ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Indi News: ಶ್ರೀಸಂಗನಸವ ಶ್ರೀಗಳು ಶಿಕ್ಷಣ ದಾಸೋಹಿ: ಶಾಸಕ ಯಶವಂತರಾಯಗೌಡ ಪಾಟೀಲ

ಶ್ರೀಸಂಗನಸವ ಶ್ರೀಗಳು ಶಿಕ್ಷಣ ದಾಸೋಹಿ

ಮಠದ ಸದ್ಭಕ್ತರು ೧ ರೂ ದೇಣಿಗೆ ನೀಡಿದವರು ೧ ಕೋಟಿಗೂ ಸಮಾನ ದೇವರು ಅವರಿಗೆ ಒಳ್ಳೆಯದನ್ನು ಕರುಣಿಸಲಿ. ಭಗವಂತನೆ ಕೊಟ್ಟಿರುವಾಗ ದೇವರಿಗಾಗಿಯೇ ಮೀಸಲು. ಶ್ರೀ ವೃಷಭಲಿಂಗ ಮಹಾಸ್ವಾಮಿ ಗಳ ಸದಾಶಯದಂತೆ ೨೦೨೭ರಲ್ಲಿ ನಾಡಿನ ಸಂತ ಮಹಾಂತರ, ಗುರು ಹಿರಿಯ ಚರಣರ ಸಮ್ಮುಖದಲ್ಲಿ ಶತಮಾನೋತ್ಸವ ಆಚರಣೆ ಮಾಡುವ ಮೂಲಕ ಸುವರ್ಣಾಕ್ಷರ ಗಳಿಂದ ಬರೆದಿಡುವಂತೆ ಮಾಡೋಣ.

Harassment: ಬೆಂಗಳೂರಿನ ಬೀದಿಯಲ್ಲಿ ಲೈಂಗಿಕ ವಿಕೃತಿ ತೋರಿದ ಕಾಮುಕ ಆರೆಸ್ಟ್‌

ಬೆಂಗಳೂರಿನ ಬೀದಿಯಲ್ಲಿ ಲೈಂಗಿಕ ವಿಕೃತಿ ತೋರಿದ ಕಾಮುಕ ಆರೆಸ್ಟ್‌

Bengaluru Crime News: ಬೆಂಗಳೂರಿನ ಬೀದಿಯಲ್ಲಿ ಅಪಘಾತಕ್ಕೆ ತುತ್ತಾದ ಬೀದಿ ನಾಯಿಯೊಂದಕ್ಕೆ ಸಹಾಯ ಮಾಡಲು ಹೋದ ಯುವತಿ ಕಾಮುಕನ ವಿಕೃತಿಗೆ ತುತ್ತಾಗಿದ್ದಾಳೆ. ಅಮೃತಹಳ್ಳಿ ಠಾಣೆ ಪೊಲೀಸರು ಸಿಸಿಟಿವಿ ಫೂಟೇಜ್‌ಗಳ ಸಹಾಯದಿಂದ ಮಂಜುನಾಥ್‌ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

Banu Mushtaq: ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿದ ಅರ್ಜಿಗಳ ವಿಚಾರಣೆ ಇಂದು

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ವಿರೋಧಿಸಿದ ಅರ್ಜಿಗಳ ವಿಚಾರಣೆ ಇಂದು

Mysuru Dasara: ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರ ಆಯ್ಕೆ ಮಾಡಿದ್ದು ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಹೀಗಾಗಿ ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯಲು ನಿರ್ದೇಶನ ನೀಡಬೇಕು ಅನ್ನೋದು ಅರ್ಜಿದಾರರ ಮನವಿ ಆಗಿದೆ.

BMTC bus fire: ಚಲಿಸುತ್ತಿದ್ದ ಬಿಎಂಟಿಸಿ ಬಸ್‌ ಸುಟ್ಟು ಕರಕಲು, 75 ಪ್ರಯಾಣಿಕರು ಪಾರು

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ ಸುಟ್ಟು ಕರಕಲು, 75 ಪ್ರಯಾಣಿಕರು ಪಾರು

Bengaluru: ಬಸ್‌ ಚಲಿಸುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಚಾಲಕ, ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕ್ರಮೇಣ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಬಸ್‌ ಧಗಧಗಿಸಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದ 75 ಪ್ರಯಾಣಿಕರು ಸೇಫ್‌ ಆಗಿದ್ದಾರೆ.

Viral News: ‘ಹೂವಿನ ಬಾಣದಂತೆ’ ಹಾಡಿನಿಂದ ಫೇಮಸ್‌ ಆದ ಹುಡುಗಿಯ ಇನ್‌ಸ್ಟಾದಲ್ಲಿ ಫಾಲೋವರ್ಸ್ ಸಂಖ್ಯೆ 150ರಿಂದ 40 ಸಾವಿರಕ್ಕೆ!

ವೈರಲ್ ಹುಡುಗಿಯ ಇನ್‌ಸ್ಟಾ ಫಾಲೋವರ್ಸ್ ಸಂಖ್ಯೆ 150ರಿಂದ 40 ಸಾವಿರಕ್ಕೆ!

Hoovina Banadanthe: ಕಳೆದ ಒಂದು ವಾರದಿಂದ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲರ ಬಾಯಲ್ಲಿ ‘ಹೂವಿನ ಬಾಣದಂತೆ’ ಹಾಡು ಕೇಳಿಬರುತ್ತಿದೆ. ‘ಬಿರುಗಾಳಿ’ ಚಿತ್ರದ ಈ ಹಾಡು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಹಾಡು ಇಷ್ಟೊಂದು ಫೇಮಸ್ ಆಗಲು ಕಾರಣ ನಿತ್ಯಾಶ್ರೀ ಎಂಬ ಹುಡುಗಿ.

Road Accident: ಗಣೇಶ ವಿಸರ್ಜನೆ ವೀಕ್ಷಿಸಲು ಹೊರಟವರ ಕಾರು ಅಪಘಾತ, ಇಬ್ಬರ ಸಾವು

ಗಣೇಶ ವಿಸರ್ಜನೆ ವೀಕ್ಷಿಸಲು ಹೊರಟವರ ಕಾರು ಅಪಘಾತ, ಇಬ್ಬರ ಸಾವು

Chikkaballapura: ಚಿಕ್ಕಬಳ್ಳಾಪುರ ಗೌರಿಬಿದನೂರು ಮಾರ್ಗದ ವಡ್ಡರಬಂಡೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿ ನೀಲಗಿರಿ ಮರಕ್ಕೆ ಡಿಕ್ಕಿಯಾಗಿ ಮರದೊಳಗೆ ತೂರಿಕೊಂಡಿದೆ. ಎಫ್‌ಡಿಎ ಶಶಿ ಹಾಗೂ ಮೆಕ್ಯಾನಿಕ್ ಮುನಿರಾಜು ಎಂಬವರು ಸ್ಥಳದಲ್ಲಿಯೇ ಮೃತಪಟ್ಟರು.

Chikkaballapura: ಬರೋಬ್ಬರಿ 4 ಲಕ್ಷ ರೂ.ಗೆ ಮಾರಾಟವಾದ ಸಾರ್ವಜನಿಕ ಗಣೇಶೋತ್ಸವದ ಲಡ್ಡು!

ಬರೋಬ್ಬರಿ 4 ಲಕ್ಷ ರೂ.ಗೆ ಮಾರಾಟವಾದ ಸಾರ್ವಜನಿಕ ಗಣೇಶೋತ್ಸವದ ಲಡ್ಡು!

ಗೌರಿಬಿದನೂರು ಗಣೇಶೋತ್ಸವದ ಸಂದರ್ಭದಲ್ಲಿ ಈ ಲಡ್ಡು ಹರಾಜು ಪ್ರಕ್ರಿಯೆ ಪ್ರತೀ ವರ್ಷವೂ ನಡೆಯುತ್ತೆ. ಕಳೆದ ಬಾರಿ ಲಡ್ಡು ಹರಾಜು ಪ್ರಕ್ರಿಯೆಯಲ್ಲಿ 1 ಲಕ್ಷಕ್ಕೆ ಲಡ್ಡು ಮಾರಾಟವಾಗಿತ್ತು. ಇದೀಗ ಇದಕ್ಕಿಂತಲೂ ಹೆಚ್ಚಿನ ಬೆಲೆಗೆ ಈ ಬಾರಿ ಲಡ್ಡು ಹರಾಜು ಪ್ರಕ್ರಿಯೆ ನಡೆದಿದೆ.

Karnataka Weather: ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Mandya News: ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 1970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆಶಿ

ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 1970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆಶಿ

DK Shivakumar: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಭಾನುವಾರ ನಡೆದ ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದ್ದಾರೆ. "ಅನುದಾನದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೇ ವಿರೋಧ ಪಕ್ಷದವರು ಚರ್ಚೆ ಮಾಡಬಹುದು. ಜಿಲ್ಲೆಯ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು.

ST status for Kurubas: ಕುರುಬ ಸಮುದಾಯ ಎಸ್‌ಟಿ ಪಟ್ಟಿಗೆ: ಸೆ.16ಕ್ಕೆ ವಿಶೇಷ ಸಭೆ ಕರೆದ ರಾಜ್ಯ ಸರ್ಕಾರ

ಕುರುಬ ಸಮುದಾಯ ಎಸ್‌ಟಿ ಪಟ್ಟಿಗೆ: ಸೆ.16ಕ್ಕೆ ವಿಶೇಷ ಸಭೆ ಕರೆದ ಸರ್ಕಾರ

ST status for Kurubas: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸೆ.16 ಮಧ್ಯಾಹ್ನ 3 ಗಂಟೆಗೆ ಬಹುಮಹಡಿಗಳ ಕಟ್ಟಡದಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಅಗತ್ಯ ಮಾಹಿತಿ ಅಥವಾ ದಾಖಲೆಗಳೊಂದಿಗೆ ಹಾಜರಾಗುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕರು ಸೇರಿ ವಿವಿಧ ಅಧಿಕಾರಿಗಳಿಗೆ ಸೂಚಿಸಲಾಗಿದೆ.

KV Prabhakar: ಸಿಎಂ ಸಿದ್ದರಾಮಯ್ಯ ಅಂದರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ: ಕೆ.ವಿ.ಪ್ರಭಾಕರ್

ಸಿಎಂ ಸಿದ್ದರಾಮಯ್ಯ ಅಂದರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ

CM Siddaramaiah: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮಾತನಾಡಿದ್ದಾರೆ. ಸಮಾಜದ ಲಕ್ಷಾಂತರ ಕಣ್ಣುಗಳು ನನ್ನೊಬ್ಬನನ್ನು ಗಮನಿಸುತ್ತಿರುತ್ತದೆ ಎನ್ನುವ ಸಾಮಾಜಿಕ ಎಚ್ಚರವನ್ನು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಲ್ಲಿ ಕಲಿತುಕೊಂಡೆ ಎಂದು ತಿಳಿಸಿದ್ದಾರೆ.

Cauvery water: ಬೆಂಗಳೂರಿನಲ್ಲಿ ನಾಳೆಯಿಂದ 3 ದಿನ ಕಾವೇರಿ ನೀರು ಪೂರೈಕೆ ಬಂದ್!

ಬೆಂಗಳೂರಿನಲ್ಲಿ ನಾಳೆಯಿಂದ 3 ದಿನ ಕಾವೇರಿ ನೀರು ಪೂರೈಕೆ ಬಂದ್!

Bengaluru Water Cut: ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.15, 16 ಮತ್ತು 17 ರಂದು ಸ್ಥಗಿತಗೊಳಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಮೂರು ದಿನಗಳ ಕಾಲ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ತಿಳಿಸಿದೆ.

Himachal flood: ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ 5 ಕೋಟಿ ರೂ. ನೆರವು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ 5 ಕೋಟಿ ನೆರವು ಘೋಷಿಸಿದ ಸಿಎಂ

CM Siddaramaiah: ಹಿಮಾಚಲ ಪ್ರದೇಶ ರಾಜ್ಯದ ಪ್ರಕೃತಿ ವಿಕೋಪ ನಿಧಿಗೆ ಕರ್ನಾಟಕ ಸರ್ಕಾರ 5 ಕೋಟಿ ರೂ. ನೆರವು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದು, ಕರ್ನಾಟಕವು ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ಸಂಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿದ್ದೇವೆ ಎಂದು ಭರವಸೆ ನೀಡಿದ್ದಾರೆ.

Dr. N.R. Nayak: ಜಾನಪದ ತಜ್ಞ, ಸಾಹಿತಿ ಡಾ. ಎನ್.ಆರ್. ನಾಯಕ ನಿಧನ

ಜಾನಪದ ತಜ್ಞ, ಸಾಹಿತಿ ಡಾ. ಎನ್.ಆರ್. ನಾಯಕ ನಿಧನ

Dr. N.R. Nayak: ಡಾ. ಎನ್.ಆರ್. ನಾಯಕ ಅವರು ಅಪ್ಪಟ ಗ್ರಾಮೀಣ ಜಾನಪದ ತಜ್ಞರಾಗಿ ನಾಡು ಕಂಡ ಒಬ್ಬ ಅಪರೂಪದ ಸಾಧಕರಾಗಿದ್ದು, ಕಳೆದ ಶತಮಾನದ ಆರಂಭದ ಒಂದೆರಡು ದಶಕಗಳ ನಂತರ ನಡೆದ ಜನಪದ ಕ್ಷೇತ್ರ ಕಾರ್ಯಗಳು, ವಿಚಾರ- ವಿಮರ್ಶೆ ಅಪೂರ್ವವಾದದ್ದು. ಆ ದಾರಿಯಲ್ಲಿ ತೊಡಗಿಸಿಕೊಂಡ ಕನ್ನಡದ ವಿದ್ವಾಂಸರಲ್ಲಿ ಒಬ್ಬರಾಗಿದ್ದಾರೆ.

Karnataka Rains: ಯೆಲ್ಲೋ ಅಲರ್ಟ್;‌ ಮುಂದಿನ 2 ದಿನ ಕರಾವಳಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷೆ

ಮುಂದಿನ 2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷೆ!

Latest Kannada News: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Mysuru Dasara 2025: ದಸರಾ ದೀಪಾಲಂಕಾರ ಮತ್ತು ಡ್ರೋನ್ ಶೋ ಪೋಸ್ಟರ್, ಟೀಸರ್ ಬಿಡುಗಡೆ ಮಾಡಿದ ಸಚಿವ ಎಚ್.ಸಿ.ಮಹದೇವಪ್ಪ

ದಸರಾ ದೀಪಾಲಂಕಾರ ಮತ್ತು ಡ್ರೋನ್ ಶೋ ಪೋಸ್ಟರ್, ಟೀಸರ್ ಬಿಡುಗಡೆ

Mysuru Dasara 2025: ಮೈಸೂರು ಅರಮನೆ ಆಡಳಿತ ಮಂಡಳಿ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರುl ದಸರಾ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಬಿಡುಗಡೆಗೊಳಿಸಿ, ಟೀಸರ್ ಅನಾವರಣಗೊಳಿಸಿದ್ದಾರೆ.

Brat Movie: ಡಾರ್ಲಿಂಗ್ ಕೃಷ್ಣ ನಟನೆಯ ಬ್ರ್ಯಾಟ್ ಚಿತ್ರದ ʼಗಂಗಿ ಗಂಗಿʼ ಹಾಡು ರಿಲೀಸ್‌

ಡಾರ್ಲಿಂಗ್ ಕೃಷ್ಣ ನಟನೆಯ ಬ್ರ್ಯಾಟ್ ಚಿತ್ರದ ʼಗಂಗಿ ಗಂಗಿʼ ಹಾಡು ರಿಲೀಸ್‌

Gangi Gangi song: ನಟ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಹಾಗೂ ಮಂಜುನಾಥ್ ಕಂದಕೂರ್ ನಿರ್ಮಾಣದ ʼಬ್ರ್ಯಾಟ್ʼ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮೂಡಿಬರುತ್ತಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಎಲ್ಲರ ಗಮನ ಸೆಳೆದಿದೆ.

Caste Census: ಸಿಎಂ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಜಾತಿ ಸಮೀಕ್ಷೆ: ಬೊಮ್ಮಾಯಿ ಟೀಕೆ

ಸಿಎಂ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಜಾತಿ ಸಮೀಕ್ಷೆ: ಬೊಮ್ಮಾಯಿ ಟೀಕೆ

Basavaraj Bommai: ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಜಾತಿ ಏಕೆ ಬೇಕು? ಡಿಸೆಂಬರ್‌ನಲ್ಲಿ ಜಾತಿ ಜನಗಣತಿ ವರದಿ ಕೊಡಿ ಅಂತ ಆಯೋಗಕ್ಕೆ ಸಿಎಂ ಹೇಳಿದ್ದಾರೆ. ಈ ಕಡೆ ಡಿಸೆಂಬರ್‌ನಲ್ಲಿ ನಾಯಕತ್ವ ಬದಲಾವಣೆ ಆಗಬೇಕು ಅಂತ ಡಿ.ಕೆ.ಶಿವಕುಮಾರ ಬಣ ಹೇಳುತ್ತಿದೆ. ತಮ್ಮ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಸಿಎಂ ಜಾತಿ ಸಮೀಕ್ಷೆ ವರದಿಯನ್ನು ರಾಜಕೀಯವಾಗಿ ಬಳಸಲು ಮುಂದಾಗಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

Hassan Tragedy: ಹಾಸನ ದುರಂತ; ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗ್ತಿದ್ದಂತೆ ಟ್ರಕ್‌ ಚಾಲಕ ಅರೆಸ್ಟ್‌

ಹಾಸನ ದುರಂತ; ಟ್ರಕ್‌ ಚಾಲಕ ಅರೆಸ್ಟ್‌

ಮೊಸಳೆಹೊಸಳ್ಳಿ (MosaleHosalli) ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ 10 ಜನರ ಸಾವಿಗೆ ಕಾರಣನಾಗಿದ್ದ ಟ್ರಕ್ ಚಾಲಕನನ್ನು ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಟ್ರಕ್ ಚಾಲಕ ಭುವನೇಶ್‍ನನ್ನು ಶನಿವಾರ ರಾತ್ರಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

Manglore KMC: ಕೆಎಂಸಿ ಗ್ಯಾಸ್ಟ್ರೊಎಂಟರಾಲಾಜಿ ವಿಭಾಗದಲ್ಲಿದೆ ಸುಧಾರಿತ ವೈದ್ಯಕೀಯ ತಂತ್ರಜ್ಞಾನ, ಉತ್ತಮ ಆರೈಕೆ

ಕೆಎಂಸಿ ಗ್ಯಾಸ್ಟ್ರೊಎಂಟರಾಲಾಜಿ ಸೇವೆಗೆ 25 ವರ್ಷ

ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಗ್ಯಾಸ್ಟ್ರೊಎಂಟರಾಲಾಜಿ ಸೇವೆಗೆ 25 ವರ್ಷಗಳಾಗಿದ್ದು, ಇಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ರೋಗಿಯ ಆರೈಕೆಯನ್ನು ಮಾಡಲಾಗುತ್ತಿದೆ. 2000ರಲ್ಲಿ ಪ್ರಾರಂಭವಾಗಿರುವ ಈ ಸೇವೆಯು ಡೈಯಾಗ್ನೊಸ್ಟಿಕ್ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿ ವಿವಿಧ ಸಮಸ್ಯೆಗಳಿಗೆ ಚಿಕಿತ್ಸೆಗಳನ್ನು ನೀಡುತ್ತಿದೆ.

Gold Rate Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 14th Sep 2025: 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ ನಿನ್ನೆ 10ರೂ ಇಳಿಕೆಯಾಗಿ , 10,190 ರೂ.ಗೆ ತಲುಪಿತ್ತು. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ11ರೂ. ಇಳಿಕೆಯಾಗಿ 11,117 ರೂ ಆಗಿದೆ.

CM Siddaramaiah: ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

Mekedatu Project: ಮೇಕೆದಾಟು ಯೋಜನೆಗೆ ಅನಗತ್ಯವಾಗಿ ತಕರಾರು ಮಾಡಬೇಡಿ. ಮೇಕೆದಾಟು ವಿಚಾರವಾಗಿ ತಮಿಳುನಾಡು ಹಾಗೂ ಕೇಂದ್ರ ಸರ್ಕಾರ ರಾಜಕೀಯ ಮಾಡಬಾರದು. ಯೋಜನೆ ನಿರ್ಮಾಣವಾದರೆ ತಮಿಳುನಾಡು ಹಾಗೂ ಕರ್ನಾಟಕ ಎರಡು ರಾಜ್ಯಗಳಿಗೂ ಅನುಕೂಲವಾಗಲಿದೆ ಎಂದು ಸಿಎಂ ಹೇಳಿದ್ದಾರೆ.

Shocking News: ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳು, ಪತಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

ಘೋರ ಘಟನೆ: ಇಬ್ಬರು ಮಕ್ಕಳು, ಪತಿಯ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

Bengaluru Crime News: ಸಾಲ ತೀರಿಸಲು ಸಂಕಷ್ಟವಾಗಿದ್ದು, ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಅವರನ್ನು ಕೂಡ ಸಾಯಿಸಲು ದಂಪತಿ ನಿರ್ಧರಿಸಿದ್ದರು. ಪತಿ, ಮಕ್ಕಳಿಗೆ ವೇಲ್‌ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Hassan tragedy: ಹಾಸನ ದುರಂತ: ಮೃತರ ಸಂಖ್ಯೆ 10ಕ್ಕೆ ಏರಿಕೆ

ಹಾಸನ ದುರಂತ: ಮೃತರ ಸಂಖ್ಯೆ 10ಕ್ಕೆ ಏರಿಕೆ

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಶಿವಯ್ಯನ ಕೊಪ್ಪಲು ಗ್ರಾಮದ ವಿದ್ಯಾರ್ಥಿ ಚಂದನ್ (26) ಚಿಕಿತ್ಸೆ ಫಲಿಸದೇ ಶನಿವಾರ ಸಂಜೆ ಸಾವಿಗೀಡಾಗಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆದಂತಾಗಿದೆ.

Loading...