ಖಾಕಿಯಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದ ಪೊಲೀಸರಿಗೆ ಟ್ರಾನ್ಸ್‌ಫರ್ ಆಶೀರ್ವಾದ!
ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ 6 ಜನ ಪೊಲೀಸರನ್ನು ವರ್ಗಾವಣೆ ಮಾಡಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಬಾಗಲಕೋಟೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಅವರು 6 ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಬಾದಾಮಿ ಪಟ್ಟಣದ ಪೊಲೀಸ್ ಠಾಣೆಯಿಂದ ಜಿಲ್ಲೆಯ ವಿವಿಧ ಗ್ರಾಮೀಣ ಠಾಣೆಗಳಿಗೆ ವರ್ಗಾವಣೆ ಮಾಡಿದ್ದಾರೆ.