ಅಂಬೇಡ್ಕರ್ ಬಗ್ಗೆ ಹಸಿ ಸುಳ್ಳು ಹೇಳಿರುವ ಪ್ರಧಾನಿ ಕ್ಷಮೆಯಾಚಿಸಲಿ: ಸಿಎಂ
CM Siddaramaiah: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾಷಣ ಮತ್ತು ಬರವಣಿಗೆಗಳ ಹನ್ನೆರಡು ಸಂಪುಟಗಳನ್ನು ಮಹಾರಾಷ್ಟ್ರ ಸರ್ಕಾರ ವರ್ಷಗಳ ಹಿಂದೆಯೇ ಪ್ರಕಟ ಮಾಡಿದೆ. ಅವುಗಳ ಕನ್ನಡ ಅನುವಾದವನ್ನು ನಮ್ಮ ಸರ್ಕಾರವೇ ಮುದ್ರಿಸಿದೆ. ಅಲ್ಲೆಲ್ಲಾದರೂ ಧರ್ಮಾಧಾರಿತ ಮೀಸಲಾತಿ ಬೇಡ, ಇಲ್ಲವೇ ಬೇಕು ಎನ್ನುವ ಅಂಬೇಡ್ಕರ್ ಅವರ ಅಭಿಪ್ರಾಯದ ಉಲ್ಲೇಖ ಇದ್ದರೆ ಅದನ್ನು ಪ್ರಧಾನಿ ಮೋದಿಯವರು ದೇಶದ ಜನರ ಮುಂದಿಡಬೇಕು. ಇಲ್ಲವಾದರೆ ಇಂತಹದ್ದೊಂದು ಸುಳ್ಳನ್ನು ಹೇಳಿರುವುದಕ್ಕಾಗಿ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.