ಸರ್ಕಾರಕ್ಕೆ ನಿಧಿ ಒಪ್ಪಿಸಿದ್ದ ಲಕ್ಕುಂಡಿಯ ರಿತ್ತಿ ಕುಟುಂಬಕ್ಕೆ ಸೈಟ್
ಮನೆಗೆ ಪಾಯ ಅಗೆಯುವಾಗ ಸಿಕ್ಕಿದ್ದ ನಿಧಿಯನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತಿಸಿದ್ದ ರಿತ್ತಿ ಕುಟುಂಬಕ್ಕೆ 30*40 ಸೈಟ್ ನೀಡುವ ನಿರ್ಣಯವನ್ನು ಗ್ರಾಮ ಪಂಚಾಯಿತಿ ಪಾಸ್ ಮಾಡಿದೆ. ಮಾನವೀಯ ಮತ್ತು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ವಿಶೇಷ ಪ್ರಕರಣ ಎಂದು ಪರಿಗಣಿಸಿ ಗ್ರಾಮ ಪಂಚಾಯಿತಿ ಸೈಟ್ ನೀಡುವ ನಿರ್ಧಾರ ತೆಗೆದುಕೊಂಡಿದೆ.