ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಒಂದೇ ತಿಂಗಳಲ್ಲಿ ಅತಿ ಹೆಚ್ಚು ಸೌರ ಕೃಷಿ ಪಂಪ್‌ಗಳ ಸ್ಥಾಪಿಸಿ ವಿಶ್ವ ದಾಖಲೆ ಸೃಷ್ಟಿ

ಅತಿ ಹೆಚ್ಚು ಸೌರ ಕೃಷಿ ಪಂಪ್‌ಗಳ ಸ್ಥಾಪಿಸಿ ವಿಶ್ವ ದಾಖಲೆ ಸೃಷ್ಟಿ

ಪಿಎಂ-ಕುಸುಮ್ (ಘಟಕ ಬಿ) ಮತ್ತು ಮಗೆಲ್ ತ್ಯಾಲಾ ಸೌರ್ ಕೃಷಿ ಪಂಪ್ ಯೋಜನೆ (MTSKPY) ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ಭಾರತದ ಶುದ್ಧ ಇಂಧನ ಪರಿವರ್ತನೆಯನ್ನು ವೇಗಗೊಳಿಸುವ, ರೈತರ ಜೀವನೋಪಾಯವನ್ನು ಸುಧಾರಿಸುವ ಮತ್ತು ಸುಸ್ಥಿರ ನೀರಾವರಿಗೆ ಬೆಂಬಲ ನೀಡುವ MSEDCL ನ ಬದ್ಧತೆಯನ್ನು ಈ ಸಾಧನೆ ಪ್ರತಿಬಿಂಬಿಸುತ್ತದೆ.

ಕಾಯಿನ್‌ಸ್ವಿಚ್ ಇಂದ ಭಾರತದ ಪ್ರಥಮ ಸಮಗ್ರ VDA ಕೈಪಿಡಿಯನ್ನು ಪೊಲೀಸರು ಮತ್ತು ಕಾನೂನು ಜಾರಿ ಏಜೆನ್ಸಿಗಳಿಗಾಗಿ ಬಿಡುಗಡೆ

ಕಾಯಿನ್‌ಸ್ವಿಚ್ ಇಂದ ಭಾರತದ ಪ್ರಥಮ ಸಮಗ್ರ VDA ಕೈಪಿಡಿ ಬಿಡುಗಡೆ

ಭಾರತದಾದ್ಯಂತ ಕ್ರಿಪ್ಟೋ ಅಳವಡಿಕೆ ಹೆಚ್ಚಾಗುತ್ತಿರುವುದರಿಂದ, ಪೊಲೀಸರು ಮತ್ತು ಸೈಬರ್ ಕ್ರೈಮ್ ಘಟಕಗಳು ಡಿಜಿಟಲ್ ಆಸ್ತಿಗಳನ್ನು ಒಳಗೊಂಡ ಸಂಕೀರ್ಣ ಪ್ರಕರಣಗಳನ್ನು ಎದುರಿಸು ತ್ತಿವೆ. ಈ ತುರ್ತು ಅಗತ್ಯವನ್ನು ಮನಗಂಡು, VDA ಪರಿಕಲ್ಪನೆಗಳನ್ನು ಸರಳಗೊಳಿಸಲು ಮತ್ತು ತನಿಖೆಗಳಿಗೆ ಪ್ರಾಯೋಗಿಕ ಮಾರ್ಗದರ್ಶನ ನೀಡಲು ಕಾಯಿನ್‌ಸ್ವಿಚ್ ಈ ಕೈಪಿಡಿಯನ್ನು ಅಭಿವೃದ್ಧಿ ಪಡಿಸಿದೆ.

Chikkaballapur News: ಯುವಶಕ್ತಿಗೆ ದೊರೆತಿರುವ ರಾಷ್ಟ್ರಮಟ್ಟದ ಅವಕಾಶ ಸದುಪಯೋಗವಾಗಲಿ: ಭಾನು ಚೈತನ್ಯ ವರ್ಮಾ

ಯುವಶಕ್ತಿಗೆ ದೊರೆತಿರುವ ರಾಷ್ಟ್ರಮಟ್ಟದ ಅವಕಾಶ ಸದುಪಯೋಗವಾಗಲಿ

ದೇಶಾದ್ಯಂತ ಲಕ್ಷಾಂತರ ಮಂದಿ ಯುವಜನತೆ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಕಾರ್ಯಕ್ರಮ ದಲ್ಲಿ ಭಾಗವಹಿಸುತ್ತಿದ್ದಾರೆ. ನಮ್ಮ ಸಂಸ್ಥೆಗೆ ದೇಶದ ೧೧ ರಾಜ್ಯಗಳಿಂದ ೧೨೦ ವಿದ್ಯಾರ್ಥಿಗಳು ಬಂದಿದ್ದು, ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಇದೊಂದು ಸದಾವಕಾಶ. ಎಲ್ಲರೂ ಇದರ ಸದುಪಯೋಗಪಡಿಸಿ ಕೊಳ್ಳಬೇಕು.

ಗೌನಿಪಲ್ಲಿ ಗ್ರಾಮವನ್ನು ಪಟ್ಟಣ ಪಂಚಾಯಿತಿ ಮಾಡಲು ಪೌರಾಡಳಿತ ಸಚಿವರಿಗೆ ಮನವಿ

3 ನೇ ಬಾರಿ ಪಾದಯಾತ್ರೆ ನಡೆಸಿ ಸರ್ಕಾರದ ಗಮನ ಸೆಳೆದ ಅಮ್ಜದ್

18 ದಿನಗಳ ಪಾದಯಾತ್ರೆ ಮೂಲಕ ತಮ್ಮ ಗ್ರಾಮದಿಂದ ಬೆಳಗಾವಿ ಸುವರ್ಣ ಸೌಧದ ವರಿವಿಗೂ ಹೋಗಿ ಶ್ರೀನಿವಾಸಪುರ ಕ್ಷೇತ್ರದ ಶಾಸಕರಾದ ವೆಂಕಟಶಿವಾರೆಡ್ಡಿ ರವರ ಸಮ್ಮುಖದಲ್ಲಿ ಪೌರಾಡಳಿತ ಸಚಿವ ರಾದ ರಹೀಮ್ ಖಾನ್ ರವರಿಗೆ, ಗೌನಿಪಲ್ಲಿ ಗ್ರಾಮವನ್ನು ಪಟ್ಟಣ ಪಂಚಾಯತಿ ಕೂಡಲೆ ಪಟ್ಟಣ ಪಂಚಾಯತಿ ಮಾಡುವಂತೆ ಮನವಿ ಪತ್ರವನ್ನು ಸಲ್ಲಿಸಿದರು

Bagepally News: ಡಿ.12 ರಿಂದ ಹೆಲ್ಮೆಟ್ ಕಡ್ಡಾಯ

Bagepally News: ಡಿ.12 ರಿಂದ ಹೆಲ್ಮೆಟ್ ಕಡ್ಡಾಯ

ಮುಖ್ಯ ರಸ್ತೆಯ ಪೊಲೀಸ್ ಠಾಣೆ ಮುಂಭಾಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅವರ ನೇತೃತ್ವದಲ್ಲಿ ದ್ವಿಚಕ್ರ ವಾಹನಗಳನ್ನು ತಡೆದು ಹೆಲ್ಮೆಟ್ ಧರಿಸದೆ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರು ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ತಮ್ಮ ಪ್ರಾಣ ಹಾನಿ ತಪ್ಪಿಸುವ ಸಲುವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನವನ್ನು ಚಾಲನೆ ಮಾಡಬೇಕು

BJP Protest: ನಾಳೆ ಬೆಳಗಾವಿಯಲ್ಲಿ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ; ರೈತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ

ನಾಳೆ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ; ಸುವರ್ಣ ಸೌಧಕ್ಕೆ ಮುತ್ತಿಗೆ

ಬೆಳಗಾವಿ ಅಧಿವೇಶನ ವೇಳೆ ಈ ಬಾರಿ ಸಾಲು, ಸಾಲು ಪ್ರತಿಭಟನೆಗಳು ನಡೆಯಲಿವೆ. ಈಗಾಗಲೇ ಸುಮಾರು 50ಕ್ಕೂ ಅಧಿಕ ಸಂಘಟನೆಗಳು ಪ್ರತಿಭಟನೆಗೆ ಅನುಮತಿ ಕೋರಿ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೆಸರು ನೊಂದಾಯಿಸಿವೆ. ಈ ನಡುವೆ ನಾಳೆ ರೈತರ ಪರವಾಗಿ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ.

Karnataka Winter Session: ಕನ್ನಡ ಮಾಧ್ಯಮದ ಯಾವುದೇ ಶಾಲೆಯನ್ನು ಮುಚ್ಚಲ್ಲ: ಮಧು ಬಂಗಾರಪ್ಪ

ಒಂದೇ ಒಂದು ಕನ್ನಡ ಶಾಲೆಯನ್ನೂ ಮುಚ್ಚಲ್ಲ: ಮಧು ಬಂಗಾರಪ್ಪ

ಕೆಪಿಎಸ್ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಿಕ್ಷಕರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಆದ್ಯತೆ ಮೇರೆಗೆ ಶಿಕ್ಷಕರ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

BJP Protest: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ನೆಲಮಂಗಲದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ

ನೆಲಮಂಗಲದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ

Nelamangala News: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರವನ್ನು ಆಗ್ರಹಿಸಿ, ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ವತಿಯಿಂದ ನೆಲಮಂಗಲದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಗ್ರಾಮಾಂತರ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ಭೃಂಗೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

Sirsi News: ಮಹಿಳಾ ಆಯೋಗ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹಾಕುವ ಬಿಸ್ಕೆಟ್ ಗೆ ಸೀಮಿತವಾಗಿದೆ

ಮಹಿಳಾ ಆಯೋಗ ಕಾಂಗ್ರೆಸ್ ಹಾಕುವ ಬಿಸ್ಕೆಟ್ ಗೆ ಸೀಮಿತವಾಗಿದೆ

ರಾಜ್ಯ ಸರ್ಕಾರ ವಸತಿ ನಿಲಯಗಳ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮ ಈ ರೀತಿ ಆಗು ತ್ತಿದೆ. ಕೆಲವೆಡೆ ವಾರ್ಡನ್‌ಗಳೂ ಸಹ ಇಂತಹ ಘಟನೆಗಳಿಗೆ ಸಹಕಾರ ನೀಡುತ್ತಿದ್ದಾರೆ. ದುರುಳರ ಈ ಕೆಲಸಕ್ಕೆ ಏನೂ ಅರಿಯದ ಮುಗ್ದ ಬಾಲಕಿಯರು ಬಲಿಯಾಗುತ್ತಿದ್ದರೂ ರಾಜ್ಯದ ನಾಯಕರು ಇತ್ತ ಲಕ್ಷ್ಯ ವಹಿಸು ತ್ತಿಲ್ಲ.

Telangana Rising Global Summit-2025: ಹೈದರಾಬಾದ್‌, ಬೆಂಗಳೂರು ಪರಸ್ಪರ ಸ್ಪರ್ಧಿಗಳಲ್ಲ: ಡಿ.ಕೆ.ಶಿವಕುಮಾರ್‌

ಹೈದರಾಬಾದ್‌, ಬೆಂಗಳೂರು ಪರಸ್ಪರ ಸ್ಪರ್ಧಿಗಳಲ್ಲ: ಡಿ.ಕೆ.ಶಿವಕುಮಾರ್‌

ನಾವು ಬೆಂಗಳೂರು, ಹೈದರಾಬಾದ್‌ ನಗರಗಳನ್ನು ಬಿಟ್ಟು ಭಾರತದ ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಮಾತನಾಡಲು ಸಾಧ್ಯವಿಲ್ಲ. ನಾವು ಸ್ಪರ್ಧಿಗಳಲ್ಲ, ಪರಸ್ಪರ ಸ್ನೇಹ, ಸಹಕಾರದಿಂದ ಒಟ್ಟಾಗಿ ಅಭಿವೃದ್ಧಿ ಪಥದಲ್ಲಿ ಸಾಗುವ ಮೂಲಕ ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ತೆಲಂಗಾಣ ರೈಸಿಂಗ್‌ ಜಾಗತಿಕ ಶೃಂಗಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಕರೆ ನೀಡಿದ್ದಾರೆ.

Jewel Fashion 2025: ಕೈಗಳ ಅಂದ ಹೆಚ್ಚಿಸುವ ಬ್ರೇಸ್ಲೆಟ್ ಆಗಿ ಬದಲಾದ ಕರಿಮಣಿ ಸರ

ಬ್ರೇಸ್ಲೆಟ್ ಆಗಿ ಬದಲಾದ ಮಾನಿನಿಯರ ಕರಿಮಣಿ ಸರ

ವಿವಾಹಿತೆಯ ಕತ್ತನ್ನು ಸಿಂಗರಿಸುತ್ತಿದ್ದ ಮಾಂಗಲ್ಯದ ಕರಿಮಣಿ ಸರಗಳೀಗ ಕೈಗಳ ಬ್ರೇಸ್ಲೆಟ್ ರೂಪ ಪಡೆದುಕೊಂಡಿವೆ. ಹವಳದ ಜತೆ, ಮುತ್ತಿನ ಜತೆ, ಒಂದೆಳೆ, ಎರಡೆಳೆ ಅಷ್ಟೇಕೆ! ಗೊಂಚಲಿನಂತಹ ಕರಿಮಣಿ ಚೈನ್‌ಗಳು ಬ್ರೇಸ್ಲೆಟ್ ಡಿಸೈನ್‌ನಲ್ಲಿ ಆಗಮಿಸಿವೆ. ಈ ಕುರಿತ ಡಿಟೇಲ್ಸ್ ಇಲ್ಲಿದೆ.

ಕೊಲ್ಲಾಪುರದಲ್ಲಿ ಕರ್ನಾಟಕ ಸಾರಿಗೆ ಬಸ್‌ಗೆ ʼಜೈ ಮಹಾರಾಷ್ಟ್ರʼ ಸ್ಟಿಕ್ಕರ್‌ ಅಂಟಿಸಿ ಶಿವಸೇನೆ ಕಾರ್ಯಕರ್ತರ ಪುಂಡಾಟ

ಕರ್ನಾಟಕ ಸಾರಿಗೆ ಬಸ್‌ ತಡೆದು ಶಿವಸೇನೆ ಕಾರ್ಯಕರ್ತರ ಪುಂಡಾಟ

Belagavi News: ಒಂದೆಡೆ ಕೊಲ್ಲಾಪುರದಲ್ಲಿ ಕರ್ನಾಟಕ ಬಸ್‌ಗಳನ್ನು ತಡೆದು ಶಿವಸೇನೆ ಪ್ರತಿಭಟಿಸಿದ್ದರೆ, ಮತ್ತೊಂದೆಡೆ ಎಂಇಎಸ್ ಕಾರ್ಯಕರ್ತರ ಪುಂಡಾಟ ಖಂಡಿಸಿ ಕರವೇ ಕಾರ್ಯಕರ್ತರು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮಹಾರಾಷ್ಟ್ರ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ.

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಅನ್ನೋದು ಮಹಾನ್ ಅಪರಾಧವೇ?; ಸಿಎಂ, ಸಚಿವ ಮಹದೇವಪ್ಪಗೆ ಕುಮಾರಸ್ವಾಮಿ ಪ್ರಶ್ನೆ

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಅನ್ನೋದು ಮಹಾನ್ ಅಪರಾಧವೇ?: ಎಚ್‌ಡಿಕೆ

Bhagavad Gita in school syllabus: ಸಮಾಜ ಯಾವ ದಿಕ್ಕಿಗೆ ಹೋಗುತ್ತಿದೆ ಎಂಬುದನ್ನು ನಾವು ನಿತ್ಯವೂ ನೋಡುತ್ತಿದ್ದೇವೆ. ಒಳ್ಳೆಯ ಸಮಾಜ ನಿರ್ಮಿಸುವ ಉದ್ದೇಶದಿಂದ ಮಕ್ಕಳಿಗೆ ಚಿಕ್ಕಂದಿನಿಂದಲೇ ಭಗವದ್ಗೀತೆ ಕಲಿಸಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Laxmi Hebbalkar: ಮಠಗಳ ಸೇವಾ ಕಾರ್ಯ ಸರ್ಕಾರಕ್ಕೆ ಸ್ಫೂರ್ತಿ: ಲಕ್ಷ್ಮಿ ಹೆಬ್ಬಾಳ್ಕರ್

ಮಠಗಳ ಸೇವಾ ಕಾರ್ಯ ಸರ್ಕಾರಕ್ಕೆ ಸ್ಫೂರ್ತಿ: ಲಕ್ಷ್ಮಿ ಹೆಬ್ಬಾಳ್ಕರ್

ಸರ್ಕಾರಕ್ಕೆ ಸಮಾನವಾಗಿ ಸಾಮಾಜಿಕ ಕೆಲಸ ಕಾರ್ಯಗಳನ್ನು ನಮ್ಮ ಶ್ರೀಮಠಗಳು ಮಾಡುತ್ತಿವೆ. ಅಕ್ಷರ ದಾಸೋಹ, ಅನ್ನ, ಆರೋಗ್ಯ ದಾಸೋಹಗಳನ್ನು ಸರ್ಕಾರ ಕಾಪಿ ಮಾಡುತ್ತಿವೆ. ಮಠಗಳ ಕೆಲಸವೇ ಸರ್ಕಾರಕ್ಕೆ ಸ್ಫೂರ್ತಿಯಾಗಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ 200 ರೈತರ ಆತ್ಮಹತ್ಯೆ ನಿಮ್ಮ ಕೊಡುಗೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

ಮಂಡ್ಯ ಜಿಲ್ಲೆಯಲ್ಲಿ 200 ರೈತರ ಆತ್ಮಹತ್ಯೆ ನಿಮ್ಮ ಕೊಡುಗೆ; ಕುಮಾರಸ್ವಾಮಿ

HD Kumaraswamy: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ನಾನು ಕೊಟ್ಟಿದ್ದನ್ನು ಪಟ್ಟಿ ಮಾಡಿ ಹೇಳುತ್ತೇನೆ, ಮೊದಲು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ, ಈಗ ಏನೇನು ಕೊಟ್ಟಿದ್ದೀರಿ ಎಂಬುದನ್ನು ಹೇಳಿ ಎಂದು ಒತ್ತಾಯಿಸಿದ್ದಾರೆ.

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ: ಡಿ.ಕೆ. ಶಿವಕುಮಾರ್

ಉ.ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ: ಡಿಕೆಶಿ

DK Shivakumar: ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ವಿಧಾನಸಭಾ ಚುನಾವಣಾ ಅಕ್ರಮ ಆರೋಪ : ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮ ಆರೋಪ : ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ನೋಟಿಸ್

Notice to CM Siddaramaiah: ಚುನಾವಣಾ ಪ್ರಚಾರ ವೇಳೆ ಗ್ಯಾರಂಟಿಗಳನ್ನು ಘೋಷಿಸುವುದು ಮತದಾರರ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿ ಇದು ಆಮಿಷವಾಗಿದ್ದು, ಈ ರೀತಿ ಪ್ರಚಾರ ಮಾಡುವುದು ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 123 (4)ರ ಪ್ರಕಾರವೂ ಒಪ್ಪತಕ್ಕದ್ದಲ್ಲ ಎಂದು ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ. ಶಂಕರ್‌ ದೂರಿದ್ದರು. ಇವರ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

Belagavi Assemby Session: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ, ಅಗಲಿದ ಗಣ್ಯರಿಗೆ ಸಂತಾಪ; ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಘೋಷಣೆ

ಚಳಿಗಾಲದ ಅಧಿವೇಶನ ಆರಂಭ, ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ

Belagavi winter session: ಸಾಲುಮರದ ತಿಮ್ಮಕ್ಕ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಬೇಲೂರಿನಲ್ಲಿ ಸಾಲುಮರದ ತಿಮ್ಮಕ್ಕ ವಸ್ತು ಸಂಗ್ರಹಾಲಯಕ್ಕೆ ಚಿಂತನೆ ನಡೆಸಲಾಗುತ್ತಿದೆ. ವಸ್ತು ಸಂಗ್ರಹಾಲಯ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ ನೀಡಲು ಕೂಡ ತೀರ್ಮಾನ ಮಾಡಿದ್ದೇವೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Medical Certificate: ರಾಜ್ಯದಲ್ಲಿ ಪ್ರತಿ ಸಾವಿಗೂ ವೈದ್ಯಕೀಯ ಪ್ರಮಾಣ ಪತ್ರ ಇನ್ನು ಮುಂದೆ ಕಡ್ಡಾಯ

ರಾಜ್ಯದಲ್ಲಿ ಪ್ರತಿ ಸಾವಿಗೂ ವೈದ್ಯಕೀಯ ಪ್ರಮಾಣ ಪತ್ರ ಇನ್ನು ಮುಂದೆ ಕಡ್ಡಾಯ

Death Certificate: ರಾಜ್ಯದಲ್ಲಿ ನೋಂದಾಯಿತವಾಗುವ ಸಾವುಗಳಲ್ಲಿ ಶೇಕಡ 26.7 ರಷ್ಟು ಸಾವುಗಳಿಗೆ ಮಾತ್ರ ವೈದ್ಯಕೀಯವಾಗಿ ಪ್ರಮಾಣ ಪತ್ರ ಲಭ್ಯವಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಸಾವಿನ ನಿಖರ ಕಾರಣ ತಿಳಿಯುವ ಉದ್ದೇಶದಿಂದ ವೈದ್ಯಕೀಯ ಸಂಸ್ಥೆಗಳಲ್ಲಿನ ಸಾವುಗಳನ್ನು ಹೊರತುಪಡಿಸಿ ಬೇರೆ ಯಾವುದೇ ಸ್ಥಳದಲ್ಲಿ ವ್ಯಕ್ತಿ ಮರಣ ಹೊಂದಿದಲ್ಲಿ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Actor Darshan: ನಟ ದರ್ಶನ್‌ರಿಂದ ಸಹಕೈದಿಗಳಿಗೆ ಕಿರುಕುಳ, ಒದೆತ: ಆರೋಪ

ನಟ ದರ್ಶನ್‌ರಿಂದ ಸಹಕೈದಿಗಳಿಗೆ ಕಿರುಕುಳ, ಒದೆತ: ಆರೋಪ

ದರ್ಶನ್ ಜೊತೆ ಒಂದೇ ಸೆಲ್​ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ (Renuka swamy murder case) ಜೈಲು ಸೇರಿದವರೇ. ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ಕೆಲ ದಿನದ ಹಿಂದೆ ದರ್ಶನ್ ಸೆಲ್‌ನಲ್ಲಿ‌ ದೊಡ್ಡ ಜಗಳ ನಡೆದು ಹೋಗಿದೆಯಂತೆ.

Namma Metro Yellow Line: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇನ್ನಷ್ಟು ರೈಲು, ಬಿಇಎಂಎಲ್‌ ಜೊತೆ ಒಪ್ಪಂದ

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇನ್ನಷ್ಟು ರೈಲು, ಬಿಇಎಂಎಲ್‌ ಜೊತೆ ಒಪ್ಪಂದ

ಹಳದಿ ಮಾರ್ಗದಲ್ಲಿ(ಆರ್‌.ವಿ.ರಸ್ತೆ- ಬೊಮ್ಮಸಂದ್ರ) ಹೆಚ್ಚಿನ ಪ್ರಯಾಣಿಕರ ಸಂಖ್ಯೆ ಪರಿಗಣಿಸಿ, ಬಿಎಂಆರ್‌ಸಿಎಲ್‌ ಹೆಚ್ಚುವರಿ ಆರು ರೈಲುಗಳಿಗಾಗಿ ಬಿಇಎಂಎಲ್‌ ಜತೆ 414 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿದೆ. ಬಿಇಎಂಎಲ್‌ 2027ರ ವೇಳೆಗೆ ಹೆಚ್ಚುವರಿ ಆರು ರೈಲು (36 ಬೋಗಿ) ಪೂರೈಸುವ ಸಾಧ್ಯತೆ ಇದೆ. ಹಳದಿ ಮಾರ್ಗವನ್ನು (Namma Metro Yello Line) ಬೊಮ್ಮಸಂದ್ರದಿಂದ ಅತ್ತಿಬೆಲೆಗೆ ವಿಸ್ತರಿಸಿದ ನಂತರ ಹೆಚ್ಚುವರಿಯಾಗಿ 10-12 ರೈಲುಗಳು ಬೇಕಾಗುತ್ತವೆ.

National Herald Case‌: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಆಪ್ತನಿಗೆ ದೆಹಲಿ ಪೊಲೀಸ್‌ ನೋಟಿಸ್

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಕೆ‌ ಶಿವಕುಮಾರ್ ಆಪ್ತನಿಗೆ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಇ.ಡಿ ನೀಡಿರುವ ದೂರಿನ ಮೇರೆಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲಿಸಿತ್ತು. ಅದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ಗೂ (DK Shivakumar) ನೋಟಿಸ್ ಜಾರಿಯಾಗಿತ್ತು. ಸದ್ಯ ಡಿಕೆಶಿ ಆಪ್ತ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಒಂದು ವಾರದಲ್ಲಿ ಹಾಜರಾಗುವಂತೆ ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ನೊಟೀಸ್ ನೀಡಿ ತೆರಳಿದ್ದಾರೆ.

Koppala news: ಪ್ರಿ ವೆಡ್ಡಿಂಗ್‌ ಫೋಟೋಶೂಟ್‌ ಮುಗಿಸಿ ಬರುತ್ತಿದ್ದ ಜೋಡಿ ಅಪಘಾತದಲ್ಲಿ ಸಾವು

ಪ್ರಿ ವೆಡ್ಡಿಂಗ್‌ ಫೋಟೋಶೂಟ್‌ ಮುಗಿಸಿ ಬರುತ್ತಿದ್ದ ಜೋಡಿ ಅಪಘಾತದಲ್ಲಿ ಸಾವು

Road Accident: ಕರಿಯಪ್ಪ ಮಡಿವಾಳ್‌ ಹನುಮನಹಟ್ಟಿ (26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ಜೋಡಿ. 5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿ.21ರಂದು ಮದುವೆ ನಿಶ್ಚಯವಾಗಿತ್ತು. ಅದರ ಪ್ರಯುಕ್ತ ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯದ ಕಡೆ ತೆರಳಿ ಮರಳುತ್ತಿದ್ದರು.

Belagavi Assembly Session: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಅನ್ನದಾತರ ಸಮಸ್ಯೆಗಳೇ ಬಿಜೆಪಿ ಅಸ್ತ್ರ

ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಆಡಳಿತ- ವಿಪಕ್ಷ ಸನ್ನದ್ಧ

karnataka winter session: ಮೊದಲ ದಿನವಾದ ಇವತ್ತು ಅಗಲಿದ ಗಣ್ಯರಿಗೆ ಸಂತಾಪ ಸೂಚಕ ಸಭೆ ನಡೆಯಲಿದೆ. ಇಂದಿನಿಂದ ಡಿಸೆಂಬರ್ 19ರವರೆಗೂ ಚಳಿಗಾಲದ ಅಧಿವೇಶನ ನಡೆಯಲಿದ್ದು ರಾಜಕೀಯ ಜಿದ್ದಾಜಿದ್ದಿ ಕಾವೇರುವುದು ಖಚಿತವಾಗಿದೆ. ಸದನ ಒಳಗೆ ಮತ್ತು ಹೊರಗೂ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೂಪುರೇಷೆ ಸಜ್ಜಾಗಿದೆ. ವಿವಿಧ ಸಂಘಟನಗಳು ಭಾರಿ ಹೋರಾಟಕ್ಕೆ ಮುಂದಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ, 6 ಸಾವಿರಕ್ಕೂ ಅಧಿಕ ಪೊಲೀಸರ ಭದ್ರತೆ ಹಾಕಲಾಗಿದೆ.

Loading...