ಸಿಇಟಿ ಪರೀಕ್ಷೆಗೆ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು, ಖಂಡನೆ
ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.