ಎಚ್‌ಡಿಕೆಗೆ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂ ತಡೆ
Supreme Court: ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಕುಮಾರಸ್ವಾಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.