ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Viral News: ಪುರುಷತ್ವ ಪರೀಕ್ಷೆ ಮಾಡಿಸಲು ಪತಿ ನಕಾರ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಪುರುಷತ್ವ ಪರೀಕ್ಷೆ ಮಾಡಿಸಲು ಪತಿ ನಕಾರ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಐದಾರು ತಿಂಗಳ ಹಿಂದೆ ನಡೆದ ಮದುವೆಯೊಂದು ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಪ್ರಕರಣ ಬೆಂಗಳೂರಿನ ನೆಲಮಂಗಲ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಸರಘಟ್ಟದ 26 ವರ್ಷದ ಯುವತಿ ಮತ್ತು ನೆಲಮಂಗಲದ 30 ವರ್ಷದ ಚಾರ್ಟೆಡ್ ಅಕೌಂಟೆಂಟ್‌ ಜೋಡಿ ಜೂನ್ 9ರಂದು ವೈಭವದಿಂದ ಮದುವೆಯಾಗಿದ್ದರು.

ನ್ಯಾಷನಲ್‌ ಹೆರಾಲ್ಡ್‌ ಕೇಸ್‌; ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌

ನ್ಯಾಷನಲ್‌ ಹೆರಾಲ್ಡ್‌ ಕೇಸ್‌; ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌

National Herald Case: ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು 2014ರ ಜೂನ್‌ 26ರಂದು ದಾಖಲಿಸಿದ್ದ ಖಾಸಗಿ ದೂರನ್ನು ಪಟಿಯಾಲಾ ಹೌಸ್‌ ನ್ಯಾಯಾಲಯದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟರು ಪರಿಗಣನೆಗೆ ತೆಗೆದುಕೊಂಡ ನಂತರ 2021ರಲ್ಲಿ ವಿಚಾರಣೆ ಆರಂಭಿಸಿದ್ದ ಇ.ಡಿ ರಾಹುಲ್‌ ಮತ್ತು ಸೋನಿಯಾ ಗಾಂಧಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.

Car Accident: ಡಿವೈಡರ್​ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನ

ಹೊತ್ತಿ ಉರಿದ ಕಾರು; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನ

ಕಾರು ಡಿವೈಡರ್​ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಕಾರಿನಲ್ಲಿದ್ದ ಲೋಕಾಯುಕ್ತ ಇನ್ಸ್​​ಪೆಕ್ಟರ್‌ ಸಜೀವ ದಹನವಾಗಿದ್ದಾರೆ. ಧಾರವಾಡ (Dharwad) ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಹಾವೇರಿ ಲೋಕಾಯುಕ್ತ ಇನ್ಸ್​​ಪೆಕ್ಟರ್​​​ ಆಗಿದ್ದ ಪಂಚಾಕ್ಷರಿ ಸಾಲಿಮಠ ಅವರು ದುರ್ಗಘಟನೆಯಲ್ಲಿ ಮೃತಪಟ್ಟಿದ್ದಾರೆ.

ಎಐ-ಲೇಸರ್ ತಂತ್ರಜ್ಞಾನದಿಂದ ದೃಷ್ಟಿ ಚಿಕಿತ್ಸೆಯಲ್ಲಿ ದೊಡ್ಡ ಯಶಸ್ಸು

ಎಐ-ಲೇಸರ್ ತಂತ್ರಜ್ಞಾನದಿಂದ ದೃಷ್ಟಿ ಚಿಕಿತ್ಸೆಯಲ್ಲಿ ದೊಡ್ಡ ಯಶಸ್ಸು

45 ವರ್ಷದೊಳಗಿನ 770 ರೋಗಿಗಳ ದತ್ತಾಂಶವನ್ನು ಪರಿಶೀಲಿಸಿದ ಈ ಅಧ್ಯಯನದಲ್ಲಿ, 98% ಕಣ್ಣು ಗಳು ಚಶ್ಮೆಯಿಲ್ಲದೆ 20/20 ದೃಷ್ಟಿಯನ್ನು (ಪರಿಪೂರ್ಣ ದೃಷ್ಟಿ) ಶಸ್ತ್ರಚಿಕಿತ್ಸೆಯ ಕೇವಲ 15 ದಿನಗಳೊ ಳಗೇ ಪಡೆದುಕೊಂಡಿದ್ದು, 99% ಕಣ್ಣುಗಳು ಉದ್ದೇಶಿತ ತಿದ್ದುಪಡಿಯ ಶ್ರೇಣಿಯೊಳಗೆ ಇದ್ದವು.

Shidlaghatta News: ರಥೋತ್ಸವದಂತಹ ಧಾರ್ಮಿಕ ಆಚರಣೆಗಳು ಗ್ರಾಮೀಣರಲ್ಲಿ ಒಗ್ಗಟ್ಟಿಗೆ ಕಾರಣವಾಗಲಿದೆ : ಕಾಂಗ್ರೆಸ್ ಮುಖಂಡ ರಾಜೀವ್ ಗೌಡ

ರಥೋತ್ಸವದಂತಹ ಧಾರ್ಮಿಕ ಆಚರಣೆಗಳು ಗ್ರಾಮೀಣರಲ್ಲಿ ಒಗ್ಗಟ್ಟಿಗೆ ಕಾರಣವಾಗಲಿದೆ

ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ರಥೋತ್ಸವ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇತಿಹಾಸ ಪ್ರಸಿದ್ದ ಶ್ರೀ ಶ್ರೀ ಮಳ್ಳೂರಾಂಭ ದೇವಿಯ ಪ್ರತಿ ವರ್ಷ ದಂತೆ ಅನಾದಿ ಕಾಲದಿಂದ ನಡೆಸಿಕೊಂಡು ಬರುತಿದ್ದು ಜಾತ್ರೆಯ ವಿಶೇಷ ಅದ್ದೂರಿ ರಥೋತ್ಸವ ಜಿಲ್ಲೆಯಲ್ಲಿ ಮಾದರಿಯಾಗಿದೆ

Chikkaballapur News: ಸಾಮಾಜಿಕ ನ್ಯಾಯಕ್ಕೆ ಆಗ್ರಹಿಸಿ ಡಿ.೬ರಂದು ಸಿದ್ದರಾಮನ ಹುಂಡಿಯಿಂದ ಕಾಲ್ನಡಿಗೆ ಜಾಥ : ಸಮಿತಿ ರಾಜ್ಯಾಧ್ಯಕ್ಷ ಕೇಶವಮೂರ್ತಿ ಹೇಳಿಕೆ

ಡಿ.೬ರಂದು ಸಿದ್ದರಾಮನ ಹುಂಡಿಯಿಂದ ಕಾಲ್ನಡಿಗೆ ಜಾಥ

ಮಾದಿಗ ಮೀಸಲಾತಿ ಹೋರಾಟ ಸಮಿತಿ ಸೇರಿದಂತೆ ರಾಜ್ಯದಲ್ಲಿ ಕಳೆದ ೩೫ ವರ್ಷಗಳಿಂದ ಒಳ ಮೀಸಲಾತಿ ಹೋರಾಟಗಳು ನಿರಂತರವಾಗಿ ನಡೆದಿವೆ. ಈ ಹೋರಾಟ ತೀವ್ರವಾಗುತ್ತಿದ್ದಂತೆ ರಾಜ್ಯ ಸರ್ಕಾರ ಜಸ್ಟೀಸ್ ಸದಾಶಿವ ಆಯೋಗ, ಕಾಂತರಾಜು ಆಯೋಗ, ಈಗ ಜಸ್ಟಿಸ್ ನಾಗಮೋಹನ್ ದಾಸ್ ಆಯೋಗ ರಚನೆ ಮಾಡಿತು

MP Dr.K.Sudhakar: ಎರಡು ರೈತ ಕೇಂದ್ರಿತ ಖಾಸಗಿ ಮಸೂದೆಗಳ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್

ಹೈನುಗಾರರು ಹಾಗೂ ಹೂ ಬೆಳೆಗಾರರ ಕಲ್ಯಾಣಕ್ಕೆ ಎರಡು ಮಸೂದೆ

ಅನ್ನದಾತ ರೈತರ ಕಲ್ಯಾಣಕ್ಕಾಗಿ ಸಂಸದ ಡಾ.ಕೆ.ಸುಧಾಕರ್ ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ತಿಳಿಸಿದರು. ೧. ಹೈನುಗಾರರ (ಕಲ್ಯಾಣ) ಮಸೂದೆ, 2024. ಈ ಮಸೂದೆಯು ಭಾರತದ ೭ ಕೋಟಿ ಡೇರಿ ಆಧಾರಿತ ಕೃಷಿ ಕುಟುಂಬ ಗಳಿಗೆ ಸಾಮಾಜಿಕ ಭದ್ರತೆಯ ನೆರವು ನೀಡುತ್ತದೆ.

MLA S.N. Subbareddy: ಕಲೆ ಗೊತ್ತಿದ್ರೆ ಜಗತ್ತನ್ನೇ ಗೆಲ್ಲಬಹುದು ಪ್ರತಿಭಾ ಕಾರಂಜಿಯಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಕಿವಿಮಾತು

ಕಲೆ ಗೊತ್ತಿದ್ರೆ ಜಗತ್ತನ್ನೇ ಗೆಲ್ಲಬಹುದು

ಮಕ್ಕಳಿಗೆ ಒತ್ತಡವನ್ನು ಹೇರಬಾರದು, ಅವರಲ್ಲಿರುವ ಪ್ರತಿಭೆಯನ್ನು ಗುರ್ತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಇನ್ನೂ ವಿದ್ಯಾರ್ಥಿಗಳು ಶೇ.೭೫ ರಷ್ಟು ಸಮಯವನ್ನು ವಿದ್ಯಾಭ್ಯಾಸಕ್ಕೆ ಮೀಸಲಿಟ್ಟರೆ, ಉಳಿದ ಶೇ.೨೫ ರಷ್ಟು ಸಮಯವನ್ನು ಕಲೆ, ಸಂಸ್ಕೃತಿ ಮತ್ತು ಪ್ರತಿಭಾ ಪ್ರದರ್ಶನ ಗಳಿಗೆ ನೀಡಬೇಕು.

ಮಣಿಪಾಲ್ ಆಸ್ಪತ್ರೆಯ ಉಚಿತ ಶಸ್ತ್ರಚಿಕಿತ್ಸೆ ಯೋಜನೆಯ ಭರವಸೆಯ ಆರಂಭ: 8 ವರ್ಷದ ಬಾಲಕನಿಗೆ ಹೊಸ ಜೀವನದ ಆಶಾಕಿರಣ

ಮಣಿಪಾಲ್ ಆಸ್ಪತ್ರೆಯ ಉಚಿತ ಶಸ್ತ್ರಚಿಕಿತ್ಸೆ ಯೋಜನೆಯ ಭರವಸೆಯ ಆರಂಭ

ಮೊದಲ ಪ್ರಕರಣವಾಗಿ 8 ವರ್ಷದ ಸುಭಾಷ್‌ಗೆ ಯಶಸ್ವಿಯಾಗಿ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಗಿದೆ. ಫೌಂಡೇಶನ್‌ನ ಯೋಜನೆಯಡಿ ಸಂಪೂರ್ಣ ಉಚಿತವಾಗಿ ನೆರವೇರಿಸಿದ ಈ ಚಿಕಿತ್ಸೆ, ವೈದ್ಯಕೀಯ ತಜ್ಞತೆ ಮತ್ತು ಸಾಮಾಜಿಕ ಕಳಕಳಿಯ ಸಂಯೋಜನೆಯಿಂದ ಸಾಧಿಸಬಹುದಾದ ಪರಿಣಾಮಕಾರಿತ್ವಕ್ಕೆ ಉದಾಹರಣೆಯಾಗಿದೆ.

Shivamogga News: ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಪುತ್ರ ಆಕಾಶ್ ಆತ್ಮಹತ್ಯೆ

ಶಿವಮೊಗ್ಗದ ಖ್ಯಾತ ವೈದ್ಯೆ ಡಾ. ಜಯಶ್ರೀ ಹಾಗೂ ಪುತ್ರ ನೇಣಿಗೆ ಶರಣು

ಡಾ. ಜಯಶ್ರೀ ಮತ್ತು ಮಗ ಆಕಾಶ್ ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿನೋಬನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಡೆತ್ ನೋಟ್ ಪತ್ತೆಯಾಗಿದೆ. ಡಾ. ಜಯಶ್ರೀ ಅವರ ಪತಿ ಹಾಗೂ ಸೊಸೆ ಕೂಡ ಈ ಮೊದಲು ಆತ್ಮಹತ್ಯೆಗೆ ಶರಣಾಗಿದ್ದರು.

Namma Metro Blue Line: ನಿಗದಿತ ಸಮಯದೊಳಗೆ ನೀಲಿ ಮೆಟ್ರೋ ಮಾರ್ಗ ಪೂರ್ಣಗೊಳಿಸಿ: ಗುತ್ತಿಗೆದಾರರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ನಿಗದಿತ ಸಮಯದೊಳಗೆ ನೀಲಿ ಮೆಟ್ರೋ ಮಾರ್ಗ ಪೂರ್ಣಗೊಳಿಸಿ: ಡಿ.ಕೆ. ಶಿವಕುಮಾರ್

DK Shivakumar: ಕೊಡಿಗೆಹಳ್ಳಿಯಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿ ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ವಿಮಾನ ನಿಲ್ದಾಣಕ್ಕೆ ಸಂಪರ್ಕ ಸಾಧಿಸುತ್ತಿರುವ ಮೆಟ್ರೋ ಮಾರ್ಗದ ಕಾಮಗಾರಿಯನ್ನು ನಾವು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕಿದೆ. ಇದಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರನ್ನು ಕರೆಸಿ ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ.

Commercial Tax: ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿ ಸಾಧಿಸಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ

ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100 ನಿಗದಿತ ಗುರಿ ಸಾಧಿಸಬೇಕು: ಸಿಎಂ

CM Siddaramaiah: ವಾಣಿಜ್ಯ ತೆರಿಗೆ ವಿಚಕ್ಷಣಾ ದಳ ತೆರಿಗೆ ಕಳ್ಳತನವನ್ನು ತಪ್ಪಿಸಲು ನಿರಂತರ ತಪಾಸಣೆಗಳನ್ನು ಕೈಗೊಳ್ಳಬೇಕು. ತೆರಿಗೆ ತಪ್ಪಿಸಲು ಯಾವುದೇ ಅವಕಾಶ ಇಲ್ಲದಂತೆ ಕಟ್ಟೆಚ್ಚರದಿಂದ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

Online Reception: ಇಂಡಿಗೋ ವಿಮಾನ ರದ್ದು; ಹುಬ್ಬಳ್ಳಿಯಲ್ಲಿ ವಧು-ವರನಿಲ್ಲದೇ ನಡೆಯಿತು ಆರತಕ್ಷತೆ, ಆನ್‌ಲೈನ್‌ನಲ್ಲೇ ಆಶೀರ್ವಾದ!

ಇಂಡಿಗೋ ವಿಮಾನ ರದ್ದು; ಆನ್‌ಲೈನ್‌ನಲ್ಲೇ ನಡೆಯಿತು ಆರತಕ್ಷತೆ!

Hubli News: ಬೆಂಗಳೂರಿನಲ್ಲಿ ಸಾಫ್ಟ್‌ವೇರ್​ ಎಂಜಿನಿಯರ್‌ಗಳಾಗಿ ಕೆಲಸ ಮಾಡುತ್ತಿರುವ ಯುವಕ-ಯುವತಿ ಮದುವೆ ಭುವನೇಶ್ವರದಲ್ಲಿ ನ.23ರಂದು ನಡೆದಿತ್ತು. ವಧುವಿನ ತವರು ಹುಬ್ಬಳ್ಳಿಯ ಡಿ.3ರಂದು ಆರತಕ್ಷತೆ ಆಯೋಜಿಸಲಾಗಿತ್ತು. ಆದರೆ, ಇಂಡಿಗೋ ವಿಮಾನ ರದ್ದಾಗಿದ್ದರಿಂದ ಹುಬ್ಬಳ್ಳಿಯ ಗುಜರಾತ್‌ ಭವನದಲ್ಲಿ ವಧು-ವರ ಇಲ್ಲದೆಯೇ ಆರತಕ್ಷತೆ ನಡೆದಿದೆ.

MB Patil: ಕೆಎಸ್‌ಡಿಎಲ್ ವಿರುದ್ಧ ಅಕ್ರಮ ಆರೋಪ; ಹುರುಳಿದ್ದರೆ ಶಿಕ್ಷೆ, ಇಲ್ಲದಿದ್ದರೆ ಕಾನೂನು ಕ್ರಮ ಎಂದ ಎಂ.ಬಿ ಪಾಟೀಲ್‌

ಕೆಎಸ್‌ಡಿಎಲ್‌ನಲ್ಲಿ ಅಕ್ರಮ; ಹುರುಳಿದ್ದರೆ ಶಿಕ್ಷೆಎಂದ ಎಂ.ಬಿ ಪಾಟೀಲ್‌

ಕೆಎಸ್‌ಡಿಎಲ್‌ನಲ್ಲಿ ಸಾಮಗ್ರಿ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಜೆಡಿಎಸ್ ಶಾಸಕ ಎ. ಮಂಜು ಆರೋಪಿಸಿದ್ದಾರೆ. ಇದರಲ್ಲಿ ಹುರುಳಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಇಲ್ಲದೆ ಹೋದರೆ ಮಂಜು ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

DK Shivakumar: ನಾನು, ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ, ನಮ್ಮನ್ನು ವೈರಿಗಳಂತೆ ನೋಡಬೇಡಿ ಎಂದ ಡಿ.ಕೆ. ಶಿವಕುಮಾರ್‌

ನಾನು, ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ: ಡಿ.ಕೆ. ಶಿವಕುಮಾರ್‌

ನಾನು ಹಾಗೂ ಸತೀಶ್ ಜಾರಕಿಹೊಳಿ ನಿನ್ನೆ ರಾತ್ರಿ ಮದುವೆಯೊಂದರಲ್ಲಿ ಭೇಟಿಯಾಗಿದ್ದು ನಿಜ. ರಾಜ್ಯ ಹಾಗೂ ಪಕ್ಷದ ವಿಚಾರ ಮಾತನಾಡಿದ್ದೇವೆ. ನಾನು ಹಾಗೂ ಸತೀಶ್ ಜಾರಕಿಹೊಳಿ ಸಹೋದ್ಯೋಗಿಗಳು. ನಮ್ಮನ್ನು ವೈರಿಗಳಂತೆ ಯಾಕೆ ನೋಡುತ್ತೀರಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

KJ George: ವೈಟ್‌ಫೀಲ್ಡ್‌ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಸಚಿವ ಕೆ.ಜೆ. ಜಾರ್ಜ್

ವೈಟ್‌ಫೀಲ್ಡ್‌ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಸಚಿವ ಕೆ.ಜೆ. ಜಾರ್ಜ್

13,687 ಚದರ ಅಡಿಯ ನೆಲ ಅಂತಸ್ತು ಸೇರಿದಂತೆ ಮೂರು ಅಂತಸ್ತುಗಳ ಬೆಸ್ಕಾಂನ ವೈಟ್‌ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಉಪ ವಿಭಾಗ ಕಚೇರಿ ಕಟ್ಟಡವನ್ನು ಅಂದಾಜು 4.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇವುಗಳನ್ನು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ.

Bhagavad Gita in textbooks: ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಮಾಡಿ; ಕೇಂದ್ರ ಶಿಕ್ಷಣ ಸಚಿವರಿಗೆ ಎಚ್‌.ಡಿ.ಕುಮಾರಸ್ವಾಮಿ ಪತ್ರ

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಮಾಡಿ; ಕೇಂದ್ರಕ್ಕೆ ಎಚ್‌ಡಿಕೆ ಪತ್ರ

Bhagavad Gita in school syllabus: ರಾಷ್ಟ್ರೀಯ ಶಿಕ್ಷಣ ನೀತಿ ಮೌಲ್ಯಾಧಾರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುತ್ತದೆ. ಗೀತೆಯಿಂದ ಆಯ್ದ ಬೋಧನೆಗಳನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳಲ್ಲಿ ನೈತಿಕ ಶಕ್ತಿ, ಚಿಂತನೆಯ ಸ್ಪಷ್ಟತೆ ಮತ್ತು ವ್ಯಕ್ತಿತ್ವವನ್ನು ಬೆಳೆಸಲು ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

IndiGo flight cancellations: ಬೆಂಗಳೂರಿನಿಂದ ಇಂದು ಮಧ್ಯರಾತ್ರಿವರೆಗೆ ಮುಂಬೈ, ದೆಹಲಿಗೆ ಇಂಡಿಗೋ ವಿಮಾನಗಳ ಹಾರಾಟ ರದ್ದು!

ಇಂದು ಮಧ್ಯರಾತ್ರಿವರೆಗೆ ಮುಂಬೈ, ದೆಹಲಿಗೆ ಇಂಡಿಗೋ ವಿಮಾನ ಹಾರಾಟ ರದ್ದು!

ಇಂಡಿಗೋ ವಿಮಾನಗಳ ಸೇವೆ ವ್ಯತ್ಯಯದ ಬಗ್ಗೆ ಪ್ರಯಾಣಿಕರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ (ಬಿಐಎಎಲ್‌) ಮಾಹಿತಿ ಹಂಚಿಕೊಂಡಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯಾವ ಯಾವ ನಗರಗಳಿಗೆ ಇಂಡಿಗೋ ವಿಮಾನಗಳು ರದ್ದುಗೊಂಡಿವೆ ಎಂಬ ಕುರಿತು ಮಾಹಿತಿ ನೀಡಿದೆ.

ವಾಚ್ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ರಾಜೀನಾಮೆ ಕೊಡುವೆ, ಇಲ್ಲದಿದ್ದರೆ ಅವರು ಕೊಡ್ತಾರಾ?; ಛಲವಾದಿ ನಾರಾಯಣಸ್ವಾಮಿಗೆ ಡಿಕೆಶಿ ಸವಾಲ್

ವಾಚ್ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ರಾಜೀನಾಮೆ ಕೊಡುವೆ: ಡಿಕೆಶಿ

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಇನ್ನೂ ಅನುಭವವಿಲ್ಲ. ಯಾವುದಾದರೂ ವಿಚಾರದ ಬಗ್ಗೆ ಮಾತನಾಡಬೇಕಾದರೆ ಕನಿಷ್ಠ ಪರಿಜ್ಞಾನ ಇರಬೇಕು. ಬರೀ ಪ್ರಚಾರಕ್ಕೆ ಮಾತನಾಡುವುದಲ್ಲ. ಅವರಿಗಿಂತ ಹೆಚ್ಚು ಜವಾಬ್ದಾರಿಯಿಂದ ನಾನು ವರ್ತಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

63 Percent Corruption: ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಶೇ.63 ಭ್ರಷ್ಟಾಚಾರ ಹೇಳಿಕೆಗೆ ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ ಸ್ಪಷ್ಟನೆ

ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಉಪ ಲೋಕಾಯುಕ್ತ ವೀರಪ್ಪ ಸ್ಪಷ್ಟನೆ

Upalokayukta Justice B Veerappa: ಶೇ. 63ರಷ್ಟು ಭ್ರಷ್ಟಾಚಾರ ಕುರಿತ ಹೇಳಿಕೆಗೆ ನ್ಯಾಯಮೂರ್ತಿ ವೀರಪ್ಪ ಅವರು ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ನಿರ್ದಿಷ್ಟ ಸರ್ಕಾರ ಅಥವಾ ಅವಧಿಯನ್ನು ಉಲ್ಲೇಖಿಸಿಲ್ಲ. ಅಲ್ಲದೇ ನಾನು ಯಾವ ಸರ್ಕಾರವನ್ನೂ ಗಮನದಲ್ಲಿಟ್ಟುಕೊಂಡು ಹೇಳಿಲ್ಲ. ಇಂಡಿಯಾ ಕರಪ್ಷನ್ ಸರ್ವೆಯಲ್ಲಿ ಇದ್ದ ಮಾಹಿತಿಯನ್ನು ಮಾತ್ರ ಹೇಳಿದ್ದೇನೆ ಎಂದು ತಿಳಿಸಿದ್ಧಾರೆ.

Karnataka TET: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ನ್ಯೂಸ್‌; ಟಿಇಟಿ ಪರೀಕ್ಷೆಯಿಂದ ವಿನಾಯಿತಿ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ನ್ಯೂಸ್‌; ಟಿಇಟಿ ಪರೀಕ್ಷೆಯಿಂದ ವಿನಾಯಿತಿ

1ರಿಂದ 5ನೇ ತರಗತಿವರೆಗೆ ಬೋಧನೆ ಮಾಡುವ ಶಿಕ್ಷಕರು ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ್ದರೆ ಅಂಥವರಿಗೆ ಟಿಇಟಿ ಕಡ್ಡಾಯ ಎಂಬ ಷರತ್ತನ್ನು ಸಡಿಲಗೊಳಿಸಲಾಗುವುದು. ಅಂತಹ ಶಿಕ್ಷಕರಿಗೆ ಬೋಧನೆಗೆ ಅವಕಾಶ ಮಾಡಿಕೊಡಲು 2025ರ ಅ.16ರಂದು ಹೊರಡಿಸಲಾದ ಕರಡು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ.

Health Minister Dinesh Gundu Rao: “ಸ್ವಸ್ಥ ಮೈಸೂರು” ಅಭಿಯಾನದ ಒಪ್ಪಂದಕ್ಕೆ ಸಹಿ ಹಾಕಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

“ಸ್ವಸ್ಥ ಮೈಸೂರು” ಅಭಿಯಾನದ ಒಪ್ಪಂದಕ್ಕೆ ಸಚಿವ ಗುಂಡೂರಾವ್‌ ಸಹಿ

ಆರೋಗ್ಯ ಇಲಾಖೆಯು ಈಗಾಗಲೇ ರಾಜ್ಯಾದ್ಯಂತ "ಗೃಹ ಆರೋಗ್ಯ" ಜಾರಿ ಮಾಡಿದ್ದು, 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಮಧುಮೇಹ, ಅಧಿಕ ರಕ್ತದೊತ್ತಡ, ಕೆಲವು ಕ್ಯಾನ್ಸರ್‌ ಸೇರಿದಂತೆ 14 ಅಸಾಂಕ್ರ ಮಿಕ ರೋಗಿಗಳ ತಪಾಸಣೆ ನಡೆಸಿ, ಉಚಿತ ಔಷಧ ನೀಡುವ ಕೆಲಸ ಮಾಡಲಾಗುತ್ತಿದೆ, ಈಗಾಗಲೇ 1 ಕೋಟಿ ಜನರ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ಹೇಳಿದರು

ವಿಶೇಷ ಚೇತನರು ಸುಲಭವಾಗಿ ವಿಮಾನ ಏರಲು “ಮೊಬಿಲಿಟಿ ಅಸಿಸ್ಟ್‌”  ಪರಿಚಯಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

“ಮೊಬಿಲಿಟಿ ಅಸಿಸ್ಟ್‌” ಪರಿಚಯಿಸಿದ KIA

ಡಚೆನ್ ಸ್ನಾಯು ಕ್ಷೀಣತೆ ಹೊಂದಿದ್ದ ಹಾಗೂ ವಿದ್ಯುತ್ ವೀಲ್‌ಚೇರ್ ಬಳಸುತ್ತಿದ್ದ ಆದರ್ಶ್, ವಿಮಾನ ನಿಲ್ದಾಣಗಳಲ್ಲಿ ಸೂಕ್ತ ರೀತಿಯಲ್ಲಿ ಇಳಿಯಲು ಹಾಗೂ ತಾನು ತಲುಪಬೇಕಾದ ಸ್ಥಳಕ್ಕೆ ತೆರಳಲು ಸಾಧ್ಯವಾಗದೇ ದೈಹಿಕ ಅಸ್ವಸ್ಥತೆ ಮತ್ತು ಭಾವನಾತ್ಮಕ ಒತ್ತಡ ಅನುಭವಿಸಿದ್ದರು. ಇವರ ಈ ವೈಯಕ್ತಿಕ ಅನುಭವವೇ ಇತರರಿಗೆ ನೆರವಾಗಲು ಸ್ಫೂರ್ತಿಯಾಯಿತು.

Murder Case: ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ, ನಡುರಸ್ತೆಯಲ್ಲಿ ಕೊಚ್ಚಿ ಕೊಲೆ

ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ, ನಡುರಸ್ತೆಯಲ್ಲಿ ಕೊಚ್ಚಿ ಕೊಲೆ

Doddaballapuara news: ಯುವತಿಯೊಬ್ಬಳನ್ನು ಈತ ಪ್ರೀತಿ ಮಾಡುತ್ತಿದ್ದ ವಿಚಾರಕ್ಕೆ ಈ ಮೊದಲು ಗಲಾಟೆ ಸಹ ಆಗಿತ್ತು. ಕೆಲವರು ನಿನ್ನನ್ನು ನೋಡಿಕೊಳ್ಳುವುದಾಗಿ ಈತನಿಗೆ ಧಮಕಿ ಹಾಕಿದ್ದರು. ಬಳಿಕ ಇಬ್ಬರೂ ಬೇರೆ ಬೇರೆಯಾಗಿದ್ದರು. ಇತ್ತೀಚೆಗೆ ಮತ್ತೆ ಇಬ್ಬರೂ ಜೊತೆಯಲ್ಲಿರುವ ಬಗ್ಗೆ ಮಾಹಿತಿ ಇತ್ತು. ಇದೇ ವಿಚಾರಕ್ಕೆ ಕೊಲೆ ಮಾಡಿರುವ ಸಂಶಯ ಇದೆ ಎಂದು ಮೃತ ಯುವಕನ ಚಿಕ್ಕಮ್ಮ ಅನಿತಾ ಅನುಮಾನ ವ್ಯಕ್ತಪಡಿಸಿದ್ದಾರೆ.

Loading...