ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

IndiGo Flights: ಇಂಡಿಗೋ ವಿಮಾನ ಹಾರಾಟ ವ್ಯತ್ಯಯ: ಪಿಜಿ ನೀಟ್‌ ಪರೀಕ್ಷೆ ಮುಂದೂಡಿಕೆ

ಇಂಡಿಗೋ ವಿಮಾನ ಹಾರಾಟ ವ್ಯತ್ಯಯ: ಪಿಜಿ ನೀಟ್‌ ಪರೀಕ್ಷೆ ಮುಂದೂಡಿಕೆ

KEA PG NEET: ವಿಮಾನಗಳೇ ಇಲ್ಲದುದರಿಂದ ವಿದ್ಯಾರ್ಥಿಗಳು ಪ್ರವೇಶ ಪ್ರಕ್ರಿಯೆ ಮುಂದೂಡಲು KEAಗೆ ಮನವಿ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಮನವಿ ಪರಿಗಣಿಸಿರುವ ಪ್ರಾಧಿಕಾರ ದಾಖಲಾತಿಗೆ ಡಿಸೆಂಬರ್ 8ರವರೆಗೆ ಅವಕಾಶ ನೀಡಿದೆ. ಈ ಮೊದಲು ಡಿ.5ರಂದು ಶುಲ್ಕಪಾವತಿ ಮಾಡಿ ಡಿ.6ಕ್ಕೆ ವರದಿಯಾಗಬೇಕೆಂದು ವಿದ್ಯಾರ್ಥಿಗಳಿಗೆ ಸೂಚಿಲಾಗಿತ್ತು. ಇದೀಗ ಡಿಸೆಂಬರ್ 8ರ ಮಧ್ಯಾಹ್ನ 12.30ರೊಳಗೆ ಶುಲ್ಕ ಪಾವತಿಗೆ ಅವಕಾಶ ನೀಡಿದೆ

ಚಿನ್ನಸ್ವಾಮಿ ಬೆಂಗಳೂರಿನ ಹೆಮ್ಮೆ, ಐಪಿಎಲ್ ಸ್ಥಳಾಂತರವಿಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿಯಲ್ಲೇ ಐಪಿಎಲ್ ಪಂದ್ಯ; ಡಿಕೆಶಿ ಸ್ಪಷ್ಟನೆ

'ಯಾವುದೇ ಐಪಿಎಲ್ ಪಂದ್ಯ ಸ್ಥಳಾಂತರಿಸಲಾಗುವುದಿಲ್ಲ. ನಾವು ಅದನ್ನು ಇಲ್ಲಿಯೇ ನಡೆಸುತ್ತೇವೆ. ಇದು ಕರ್ನಾಟಕ ಮತ್ತು ಬೆಂಗಳೂರಿನ ಹೆಮ್ಮೆ, ಮತ್ತು ನಾವು ಅದನ್ನು ರಕ್ಷಿಸುತ್ತೇವೆ. ಏನು ಮಾಡಬೇಕೋ, ಅದನ್ನು ಮುಂದೆ ಹೋಗುವಂತೆ ನೋಡಿಕೊಳ್ಳುತ್ತೇವೆ' ಎಂದು ಡಿಕೆಶಿ ಹೇಳಿದರು.

Congress Worker Ganesh Murder Case: ಕಾಂಗ್ರೆಸ್‌ ಕಾರ್ಯಕರ್ತ ಗಣೇಶ್‌ ಗೌಡ ಕೊಲೆ ಕೇಸ್‌: ಬಜರಂಗ ದಳ ಕಾರ್ಯಕರ್ತ ಮಿಥುನ್‌ ಬಂಧನ

ಕಾಂಗ್ರೆಸ್‌ ಕಾರ್ಯಕರ್ತ ಗಣೇಶ್‌ ಕೊಲೆ: ಬಜರಂಗ ದಳ ಸದಸ್ಯ ಮಿಥುನ್‌ ಬಂಧನ

ಡಿ.5ರಂದು ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತ ಗಣೇಶ್ (40) ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ A1 ಸಂಜಯ್ ಮತ್ತು A3 ನಾಗಭೂಷಣ್​​ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, A2 ನಿತಿನ್, A4 ದರ್ಶನ್ ಹಾಗೂ ಅಜಯ್​​​​ಗಾಗಿ ಹುಡುಕಾಟ ಮುಂದುವರಿದಿದೆ.

Road Accident: ರಸ್ತೆಯಲ್ಲಿ ಬಿದ್ದವರ ಮೇಲೆ ಟ್ರಾಕ್ಟರ್‌ ಹರಿದು ಇಬ್ಬರು ಯುವಕರ ಸಾವು

ರಸ್ತೆಯಲ್ಲಿ ಬಿದ್ದವರ ಮೇಲೆ ಟ್ರಾಕ್ಟರ್‌ ಹರಿದು ಇಬ್ಬರು ಯುವಕರ ಸಾವು

ಎರಡು ಬೈಕುಗಳು (Bike Accident) ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ, ಬೈಕ್ ಚಾಲಕ ಮತ್ತು ಹಿಂಬದಿ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲಿ ಹಿಂದೆ ಬರುತ್ತಿದ್ದ ಟ್ರ್ಯಾಕ್ಟರ್ ಕೆಳಕ್ಕೆ ಬಿದ್ದವರ ಮೇಲೆ ಹರಿದಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LKG UKG Classes: ಮುಂದಿನ ವರ್ಷ 4056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ

ಮುಂದಿನ ವರ್ಷ 4056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ

2025-26 ಪೂರ್ವ ಪ್ರಾಥಮಿಕ LKGಯ ಒಂದು ವಿಭಾಗವನ್ನು ಮಾತ್ರ ಪ್ರಾರಂಭಿಸಬೇಕು. ಈ LKG ತರಗತಿಗೆ 4 ವರ್ಷದಿಂದ 5 ವರ್ಷದ ವಯೋಮಿತಿಯ ಒಳಗಿನ ಮಕ್ಕಳನ್ನು ದಾಖಲು ಮಾಡಿಕೊಳ್ಳಬೇಕು. ಕನಿಷ್ಠ 20 ರಿಂದ ಗರಿಷ್ಠ 40 ಮಕಳನ್ನು ದಾಖಲಾತಿ ಮಾಡಿಕೊಳ್ಳಬೇಕು. ಕನಿಷ್ಠ 20 ಮಕ್ಕಳು ಲಭ್ಯವಿಲ್ಲದಿದ್ದಲ್ಲಿ ತರಗತಿ ಪ್ರಾರಂಭಿಸಕೂಡದು. ಆದರೆ 2026-27 ನೇ ಸಾಲಿಗೆ LKG ಲಭ್ಯವಾದಲ್ಲಿ LKG ತರಗತಿಯನ್ನು ಈ ವರ್ಷದಲ್ಲಿಯೇ ಪ್ರಾರಂಭಿಸುವುದು ಎಂದು ಸೂಚನೆ ನೀಡಲಾಗಿದೆ.

CPI PV Salimath: ಕಾರು ಅಪಘಾತದಲ್ಲಿ ಸಜೀವ ದಹನಗೊಂಡ ಸಿಪಿಐ ಸಾಲಿಮಠ: ಕಾರು ಅಪಘಾತ ಸಂಭವಿಸಿದ್ದು ಹೇಗೆ?

ಸಿಪಿಐ ಪಿವಿ ಸಾಲಿಮಠ ಸಜೀವ ದಹನಗೊಂಡ ಕಾರು ಅಪಘಾತ ಸಂಭವಿಸಿದ್ದು ಹೇಗೆ?

ಸಿಪಿಐ ಪಿವಿ ಸಾಲಿಮಠ ಹುಬ್ಬಳ್ಳಿಯಿಂದ ಗದಗಿಗೆ ಹೋಗುವಾಗ ಡಿವೈಡರ್​ಗೆ ಮೊದಲು ಕಾರು ಡಿಕ್ಕಿಯಾಗಿ, ಪಕ್ಕದಲ್ಲಿದ್ದ ರಸ್ತೆಗೆ ಜಂಪ್ ಆಗಿದೆ. ತಾವು ಹೋಗುತ್ತಿದ್ದ ಮಾರ್ಗದ ಎದುರು ಬದಿಯ ರಸ್ತೆಯನ್ನು ಇಳಿದು ಮತ್ತೆ ಮೇಲಕ್ಕೆ ಬಂದು ನಂತರ ಮತ್ತೆ ರಸ್ತೆ ಪಕ್ಕದಲ್ಲಿ ಹೋಗಿ ನಿಂತಿದೆ. ಈ ಸಮಯದಲ್ಲಿ ಪೆಟ್ರೋಲ್ ಸೋರಿಕೆಯಿಂದ ಹೊತ್ತಿಕೊಂಡ ಬೆಂಕಿಯಿಂದಾಗಿ ಸಜೀವವಾಗಿ ದಹನವಾಗಿದ್ದಾರೆ. ಕಾರಿನಿಂದ ಹೊರಗಡೆ ಬರುವುದಕ್ಕಾಗದೆ ಒಳಗಡೆಯೇ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.

HD Kumaraswamy: ವೇದಿಕೆಯಲ್ಲೇ ನಿರ್ಮಲಾನಂದನಾಥ ಶ್ರೀಗಳ ಕ್ಷಮೆ ಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ವೇದಿಕೆಯಲ್ಲೇ ನಿರ್ಮಲಾನಂದನಾಥ ಶ್ರೀಗಳ ಕ್ಷಮೆ ಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ನಮ್ಮ ಹಾಗೂ ದೊಡ್ಡ ಸ್ವಾಮೀಜಿಗಳ ಸಂಬಂಧ ಹಲವರಿಗೆ ಗೊತ್ತಿಲ್ಲ. ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸಲಿಕ್ಕೆ ಬೀದಿಗೆ ಬಂದವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ಇಷ್ಟವಿತ್ತು. ನನ್ನಿಂದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ (Nirmalanandanatha Swamiji) ಅಪಚಾರ ಆಗಿದ್ರೆ ಸಾರ್ವಜನಿಕ ಕ್ಷಮೆಯಾಚಿಸುತ್ತೇನೆ ಎಂದರು.

WCD Recruitment 2025: 272 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಇಲ್ಲಿದೆ ಸರ್ಕಾರಿ ಉದ್ಯೋಗಾವಕಾಶ; ಅಪ್ಲೈ ಮಾಡಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಸೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 272 ಅಂಗನವಾಡಿ ಹುದ್ದೆಗಳು ಖಾಲಿ ಇದ್ದು, ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

Karnataka Weather: ಇಂದಿನ ಹವಾಮಾನ; ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಇಂದು ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು; ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Gudibande News: ಅಂಬೇಡ್ಕರ್ ತತ್ವ ಪಾಲನೆಯೇ ಅವರಿಗೆ ಸಲ್ಲಿಸುವ ನಿಜವಾದ ಗೌರವ: ತಹಶೀಲ್ದಾರ್ ಸಿಗ್ಬತ್ತುಲ್ಲಾ ಹೇಳಿಕೆ

ಅಂಬೇಡ್ಕರ್ ತತ್ವ ಪಾಲನೆಯೇ ಅವರಿಗೆ ಸಲ್ಲಿಸುವ ನಿಜವಾದ ಗೌರವ

ಅಂಬೇಡ್ಕರ್ ಅವರ ಜೀವನವೇ ಒಂದು ದೊಡ್ಡ ಹೋರಾಟ. ನಾವು ಕೇವಲ ಅವರ ಬಗ್ಗೆ ಭಾಷಣ ಗಳನ್ನು ಕೇಳಿದರೆ ಸಾಲದು, ಪ್ರತಿಯೊಬ್ಬರೂ ಸಂವಿಧಾನವನ್ನು ಓದಿ ಅರ್ಥಮಾಡಿಕೊಳ್ಳಬೇಕು. ಇಂತಹ ಕಾರ್ಯಕ್ರಮಗಳು ಕೇವಲ ಆಚರಣೆಗೆ ಸೀಮಿತವಾಗದೆ, ಸಮಾಜದಲ್ಲಿ ಜಾಗೃತಿ ಮೂಡಿಸು ವಂತಾಗಬೇಕು.

Chikkanayakanahalli News: ಅಂಬೇಡ್ಕರ್ ಆದರ್ಶ ಅಳವಡಿಕೆಗೆ ಕರೆ

ಅಂಬೇಡ್ಕರ್ ಆದರ್ಶ ಅಳವಡಿಕೆಗೆ ಕರೆ

ಶಿಕ್ಷಣವು ಬದಲಾವಣೆಯ ಅತ್ಯಂತ ಪ್ರಬಲ ಅಸ್ತ್ರವಾಗಿದೆ. ಪ್ರತಿಯೊಬ್ಬರು ಉತ್ತಮ ಶಿಕ್ಷಣವನ್ನು ಪಡೆದು, ಅಂಬೇಡ್ಕರ್ ಅವರ ಆಶಯದಂತೆ ಪ್ರಗತಿ ಸಾಧಿಸ ಬೇಕು ಎಂದು ಒತ್ತಿ ಹೇಳಿದರು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ತ್ರಿಸೂತ್ರವನ್ನು ಉಲ್ಲೇಖಿಸಿ ಅಂಬೇಡ್ಕರ್ ಚಿಂತನೆಗಳ ಮಹತ್ವ ವನ್ನು ಪ್ರತಿಪಾದಿಸಿ ಅವರ ಅಪ್ರತಿಮ ಕೊಡುಗೆ ಗಳನ್ನು ಸ್ಮರಿಸಿದರು.

Maize Growers Protest: ಮೋಟೆಬೆನ್ನೂರು ಬಳಿ ಡಿ.8ಕ್ಕೆ ಮೆಕ್ಕೆಜೋಳ ಬೆಳೆಗಾರರ ಪ್ರತಿಭಟನೆ; ಹೆದ್ದಾರಿ ಬಂದ್‌ಗೆ ಅವಕಾಶವಿಲ್ಲ ಎಂದ ಹಾವೇರಿ ಎಸ್‌ಪಿ

ಹೆದ್ದಾರಿ ಬಂದ್‌ಗೆ ಅವಕಾಶವಿಲ್ಲ ಎಂದ ಹಾವೇರಿ ಎಸ್‌ಪಿ

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಮತ್ತು ಖರೀದಿ ಪ್ರಮಾಣ ಹೆಚ್ಚಿಸಲು ಆಗ್ರಹಿಸಿ ಡಿಸೆಂಬರ್ 8 ರಂದು ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಅಹೋರಾತ್ರಿ ಹೋರಾಟ ನಡೆಸಲು ರೈತರು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆದ್ದಾರಿ ಬಂದ್‌ಗೆ ಅವಕಾಶವಿಲ್ಲ ಎಂದು ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿ ಹೇಳಿದ್ದಾರೆ.

Expensive watch row: ನನ್ನ ದುಡ್ಡಲ್ಲಿ ನಾನು ಎಷ್ಟು ವಾಚ್ ಬೇಕಾದ್ರೂ ಖರೀದಿ ಮಾಡ್ತೇನೆ ಎಂದ ಡಿಕೆಶಿ

ನನ್ನ ದುಡ್ಡಲ್ಲಿ ನಾನು ಎಷ್ಟು ವಾಚ್ ಬೇಕಾದ್ರೂ ಖರೀದಿ ಮಾಡ್ತೇನೆ: ಡಿಕೆಶಿ

ನಾನು 1 ಸಾವಿರ ರೂಪಾಯಿ ವಾಚನ್ನೂ ಕಟ್ಟುವೆ, 10 ಲಕ್ಷ ರೂಪಾಯಿ ವಾಚನ್ನೂ ಕಟ್ಟುವೆ. ಅದು ನನಗೆ ಬಿಟ್ಟ ವಿಚಾರ. ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ. ಪಾಪ, ವಿರೋಧ ಪಕ್ಷದ ನಾಯಕರಿಗೆ ಅನುಭವದ ಕೊರತೆ ಇದೆ. ಅವರಿಗೆ ಚುನಾವಣೆ ನಿಂತ ಅನುಭವವೂ ಇಲ್ಲ. ಹೀಗಾಗಿ ಗೊತ್ತಿಲ್ಲದೆ ಮಾತನಾಡಿದ್ದಾರೆ. ಅವರು ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿರುವುದರಿಂದ ಪ್ರತಿಕ್ರಿಯೆ ನೀಡಿದ್ದೇನೆ. ಬೇರೆಯವರಾಗಿದ್ದರೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

obesity Awareness: ಒಬೆಸಿಟಿ ಕುರಿತು ಮಕ್ಕಳಿಗೆ ಶಾಲೆಯಂದಲೇ ಅರಿವು ಮೂಡಿಸುವ ಕೆಲಸವಾಗಬೇಕು : ಮಕ್ಕಳ ತಜ್ಞ ಡಾ. ರಾಜೀವ್‌ ಅಗರ್ವಾಲ್‌

ಒಬೆಸಿಟಿ ಕುರಿತು ಮಕ್ಕಳಿಗೆ ಶಾಲೆಯಂದಲೇ ಅರಿವು ಮೂಡಿಸುವ ಕೆಲಸವಾಗಬೇಕು

ಇಂದಿನ ದಿನಗಳಲ್ಲಿ ನಾಲಿಗೆಗೆ ರುಚಿ ಹೆಚ್ಚಿಸುವ ಆಹಾರಗಳು ಮಕ್ಕಳ ಕೈಗೆ ಸುಲಭವಾಗಿ ಸಿಗು ತ್ತಿರುವ ಕಾರಣ, ಜಂಕ್‌ಫುಡ್‌ನತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಅವರಿಗೆ ಯಾವುದು ಆರೋಗ್ಯಕ್ಕೆ ಆಪ್ತ ಹಾಗೂ ಆಪತ್ತು ಎಂಬುದನ್ನು ತಿಳಿ ಹೇಳುವ ಕೆಲಸ ಶಾಲೆಯಿಂದಲೇ ಆಗಬೇಕು. ಮನೆಯಲ್ಲಿ ಪೋಷಕರಷ್ಟೇ ಶಿಕ್ಷಕರಿಗೂ ಜವಾಬ್ದಾರಿ ಇರಲಿದೆ.

Karnataka CM Row: ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡವೇ ಬೇಡ ಎಂದ ಕೆ.ಎನ್‌. ರಾಜಣ್ಣ!

ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ ಎಂದ ಕೆ.ಎನ್‌. ರಾಜಣ್ಣ!

KN Rajanna: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿದ್ದ ಚರ್ಚೆ, ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ನಡುವೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸ್ಪಲ್ಪ ತಣ್ಣಗಾಗಿದೆ. ಈ ನಡುವೆ ಮಾಜಿ ಸಚಿವ ಕೆ.ಎನ್‌.ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ.

ಎ.ಪಿ.ಎಸ್‌ ನಲ್ಲಿ ಸ್ಮರಣೀಯದಿನ: ಅನಂತಚಾರ್ಯ ಸಭಾಂಗಣದಲ್ಲಿ ಭಾರತದರ್ಶನ ಕಾರ್ಯಕ್ರಮ ಆಯೋಜನೆ

ಅನಂತಚಾರ್ಯ ಸಭಾಂಗಣದಲ್ಲಿ ಭಾರತದರ್ಶನ ಕಾರ್ಯಕ್ರಮ ಆಯೋಜನೆ

ಕನಕಪುರ ರಸ್ತೆಯ ಸೋಮನಹಳ್ಳಿಯಲ್ಲಿ ಅನಂತಜ್ಞಾನ ಗಂಗೋತ್ರಿ 8ಕ್ರೀಡಾ ಕ್ಲಬ್ ಗಳನ್ನು ಉದ್ಘಾಟಿಸ ಲಾಯಿತು. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಆರೋಗ್ಯ ಮತ್ತು ಶಕ್ತಿ ವೃದ್ಧಿಗೆ ಎ.ಪಿ.ಎಸ್‌ ಜ್ಞಾನ ಗಂಗೋತ್ರಿ ಕ್ಯಾಂಪಸ್ನಲ್ಲಿ ವಿವಿಧ ಕ್ರೀಡಾ ಮತ್ತು ಫಿಟ್ನೆಸ್‌ ಕ್ಲಬ್ಗಳನ್ನು ಉದ್ಘಾಟಿಸ ಲಾಯಿತು.

ಒಂದೇ ದಿನ ಸಾವಿರ ತಂಡಗಳಿಂದ ಚಿನ್ನ ಖರೀದಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಇಂದ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ ಸಾಧನೆ

ಸ್ವರ್ಣಾರ್ಪಣಂ ಸಾಂಸ್ಕೃತಿ ಕಾರ್ಯಕ್ರಮ : ಆಭರಣಗಳ ಸ್ವರ್ಣ ನಡಿಗೆ ಪ್ರದರ್ಶನ

ಕೌಶಲ್ಯ ಮತ್ತು ಕಲಾ ಸಂವೇದನೆಯ ಈ ವಿನೂತನ ಸಂಗಮ ಕಾರ್ಯಕ್ರಮದಲ್ಲಿ ಕರುಣೆ, ಶಕ್ತಿ ಮತ್ತು ನಿತ್ಯ ಸೌಂದರ್ಯದ ಚಿಹ್ನೆಯಾದ ದೇವಿ ದುರ್ಗೆಯ ನವ ರೂಪಗಳಿಗೆ ಗೌರವ ನಮನ ಸಲ್ಲಿಸುವ “ಸ್ವರ್ಣಾರ್ಪಣಂ – ಶಕ್ತಿಯ ನವರತ್ನ ” ಕಾರ್ಯಕ್ರಮ ಪ್ರಸ್ತುತವಾಗಲಿದೆ. ಸಂಜೆ 5.30ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ಕರ್ನಾಟಕ ಕಲಾಶ್ರೀ ಡಾ. ಅನುರಾಧ ವಿಕ್ರಾಂತ್ ಹಾಗೂ ದೃಷ್ಟಿ ಡ್ಯಾನ್ಸ್ ಎನ್ಸೆಂಬರ್ ತಂಡ ಈ ವಿನೂತನ ಕಾರ್ಯಕ್ರಮವನ್ನು ಪ್ರಸ್ತುಪಡಿಸುತ್ತಿದೆ.

ಸಂಸ್ಕೃತ ವಿವಿ ಆವರಣದಲ್ಲಿ ನಡೆದ ಏಳು ದಿನಗಳ ರಾಷ್ಟ್ರೀಯ ಭಾರತೀಯ ಅನುಸಂಧಾನ ಪದ್ದತಿ ಕುರಿತ ಕಾರ್ಯಾಗಾರ

ಏಳು ದಿನಗಳ ರಾಷ್ಟ್ರೀಯ ಭಾರತೀಯ ಅನುಸಂಧಾನ ಪದ್ದತಿ ಕುರಿತ ಕಾರ್ಯಾಗಾರ

ಸಂಸ್ಕೃತ ಶಾಸ್ತ್ರಗಳಲ್ಲಿ ಹಾಗೂ ಭಾರತೀಯ ವಾಹ್ಮಯದಲ್ಲಿ ಅನುಸಂಧಾನದ ಗುಣಮಟ್ಟ ವೃದ್ಧಿಸುವ ಹಿನ್ನೆಲೆಯಲ್ಲಿ ದೇಶದ ಅನೇಕ ಭಾಗಗಳಿಂದ ನಾನಾ ಶಾಸ್ತ್ರಗಳಲ್ಲಿ ಪರಿಣತರಾದ 70ಕ್ಕೂ ಅಧಿಕ ವಿದ್ವಾಂಸರು ವ್ಯಾಕರಣ, ವೇದಾಂತ, ನ್ಯಾಯ ಮತ್ತಿತರೆ ವಿಚಾರಗಳ ಬಗ್ಗೆ ಗಹನವಾಗಿ ಚರ್ಚಿಸಿದರು.

ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಆರನೇ ಗ್ಯಾರಂಟಿ 'ಭೂಮಿ ಗ್ಯಾರಂಟಿ' ಅನುಷ್ಠಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಆರನೇ ಗ್ಯಾರಂಟಿ 'ಭೂಮಿ ಗ್ಯಾರಂಟಿ' ಅನುಷ್ಠಾನ: ಡಿ.ಕೆ. ಶಿವಕುಮಾರ್

DK Shivakumar: ಹಾಸನದಲ್ಲಿ ಶನಿವಾರ ಆಯೋಜಿಸಿದ್ದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ 142 ಭರವಸೆಗಳನ್ನು ಈಡೇರಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಜೇಬಿಗೆ 1 ಲಕ್ಷ ಕೋಟಿ ಹಾಕಿದ್ದೇವೆ ಎಂದು ಡಿಸಿಎಂ ಹೇಳಿದ್ದಾರೆ.

HD Kumaraswamy: ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದ ಎಚ್.ಡಿ. ಕುಮಾರಸ್ವಾಮಿ

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಎಚ್‌ಡಿಕೆ

Karnataka Government: ಮಂಡ್ಯದ ವಿಸಿ ಫಾರಂನಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ, ಕುಮಾರಣ್ಣ ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ. ಜಿಲ್ಲೆಗೆ ಏನಾದರೂ ಕೈಗಾರಿಕೆ ತರಬಹುದು ಎಂಬ ನಿರೀಕ್ಷೆ ಜನರಲ್ಲಿದೆ. ಕನಿಷ್ಠ ಒಂದು ಕಾರ್ಖಾನೆಯನ್ನಾದರು ಮಂಡ್ಯಕ್ಕೆ ತರಲು ಒಂದು ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಇನ್ನೂ ಸರ್ಕಾರ ನಮಗೆ ಜಾಗ ನೀಡಿಲ್ಲ ಎಂದು ಹೇಳಿದ್ದಾರೆ.

HD Kumaraswamy: ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ?; ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ತಿರುಗೇಟು

ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ?: ಎಚ್‌ಡಿಕೆ

ಕುಮಾರಸ್ವಾಮಿ ಮನುವಾದಿ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ? ಹಾಗಾದರೆ, ಸಿದ್ದರಾಮಯ್ಯ ಅವರು ಮಕ್ಕಳಿಗೆ ಏನು ಬೋಧಿಸಲು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

HD Kumaraswamy: ನನ್ನ ಹೇಳಿಕೆಯಿಂದ ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಕ್ಷಮೆ ಕೇಳುವೆ: ಎಚ್.ಡಿ. ಕುಮಾರಸ್ವಾಮಿ

ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ ಎಚ್.ಡಿ. ಕುಮಾರಸ್ವಾಮಿ

ರಾಜ್ಯದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ಕೂಗು ಜೋರಾದ ವೇಳೆ ಡಿ.ಕೆ.ಶಿವಕುಮಾರ್‌ ಪರ ಆದಿಚುಂಚನಗಿರಿ ಶ್ರೀಗಳು ಬೆಂಬಲ ಸೂಚಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರು, ನಾನು ಎರಡು ಬಾರಿ ಸಿಎಂ ಆದೆ. ಅಧಿಕಾರ ಹೋದಾಗ ನಾನು ಮಠಾಧೀಶರ ನೆರವು ಕೇಳಿಲ್ಲ ಎಂದು ಹೇಳಿದ್ದರು. ಇದೀಗ ತಮ್ಮ ಹೇಳಿಕೆಯಿಂದ ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಕ್ಷಮೆಯಾಚಿಸುವೆ ಎಂದು ತಿಳಿಸಿದ್ದಾರೆ.

HD Kumaraswamy: ಮೈಶುಗರ್‌ ಶಾಲೆ ಶಿಕ್ಷಕರಿಗೆ ನೆರವಾದ ಎಚ್.ಡಿ. ಕುಮಾರಸ್ವಾಮಿ; 19,94,200 ರೂ. ಚೆಕ್‌ ಹಸ್ತಾಂತರ

ಮೈಶುಗರ್‌ ಶಾಲೆ ಶಿಕ್ಷಕರಿಗೆ ವೇತನ ನೀಡಲು ಎಚ್.ಡಿ. ಕುಮಾರಸ್ವಾಮಿ ನೆರವು

Mandya Mysugar School: ಹದಿನೈದು ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ. ಶನಿವಾರ ಬೆಳಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, ಶನಿವಾರ 19,94,200 ಮೊತ್ತದ ಚೆಕ್‌ ಅನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದ್ದಾರೆ.

Karnataka Weather: ಮುಂದಿನ 2 ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಉಳಿದೆಡೆ ಒಣ ಹವೆ

ಮುಂದಿನ 2 ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಬಹುತೇಕ ಕಡೆ ಶನಿವಾರ ಕೂಡ ಒಣ ಹವೆಯ ವಾತಾವರಣ ಕಂಡುಬಂದಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ.

Loading...