ನವೆಂಬರ್ 8ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ
ಸರ್ಕಾರ ಕಳೆದ ಎರಡುವರೆ ವರ್ಷಗಳಲ್ಲಿ ಜಿಲ್ಲೆಯಲ್ಲಿ ಏನೆಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳ ಲಾಗಿದೆ ಅದರ ವಿವರ ಹಾಗೂ ಉದ್ಘಾಟನೆಗೆ ಸಿದ್ಧವಾಗಿರುವ ಎಲ್ಲಾ ಕಾಮಗಾರಿಗಳ ವಿವರವನ್ನು ನೀಡಬೇಕು. ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮ ವನ್ನು ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಸಚಿವರ ಸಮ್ಮುಖದಲ್ಲಿ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಶಿಷ್ಟಾಚಾರದ ರೀತ್ಯಾ ಮಾಡಿಕೊಳ್ಳ ಬೇಕು ಎಂದರು.