ಸಿಎಂ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಜಾತಿ ಸಮೀಕ್ಷೆ: ಬೊಮ್ಮಾಯಿ ಟೀಕೆ
Basavaraj Bommai: ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಜಾತಿ ಏಕೆ ಬೇಕು? ಡಿಸೆಂಬರ್‌ನಲ್ಲಿ ಜಾತಿ ಜನಗಣತಿ ವರದಿ ಕೊಡಿ ಅಂತ ಆಯೋಗಕ್ಕೆ ಸಿಎಂ ಹೇಳಿದ್ದಾರೆ. ಈ ಕಡೆ ಡಿಸೆಂಬರ್‌ನಲ್ಲಿ ನಾಯಕತ್ವ ಬದಲಾವಣೆ ಆಗಬೇಕು ಅಂತ ಡಿ.ಕೆ.ಶಿವಕುಮಾರ ಬಣ ಹೇಳುತ್ತಿದೆ. ತಮ್ಮ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಸಿಎಂ ಜಾತಿ ಸಮೀಕ್ಷೆ ವರದಿಯನ್ನು ರಾಜಕೀಯವಾಗಿ ಬಳಸಲು ಮುಂದಾಗಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.