ಕುಡಿಯುವ ನೀರಿನ ಸಮಸ್ಯೆಗೆ ಸಮರೋಪಾದಿ ಕ್ರಮ ವಹಿಸಿ
ರಾಜ್ಯದಲ್ಲಿ ಈ ವರ್ಷ ವಾಡಿಕೆ ಮಳೆಗಿಂತ ಕಡಿಮೆ ಪ್ರಮಾಣದ ಮಳೆ ಆಗಲಿದೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಾಡಿಕೆ ಮಳೆ ಆಗಬಹುದು ಎಂದು ಅಭಿಪ್ರಾಯಿಸಿದೆ. ಮಳೆಯ ವೈಪರೀತ್ಯಗಳು ಏನೇ ಆದರೂ ನೀರು ಪೂರೈಕೆ ಹಾಗೂ ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಕೊರೆದಿರುವ ೩೧೩ ಕೊಳವೆ ಬಾವಿಗಳಿಗೆ ಒಂದೆರಡು ದಿನಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿ ಜನರಿಗೆ ನೀರು ಪೂರೈಸಲು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.