ಕಡಿಮೆ ಕೆಲಸ, ಆರೋಗ್ಯ ಮೊದಲು ಎಂದ ಇನ್ಫೋಸಿಸ್!
ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆಂದು ಹೇಳಿದ್ದ ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ನಾರಾಯಣಮೂರ್ತಿ ಈಗ ಉದ್ಯೋಗಿಗಳ ಯೋಗಕ್ಷೇಮದ ಬಗ್ಗೆ ಮಾತನಾಡಿದ್ದಾರೆ. ನಾರಾಯಣ ಮೂರ್ತಿ ಅವರ ಒಡೆತನದ ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಕೆಲಸ ಹಾಗೂ ಜೀವನದ ಸಮತೋಲನವನ್ನು ಕಾಯ್ದುಕೊಳ್ಳುವಂತೆ ಕೇಳಿಕೊಳ್ಳುತ್ತಿದೆ.