ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಕೃತ್ಯಕ್ಕೆ ಬಳಸಿದ 5 ಗೂಡ್ಸ್ ವಾಹನ ಹಾಗೂ ನಾಲ್ಕು ಜನ ಆರೋಪಿಗಳ ವಶಕ್ಕೆ ಪಡೆದ ರಾಮದುರ್ಗ ಪೊಲೀಸರು

ಅಕ್ರಮ ಗೋಮಾಂಸ ಅಡ್ಡೆ ಮೇಲೆ ಹಿಂದೂ ಕಾರ್ಯಕರ್ತರು ದಾಳಿ

ಗೋಹತ್ಯೆ ನಿಷೇಧ ಕಾಯ್ದೆ ಗಾಳಿಗೆ ತೂರಿ ಹೋಗಿದ್ದು, ಅಕ್ರಮ ಕಸಾಯಿಖಾನೆಯೊಂದರ ಮೇಲೆ ಹಿಂದೂ ಕಾರ್ಯಕರ್ತರು ಮತ್ತು ಸಾರ್ವಜನಿಕರು ಬುಧವಾರ ದಿಢೀರ್ ದಾಳಿ ನಡೆಸಿದ್ದಾರೆ. ಕಾನೂನು ಬಾಹಿರವಾಗಿ ಜಿವಂತ ಹಸುಗಳನ್ನು ಹಾಗೂ ಎತ್ತುಗಳನ್ನು ಕಟಾವು ಮಾಡುತ್ತಿದ್ದ ವೇಳೆ ಪೊಲೀಸರ ಸಹಾಯದಿಂದ ಮಾಲೀಕನನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ಕಾನೂನು ಕ್ರಮಕ್ಕಾಗಿ ಪೊಲೀಸರಿಗೆ ಒಪ್ಪಿಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

ಪ್ರೊ. ಶರದ್ ಜೋಶಿ ನೇತೃತ್ವದ ನೀರಾವರಿ ತಜ್ಞರ ತಂಡದಿಂದ ಆಲಮಟ್ಟಿ ಜಲಾಶಯದ ಸುರಕ್ಷತೆ ಪರಿಶೀಲನೆ

ನೀರಾವರಿ ತಜ್ಞರ ತಂಡದಿಂದ ಆಲಮಟ್ಟಿ ಜಲಾಶಯದ ಸುರಕ್ಷತೆ ಪರಿಶೀಲನೆ

Almatti Reservoir: ಪ್ರೊ. ಶರದ್ ಜೋಶಿ ನೇತೃತ್ವದ ಎಂಟು ಜನ ನೀರಾವರಿ ತಜ್ಞರ ತಂಡ ಬುಧವಾರ ಹಾಗೂ ಗುರುವಾರ ಎರಡು ದಿನಗಳ ಕಾಲ ಆಲಮಟ್ಟಿ ಜಲಾಶಯದ ಸಮಗ್ರ ಸುರಕ್ಷತಾ ಪರಿಶೀಲನೆ ನಡೆಸಿತು. ಈ ಕುರಿತ ವಿವರ ಇಲ್ಲಿದೆ.

D Devraj Urs: ದೇವರಾಜ ಅರಸು ಹಿಂದುಳಿದ ವರ್ಗಗಳ ಚಾಂಪಿಯನ್: ಎನ್. ಆಂಜಿನಪ್ಪ

ದೇವರಾಜ ಅರಸು ಹಿಂದುಳಿದ ವರ್ಗಗಳ ಚಾಂಪಿಯನ್: ಎನ್. ಆಂಜಿನಪ್ಪ

ಹಿಂದುಳಿದ ವರ್ಗಗಳಲ್ಲಿಯೂ ಬಡತನ, ಅನಕ್ಷರತೆ ಹಾಗೂ ಸಾಮಾಜಿಕ ಹಿಂದುಳಿದಿರುವಿಕೆ ಇತ್ತು. ಇಂತಹ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಅರಸು ಅವರು ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿದರು. ಅವರ ದೂರದೃಷ್ಟಿಯ ಆಡಳಿತ ದಿಂದ ಹಿಂದುಳಿದ ವರ್ಗಗಳ ಬದುಕಿನಲ್ಲಿ ಮಹತ್ವದ ಬದಲಾವಣೆಗಳಾದವು

ಆಹಾರದ ರಸಗಳಿಗೂ ಭಾವಕ್ಕೂ ನಿಕಟ ಸಂಬಂಧ: ರಾಘವೇಶ್ವರ ಭಾರತೀ ಶ್ರೀ

ಆಹಾರದ ರಸಗಳಿಗೂ ಭಾವಕ್ಕೂ ನಿಕಟ ಸಂಬಂಧ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ರಾತ್ರಿಯ ನಿದ್ದೆಯು ಮಧುರವಾಗಬೇಕಾದರೆ ಊಟ ಮಾಡಿ ಸುಮಾರು ಒಂದೂವರೆ ಗಂಟೆಗೆ ನಿದ್ರೆಯನ್ನು ಮಾಡಬೇಕು. ರಾತ್ರಿಯನ್ನು ಕಫ, ಪಿತ್ತ, ವಾತ ಎಂದು ವಿಭಾಗ ಮಾಡಲಾಗಿದ್ದು, ಕಫ ಕಾಲದಲ್ಲಿ ನಿದ್ದೆಗೆ ಹೋದಾಗ ನಿದ್ದೆಯ ಪೂರ್ಣ ಪ್ರಯೋಜನವನ್ನು ಪಡೆಯಲು ಸಾಧ್ಯ. ತಡ ರಾತ್ರಿ ಪಿತ್ತ, ವಾತ ಸಮಯಗಳಲ್ಲಿ ಮಲಗಿದರೆ ನಿದ್ದೆಯ ನಿಜವಾದ ಪ್ರಯೋಜನ ಸಿಗದು ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ತಿಪಟೂರಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಾಜಿ ಸಚಿವ ಬಿ.ಸಿ.ನಾಗೇಶ್‌ ಅಂತ್ಯ ಸಂಸ್ಕಾರ

ಮಾಜಿ ಸಚಿವ ಬಿ.ಸಿ.ನಾಗೇಶ್‌ ಪಂಚಭೂತಗಳಲ್ಲಿ ಲೀನ

ತುಮಕೂರು ಜಿಲ್ಲೆ ತಿಪಟೂರು ನಗರದ ಬಿ.ಎಚ್. ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್‌ ಅವರ ಅಂತ್ಯಕ್ರಿಯೆ ಗುರುವಾರ ನಡೆಯಿತು. ಈ ವೇಳೆ ವಿವಿಧ ರಾಜಕೀಯ ನಾಯಕರು, ಗಣ್ಯರು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು.

Hassan News: ಪ್ರೀತಿಸಿ ಮದುವೆಯಾಗಿದ್ದಕ್ಕೆ ಅತ್ತೆ ಮನೆಯವರಿಂದ ಕಿರುಕುಳ; 2 ವರ್ಷದ ಮಗುವನ್ನು ಕೊಂದು ಮಹಿಳೆ ಆತ್ಮಹತ್ಯೆ!

ಹಾಸನದಲ್ಲಿ ಘೋರ ಘಟನೆ; 2 ವರ್ಷದ ಮಗುವನ್ನು ಕೊಂದು ಮಹಿಳೆ ಆತ್ಮಹತ್ಯೆ!

ಹಾಸನ ಜಿಲ್ಲೆಯ ಆಲೂರಿನ ಹೌಸಿಂಗ್ ಬೋರ್ಡ್‌ನಲ್ಲಿ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಅತ್ತೆ ಮನೆಯವರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಮಗನನ್ನು ಕೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತ್ತೆ ಮತ್ತು ಮಗಳ ಕಿರುಕುಳದಿಂದ ತನ್ನ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಆರೋಪಿಸಿದ್ದಾರೆ.

B Nagendra: ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ ಬಿ. ನಾಗೇಂದ್ರಗೆ ತುಸು ರಿಲೀಫ್‌; ಹೈಕೋರ್ಟ್‌ ಮಹತ್ವದ ಆದೇಶ

ಸಚಿವ ಬಿ. ನಾಗೇಂದ್ರಗೆ ರಿಲೀಫ್‌; ಹೈಕೋರ್ಟ್‌ ಮಹತ್ವದ ಆದೇಶ

ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ ನಾಗೇಂದ್ರ ಅವರಿಗೆ ಕೊಂಚ ನಿರಾಳತೆ ಸಿಕ್ಕಿದೆ. ಮೇಲೆ ರಾಜ್ಯ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿದ್ದು, ವಿಚಾರಣಾ ನ್ಯಾಯಾಲಯದ ಅನುಮತಿ ಪಡೆಯದೆ ವಿದೇಶಕ್ಕೆ ಹೋಗುವಂತಿಲ್ಲ ಎಂದು ಆದೇಶಿಸಿದೆ.

Yezdi Roadster Red Wolf: ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲೂ ಲಭ್ಯ ಹೊಸ 'ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್' ಬೈಕ್‌; ಬೆಲೆ ಎಷ್ಟು?

ಹೊಸ 'ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್' ಬೈಕ್‌ನ ವಿಶೇಷತೆಗಳೇನು?

Yezdi Bikes: ಜಾವಾ-ಯೆಜ್ಡಿ ಮೋಟಾರ್‌ಸೈಕಲ್ಸ್ ತನ್ನ ಹೊಚ್ಚ ಹೊಸ 'ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್' ಬೈಕ್ ಅನ್ನು ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಬುಕ್‌ ಮಾಡುವ ಅವಕಾಶವನ್ನು ಗ್ರಾಹಕರಿಗೆ ಕಲ್ಪಿಸಿದೆ. ಶೋರೂಂಗಳಿಗೆ ಹೋಗದೆ, ಜನಪ್ರಿಯ ಇ-ಕಾಮರ್ಸ್‌ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಬೈಕ್‌ ಬುಕ್ ಮಾಡಬಹುದಾಗಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

Pension Income Limit: ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌; ಆದಾಯ ಮಿತಿ 1.2 ಲಕ್ಷಕ್ಕೆ ಹೆಚ್ಚಳ, ಅರ್ಹರಿಗೆ ಸೌಲಭ್ಯ ಮುಂದುವರಿಸಲು ಆದೇಶ

ಪಿಂಚಣಿದಾರರಿಗೆ ಗುಡ್‌ನ್ಯೂಸ್‌; ಆದಾಯ ಮಿತಿ 1.2 ಲಕ್ಷಕ್ಕೆ ಹೆಚ್ಚಳ

ಫಲಾನುಭವಿಗಳ ಮರು ಪರಿಶೀಲನೆ ನಂತರ 32,000 ರಿಂದ 1,20,000 ರೂ. ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದಿನ ಆದೇಶದವರೆಗೆ ಮುಂದುವರಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಕಂದಾಯ ಸಚಿವ ಡಾ.ಜಿ.ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ.

ಮಾಜಿ ಸಚಿವ ಬಿ.ಸಿ. ನಾಗೇಶ್ ಪಾರ್ಥೀವ ಶರೀರದ ಅಂತಿಮ ರಥಯಾತ್ರೆ ಸಾಗುತ್ತಿದ್ದಂತೆ ಆಜಾನ್ ಕೂಗದೆ ಸೌಹಾರ್ದತೆ ಮೆರೆದ ಮುಸ್ಲಿಮರು

ತಿಪಟೂರಿನಲ್ಲಿ ಸೌಹಾರ್ದತೆ ಮೆರೆದ ಮುಸ್ಲಿಮರು

BC Nagesh: ಅನಾರೋಗ್ಯದ ಹಿನ್ನೆಲೆಯಲ್ಲಿ ಆಗಸ್ಟ್‌ 18ರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದ ಮಾಜಿ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಬಿ.ಸಿ. ನಾಗೇಶ್ ಅವರ ಪಾರ್ಥೀವ ಶರೀರದ ಮೆರವಣಿಗೆ ವೇಳೆ ತಿಪಟೂರಿನಲ್ಲಿ ಮುಸ್ಲಿಮರು ಆಜಾನ್ ಕೂಗದೆ ಗೌರವ ಸಲ್ಲಿಸಿದರು.

ಆ. 22ರಂದು ಮಲ್ಲೇಶ್ವರದ ಸೇವಾ ಸದನದಲ್ಲಿ ‘ನೃತ್ಯ-ನೃತ್ಯ ರೂಪಕ’ ವೈಭವ

ಆ. 22ರಂದು ಮಲ್ಲೇಶ್ವರದ ಸೇವಾ ಸದನದಲ್ಲಿ ‘ನೃತ್ಯ-ನೃತ್ಯ ರೂಪಕ’ ವೈಭವ

ಸಪ್ತಕ, ಬೆಂಗಳೂರು ವತಿಯಿಂದ ‘ನೃತ್ಯ-ನೃತ್ಯ ರೂಪಕ’ ಕಾರ್ಯಕ್ರಮವನ್ನು ಆ.22ರಂದು ಸಂಜೆ 5.30ಕ್ಕೆ ನಗರದ ಮಲ್ಲೇಶ್ವರದನ 14ನೇ ಅಡ್ಡರಸ್ತೆಯಲ್ಲಿರುವ ಸೇವಾ ಸದನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಗೌರವಾನ್ವಿತ ಅತಿಥಿಗಳಾಗಿ ಅಂತರ್ ರಾಷ್ಟ್ರೀಯ ಖ್ಯಾತಿಯ ನೃತ್ಯ ಪಟು, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಡಾ. ವೀಣಾ ಮೂರ್ತಿ ವಿಜಯ ಭಾಗವಹಿಸಲಿದ್ದಾರೆ.

ಹನೂರು ಎನ್‌ಕೌಂಟರ್ ಸೇಡು; ಮಲೆ ಮಹದೇಶ್ವರ ಬೆಟ್ಟದ 10 ಎಕರೆ ಕಾಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮಲೆ ಮಹದೇಶ್ವರ ಬೆಟ್ಟದ 10 ಎಕರೆ ಕಾಡಿಗೆ ಬೆಂಕಿ ಹಾಕಿದ ದುಷ್ಕರ್ಮಿಗಳು!

ಹನೂರಿನಲ್ಲಿ ಇತ್ತೀಚೆಗೆ ನಡೆದಿದ್ದ ಎನ್‌ಕೌಂಟರ್‌ ಬೆನ್ನಲ್ಲೇ ಕಿಡಿಗೇಡಿಗಳು ಅರಣ್ಯ ಇಲಾಖೆಯನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಇದೀಗ ಮಲೆ ಮಹದೇಶ್ವರ ವನ್ಯಜೀವಿಧಾಮದ ಸುಮಾರು 10 ಎಕರೆ (2.5 ಹೆಕ್ಟೇರ್) ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದಾರೆ. ಜಾಗೇರಿ ಬಳಿಯ ಒಂದು ಕಳ್ಳಬೇಟೆ ತಡೆ ಶಿಬಿರ ಕೂಡ ಧ್ವಂಸವಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಪಲ್ಟಿ;  ಇಬ್ಬರು ಸಾವು, 20 ಜನರಿಗೆ ಗಾಯ

ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಪಲ್ಟಿ

Bus Accident: ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು-ಬೆಂಗಳೂರು ಹೈವೇಯಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Kalaburagi Bandh: ಬರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್: ರೈತರ ಆಕ್ರೋಶ, ಕೇಂದ್ರ ಬಸ್ ನಿಲ್ದಾಣದ ಎದುರು ಪ್ರತಿಭಟನೆ

ಬರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್: ರೈತರ ಆಕ್ರೋಶ

ಬೆಳಗ್ಗಿನಿಂದಲೇ ಪ್ರತಿಭಟನೆಗೆ ಇಳಿದ ರೈತ ಮುಖಂಡರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ವ್ಯಾಪಾರಸ್ಥರು ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಮನವಿ ಮಾಡಿದರು. ಬಂದ್‌ಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಕೇಂದ್ರ ಬಸ್ ನಿಲ್ದಾಣದಿಂದ ಹೊರಡುವ ಸಾರಿಗೆ ಬಸ್‌ಗಳ ಸಂಚಾರವೂ ಸ್ಥಗಿತಗೊಂಡಿತ್ತು.

Karnataka Weather: ಮನೆಯಿಂದ ಹೊರಡುವಾಗ ಛತ್ರಿ, ರೈನ್‌ ಕೋಟ್‌ ಕೈಯಲ್ಲಿರಲಿ; ರಾಜ್ಯಾದ್ಯಂತ ಇಂದು ಮಳೆಯಾಗುವ ಸಾಧ್ಯತೆ

ಬೆಂಗಳೂರು ಸೇರಿ ರಾಜ್ಯಾದ್ಯಂತ ಇಂದು ವರ್ಷಧಾರೆಯಾಗುವ ಸಾಧ್ಯತೆ

Weather Report: ಬುಧವಾರ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಸುರಿದ ಮಳೆ ಗುರುವಾರವೂ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆ ಸುರಿದರೆ, ಉಳಿದೆಡೆ ಹಗಯರ ವರ್ಷಧಾರೆಯಾಗಲಿದೆ.

ಉತ್ತರ ಕರ್ನಾಟಕ ಜನತೆಗೆ ಗುಡ್‌ನ್ಯೂಸ್‌: ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಇನ್ನು ನಿತ್ಯವೂ ವಿಮಾನ ಸಂಚಾರ; ಪ್ರಲ್ಹಾದ್‌ ಜೋಶಿ ಮನವಿಗೆ ಇಂಡಿಗೋ ಏರ್‌ಲೈನ್ಸ್ ಸ್ಪಂದನೆ

ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಇನ್ನು ನಿತ್ಯವೂ ವಿಮಾನ ಸಂಚಾರ

Pralhad Joshi: ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಅವರ ಮನವಿಗೆ ತ್ವರಿತ ಸ್ಪಂದನೆ ನೀಡಿರುವ ಇಂಡಿಗೋ ಏರ್‌ಲೈನ್ಸ್ ಸಂಸ್ಥೆ ಅಕ್ಟೋಬರ್ 1ರಿಂದಲೇ ಪ್ರತಿದಿನ ದೆಹಲಿ–ಹುಬ್ಬಳ್ಳಿ ಹಾಗೂ ದೆಹಲಿ–ಬೆಳಗಾವಿ ಮಧ್ಯೆ ನೇರ ವಿಮಾನ ಸೇವೆ ಆರಂಭಿಸುವುದಾಗಿ ತಿಳಿಸಿದೆ.

ಕಾರವಾರದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ಸದ್ಗುರು ಶ್ರೀ ಮಧುಸೂದನ ಸಾಯಿ ಭರವಸೆ

ನಿಸ್ವಾರ್ಥ ಸೇವೆಯೇ ನಮ್ಮ ಸಂಸ್ಥೆಯ ಮ್ಯಾಜಿಕ್: ಸದ್ಗುರು ಶ್ರೀ ಮಧುಸೂದನ ಸಾಯಿ

Sadguru Sri Madhusudan Sai: ಎಲ್ಲಿ ನಿಸ್ವಾರ್ಥ ಪ್ರೀತಿ ಇರುತ್ತದೆಯೋ ಅಂಥ ಸಂಬಂಧಗಳು ಮಾತ್ರವೇ ಸುದೀರ್ಘ ಅವಧಿಗೆ ಉಳಿಯುತ್ತವೆ. ನಾವು ಬೇರೆಯವರಿಗೆ ಪ್ರೀತಿ ಕೊಡಲೆಂದೇ ಹುಟ್ಟಿದ್ದೇವೆ. ಉಳಿದದ್ದೆಲ್ಲ ನಂತರದ್ದು ಎಂದು ಭಗವಾನ್ ಸತ್ಯ ಸಾಯಿ ಬಾಬಾ ಹೇಳಿದ್ದರು. ಬಾಬಾ ಅವರ ಈ ಮಾತನ್ನು ನಾವು ಚಾಲ್ತಿಗೆ ತಂದಿದ್ದೇವೆ ಎಂದು ಒನ್ ವರ್ಲ್ಡ್‌ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದ್ದಾರೆ.

ಮುಡಾ ಹಗರಣ: 2 ಸಾವಿರ ಕೋಟಿ ರುಪಾಯಿ ಮೌಲ್ಯದ 1,100 ನಿವೇಶನಗಳ ಹಂಚಿಕೆ ರದ್ದುಪಡಿಸಿ ಸರ್ಕಾರದಿಂದ ಆದೇಶ

ಮುಡಾ ಹಗರಣ: ಸರ್ಕಾರದಿಂದ ಮಹತ್ವದ ಆದೇಶ

Muda Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿಯಮಗಳನ್ನ ಉಲ್ಲಂಘಿಸಿ 50:50 ಅನುಪಾತದ ಅಡಿಯಲ್ಲಿ ಮಾಡಲಾಗಿದ್ದ1,100 ಬದಲಿ ನಿವೇಶನಗಳ ಹಂಚಿಕೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಈ ಕುರಿತ ಆದೇಶವನ್ನು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೊರಡಿಸಿದ್ದಾರೆ.

ತೇಗು ಬಂದಾಗ ಊಟ ನಿಲ್ಲಿಸದಿದ್ದರೆ ಮುಂದಿದೆ ಅಪಾಯ: ರಾಘವೇಶ್ವರ ಭಾರತೀ ಶ್ರೀ

ಮಹಾಪ್ರಾಣದ ಉಚ್ಚಾರಣೆಯಿಂದ ದೇಹದಲ್ಲಿ ಅಗ್ನಿ ಜಾಗೃತಿ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಜೀರ್ಣಕ್ರಿಯೆಯನ್ನು ಅರಿತುಕೊಳ್ಳುವುದು ಆಹಾರವನ್ನು ಜೀರ್ಣಮಾಡಿಕೊಂಡಷ್ಟು ಸುಲಭವಲ್ಲ. ದೇಹದಲ್ಲಿರುವ ಎಲ್ಲ ಪ್ರಮುಖ 18 ಅಗ್ನಿಗಳು ಜಠರಾಗ್ನಿಯನ್ನು ಹೊಂದಿಕೊಂಡಿವೆ. ಜಠರಾಗ್ನಿಯ ಮೇಲಾಗುವ ವ್ಯತ್ಯಾಸವು ಬೇರೆಲ್ಲ ಅಗ್ನಿಗಳ ಮೇಲೂ ಪರಿಣಾಮವನ್ನು ಬೀರುತ್ತದೆ. ವಿಧಿವತ್ತಾದ ಹಿತ-ಮಿತ ಹಾಗೂ ಯುಕ್ತವಾದ ಆಹಾರ ಪಾನೀಯಗಳೇ ಇಂಧನವಾಗಿ ಜಠರಾಗ್ನಿಯು ಉತ್ತಮವಾಗಿ ಕಾರ್ಯನಿರ್ವಹಿಸಲು ಕಾರಣವಾಗುತ್ತದೆ. ದೇಹಕ್ಕೆ ಶಕ್ತಿ ಹಾಗೂ ಆಯುಷ್ಯ ಎರಡೂ ಜಠರಾಗ್ನಿಯಿಂದಲೇ ಸಿಗುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಬಿ.ಸಿ. ನಾಗೇಶ್ ನಿಧನ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಬಿಎಸ್‌ವೈ

BC Nagesh: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅನೇಕ ರಾಜಕೀಯ ಮುಖಂಡರು, ಸಾರ್ವಜನಿಕರು ಹಿರಿಯ ರಾಜಕಾರಣಿ, ಬಿಜೆಪಿ ನಾಯಕ, ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಕಲಬುರಗಿಯಲ್ಲಿ ಮತ್ತೊಂದು ಎಡವಟ್ಟು; ಕಂಡಕ್ಟರ್ ಬದಲು ಟಿಕೆಟ್ ವಿತರಿಸಿದ ವಿದ್ಯಾರ್ಥಿ! ಕೆಕೆಆರ್‌ಟಿಸಿ ಬಸ್‌ನ ದೃಶ್ಯ ಮೊಬೈಲ್‌ನಲ್ಲಿ ಸೆರೆ

ಕಂಡಕ್ಟರ್ ಬದಲು ವಿದ್ಯಾರ್ಥಿಯಿಂದ ಟಿಕೆಟ್ ವಿತರಣೆ

Kalaburagi News: ಕಲಬುರಗಿ ಸಿಟಿ ಬಸ್ ನಿಲ್ದಾಣದಿಂದ ಕಾಳಗಿಗೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಪ್ರಯಾಣಿಕರಿಗೆ ಟಿಕೆಟ್ ವಿತರಿಸುತ್ತಿರುವ ದೃಶ್ಯ ಪ್ರಯಾಣಿಕರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಸ್ ಕಾಳಗಿ ತಾಲೂಕಿನ ಡಿಪೋಗೆ ಸೇರಿದ್ದು ಎಂದು ತಿಳಿದುಬಂದಿದೆ.

ರಾಜೀನಾಮೆಗೆ ವಿಪಕ್ಷಗಳ ಪಟ್ಟು; ದಲಿತ ದಾಳ ಉರುಳಿಸುವ ಮೂಲಕ ಸಚಿವ ನಾಗೇಂದ್ರ ತಿರುಗೇಟು

ದಲಿತನೆನ್ನುವ ಕಾರಣಕ್ಕೆ ನನ್ನನ್ನು ಗುರಿ ಮಾಡಲಾಗಿದೆ: ಸಚಿವ ನಾಗೇಂದ್ರ ಬೇಸರ

ನಾನು ದಲಿತ, ಕಾಂಗ್ರೆಸ್ ಪಕ್ಷಕ್ಕೆ ಸೇರಿದವನು ಎನ್ನುವ ಕಾರಣಕ್ಕೆ ವಿಪಕ್ಷಗಳು ನನ್ನನ್ನು ಗುರಿ ಮಾಡಿವೆ. ದೇಶಾದ್ಯಂತ 126 ಬಿಜೆಪಿ ಸಚಿವರ ವಿರುದ್ಧ ಗಂಭೀರ ಆರೋಪಗಳಿವೆ. ಅವರ ರಾಜೀನಾಮೆಯನ್ನು ಯಾರೂ ಕೇಳುತ್ತಿಲ್ಲ ಎಂದು ಸಚಿವ ಬಿ. ನಾಗೇಂದ್ರ ಅವರು ಬೇಸರ ವ್ಯಕ್ತಪಡಿಸಿದರು. ಬಿಜೆಪಿ ತಮ್ಮ ರಾಜೀನಾಮೆಗೆ ಆಗ್ರಹಿಸುತ್ತಿರುವುದಕ್ಕೆ ಅವರು ಬಿಜೆಪಿ ನಾಯಕರ ಮೇಲೆ ವಾಗ್ದಾಳಿ ನಡೆಸಿದರು.

ಇತ್ತ ವೃಷಭಾವತಿ ನಾಲೆಯಲ್ಲಿ ತೇಲಿದ 500 ರುಪಾಯಿಯ ಕಂತೆ ಕಂತೆ ನೋಟು; ಅತ್ತ ನಕಲಿ ಔಷಧ ತಯಾರಿಸುತ್ತಿದ್ದ ಬೃಹತ್ ಜಾಲ ಪತ್ತೆ: ಏನಾಗ್ತಿದೆ ರಾಮನಗರದಲ್ಲಿ?

ರಾಮನಗರದಲ್ಲಿ ಬೃಹತ್ ನಕಲಿ ಔಷಧ ತಯಾರಿಸುತ್ತಿದ್ದ ಜಾಲ ಪತ್ತೆ

Ramanagara News: ರಾಮನಗರ ಸದ್ಯ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ರಾಮನಗರ ತಾಲೂಕಿನ ಭೈರಮಂಗಲದ ವೃಷಭಾವತಿ ನಾಲೆಯಲ್ಲಿ ಕಂತೆ ಕಂತೆ ನೋಟುಗಳು ತೇಲುತ್ತಿರುವುದನ್ನು ಕಂಡು ಬಂದಿದ್ದು, ಘಟನೆಯ ವಿಡಿಯೊ ವೈರಲ್‌ ಆಗಿದೆ. ಅತ್ತ ರಾಮನಗರದ ದೊಡ್ಡೇರಿ ಗ್ರಾಮದ ಬಳಿ ಫಾರ್ಮ್‌ಹೌಸ್‌ನಲ್ಲಿ ನಕಲಿ ಔಷಧ ದಂಧೆ ಜಾಲ ಪತ್ತೆಯಾಗಿದೆ. ಈ ಎರಡೂ ಘಟನೆಗಳ ಸಮಗ್ರ ತನಿಖೆಗೆ ಬಿಜೆಪಿ ಆಗ್ರಹಿಸಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಕಾಯಿಲೆಗೆ ತಕ್ಕಂತೆ ಆಹಾರ ವಿತರಿಸಲು ಆರೋಗ್ಯ ಇಲಾಖೆ ಚಿಂತನೆ; ಹೀಗಿರಲಿದೆ ಮೆನು

ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗಲಿದೆ ಕಾಯಿಲೆಗೆ ತಕ್ಕಂತೆ ಆಹಾರ

Nutritional Meal Scheme: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ವಯಸ್ಸು, ಕಾಯಿಲೆ ಹಾಗೂ ಚಿಕಿತ್ಸೆಗೆ ಅನುಗುಣವಾಗಿ ವಿಭಿನ್ನ ಮಾದರಿಯ ಪೌಷ್ಟಿಕ ಆಹಾರ ವಿತರಿಸಲಾಗುವುದು ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

Loading...