ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ: ಡಿ.ಕೆ. ಶಿವಕುಮಾರ್
DK Shivakumar: ಡಿನ್ನರ್ ಮೀಟಿಂಗ್ ಮೂಲಕ ಬಲ ಪ್ರದರ್ಶನ ಮಾಡಲಾಗುತ್ತಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಅದರ ಅಗತ್ಯ ನನಗಿಲ್ಲ. ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ. ನಾನು ಸಿಎಂ ಸೇರಿದಂತೆ 140 ಶಾಸಕರದೂ ಒಂದೇ ಗುಂಪು. ಅದು ಕಾಂಗ್ರೆಸ್ ಗುಂಪು. ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡಬೇಡಿ ಎಂದು ತಿಳಿಸಿದ್ದಾರೆ.