ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Bhagavad Gita seminar: ಕುವೆಂಪು ವಿವಿಯಲ್ಲಿ ಭಗವದ್ಗೀತೆ ವಿಚಾರ ಸಂಕಿರಣ: ದಲಿತ ಸಂಘರ್ಷ ಸಮಿತಿ ವಿರೋಧ

ಕುವೆಂಪು ವಿವಿಯಲ್ಲಿ ಭಗವದ್ಗೀತೆ ವಿಚಾರ ಸಂಕಿರಣ: ದಲಿತ ಸಂಘರ್ಷ ಸಮಿತಿ ವಿರೋಧ

Shivamogga News: ಈ ವಿಚಾರಗೋಷ್ಠಿ ಬಲಪಂಥೀಯ ತತ್ತ್ವದ ಅಜೆಂಡಾವನ್ನು ಉತ್ತೇಜಿಸುತ್ತಿದೆ. ರಾಷ್ಟ್ರೀಯ ಕವಿ ಕುವೆಂಪು ಅವರ ಆದರ್ಶಗಳು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಭಗವದ್ಗೀತೆಯನ್ನು ಇತಿಹಾಸದಲ್ಲಿ ಚಾತುರ್ವರ್ಣ ವ್ಯವಸ್ಥೆ ಮತ್ತು ಜಾತಿ ಪದ್ಧತಿಯನ್ನು ಸಮರ್ಥಿಸಲು ಬಳಸಲಾಗಿದೆ. ಬಲಪಂಥೀಯ ಗುಂಪುಗಳು ಇಂತಹ ಕಾರ್ಯಕ್ರಮಗಳ ಮೂಲಕ ವಿಶ್ವವಿದ್ಯಾಲಯಗಳಲ್ಲಿ ಒಂದೇ ರೀತಿಯ ತತ್ತ್ವದ ಚೌಕಟ್ಟನ್ನು ಮುನ್ನೆಲೆಗೆ ತಂದು ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿವೆ ಎಂದು ಆರೋಪಿಸಲಾಗಿದೆ.

BWSSB Recruitment 2025: ಬೆಂಗಳೂರು ಜಲಮಂಡಳಿಯ 224 ಹುದ್ದೆಗೆ ಅರ್ಜಿ ಆಹ್ವಾನ; ಕೆಇಎ ಅಧಿಸೂಚನೆ

ಬಿಡಬ್ಲ್ಯುಎಸ್‌ಎಸ್‌ಬಿಯ 224 ಹುದ್ದೆಗೆ ಅರ್ಜಿ ಆಹ್ವಾನಿಸಿದ ಕೆಇಎ

Job News: ಬೆಂಗಳೂರು ಜಲಮಂಡಳಿಯಲ್ಲಿನ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಹಾಜರಾಗಬೇಕು. ಈ ಬಗ್ಗೆ ಕೆಇಎ ಅಧಿಸೂಚನೆ ಹೊರಡಿಸಿದ್ದು, ಹುದ್ದೆಗಳು, ವೇತನ, ಶೈಕ್ಷಣಿಕ ಅರ್ಹತೆ ಸೇರಿ ನೇಮಕಾತಿ ಕುರಿತ ವಿವರವಾದ ಮಾಹಿತಿ ಇಲ್ಲಿ ನೀಡಲಾಗಿದೆ.

Namma Metro: ನಮ್ಮ ಮೆಟ್ರೋ ತುಮಕೂರಿಗೂ ವಿಸ್ತರಣೆ: ಬಿಎಂಆರ್‌ಸಿಎಲ್‌ನಿಂದ ಡಿಪಿಆರ್‌ ಆಹ್ವಾನ

ನಮ್ಮ ಮೆಟ್ರೋ ತುಮಕೂರು ವಿಸ್ತರಣೆ: ಡಿಪಿಆರ್‌ ಆಹ್ವಾನಿಸಿದ ಬಿಎಂಆರ್‌ಸಿಎಲ್‌

Namma Metro to Tumakuru: ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಿಸುವ ಪ್ರಸ್ತಾವನೆಗೆ ಮತ್ತೆ ಚಾಲನೆ ದೊರೆತಿದೆ. ವಿವರವಾದ ಯೋಜನಾ ವರದಿ ಸಲ್ಲಿಸುವಂತೆ ಬಿಎಂಆರ್‌ಸಿಎಲ್‌ ಟೆಂಡರ್ ಆಹ್ವಾನ ನೀಡಿದೆ. ನಮ್ಮ ಮೆಟ್ರೋ ಯೋಜನೆಯಿಂದ ಕೈಗಾರಿಕಾ ನಗರಿ ತುಮಕೂರಿನ ಆರ್ಥಿಕತೆಗೆ ಹೊಸ ವೇಗ ಸಿಗಬಹುದು ಎಂದು ಅಂದಾಜಿಸಲಾಗಿದೆ. 2024–25ರ ಕರ್ನಾಟಕ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದನ್ನು ಘೋಷಿಸಿದ್ದರು.

Bangalore News: ಕರ್ನಾಟಕ  ಆರ್ಯ ವೈಶ್ಯ ಜೀವಮಾನ ಸಾಧನೆ: ಸುಬ್ಬರಾಮ ಶೆಟ್ಟಿಗೆ ಪ್ರಶಸ್ತಿ ಪ್ರದಾನ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಕರ್ನಾಟಕ ಆರ್ಯ ವೈಶ್ಯ ಜೀವಮಾನ ಸಾಧನೆ

ಆರ್.ವಿ. ಶಿಕ್ಷಣ ಸಂಸ್ಥೆಗಳ ಸರ್ವತೋಮುಖ ಬೆಳವಣಿಗೆಗೆ ಕಾರಣೀಭೂತರಾದ ಶಿಕ್ಷಣತಜ್ಞ. ಬಡಮಕ್ಕಳಿಗೆ ನೆರವಾದ ಸಮಾಜಮುಖಿ ಉದ್ಯಮಿ. ಸುಶಿಕ್ಷಿತ ಕುಟುಂಬದ ಕುಡಿಯಾದ ಸುಬ್ಬ ರಾಮ ಶೆಟ್ಟಿ, ಅವರು ಬಿಎಸ್ಸಿ, ಟೆಕ್ಸ್ಟೈಲ್ಸ್ ಪದವೀಧರರು. ಆರ್.ವಿ.ಶಿಕ್ಷಣ ಸಂಸ್ಥೆಯ ಕೋಶಾ ಧ್ಯಕ್ಷರಾಗಿ ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ದುಡಿದು ಸಂಸ್ಥೆಯ ಪ್ರಗತಿಗೆ ಅಮೂಲ್ಯ ಕಾಣಿಕೆ ಕೊಟ್ಟದ್ದಾರೆ.

Bomb threat: ನಮ್ಮ ಮೆಟ್ರೋಗೆ ಅಪರಿಚಿತನಿಂದ ಬಾಂಬ್‌ ಬೆದರಿಕೆ, ʼನಾನು ಉಗ್ರಗಾಮಿ ಇದ್ದಂತೆ...ʼ ಎಂದು ಇ-ಮೇಲ್

ನಮ್ಮ ಮೆಟ್ರೋಗೆ 'ಉಗ್ರಗಾಮಿʼ ಅಪರಿಚಿತನಿಂದ ಬಾಂಬ್‌ ಬೆದರಿಕೆ ಇ-ಮೇಲ್

Namma Metro Bomb threat: ʼನನ್ನ ವಿಚ್ಛೇದಿತ ಪತ್ನಿಗೆ ಮೆಟ್ರೋ ಸಿಬ್ಬಂದಿ ಕಿರುಕುಳ ಕೊಡ್ತಿದ್ದಾರೆ. ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡಬೇಕಾಗುತ್ತೆ. ನಾನು ಒಬ್ಬ ಉಗ್ರಗಾಮಿ ಇದ್ದಂತೆ, ಅದರಲ್ಲೂ ಕನ್ನಡಿಗರ ವಿರುದ್ಧʼ ಎಂದು ಇಮೇಲ್ ನಲ್ಲಿ ಬರೆಯಲಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ವಿಲ್ಸನ್ ಗಾರ್ಡನ್ ಪೊಲೀಸರು, ಇಮೇಲ್ ಮಾಡಿದ ಅಪರಿಚಿತನಿಗಾಗಿ ಶೋಧ ನಡೆಸುತ್ತಿದ್ದಾರೆ.

Bengaluru news: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ 1 ಲಕ್ಷ ರೂ. ದಂಡ, 5 ವರ್ಷ ಜೈಲು!

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ 1 ಲಕ್ಷ ರೂ. ದಂಡ, 5 ವರ್ಷ ಜೈಲು

Bengaluru Garbage burning: ಈ ಮೊದಲು ಎಲ್ಲೆಂದರಲ್ಲಿ ಕಸ ಎಸೆದವರ ವಿಡಿಯೋ- ಫೋಟೋ ಮಾಡಿಕೊಂಡು ಅಂಥವರ ಮನೆ ಮುಂದೆಯೇ ಜಿಬಿಎ ಸಿಬ್ಬಂದಿ ಕಸ ಸುರಿದಿದ್ದರು. ಎರಡನೇ ಬಾರಿಗೆ ಭಾರಿ ದಂಡ ವಿಧಿಸಿದ್ದರು. ಕಸ ಸುಟ್ಟರೆ ಉಂಟಾಗುವ ವಾಯುಮಾಲಿನ್ಯ ತಡೆಯಲು ಹೊಸ ನಿಯಮ ಜಾರಿ ಮಾಡಿದ್ದು, ಪರಿಸರ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಒಂದು ಲಕ್ಷ ರೂ.ವರೆಗೂ ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ನಿರ್ಧರಿಸಿದೆ.

Akhilesh Yadav: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಅಖಿಲೇಶ್‌ ಯಾದವ್‌

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಅಖಿಲೇಶ್‌ ಯಾದವ್‌

Akhilesh Yadav in Bengaluru: ಬೆಂಗಳೂರಿನ ತಮ್ಮ ಸಂಬಂಧಿಯೊಬ್ಬರ ಮನೆಗೆ ಭೇಟಿ ನೀಡಿರುವ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್, ರಾಮೇಶ್ವರಂ ಕೆಫೆಗೆ (‌Rameshwarama cafe) ಭೇಟಿ ನೀಡಿ ಅಲ್ಲಿನ ದೋಸೆ ಸವಿದರು. ನಂತರ ಅದನ್ನು ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿಕೊಂಡಿದ್ದಾರೆ.

Karnataka Weather: ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಕರಾವಳಿ, ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 17 ಡಿಗ್ರಿ ಸೆ. ಇರಬಹುದು.

CM Siddaramaiah: ದೆಹಲಿಯಿಂದ ನೇರ ಆಸ್ಪತ್ರೆಗೆ ಬಂದು ಪತ್ನಿಯ ಆರೋಗ್ಯ ವಿಚಾರಿಸಿದ ಸಿಎಂ

ದೆಹಲಿಯಿಂದ ನೇರ ಆಸ್ಪತ್ರೆಗೆ ಬಂದು ಪತ್ನಿಯ ಆರೋಗ್ಯ ವಿಚಾರಿಸಿದ ಸಿಎಂ

CM Siddaramaiah wife illess: ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪತ್ನಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪತ್ನಿ ಆರೋಗ್ಯ ಸ್ಥಿರವಾಗಿದೆ. ಏನೂ ಸಮಸ್ಯೆ ಇಲ್ಲ. ಶ್ವಾಸಕೋಶ ಸೋಂಕು ಇದೆ ಎಂದು ತಿಳಿಸಿದರು.

ಭಾರೀ ಮಳೆಗೆ ಮೆಕ್ಕೆಜೋಳ ಶೇ, 40 ಇಳುವರಿ ಕುಸಿತ

ಭಾರೀ ಮಳೆಗೆ ಮೆಕ್ಕೆಜೋಳ ಶೇ, 40 ಇಳುವರಿ ಕುಸಿತ

ಹೆಚ್ಚು ಮೆಕ್ಕೆಜೋಳ ಬೆಳೆಯುವ ದಾವಣಗೆರೆ, ಚಿತ್ರದುರ್ಗ, ಹಾವೇರಿ ಸೇರಿದಂತೆ ಹಲವೆಡೆ ಮೆಕ್ಕೆಜೋಳ ಬೆಳೆದಿದ್ದ ರೈತರು ಈ ಬಾರಿ ಒಳ್ಳೆಯ ಫಸಲಿನ ನಿರೀಕ್ಷೆಯಲ್ಲಿಉತ್ತಮ ಆದಾಯ ಬರುತ್ತದೆ, ಸಾಲ-ಸೋಲ ತೀರಿಸಿಕೊಂಡು ನೆಮ್ಮಂದಿಯಿಂದಿರಬಹುದು ಎಂಬ ಕನಸು ಇಟ್ಟು ಕೊಂಡಿದ್ದರು. ಆದರೆ ಮಳೆಯ ಕಣ್ಣಾಮುಚ್ಚಾಲೆ ಆಟಕ್ಕೆ ಈ ಬಾರಿಯೂ ಮೆಕ್ಕೆಜೋಳ ಬೆಳೆದಿದ್ದ ರೈತರು ಇಳುವರಿ ಕುಸಿತದಿಂದ ನಷ್ಟ ಅನುಭವಿಸುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ.

Shidlaghatta News: ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ಸಾವಿರಾರು ವರ್ಷಗಳ ಇತಿಹಾಸವಿರುವ ನಗರದ ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಪ್ರಾರಂಭದಿಂದಲೂ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಿತು. ಅಯೋಧ್ಯಾನಗರ ಶಿವಾಚಾರ ವೈಶ್ಯನಗರ್ಥ ಮಂಡಳಿ ವತಿಯಿಂದ ಸೋಮವಾರ ಕಡೆಯ ಕಾರ್ತಿಕ ಮಾಸದ ಪ್ರಯುಕ್ತ ಲಕ್ಷ ದೀಪೋತ್ಸವ ನಡೆಯಿತು.

Gudibande News: ಕಡೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ

Gudibande News: ಕಡೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ

ನಮ್ಮ ಗ್ರಾಮದಲ್ಲಿ ರುವ ಹಾಲು ಉತ್ಪಾದಕರ ಸಂಘ ತಾಲ್ಲೂಕಿನಲ್ಲಿ ಒಂದು ಮಾದರಿಯಾಗ ಬೇಕು. ನಿಟ್ಟಿನಲ್ಲಿ ನಾವೆಲ್ಲರೂ ಸಂಘದ ಬೆಳವಣಿಗೆಗೆ ಶ್ರಮಿಸಿ, ಸಂಘವನ್ನು ಬಲಿಷ್ಠ ಗೊಳಿಸಲು ಎಲ್ಲಾ ಪ್ರತಿನಿಧಿಗಳು ತಮ್ಮ ವೈಯಕ್ತಿಕ ಪ್ರತಿಷ್ಠೆಗಳನ್ನು ಬದಿಗಿಟ್ಟು ಕೆಲಸ ಮಾಡಬೇಕು. ಸಂಘದ ಕಟ್ಟಡ ನಿರ್ಮಾಣಕ್ಕೆ ಶಾಸಕರು  ನಾಲ್ಕು ಲಕ್ಷ ಅನುದಾನ ನೀಡಿದ್ದಾರೆ.

MLA S.N.Subbareddy: ತಾಲ್ಲೂಕಿಗೆ ಹೆಬ್ಬಾಳ-ನಾಗವಾರ ಹೆಚ್.ಎನ್. ವ್ಯಾಲಿಯಿಂದ 24 ಕೆರೆಗಳಿಗೆ ನೀರು, ನೀರಾವರಿ ಸಚಿವರಿಂದ ಉದ್ಘಾಟನೆ

ಕಾರ್ಯಕ್ರಮದ ಸಿದ್ಧತೆ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪರಿಶೀಲನೆ

ತಾಲ್ಲೂಕಿಗೆ ಹೆಬ್ಬಾಳ-ನಾಗವಾರ ವ್ಯಾಲಿ ಯಿಂದ ಕೆರೆಗಳಿಗೆ ನೀರು ಹರಿಸಬೇಕು, ಇಲ್ಲವಾದರೆ ರಾಜೀನಾಮೆ ನೀಡಲು ಸಿದ್ಧ ಎಂದು ಅಂದಿನ ಕುಮಾರಸ್ವಾಮಿ ಸರ್ಕಾರದ ಮೇಲೆ ಒತ್ತಡ ಹಾಕಿದ್ದೆ. ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ₹83 ಕೋಟಿ ಬಿಡುಗಡೆ ಮಾಡಿದ್ದರು

Bagapally Crime: ಆಹಾರಕ್ಕೆ ಬೆರೆಸಲು ವಿಷಕಾರಿ ದತ್ತೂರ ಬೀಜದ ಪುಡಿ ನೀಡಿದ್ದ ‘ಮಾಂತ್ರಿಕ’ ಅರೆಸ್ಟ್

ಐಸಿಯು ನಲ್ಲಿ ಮೂವರ ಚೇತರಿಕೆ, ೪ ಜನ ಸಾಮಾನ್ಯ ವಾರ್ಡಿಗೆ ಶಿಫ್ಟ್

ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದ ಒಂದೇ ಕುಟುಂಬದ ೮ ಜನರನ್ನು ಸಾಮೂಹಿಕವಾಗಿ ಕೊಲೆ ಮಾಡುವ ಉದ್ದೇಶದಿಂದ ಪಾಪಿರೆಡ್ಡಿ ಎಂಬಾತ ನೀಡಿದ್ದ ವಿಷವನ್ನು ನೀರು ಕುಡಿಯುವ ನೆಪದಲ್ಲಿ ಅಡುಗೆ ಮನೆಗೆ ಪ್ರವೇಶ ಮಾಡಿದ್ದ ಚೌಡರೆಡ್ಡಿ ಎಂಬಾತ ಆಹಾರ ದಲ್ಲಿ(ಸಾಂಬಾರಿಗೆ) ವಿಷವನ್ನು ಬೆರೆಸಿದ್ದ

Sri Madhusudan Sai: ಧ್ವನಿ ಇಲ್ಲದವರಿಗೆ ಮಾಧ್ಯಮಗಳು ಧ್ವನಿಯಾಗಿ ಮುಖ್ಯ ವಾಹಿನಿಗೆ ತರಬೇಕು: ಮಧುಸೂದನ ಸಾಯಿ

ಧ್ವನಿ ಇಲ್ಲದವರಿಗೆ ಮಾಧ್ಯಮಗಳು ಧ್ವನಿಯಾಗಲಿ: ಮಧುಸೂದನ ಸಾಯಿ

Sathya Sai Grama: ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 'ಒಂದು ಜಗತ್ತು ಒಂದು ಕುಟುಂಬ ವಿಶ್ವ ಸಾಂಸ್ಕೃತಿಕ ಮಹೋತ್ಸವ' ದ 94ನೇ ದಿನವಾದ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಸದ್ಗುರು ಶ್ರೀ ಮಧುಸೂದನ ಸಾಯಿ ಆಶೀರ್ವಚನ ನೀಡಿದ್ದಾರೆ. ಮಾಧ್ಯಮಗಳಲ್ಲಿ ಉತ್ತಮ ಸುದ್ದಿಗಳ ಕೊರತೆ ಕಾಣಿಸುತ್ತಿದೆ. ಮಾಧ್ಯಮಗಳು ಸತ್ಯ ಹೇಳಬೇಕು ಎನ್ನುವುದರಲ್ಲಿ ಯಾವುದೇ ಆಕ್ಷೇಪವಿಲ್ಲ. ಆದರೆ ಜಗತ್ತಿನಲ್ಲಿ ಸಿಹಿ ಸತ್ಯಗಳೂ ಸಾಕಷ್ಟು ಇವೆ. ಅದರ ಕಡೆಯೂ ಮಾಧ್ಯಮಗಳು ಗಮನ ಕೊಡಬೇಕು ಎಂದು ತಿಳಿಸಿದ್ದಾರೆ.

Bengaluru Power Cut: ನ.18, 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ನ.18, 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

BESCOM: ಆಡುಗೋಡಿ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ನ.18ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Parvathi Siddaramaiah: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು

CM Siddaramaiah's Wife Parvathi: ಶ್ವಾಸಕೋಶದ ಸಮಸ್ಯೆ ಹಿನ್ನೆಲೆಯಲ್ಲಿ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಪಾರ್ವತಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

Tumkur News: ಜ್ಞಾನ ವೃದ್ಧಿ, ವ್ಯಕ್ತಿತ್ವ ರೂಪಿಸಿಕೊಳ್ಳಲು ಓದುವ ಹವ್ಯಾಸ ಸಹಕಾರಿ: ಡಾ. ಶಿವಶಂಕರ ಕಾಡದೇವರಮಠ

ಜ್ಞಾನ ವೃದ್ಧಿ, ವ್ಯಕ್ತಿತ್ವ ರೂಪಿಸಿಕೊಳ್ಳಲು ಓದುವ ಹವ್ಯಾಸ ಸಹಕಾರಿ

ಪುಸ್ತಕ ಓದುವ ಆಂದೋಲನವಾಗಿ ‘ಓದು ಕರ್ನಾಟಕʼ ಎಂಬ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಆರಂಭಿಸಲಾಗುತ್ತಿದ್ದು, ಡಿಸೆಂಬರ್ 18ರಂದು ತುಮಕೂರಿನಲ್ಲಿ ಉದ್ಘಾಟನೆಯಾಗಲಿದೆ. ನಗರದ ಎಲ್ಲಾ 35 ವಾರ್ಡ್‌ಗಳಲ್ಲಿ 35 ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿ ಶಾಲೆ ಮಕ್ಕಳಲ್ಲಿ ಪುಸ್ತಕ ಓದುವ ಸಂಸ್ಕೃತಿ ಬೆಳೆಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಗ್ರಂಥಾಲಯ ಸಂಘದ ಅಧ್ಯಕ್ಷ ಡಾ. ಶಿವಶಂಕರ ಕಾಡದೇವರಮಠ ತಿಳಿಸಿದ್ದಾರೆ.

CM Siddaramaiah Meets PM Modi: ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ರಾಯಚೂರಿನಲ್ಲಿ ಏಮ್ಸ್, ಕಬ್ಬು ದರ ಹೆಚ್ಚಳಕ್ಕೆ ಮನವಿ

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; 5 ಅಂಶಗಳ ಮನವಿ

CM Siddaramaiah visit to Delhi: ಬಿಹಾರ ಚುನಾವಣೆ ಬಳಿಕ ದೆಹಲಿಗೆ ತೆರಳುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಸೋಮವಾರ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರನ್ನು ಭೇಟಿಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಹಲವು ಮಹತ್ವದ ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.

Karnataka Weather: ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲು; ಮುಂದಿನ 2 ದಿನ ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಎಚ್ಚರಿಕೆ!

ಮುಂದಿನ 2 ದಿನ ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಎಚ್ಚರಿಕೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

MB Patil: ಫ.ಗು.ಹಳಕಟ್ಟಿ ಆರಂಭಿಸಿದ್ದ 'ಶಿವಾನುಭವ' ಪತ್ರಿಕೆ ಸದ್ಯದಲ್ಲೇ ಪುನಾರಂಭ: ಎಂ‌.ಬಿ. ಪಾಟೀಲ್‌

'ಶಿವಾನುಭವ' ಪತ್ರಿಕೆ ಸದ್ಯದಲ್ಲೇ ಪುನಾರಂಭ: ಎಂ‌.ಬಿ. ಪಾಟೀಲ್‌

Ramanashree Award Ceremony: ಉತ್ತರ ಕರ್ನಾಟಕದ ಸಾಧಕರಾದ ಫ.ಗು.ಹಳಕಟ್ಟಿ, ಸರ್ ಸಿದ್ದಪ್ಪ ಕಂಬಳಿ, ಲಿಂಗರಾಜ ದೇಸಾಯಿ, ಬಂತನಾಳದ ಪೂಜ್ಯರು, ಶ್ರೀ ಸಿದ್ಧೇಶ್ವರ ಸ್ವಾಮೀಜಿ ಮುಂತಾದವರ ಬಗ್ಗೆ ಕೂಡ ನಮ್ಮಲ್ಲಿ ಪುಸ್ತಕಗಳು ಪ್ರಕಟವಾಗಬೇಕು. ಹಾಗೆಯೇ ಬೆಂಗಳೂರು ಭಾಗದ ಸರ್ ಪುಟ್ಟಣ್ಣ ಚೆಟ್ಟಿ ಅಂಥವರ ಬಗ್ಗೆಯೂ ತಿಳಿಯಬೇಕು. ಈ ಮೂಲಕ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಎನ್ನುವ ಭೇದ ಅಳಿಯಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

Bengaluru Digital Arrest: ಬೆಂಗಳೂರಿನಲ್ಲಿ ಮತ್ತೊಂದು ಡಿಜಿಟಲ್‌ ಅರೆಸ್ಟ್‌; ಮಹಿಳಾ ಟೆಕ್ಕಿಗೆ ಬರೋಬ್ಬರಿ 31.83 ಕೋಟಿ ರೂ. ವಂಚನೆ!

ಡಿಜಿಟಲ್‌ ಅರೆಸ್ಟ್‌; ಮಹಿಳಾ ಟೆಕ್ಕಿಗೆ ಬರೋಬ್ಬರಿ 31.83 ಕೋಟಿ ರೂ. ವಂಚನೆ!

Cyber Crime in Bengaluru: ನಿಮಗೆ ಬಂದಿರುವ ಕೊರಿಯರ್‌ನಲ್ಲಿ ಮಾದಕ ವಸ್ತುಗಳು ಇವೆ ಎಂದು ಬೆದರಿಸಿ, ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಬೆಂಗಳೂರಿನ ಮಹಿಳಾ ಟೆಕ್ಕಿಗೆ ವಂಚನೆ ಎಸಗಲಾಗಿದೆ. ಹಣ ಕಳೆದುಕೊಂಡ ಮಹಿಳೆ ನೀಡಿದ ದೂರಿನ ಅನ್ವರ ಬೆಂಗಳೂರಿನ ಸೈಬರ್ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Chitralahari Movie: ಕೆ.ಆರ್. ಸುರೇಶ್ ನಿರ್ದೇಶನದ ‘ಚಿತ್ರಲಹರಿ’ ಚಿತ್ರದ ಟೀಸರ್, ಸಾಂಗ್‌ ಬಿಡುಗಡೆ

‘ಚಿತ್ರಲಹರಿ’ ಚಿತ್ರದ ಟೀಸರ್, ಸಾಂಗ್‌ ರಿಲೀಸ್‌

Sandalwood News: ಕೆ.ಆರ್. ಸುರೇಶ್ ನಿರ್ದೇಶನದ ʼಚಿತ್ರಲಹರಿʼ ಚಿತ್ರದ ಟೀಸರ್ ಹಾಗೂ ಹಾಡುಗಳು ಬಿಡುಗಡೆಯಾಗಿವೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ ಟೀಸರ್ ಅನ್ನು ಬಿಡುಗಡೆ ಮಾಡಿದರು. ಹಿರಿಯ ನಿರ್ದೇಶಕ ಪುರುಷೋತ್ತಮ್ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. ಈ ಕುರಿತ ವಿವರ ಇಲ್ಲಿದೆ.

ಕರ್ನಾಟಕದಲ್ಲಿ 2020 ರಿಂದ ಮಕ್ಕಳ ಮೇಲಿನ ಅಪರಾಧಗಳಲ್ಲಿ 63% ರಷ್ಟು ಹೆಚ್ಚಳ – 2023 ರಲ್ಲಿ ರಾಜ್ಯದಲ್ಲಿ 8,929 ಪ್ರಕರಣಗಳು ದಾಖಲು

2020 ರಿಂದ ಮಕ್ಕಳ ಮೇಲಿನ ಅಪರಾಧಗಳಲ್ಲಿ 63% ರಷ್ಟು ಹೆಚ್ಚಳ

ರಾಜ್ಯದ ಅಪರಾಧ ಪ್ರವೃತ್ತಿ ತೀವ್ರವಾಗಿ ಹೆಚ್ಚಳವಾಗಿದೆ ಎಂದು ಕಂಡುಬಂದಿದೆ; 2020 ಮತ್ತು 2023 ರ ನಡುವೆ ಮಕ್ಕಳ ಮೇಲಿನ ಅಪರಾಧಗಳ ಪ್ರಮಾಣವು ಸುಮಾರು ಶೇ. 63 ರಷ್ಟು ಹೆಚ್ಚಾ ಗಿದೆ. 2020 ರಲ್ಲಿ ಸ್ವಲ್ಪ ಇಳಿಕೆಯಾದ ನಂತರ ಪ್ರಕರಣಗಳ ಸಂಖ್ಯೆ ಸ್ಥಿರವಾಗಿ ಏರಿಕೆಯಾಗಿದ್ದು, 2023 ರಲ್ಲಿ ಐದು ವರ್ಷಗಳ ಅವಧಿಯಲ್ಲಿ ಅತ್ಯಧಿಕ ಪ್ರಮಾಣವನ್ನು ತಲುಪಿದೆ.

Loading...