ತಮಿಳುನಾಡಿಗೆ ದಿನಕ್ಕೆ 3,500 ಕ್ಯುಸೆಕ್ ಕಾವೇರಿ ನೀರು ಹರಿಸಲು ಆದೇಶ
ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಶಾಕ್ ಎದುರಾಗಿದೆ. ತಮಿಳುನಾಡಿಗ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯುಸಕ್ ನೀರು ಹರಿಸುವಂತ ಕಾವೇರಿ ನೀರು ನಿಯಂತ್ರಣ ಸಮಿತಿ ಮಂಗಳವಾರ ಶಿಫಾರಸು ಮಾಡಿದೆ.
ಸುಮಾರು ಹತ್ತು ವರ್ಷಕ್ಕಿಂತಲೂ ಹಿಂದೆ ಮಂಗಳೂರಿನಲ್ಲಿ ನಡೆದಿರುವ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರಿಗೆ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಲಾಗಿದೆ. 2014ರ ಮೇ 15ರಂದು ರಸ್ತೆ ಅಪಘಾತದಲ್ಲಿ ಗಂಗಾಧರ ಪಾಂಗಳ ಎಂಬವರು ಸಾವನ್ನಪ್ಪಿದ್ದು, ತನಿಖೆ ವೇಳೆ ಇದು ವೈಯಕ್ತಿಕ ದ್ವೇಷದಿಂದ ಪ್ರೇರಿತವಾದ ಯೋಜಿತ ಕೊಲೆ ಎಂಬುದು ಬಹಿರಂಗಗೊಂಡಿತ್ತು.
ಮೋದಿ ಮೇಲಿನ ಪ್ರೀತಿಯಿಂದ ಇದುವರೆಗೆ 7 ಮನೆಗಳನ್ನು ಉಚಿತವಾಗಿ ಕಟ್ಟಿಕೊಟ್ಟಿರುವ ಅವರು, ಒಟ್ಟು 10 ಮನೆಗಳನ್ನು ಉಚಿತವಾಗಿ ಕಟ್ಟಿಸಲು ನಿರ್ಧಾರ ಮಾಡಿದ್ದಾರೆ. ತಾವು ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಅವಧಿಯಲ್ಲಿ ಬಂದ ಸಂಪೂರ್ಣ ಗೌರವ ಧನವನ್ನು 162 ಕ್ಯಾನ್ಸರ್ ಪೀಡಿತ ರೋಗಿಗಳ ಚಿಕಿತ್ಸೆಗೆ ಮೀಸಲಿಟ್ಟಿದ್ದವರು ಸಂತೋಷ್.
Commonwealth Games: 28ನೇ ವಯಸ್ಸಿನಲ್ಲಿ ಅಜಿತ್ ಸಿಂಗ್ ಅವರನ್ನು ವಿವಾಹವಾದ ಬಳಿಕ ಧಂಕರ್ ಅವರ ಜೀವನವು ಸಕಾರಾತ್ಮಕ ತಿರುವು ಪಡೆದುಕೊಂಡಿತು. ಪತ್ರಿಕೆಯಲ್ಲಿ ಈ ಕ್ರೀಡೆಯ ಬಗ್ಗೆ ಓದಿದ ನಂತರ ಸಿಂಗ್, ಪತ್ನಿಯನ್ನು ಪ್ಯಾರಾ ಅಥ್ಲೆಟಿಕ್ಸ್‌ಗೆ ಪರಿಚಯಿಸಿದರು. ಅವರ ಸಾಮರ್ಥ್ಯದಲ್ಲಿ ನಂಬಿಕೆ ಇಟ್ಟ ಅವರು, ವೃತ್ತಿಪರವಾಗಿ ಅಥ್ಲೆಟಿಕ್ಸ್ ಅನ್ನು ಮುಂದುವರಿಸಲು ಪ್ರೋತ್ಸಾಹಿಸಿದರು.
ಪಟ್ಟಣದ ಸಮೀಪದ ಜಿ.ಹರಿವೇಸಂದ್ರ ಗ್ರಾಮದ ಮಂಜುನಾಥ್ ನೇತ್ರಾವತಿ ದಂಪತಿಯ ಮಗಳು ಯೋಗಿತಾ ಹತ್ತು ವರ್ಷ ವಯಸ್ಸಿನಲ್ಲೇ ಮೆದುಳು ಕ್ಯಾನ್ಸರ್ ಪೀಡಿತರಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಆಧಾರ್ ಕಾರ್ಡ್ ನಲ್ಲಿ ತಾಂತ್ರಿಕ ದೋಷ ಹಿನ್ನಲೆ ಕುಟುಂಬ ಅಲೆದಾಡಿ ಬೇಸತ್ತಿತ್ತು. ಈ ಮಾಹಿತಿ ತಿಳಿದ ಮಾಧ್ಯಮ ಕೂಡಲೇ ಮಗುವಿನ ನೆರವಿಗೆ ಜಿಲ್ಲಾಡಳಿತವನ್ನು ಎಚ್ಚರಿಸಿತು.
Bengaluru's Second Airport: ರಾಜ್ಯ ಸರ್ಕಾರದಿಂದ ಬೆಂಗಳೂರಿನ 2ನೇ ವಿಮಾನ ನಿಲ್ದಾಣದ ಪ್ರಸ್ತಾವನೆ ಇದುವರೆಗೂ ಸಲ್ಲಿಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಲೋಕಸಭೆಯಲ್ಲಿ ಸಂಸದ ಪಿ.ಸಿ. ಮೋಹನ್ ಕೇಳಿದ ಪ್ರಶ್ನೆಗೆ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೊಲ್ ಉತ್ತರ ನೀಡಿದ್ದಾರೆ.
ನಗರದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಎಸ್‌ಐಆರ್ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು,ರಾಜಕೀಯದಲ್ಲಿ ಪ್ರಚಾರಕ್ಕಿಂತ ಜನರ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳೇ ಮುಖ್ಯವಾಗಿದ್ದು, ಕಳೆದ ಅವಧಿಯಲ್ಲಿ ಯಾರು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ ಎಂಬುದನ್ನು ಮತದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು
ಇಂದಿನ ಯುವಕರು ಸಹವಾಸದೋಷ, ಸ್ನೇಹಿತರ ಒತ್ತಡ ಹಾಗೂ ಕುತೂಹಲದಿಂದ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ. ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿ ಕೊಳ್ಳುವತ್ತ ಗಮನಹರಿಸಿ ದುಶ್ಚಟಗಳಿಂದ ದೂರವಿರಬೇಕು
ಪಟ್ಟಣದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣಾ ಸಮಿತಿ ಹಾಗೂ ಪೊಲೀಸ್ ಇಲಾಖೆ ಸಂಯುಕ್ತ ವಾಗಿ ಆಯೋಜಿಸಿದ್ದ ಕಾರ್ಗಿಲ್ ವಿಜಯೋತ್ಸವ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನ ಮತ್ತು ಬೈಕ್ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿಯೊಂದು ಕುಟುಂಬದಿಂದ ಕನಿಷ್ಠ ಒಬ್ಬರು ದೇಶ ರಕ್ಷಣೆಗೆ ಮುಂದಾಗುವ ಮನೋಭಾವ ಬೆಳೆಸಿಕೊಳ್ಳಬೇಕು
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್ 15ರಂದು ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಮುಖ್ಯ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಗುವುದು ಎಂದು ತಿಳಿಸಿದರು.
ನಂದಮೂರಿ ಬಾಲಕೃಷ್ಣ ಮತ್ತು ನಂದಮೂರಿ ಮೋಕ್ಷಜ್ಞ ಅಭಿಮಾನಿಗಳ ಸಂಘ ಚಿಂತಾಮಣಿ ಇವರ ವತಿಯಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ,ನಟ ಬಾಲಕೃಷ್ಣ ಅವರು ಅಭಿನಯಿಸುತ್ತಿರುವ 111ನೇ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಆದ ಸಣ್ಣ ಪ್ರಮಾಣದ ಕಾಲಿನ ಗಾಯದಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ವಿಶೇಷ ಪ್ರಾರ್ಥನೆ ಮಾಡಲಾಯಿತು.
ಪ್ರಾತ:ಕಾಲದಲ್ಲಿ ದೇವಾಲಯದಲ್ಲಿ ಸದ್ಗುರು ಶ್ರೀಯೋಗಿನಾರೇಯಣ ತಾತಯ್ಯನವರಿಗೆ ವಿಶೇಷ ಪಂಚಾಮೃತ ಅಭಿಷೇಕವನ್ನು ನೆರವೇರಿಸಲಾಯಿತು. ನಂತರ ಅಷ್ಟಾವಧಾನ ಸೇವೆಯನ್ನು ಸಮರ್ಪಿಸಿ ಮಹಾಮಂಗಳಾರತಿಯನ್ನು ಬೆಳಗಲಾಯಿತು. ಮೂರು ದಿನಗಳ ಕಾಲ ನಡೆಯುವ ಗುರುಪೂಜಾ ಸಂಗೀತೋತ್ಸವಕ್ಕೆ ಧರ್ಮಾಧಿಕಾರಿಗಳಾದ ಎಂ.ಆರ್. ಜಯರಾಮ್ ದಂಪತಿಗಳು ಕಾರ್ಯಕ್ರಮ ಉದ್ಘಾಟಿಸಿದರು.
BJP: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ₹80 ಲಕ್ಷದವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಹಿರಿಯ ಶಾಸಕ ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ.
Priyank Kharge: ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿ ಮಾತ್ರವಲ್ಲ, ಇದು ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸವಾಲು ಎಸೆಯುವ ಗಂಭೀರ ಅಪರಾಧ. ಸರ್ಕಾರ ಯಾವುದೇ ಅಕ್ರಮ ಚಟುವಟಿಕೆಯನ್ನು ಸಹಿಸುವುದಿಲ್ಲ. ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮನವಿಯಲ್ಲಿ, ರಾಜ್ಯದಲ್ಲೇ ಅತಿ ಕಡಿಮೆ ಮಳೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಾಖಲಾಗಿದ್ದು, ಜುಲೈ ತಿಂಗಳು ಕಳೆದರೂ ಬಹುತೇಕ ಕಡೆ ಬಿತ್ತನೆ ನಡೆದಿಲ್ಲ. ಕೆರೆ-ಕಟ್ಟೆಗಳು ಬತ್ತಿ, ಅಂತರ್ಜಲ ಮಟ್ಟ ಕುಸಿದು ನೂರಾರು ಕೊಳವೆಬಾವಿಗಳು ಒಣಗಿವೆ. ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದ್ದು, ರೈತರು ಹಾಗೂ ಕೃಷಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವಿವರಿಸಲಾಗಿದೆ
ನಮ್ಮ ಮೆಟ್ರೊ ಹಳದಿ ಮಾರ್ಗದ ಹುಸ್ಕೂರು ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಸೋಮವಾರ ಸಂಜೆ ಯುವಕ ಹಳಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಎಲೆಕ್ಟ್ರಾನಿಕ್ ಸಿಟಿಯಿಂದ ಬೊಮ್ಮಸಂದ್ರ ಕಡೆಗೆ ಸಾಗುವ ಮೆಟ್ರೊ ರೈಲುಗಳು ಸ್ಥಗಿತಗೊಂಡಿವೆ. ಆರ್.ವಿ. ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಮಾತ್ರ ಸಂಚಾರ ಮುಂದುವರಿದಿದೆ. ಮೃತನನ್ನು 30-35 ವರ್ಷದ ಯುವಕ ಎಂದು ಗುರುತಿಸಲಾಗಿದೆ.
Sri Raghaveshwara Bharathi Swamiji: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅಶೋಕೆಯ ಪರಿಸರದಲ್ಲಿ ಜುಲೈ 29ರಿಂದ ಸೆಪ್ಟೆಂಬರ್ 26ರವರೆಗೆ ಅನ್ನಬ್ರಹ್ಮ ಚಾತುರ್ಮಾಸ್ಯ ನಡೆಯಲಿದೆ. ಇದರ ಅಂಗವಾಗಿ ಜುಲೈ 27ರಂದು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿ ಮಾತನಾಡಿದರು.