ಪ್ರೀತಿಸುವಂತೆ ಸಹಪಾಠಿ ಒತ್ತಾಯ; ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ಘಟನೆ ನಡೆದಿದೆ. ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲವ್ ಮಾಡುವಂತೆ ಸಹಪಾಠಿ ಚುಡಾಯಿಸುತ್ತಿದ್ದ. ಪ್ರೀತಿಸುವಂತೆ ಒತ್ತಡ ಹಾಕಿದ್ದರಿಂದ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.