ಅಪ್ಲೈಡ್ ಮೆಟೀರಿಯಲ್ಸ್ನಿಂದ 3,600 ಕೋಟಿ ರುಪಾಯಿ ಹೂಡಿಕೆ: ಎಂ.ಬಿ. ಪಾಟೀಲ್
MB Patil: ಅಪ್ಲೈಡ್ ಮೆಟೀರಿಯಲ್ಸ್ ಕಂಪನಿಯು ರಾಜ್ಯದಲ್ಲಿ ಮುಂದಿನ 10 ವರ್ಷಗಳಲ್ಲಿ 3,600 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದೆ. ಬೆಂಗಳೂರು ಸಿಗ್ನೇಚರ್ ಬಿಝಿನೆಸ್ ಪಾರ್ಕ್ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಯೋಜನೆಯಿಂದ 1,000 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.