ಟರ್ಮಿನಲ್-2ರ ಸೌಂದರ್ಯಕ್ಕೆ ಹೊಸ ಮೆರುಗು
ಬಯೊಕಾನ್ ಫೌಂಡೇಷನ್ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಸಹಯೋಗದಲ್ಲಿ ಈ ಕಲಾಕೃತಿಯನ್ನು ಟರ್ಮಿನಲ್-2ರ ಮುಂಭಾಗ ದಲ್ಲಿ ಸ್ಥಾಪಿಸಲಾಗಿದೆ. ಸ್ಪೇನ್‌ನ ಖ್ಯಾತ ಕಲಾಕಾರ ಜೌಮೆ ಪ್ಲೆನ್ಸಾ ಅವರ ಕಲ್ಪನೆಯಲ್ಲಿ ಮೂಡಿ ಬಂದಿರುವ ಈ ಶಿಲ್ಪವು ಪ್ರಯಾಣಿಕರ ಕಣ್ಮನ ಸೆಳೆಯುತ್ತಿದೆ.