ಜನತಾದಳದ ಕಾರ್ಯಕರ್ತರು ನಿಷ್ಠಾವಂತರು: ನಿಖಿಲ್
ಶಿವ ಕುಮಾರಣ್ಣ, ಪ್ರಾದೇಶಿಕ ಪಕ್ಷ ಕಟ್ಟುವುದು, ಯಾರೋ ಗೆದ್ದ ಕಪ್ ಹಿಡಿದು ಮುತ್ತಿಟ್ಟು, ರೀಲ್ಸ್ ಮಾಡುವಷ್ಟು ಸುಲಭವಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಕ್ವಾಂಟಮ್ ಕಂಪ್ಯೂಟರ್ ವಲಯದಲ್ಲಿ 2 ಲಕ್ಷಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ 2035ರ ವೇಳೆಗೆ ಜಾಗತಿಕ ಕ್ವಾಂಟಮ್ ತಂತ್ರಜ್ಞಾನ ಮಾರುಕಟ್ಟೆಯಲ್ಲಿ ಶೇ. 20ರಷ್ಟು ಪಾಲನ್ನು ಕರ್ನಾಟಕದ್ದಾಗಿಸಲು ಗುರಿ ಇಟ್ಟುಕೊಂಡು ಅದಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸಲಾಗುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ತಿಳಿಸಿದ್ದಾರೆ.
ದಿನದಿಂದ ದಿನಕ್ಕೆ ಧರ್ಮಸ್ಥಳ ಪ್ರಕರಣ ತೀವ್ರ ತಿರುವು ಪಡೆದುಕೊಳ್ಳುತ್ತಿದ್ದು, ಮೊದಲ ಸ್ಥಳದಲ್ಲಿ ಅಗೆಯುವಾಗ ಪತ್ತೆಯಾಗಿದ್ದ ಪ್ಯಾನ್ ಕಾರ್ಡ್ ಬಗ್ಗೆ ಮಾಹಿತಿ ಹೊರಗೆ ಬಿದ್ದಿದೆ. ಆ ಕಾರ್ಡ್ ಪುರುಷರೊಬ್ಬರದ್ದು ಎಂದು ತಿಳಿದು ಬಂದಿದ್ದು, ಎಸ್ಐಟಿ ತಂಡವು ಈ ವ್ಯಕ್ತಿಯ ಕುಟುಂಬವನ್ನು ಪತ್ತೆಹಚ್ಚಿದೆ. ಇದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸುರೇಶ್ ಎಂಬ ವ್ಯಕ್ತಿಯದ್ದೆಂದು ಗೊತ್ತಾಗಿದೆ.
German TikToker arrest: ಆಫ್ರೋ ನೃತ್ಯದ ವಿಡಿಯೊಗಳಿಗೆ ಹೆಸರುವಾಸಿಯಾದ ಜರ್ಮನ್ ಟಿಕ್ಟಾಕರ್ ನೋಯೆಲ್ ರಾಬಿನ್ಸನ್ನನ್ನು ಬೆಂಗಳೂರು ಪೊಲೀಸರು ಬಂಧಿಸಿದರು. ವಿಡಿಯೊ ಚಿತ್ರೀಕರಿಸುತ್ತಿದ್ದ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರಿಂದ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬಂಧನದ ನಂತರ ದಂಡ ಪಾವತಿಸಬೇಕಾಯಿತು ಎಂದು ನೋಯೆಲ್ ಹೇಳಿದರು.
CM Siddaramaiah: ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ಬಗ್ಗೆ ತೀವ್ರ ನಿಗಾ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
Bharatnatyam: ವಿದ್ಯಾರ್ಥಿನಿಯೊಬ್ಬರು 170 ಗಂಟೆಗಳ ಕಾಲ ನಿರಂತರ ನೃತ್ಯ ಮಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಎಂಟು ದಿನಗಳ ಕಾಲ ನಿರಂತರವಾಗಿ ಭಾರತೀಯ ಶಾಸ್ತ್ರೀಯ ಭರತನಾಟ್ಯ ಪ್ರದರ್ಶಿಸುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ರೆಮೋನಾ ತಮ್ಮ ಹೆಸರನ್ನು ಬರೆದಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಮೊದಲ ಆವೃತ್ತಿಯ ಕ್ವಾಂಟಮ್ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಬಹಳ ಸಂತೋಷವಾಗಿದೆ. ತಂತ್ರಜ್ಞಾನವೇ ಭವಿಷ್ಯ. ಕರ್ನಾಟಕ ಅತ್ಯಂತ ಪ್ರತಿಭಾವಂತ ಮಾನವ ಸಂಪನ್ಮೂಲ ಹೊಂದಿರುವ ರಾಜ್ಯ. ಇಲ್ಲಿನ ಮಾನವ ಸಂಪನ್ಮೂಲಕ್ಕೆ ದೇಶದ ಯಾವುದೇ ಇತರ ನಗರಗಳು ಅಥವಾ ರಾಜ್ಯ ಪೈಪೋಟಿ ನೀಡಲು ಸಾಧ್ಯವಿಲ್ಲ. ನಾವು ನಮ್ಮ ನೆರೆ ರಾಜ್ಯಗಳ ಜತೆಗೆ ಮಾತ್ರ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಬೇರೆ ದೇಶಗಳ ಜತೆ ಸ್ಪರ್ಧೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
DK Shivakumar: ಮಹಾರಾಷ್ಟ್ರವೂ ಸಹ ಐಟಿ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರಿದಿರುವ ರಾಜ್ಯ. ಅಲ್ಲಿನ ಐಟಿ ಹಬ್ ಪುಣೆಯ ಹಿಂಜವಾಡಿಯು ಅತ್ಯಂತ ಪ್ರಮುಖ ಐಟಿ ಪ್ರದೇಶ. ಆದರೆ ನಮ್ಮ ರಾಜ್ಯಕ್ಕೆ ಬರುವ ಕಂಪನಿಗಳನ್ನು ನಾವು ಮುಕ್ತವಾಗಿ ಸ್ವಾಗತಿಸಿ ಬೆಂಬಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
Bengaluru News: ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಎರಡನೇ ಅಖಿಲ ಭಾರತ ಓಪನ್ ಕರಾಟೆ 2025ರ ಸ್ಪರ್ಧೆಯಲ್ಲಿ ಸುಡೋಕನ್ ಮಾರ್ಷಲ್ ಆರ್ಟ್ ಅಕಾಡೆಮಿಯ ರೆನ್ಷಿ ಜೈನುಲ್ ಅಬಿದೀನ್ ನೇತೃತ್ವದ ತಂಡವು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್ಶಿಪ್ ತಮ್ಮದಾಗಿಸಿಕೊಂಡಿದೆ. ಈ ಕುರಿತ ವಿವರ ಇಲ್ಲಿದೆ.
Bengaluru: ಬೆಂಗಳೂರಿನಲ್ಲಿ ಕನಿಷ್ಠ ಎರಡು ಕಿಮೀ ಆಟೋ ಪ್ರಯಾಣ ದರ 30 ರೂ.ನಿಂದ 36ರೂ.ಗೆ ಹೆಚ್ಚಳವಾಗಿದೆ. ಈ ಮೂಲಕ 6 ರೂ. ಹೆಚ್ಚಿಸಲಾಗಿದೆ. ಕನಿಷ್ಠ ಪ್ರಯಾಣ ದರ ಬಳಿಕ ಪ್ರತಿ ಕಿಮೀ.ಗೆ 15 ರೂ.ನಿಂದ 18 ರೂ.ಗೆ ಏರಿಕೆ ಮಾಡಲಾಗಿದೆ. ಕಾಯುವಿಕೆ ದರ ಮೊದಲ ಐದು ನಿಮಿಷ ಉಚಿತವಾಗಿದೆ. ಮೊದಲ ಐದು ನಿಮಿಷದ ನಂತರ ಪ್ರತಿ 15 ನಿಮಿಷ ಅಥವಾ ಅದರ ಭಾಗಕ್ಕೆ 10 ರೂ. ನಿಗದಿ ಮಾಡಲಾಗಿದೆ.
Shama Parveen Ansari: ಎಟಿಎಸ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಶಮಾ ಪರ್ವೀನ್ ಅನ್ಸಾರಿ ಭಾರತ ಸರ್ಕಾರದ ವಿರುದ್ಧ ‘ಸಶಸ್ತ್ರ ಕ್ರಾಂತಿ ಅಥವಾ ಜಿಹಾದ್’ಗೆ ಕರೆ ನೀಡುವ ವಿಷಯವನ್ನು ಪ್ರಸಾರ ಮಾಡಲು ಡಿಜಿಟಲ್ ವೇದಿಕೆಗಳನ್ನು ಬಳಸುತ್ತಿದ್ದಳು. ಧಾರ್ಮಿಕ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಮತ್ತು ಹಿಂಸಾಚಾರವನ್ನು ಪ್ರಚೋದಿಸಲು ಆಕೆ ಸಾಮಾಜಿಕ ಮಾಧ್ಯಮವನ್ನು ಸಕ್ರಿಯವಾಗಿ ಬಳಸುತ್ತಿದ್ದಳು.
Miss firing: ಜು.28ರಂದು ನಿಖಿಲ್ ಟೆರೆಸ್ ಮೇಲೆ ಗನ್ ಪರಿಶೀಲನೆ ಮಾಡುತ್ತಿದ್ದರು. ಈ ವೇಳೆ ರೆಚೆಲ್ ಕೂಡ ಜೊತೆಯಲ್ಲಿದ್ದರು. ರೆಚೆಲ್ ಪ್ರಿಯಕರ ನಿಖಿಲ್ನಿಂದ ಗನ್ ಪಡೆದು ಪರಿಶೀಲನೆ ನಡೆಸುತ್ತಿದ್ದಾಗ, ಕೈತಪ್ಪಿ ಫೈರ್ ಆಗಿ ಹೊಟ್ಟೆಗೆ ಗುಂಡು ತಗುಲಿದೆ. ಕೂಡಲೇ ರೆಚೆಲ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Church Street: ಇನ್ಸ್ಟಾಗ್ರಾಮ್ಲ್ಲಿ 2.1 ಕೋಟಿ ಅನುಯಾಯಿಗಳನ್ನು ಹೊಂದಿರುವ ಝರೌ, ದೊಡ್ಡ ಸಭೆಗೆ ಯಾವುದೇ ಅನುಮತಿಗಳನ್ನು ತೆಗೆದುಕೊಳ್ಳದೆ ಚರ್ಚ್ ಸ್ಟ್ರೀಟ್ಗೆ ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲಿಗೆ ಬರುವ ಸ್ವಲ್ಪ ಸಮಯದ ಮೊದಲು, ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಅನ್ನು ಹಾಕಿದ್ದರು.
Festival Fashion 2025: ಫೆಸ್ಟೀವ್ ಸೀಸನ್ ಆರಂಭವಾಗಿರುವ ಹಿನ್ನೆಲೆಯಲ್ಲಿ ನಿರೂಪಕಿ ಹಾಗೂ ಬಿಗ್ಬಾಸ್ ಮಾಜಿ ಸ್ಪರ್ಧಿ ಚೈತ್ರಾ ವಾಸುದೇವನ್ ಅತ್ಯಾಕರ್ಷಕ ಹೈ ಸ್ಲಿಟ್ ಆರೆಂಜ್ ಡ್ರೆಸ್ನಲ್ಲಿ ಕಾಣಿಸಿಕೊಂಡು ಶ್ರಾವಣ ಮಾಸಕ್ಕೆ ಶುಭಾಶಯ ಕೋರಿದ್ದಾರೆ. ಈ ಸೀಸನ್ ಸ್ಟೈಲ್ ಸ್ಟೇಟ್ಮೆಂಟ್ ಬಗ್ಗೆ ಅವರು ಹೇಳಿರುವುದೇನು? ಇಲ್ಲಿದೆ ಡಿಟೇಲ್ಸ್.