ನಟ ಡಾ.ವಿಷ್ಣುವರ್ಧನ್ ಸಮಾಧಿ ರಾತ್ರೋ ರಾತ್ರಿ ನೆಲಸಮ; ಅಭಿಮಾನಿಗಳ ಆಕ್ರೋಶ
Dr. Vishnuvardhan: ಕನ್ನಡ ಚಿತ್ರರಂಗದಲ್ಲಿ ಸಾಹಸಸಿಂಹ ಎಂಬ ಬಿರುದು ಪಡೆದಿರುವ ನಟ ಡಾ.ವಿಷ್ಣುವರ್ಧನ್ ಅವರು 200ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ನಟಿಸಿ, ಕನ್ನಡಿಗರ ಮನಗೆದ್ದಿದ್ದಾರೆ. ಆದರೆ, ತಮ್ಮ ನೆಚ್ಚಿನ ನಟನ ಸಮಾಧಿ ತೆರವು ಮಾಡಿರುವುದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.