಮುಂದಿನ ಪೀಳಿಗೆಗೆ ನಾವು ದೊಡ್ಡ ಬಿಕ್ಕಟ್ಟನ್ನು ಬಿಟ್ಟುಹೋದಂತೆ ಆಗುತ್ತದೆ ಎಂದು ಲೋಕೋಪಯೋಗಿ ಇಲಾಖೆಯ ಮಾಜಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್) ಮಾಜಿ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಎಸ್.ಕೃಷ್ಣ ರೆಡ್ಡಿ ತಿಳಿಸಿದ್ದಾರೆ.

''ಶ್ರೇಷ್ಠ ಕಲಾವಿದನಿಗೆ ಸಲ್ಲಬೇಕಾದ ಅರ್ಹ ಗೌರವ'': ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಅನಂತ್‌ ನಾಗ್‌ಗೆ ಕನ್ನಡದಲ್ಲೇ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

ಅನಂತ್‌ ನಾಗ್‌ಗೆ ಕನ್ನಡದಲ್ಲೇ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

Dadasaheb Phalke Award: 'ಶ್ರೇಷ್ಠ ಕಲಾವಿದನಿಗೆ ಸಲ್ಲಬೇಕಾದ ಅರ್ಹ ಗೌರವʼʼ-ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಟ ಅನಂತ್‌ ನಾಗ್‌ಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ರೀತಿ ಇದು. ಸೆಪ್ಟೆಂಬರ್ 22ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ.

Anant Nag: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ನಟ ಅನಂತ್ ನಾಗ್‌ಗೆ ಪ್ರಧಾನಿ ಮೋದಿ, ಸಿಎಂ ಡಿಕೆಶಿ ಸೇರಿ ಗಣ್ಯರಿಂದ ಅಭಿನಂದನೆ

ನಟ ಅನಂತ್ ನಾಗ್‌ಗೆ ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

Dadasaheb Phalke Award 2024: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇರೆಗೆ, ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ ಗೌರವಾನ್ವಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ಪ್ರಶಸ್ತಿಯನ್ನು ಸೆಪ್ಟೆಂಬರ್ 22 ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ.

Fuel pump fraud: ರಾಜ್ಯದ 768 ಪೆಟ್ರೋಲ್‌ ಬಂಕ್‌ಗಳಲ್ಲಿ ಭಾರಿ ಗೋಲ್ಮಾರ್‌; ಅಳತೆಯಲ್ಲಿ ದೋಷ, ಲೀಟರ್‌ಗಟ್ಟಲೇ ವಂಚನೆ!

ರಾಜ್ಯದ 768 ಪೆಟ್ರೋಲ್‌ ಬಂಕ್‌ಗಳಲ್ಲಿ ಭಾರಿ ಗೋಲ್ಮಾರ್‌!

ಕರ್ನಾಟಕ ಕಾನೂನು ಮಾಪನಶಾಸ್ತ್ರ ಇಲಾಖೆಯು ಕಳೆದ 8 ದಿನಗಳಲ್ಲಿ 805 ಇಂಧನ ಕೇಂದ್ರಗಳನ್ನು ತಪಾಸಣೆ ಮಾಡಲಾಗಿದ್ದು, ಅವುಗಳಲ್ಲಿ 768 ಕೇಂದ್ರಗಳ ವಿತರಕ ಯಂತ್ರಗಳಿಗೆ ಮರುಮಾಪನಾಂಕನ ಅಗತ್ಯವಿರುವುದು ಕಂಡುಬಂದಿದೆ. ಅಲ್ಲದೆ, 101 ಇಂಧನ ಕೇಂದ್ರಗಳಲ್ಲಿ ಅನುಮತಿಸಲಾದ ಮಿತಿಗಿಂತ ಹೆಚ್ಚಿನ ವ್ಯತ್ಯಾಸ ಪತ್ತೆಯಾಗಿದೆ.

Loading...