ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?: ಡಿ.ಕೆ. ಶಿವಕುಮಾರ್
DK Shivakumar: ನಿಮ್ಮ ಪಕ್ಷದಲ್ಲಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಾ ಇದ್ದಾರಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ʼಯಾವ ಹೇಳಿಕೆಯೂ ಇಲ್ಲ. ಯಾವ ಗುಂಪೂ ಇಲ್ಲ. 139 ಶಾಸಕರು ನನ್ನದೇ ಗುಂಪು. ಕಾಂಗ್ರೆಸ್ ಗುಂಪು. ನಮಗೆ ಪಕ್ಷ ಹಾಗೂ ಪಕ್ಷದ ಹಿತ ಮುಖ್ಯ. ಪಕ್ಷದ ಅಭಿವೃದ್ಧಿಗೆ ಹಾಗೂ ಅದರ ಒಳಿತಿಗೆ ಏನು ಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಿದ್ದೇವೆ. ನಾವೆಲ್ಲ ಒಟ್ಟಿಗೆ ಸೇರಿ ಕೆಲಸ ಮಾಡುತ್ತಿದ್ದೇವೆ, ಮಾಡುತ್ತೇವೆʼ ಎಂದು ಹೇಳಿದ್ದಾರೆ.