ಚುನಾವಣಾ ಅಕ್ರಮ ಆರೋಪ : ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ನೋಟಿಸ್
Notice to CM Siddaramaiah: ಚುನಾವಣಾ ಪ್ರಚಾರ ವೇಳೆ ಗ್ಯಾರಂಟಿಗಳನ್ನು ಘೋಷಿಸುವುದು ಮತದಾರರ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿ ಇದು ಆಮಿಷವಾಗಿದ್ದು, ಈ ರೀತಿ ಪ್ರಚಾರ ಮಾಡುವುದು ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 123 (4)ರ ಪ್ರಕಾರವೂ ಒಪ್ಪತಕ್ಕದ್ದಲ್ಲ ಎಂದು ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ. ಶಂಕರ್ ದೂರಿದ್ದರು. ಇವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.