ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆಯಿಂದ ಮಹಿಳೆಯರಿಗೆ ತ್ರಿಶೂಲ ದೀಕ್ಷೆ
ನೇಹಾ ಹಿರೇಮಠ ಹತ್ಯೆಗೆ ಏಪ್ರಿಲ್ 18ಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ, ನೇಹಾ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ, ಶ್ರೀರಾಮ ಸೇನೆ ವತಿಯಿಂದ ಹುಬ್ಬಳ್ಳಿಯ ಮಿನಿವಿಧಾನಸೌಧದ ಮುಂಭಾಗದಲ್ಲಿರುವ ಶಿವಕೃಷ್ಣ ಮಂದಿರದಲ್ಲಿ ಸ್ವರಕ್ಷಣೆಗಾಗಿ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡಲಾಯಿತು.