ಬೆಂ.ಗ್ರಾಮಾಂತರ ಜಿಲ್ಲೆ, ಬಾಗೇಪಲ್ಲಿ ಹೆಸರು ಬದಲಿಸಲು ಸಚಿವ ಸಂಪುಟ ಒಪ್ಪಿಗೆ
Cabinet Meeting: 1986ರಲ್ಲಿ ಬೆಂಗಳೂರು ನಗರ ಜಿಲ್ಲೆಯಿಂದ ಪ್ರತ್ಯೇಕಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಚಿಸಲಾಗಿತ್ತು. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರು ಬದಲಿಸಲು ಅನುಮೋದನೆ ನೀಡಲಾಗಿದೆ. ಅದೇ ರೀತಿ ಬಾಗೇಪಲ್ಲಿ ಪಟ್ಟಣಕ್ಕೆ ಭಾಗ್ಯನಗರ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.