ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Vishnuvardhan Memorial: ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಭೂಮಿ ಖರೀದಿಸಿದ ನಟ ಸುದೀಪ್‌

ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಭೂಮಿ ಖರೀದಿಸಿದ ನಟ ಸುದೀಪ್‌

Kiccha sudeep: ನಟ ಕಿಚ್ಚ ಸುದೀಪ್ ಅವರು ಬೆಂಗಳೂರಿನ ಕೆಂಗೇರಿಯ ಅಭಿಮಾನ್ ಸ್ಟುಡಿಯೋದಿಂದ ಸ್ವಲ್ಪ ದೂರದಲ್ಲಿ ಅರ್ಧ ಎಕರೆ ಜಾಗ ಖರೀದಿಸಿದ್ದು, ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬದ ದಿನವೇ ಅಲ್ಲಿ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕುವುದಾಗಿ ಮಾಹಿತಿ ಲಭ್ಯವಾಗಿದೆ.

DK Shivakumar: ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡುವವರನ್ನು ದೊಡ್ಡ ನಾಯಕರಂತೆ ಬಿಂಬಿಸುವುದು ಬೇಡ: ಡಿಕೆಶಿ

ಟೀಕೆ ಮಾಡುವವರನ್ನು ದೊಡ್ಡ ನಾಯಕರಂತೆ ಬಿಂಬಿಸುವುದು ಬೇಡ: ಡಿಕೆಶಿ

Monsoon session: ಯಾರು ಯಾವ ಯಾವ ಹೇಳಿಕೆ ನೀಡಿದ್ದಾರೆ ಎಂದು ನಾನು ನೋಡಿದ್ದೇನೆ. ಮುಖ್ಯಮಂತ್ರಿಯವರನ್ನು ಕೊಲೆಗಡುಕ ಎಂದು ಹೇಳಿರುವುದನ್ನೂ ನೋಡಿದ್ದೇನೆ. ನನ್ನ ಬಗ್ಗೆಯೂ ಮಾತನಾಡಿದ್ದಾರೆ. ಈ ರೀತಿ ಹೇಳಿಕೆಗಳನ್ನು ನೀಡುತ್ತಿರುವವರ ಹೆಸರನ್ನು ವಿಧಾನಸಭೆಯಲ್ಲಿ ಹೇಳಿ ಅವರನ್ನು ನಾಯಕರನ್ನಾಗಿ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Bengaluru Tunnel Road: ಎಸ್ಟೀಮ್ ಮಾಲ್‌ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗೆ 1.5 ಕಿ.ಮೀ. ಉದ್ದದ ನೂತನ ಸುರಂಗ ರಸ್ತೆ: ಡಿಕೆಶಿ

ಎಸ್ಟೀಮ್ ಮಾಲ್‌ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗೆ ನೂತನ ಟನಲ್ ರಸ್ತೆ

Tunnel Road: ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ನಲ್ಲಿ ನಿರ್ಮಾಣ ಮಾಡಿರುವ ನೂತನ ಮೇಲ್ಸೇತುವೆಯನ್ನು ಸೋಮವಾರ ಲೋಕಾರ್ಪಣೆಗೊಳಿಸಿದ ನಂತರ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ವಿಮಾನ ನಿಲ್ದಾಣದಿಂದ ಬರುವವರಿಗೆ ಸೇರಿದಂತೆ ಎಲ್ಲರೂ ಸಂಚಾರದಟ್ಟಣೆ ಅನುಭವಿಸುತ್ತಾ ಇದ್ದರು. ಇದನ್ನು ತಪ್ಪಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಡಿಕೆಶಿ ತಿಳಿಸಿದ್ದಾರೆ.

Monsoon session: ಧರ್ಮಸ್ಥಳದ ಬಗ್ಗೆ ಸುಳ್ಳು ಆಪಾದನೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ.ಶಿವಕುಮಾರ್

ಧರ್ಮಸ್ಥಳದ ಬಗ್ಗೆ ಸುಳ್ಳು ಆಪಾದನೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

Dharmasthala Case: ತನಿಖೆ ಮುಗಿದ ನಂತರ ನೂರಕ್ಕೆ ನೂರರಷ್ಟು ಅವರ ಹೆಸರು, ಫೋಟೋ ಎಲ್ಲವೂ ಆಚೆ ಬರುತ್ತದೆ. ಧರ್ಮಸ್ಥಳ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಹ ಸೂಚನೆ ನೀಡಿದ್ದು ಯಾರಿಗೆ ಯಾವ ರೀತಿ ಬಲಿ ತೆಗೆದುಕೊಳ್ಳಬೇಕೋ, ಯಾವ ಕಾನೂನು ಬಳಸಬೇಕೋ ಅದನ್ನು ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Shakti Scheme: ವಿಶ್ವ ದಾಖಲೆ ಪುಟ ಸೇರಿದ ʼಶಕ್ತಿ ಯೋಜನೆʼ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಂತಸ

ವಿಶ್ವ ದಾಖಲೆ ಪುಟ ಸೇರಿದ ʼಶಕ್ತಿ ಯೋಜನೆʼ; ರಾಮಲಿಂಗಾರೆಡ್ಡಿ ಸಂತಸ

Guarantee Schemes: ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಇಂದು ಹೆಮ್ಮೆ ಮತ್ತು ಗೌರವ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ‌ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿರುವುದೇ ನಮ್ಮ ಸರ್ಕಾರದ ಶಕ್ತಿ‌ ಯೋಜನೆಯ ಯಶಸ್ಸಿಗೆ ಹಿಡಿ‌ದ ಕೈಗನ್ನಡಿಯಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Bengaluru Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: 66/11 ಕೆ.ವಿ. ಯೆಲ್ಲಾರ್ ಬಂಡೆ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಯೆಲ್ಲಾರ್ ಬಂಡೆ ಸ್ಟೇಷನ್‌ ವ್ಯಾಪ್ತಿಯ ಹಲವೆಡೆ ಆ.19ರಂದು ಮಂಗಳವಾರ ಬೆಳಗ್ಗೆ 10.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Hebbal Flyover: ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ; ಫೇವರಿಟ್‌ ಬೈಕ್‌ ಏರಿ ಡಿಕೆಶಿ ಜಾಲಿ ರೈಡ್‌

ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ

Hebbal Flyover Inauguration: ಕೆಆರ್ ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆ ಸಾಗುವ ವಾಹನಗಳ ಸುಗಮ ಸಂಚಾರಕ್ಕೆ ಬಿಡಿಎ ವತಿಯಿಂದ ನಿರ್ಮಿಸಲಾಗಿರುವ ಹೆಬ್ಬಾಳ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಮೊದಲು ಟೇಪ್ ಕತ್ತರಿಸಿ, ನಂತರ ಡಿಸಿಎಂ ಬೈಕ್ ರೈಡ್‌ಗೆ ಹಸಿರು ಬಾವುಟ ತೋರಿ ಚಾಲನೆ ನೀಡಿದ್ದಾರೆ.

ಏಷ್ಯನ್ ಸರ್ಫಿಂಗ್ ಚಾಂಪಿಯನ್‌ಷಿಪ್‌: ಕಂಚಿನ ಪದಕ ಗೆದ್ದಿದ್ದ ರಮೇಶ್‌ ಬೂದಿಗಾಳರನ್ನು ಅಭಿನಂದಿಸಿದ ಸಿದ್ದರಾಮಯ್ಯ!

ಕಂಚಿನ ಪದಕ ಗೆದ್ದಿದ್ದ ರಮೇಶ್‌ ಬೂದಿಗಾಳರನ್ನು ಅಭಿನಂದಿಸಿದ ಸಿದ್ದರಾಮಯ್ಯ!

ತಮಿಳುನಾಡಿನ ಮಹಾಬಲಿಪುರಂನ ಕಡಲ ತೀರದಲ್ಲಿ ಇತ್ತೀಚೆಗೆ ಮುಕ್ತಾಯವಾಗಿದ್ದ 2025ರ ಏಷ್ಯನ್‌ ಸರ್ಫಿಂಗ್‌ ಚಾಂಪಿಯನ್‌ಷಿಪ್‌ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದ ಕರ್ನಾಟಕ ಗದಗ ಜಿಲ್ಲೆಯ ಮೂಡರಗಿ ತಾಲೂಕಿನ ಯುವಕ ರಮೇಶ್‌ ಬೂದಿಹಾಳ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

Dharmasthala case: ಎಫ್‌ಎಸ್‌ಎಲ್‌ ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಎಸ್‌ಐಟಿ ಶೋಧ ಕಾರ್ಯ ಸ್ಥಗಿತ: ಗೃಹ ಸಚಿವ ಪರಮೇಶ್ವರ್‌

ಎಫ್‌ಎಸ್‌ಎಲ್‌ ವರದಿ ಬರುವವರೆಗೆ ಎಸ್‌ಐಟಿ ಶೋಧ ಕಾರ್ಯ ಸ್ಥಗಿತ: ಪರಮೇಶ್ವರ್‌

Home Minister G. Parameshwar: ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆ ಬಹಳ ಗಂಭೀರವಾಗಿ, ಪಾರದರ್ಶಕವಾಗಿ ನಡೆಯುತ್ತಿದೆ. ದೂರುದಾರ ಇಡೀ ಧರ್ಮಸ್ಥಳ ಪೂರ್ತಿ ತೋರಿಸಿದರೆ ಅಗೆಯುವುದಿಲ್ಲ. ಎಷ್ಟು ಕಡೆ ಅಗೆಯುತ್ತೀರಿ ಎಂಬ ಪ್ರಶ್ನೆಗಳು ಬರುತ್ತಿವೆ. ಆತ ಹೇಳಿರುವ ಸ್ಥಳಗಳಲ್ಲಿ ಅಗೆಯಲಾಗಿದೆ. ಶೋಧಕಾರ್ಯ ಮುಂದಕ್ಕೆ ಹೋಗಬೇಕಾ ಬೇಡವೇ ಎಂಬ ನಿರ್ಧಾರವನ್ನು ಎಸ್‌ಐಟಿ ಮಾಡಲಿದೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ.

Dharmasthala: ಧರ್ಮಸ್ಥಳ ಪ್ರಕರಣಕ್ಕೆ ಸ್ಫೋಟಕ ತಿರುವು;- ಒತ್ತಡದಿಂದ ಸುಳ್ಳು ಹೇಳಿದೆ ಎಂದು ಎಸ್‌ಐಟಿ ಮುಂದೆ ಒಪ್ಪಿಕೊಂಡ ಅನಾಮಿಕ ವ್ಯಕ್ತಿ

ಧರ್ಮಸ್ಥಳ ಕೇಸ್ ಗೆ ಟ್ವಿಸ್ಟ್; ಎಸ್ಐಟಿ ಮುಂದೆ ಮುಸುಕುಧಾರಿ ತಪ್ಪೊಪ್ಪಿಗೆ

ಧರ್ಮಸ್ಥಳ ಬುರುಡೆ ರಹಸ್ಯ (Dharmasthala Burial Case) ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ತರ ಬೆಳವಣಿಗೆಯೊಂದು ಆಗಿದ್ದು, ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ಎದುರು ತಪ್ಪೊಪ್ಪಿಕೊಂಡಿದ್ದಾನೆ. ಎಸ್ಐಟಿ ಮುಂದೆ ತಾನು ಒತ್ತಡಕ್ಕೆ ಒಳಗಾಗಿ ಸುಳ್ಳು ಹೇಳಿಕೆ ನೀಡಿರುವುದಾಗಿ ಹೇಳಿದ್ದಾನೆ. ಕಾನೂನು ಪ್ರಕಾರವೇ ಹೆಣ ಹೂತಿದ್ದರೂ, ಕಾನೂನು ಉಲ್ಲಂಘಿಸಿ ಹೂತಿದ್ದಾಗಿ ಹೇಳುವಂತೆ ಮೂವರು 2023ರಲ್ಲಿ ತಮಿಳುನಾಡಿನಿಂದ ಕರೆದುಕೊಂಡು ಬಂದಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

BY Vijayendra: ಧರ್ಮಸ್ಥಳ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ  : ವಿಜಯೇಂದ್ರ

ಧರ್ಮಸ್ಥಳ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ವಿಜಯೇಂದ್ರ

BY Vijayendra: ಧರ್ಮಸ್ಥಳದ ವಿಚಾರದಲ್ಲಿ ಬಹಳ ದೊಡ್ಡ ಷಡ್ಯಂತ್ರ ಇದೆ ಎಂದು ಡಿ.ಕೆ.ಶಿವಕುಮಾರ್ ಅವರೇ ಹೇಳಿಕೆ ಕೊಟ್ಟಿದ್ದಾರೆ. ಸಂದರ್ಭ ಬಂದಾಗ ಉತ್ತರ ನೀಡುತ್ತೇನೆ ಎಂದಿದ್ದಾರೆ. ಇನ್ನೂ ಯಾವಾಗ ಸಮಯ ಬರಲಿದೆ? ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

Harassment: ಶಿವಸೇನೆ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನಲ್ಲಿ ಅತ್ಯಾಚಾರ ಆರೋಪ ದಾಖಲು

ಶಿವಸೇನೆ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನಲ್ಲಿ ಅತ್ಯಾಚಾರ ಆರೋಪ ದಾಖಲು

Physical Abuse: ಚಿತ್ರದುರ್ಗ, ಬೆಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಮಾಜಿ ಶಾಸಕ ನಂತರ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಕೆಂಪೇಗೌಡ ಏರ್‌ಪೋರ್ಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶಾಸಕ ಉತ್ತರ ಪ್ರದೇಶದವನಾಗಿದ್ದಾನೆ.

Mahesh Shetty Thimarodi: ಸಿಎಂ ವಿರುದ್ಧ ಕೊಲೆ ಆರೋಪ; ಮಹೇಶ್ ತಿಮರೋಡಿ ಬಂಧನಕ್ಕೆ ಗೃಹ ಸಚಿವರ ಸೂಚನೆ

ಮಹೇಶ್ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್‌ ಸೂಚನೆ

Mahesh Shetty Thimarodi: ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇಂದು ಸದನದಲ್ಲಿ ತಿಮ್ಮರೋಡಿ ಹೇಳಿಕೆ ಬಗ್ಗೆ ಚರ್ಚೆ ನಡೆದಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

Mysuru News: ಕುಡಿತಕ್ಕೆ ಹಣ ನೀಡದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿರಾಯ!

ಕುಡಿತಕ್ಕೆ ಹಣ ನೀಡದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿರಾಯ!

Mysuru Murder Case: ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ಹತ್ಯೆ ಪ್ರಕರಣ ನಡೆದಿದೆ. ಜಮೀನು ಮಾರಿ ಹಣ ನೀಡುವಂತೆ ಹೆಂಡತಿಯನ್ನು ಪೀಡಿಸುತ್ತಿದ್ದ ಪತಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಭಾರತದಾದ್ಯಂತ ಜಲ ಮರುಪೂರಣ(ಮರುಭರ್ತಿ ಅಥವಾ ಮರುಪೂರೈಕೆ) ಯೋಜನೆಗಳಲ್ಲಿ 37 ಕೋಟಿ ರೂ.ಗಿಂತ ಹೆಚ್ಚಿನ ಹೂಡಿಕೆ ಮಾಡಿದ ಅಮೆಜಾನ್

ವಾರ್ಷಿಕವಾಗಿ ನಿರೀಕ್ಷಿತ 3 ಶತಕೋಟಿ ಲೀಟರ್‌ಗಿಂತ ಹೆಚ್ಚಿನ ಜಲ ಮರುಪೂರಣ

ಮಹಾರಾಷ್ಟ್ರದ ಇತ್ತೀಚಿನ ಯೋಜನೆಯು 1,500 ಹೆಕ್ಟೇರ್‌ಗಳನ್ನು ವ್ಯಾಪಿಸಿದೆ, ವಾರ್ಷಿಕವಾಗಿ 1.3 ಶತಕೋಟಿ ಲೀಟರ್‌ ನೀರನ್ನು ಸೇರಿಸುವ ಗುರಿ ಹೊಂದಿದೆ; 700 ಕೃಷಿ ಕುಟುಂಬಗಳಿಗೆ 80% ಯೋಜಿತ ಆದಾಯ ಹೆಚ್ಚಳವನ್ನು ಬೆಂಬಲಿಸುತ್ತದೆ. ಇತರೆ ಜಲ ಸಂರಕ್ಷಣಾ ಪೋರ್ಟ್‌ ಫೋಲಿಯೊಗಳು ವಾರ್ಷಿಕವಾಗಿ 2 ಶತಕೋಟಿ ಲೀಟರ್‌ಗಿಂತಲೂ ಹೆಚ್ಚು ನೀರನ್ನು ಮರುಪೂರಣಗೊಳಿಸುವ ನಿರೀಕ್ಷೆಯಿದೆ; ಇದು ಬೆಂಗಳೂರು, ಹೈದರಾಬಾದ್, ನವದೆಹಲಿ, ಮುಂಬೈ ನಗರದ ಸಮುದಾಯಗಳಿಗೆ ಹೆಚ್ಚಿನ ಪ್ರಯೋಜನ ನೀಡುತ್ತದೆ.

DK Shivakumar: ನೂತನ ಹೆಬ್ಬಾಳ ಫ್ಲೈಓವರ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ರೋಡ್‌ಕಿಂಗ್‌ ಸವಾರಿ

ನೂತನ ಹೆಬ್ಬಾಳ ಫ್ಲೈಓವರ್‌ನಲ್ಲಿ ಡಿಕೆ ಶಿವಕುಮಾರ್‌ ರೋಡ್‌ಕಿಂಗ್‌ ಸವಾರಿ

Hebbala Flyover: ಬೆಂಗಳೂರಿನಲ್ಲಿ ನೂತನವಾಗಿ ಉದ್ಘಾಟನೆಗೊಂಡ ಹೆಬ್ಬಾಳ ಫ್ಲೈಓವರ್‌ ಮೇಲೆ ಡಿಸಿಎಂ ಡಿಕೆ ಶಿವಕುಮಾರ್‌ ಯೆಜ್ಡಿ ರೋಡ್‌ಕಿಂಗ್‌ ಬೈಕನ್ನು ಚಲಾಯಿಸಿದರು. ನಂತರ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡರು. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಮೇಲ್ಸೇತುವೆಯನ್ನು ಉದ್ಘಾಟಿಸಿದ್ದಾರೆ.

Dharmasthala Case: ಧರ್ಮಸ್ಥಳ ಬಗ್ಗೆ ಅವಹೇಳನಕಾರಿ ವಿಡಿಯೋ ಮಾಡಿದವರಿಗೆ ಎಸ್‌ಐಟಿ ನೋಟಿಸ್

ಧರ್ಮಸ್ಥಳ ಬಗ್ಗೆ ಅವಹೇಳನಕಾರಿ ವಿಡಿಯೋ ಮಾಡಿದವರಿಗೆ ಎಸ್‌ಐಟಿ ನೋಟಿಸ್

ಪ್ರಕರಣದ ಬಗ್ಗೆ ಬೇಕಾಬಿಟ್ಟಿ ಮಾತನಾಡಿರುವವರ ಕುರಿತಂತೆ ಕಳೆದ ಒಂದೂವರೆ ತಿಂಗಳ ಎಲ್ಲಾ ವಿಡಿಯೋಗಳನ್ನು ಎಸ್‌ಐಟಿ ಸಂಗ್ರಹಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಎಸ್‌ಐಟಿ ಸಂಪೂರ್ಣ ಪರಿಶೀಲನೆ ಮಾಡಿದ್ದು, ಅವಹೇಳನಕಾರಿ ವಿಡಿಯೋಗಳು ಹಾಗೂ ಅವುಗಳನ್ನು ಮಾಡಿದವರ ಬಗೆಗೆ ಮಾಹಿತಿ ಸಂಗ್ರಹಿಸಿದೆ.

Hebbala Flyover: ಹೆಬ್ಬಾಳ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಹೆಬ್ಬಾಳ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah: 700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ ಕಡೆಯಿಂದ ಮೇಖ್ರಿ ಸರ್ಕಲ್‌ ವರೆಗೆ ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿಯು 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ.

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ- ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಯಥಾಸ್ಥಿತಿ- ಇಂದಿನ ರೇಟ್‌ ಚೆಕ್‌ ಮಾಡಿ

Gold price today on 18th Aug 2025: ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 9,275 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 10,118 ರೂ.ಗೆ ಬಂದು ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 74,200 ರೂ. ಬಾಳಿದರೆ, 10 ಗ್ರಾಂಗೆ ನೀವು 92,750 ರೂ. ಹಾಗೂ 100 ಗ್ರಾಂಗೆ 9,27,500 ರೂ. ನೀಡಬೇಕಾಗುತ್ತದೆ.

ಮಹಿಳೆಯರ ಕೌಶಲ್ಯಕ್ಕೆ ಬ್ರ್ಯಾಂಡ್‌ ಆದ ನಾಮ್ಸ್‌ಬೆಲ್ʼನ Oyiii

ಮಹಿಳೆಯರ ಕೌಶಲ್ಯಕ್ಕೆ ಬ್ರ್ಯಾಂಡ್‌ ಆದ ನಾಮ್ಸ್‌ಬೆಲ್ʼನ Oyiii

"ಮಹಿಳೆಯರು ಕೇವಲ ಕೊಡುಗೆ ನೀಡುವುದಕ್ಕೆ ಮಾತ್ರ ಸೀಮಿತರಾಗಿಲ್ಲ, ಅವರು ರೂಪಾಂತರಕ್ಕೆ ವೇಗವರ್ಧಕರು ಎಂಬ ನಂಬಿಕೆಯ ಮೇಲೆ ಓಯಿಐಐ ನಿರ್ಮಿಸಲಾಗಿದೆ. ಅವರು ಗ್ರಾಹಕರೊಂದಿಗೆ ಆಳವಾಗಿ ಸಂಪರ್ಕ ಸಾಧಿಸುತ್ತಾರೆ, ವಿಶ್ವಾಸ ಗಳಿಸುತ್ತಾರೆ ಮತ್ತು ವಹಿವಾಟನ್ನು ಮೀರಿದ ನಿಷ್ಠೆ ಯನ್ನು ನಿರ್ಮಿಸುತ್ತಾರೆ.

Mysuru Zoo: ಮೈಸೂರು ಮೃಗಾಲಯದ ಹಿರಿಯಾನೆ ಪದ್ಮಾವತಿ ಇನ್ನಿಲ್ಲ

ಮೈಸೂರು ಮೃಗಾಲಯದ ಹಿರಿಯಾನೆ ಪದ್ಮಾವತಿ ಇನ್ನಿಲ್ಲ

Padmavathi: 1973ರಲ್ಲಿ ಖೆಡ್ಡಾ ಕಾರ್ಯಾಚರಣೆಯ ಸಮಯದಲ್ಲಿ ರಕ್ಷಿಸಲ್ಪಟ್ಟ ಪದ್ಮಾವತಿ 53 ವರ್ಷಗಳ ಕಾಲ ಮೃಗಾಲಯದ ಆರೈಕೆಯಲ್ಲಿತ್ತು. ಪದ್ಮಾವತಿಯ ಜನನ ವರ್ಷ ಸುಮಾರು 1953-54 ಎಂದು ಅಂದಾಜಿಸಲಾಗಿದೆ. ಅವಳು ಮೂರು ಮಕ್ಕಳ ತಾಯಿಯಾಗಿದ್ದಳು. ಗಜಲಕ್ಷ್ಮೀ, ಕೋಮಲ ಮತ್ತು ಅಭಿಮನ್ಯು ಎಂದು ಮೂರು ಮಕ್ಕಳು.

KRS dam: ಭಾರೀ ಮಳೆ, ಕೆಆರ್‌ಎಸ್‌ ಡ್ಯಾಂನಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ

ಭಾರೀ ಮಳೆ, ಕೆಆರ್‌ಎಸ್‌ ಡ್ಯಾಂನಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Mandya: 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್‌ಎಸ್‌ ಜಲಾಶಯ (KRS dam) ಜೂನ್ ಮೊದಲ ವಾರದಲ್ಲೇ ಭರ್ತಿಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಿಂದಾಗಿ ಡ್ಯಾಂನ ಒಳಹರಿವು ಹೆಚ್ಚಾಗಿದೆ. ಕಾವೇರಿ ನದಿ (Cauvery River) ಪಾತ್ರದಲ್ಲಿ ಮತ್ತೆ ಪ್ರವಾಹ (flood) ಭೀತಿ ಎದುರಾಗಿದೆ.

President Draupadi Murmu: ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ

ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ

Mysuru: ಮಾನಸಗಂಗೋತ್ರಿಯಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಎಐಐಎಸ್ಎಚ್) ವಜ್ರಮಹೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಭಾಗವಹಿಸುವ ಬಗ್ಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಎಐಐಎಸ್ ನಿರ್ದೇಶಕಿ ಎಂ.ಪುಷ್ಪಾವತಿ ತಿಳಿಸಿದ್ದಾರೆ

Dharmasthala Case: ಮಧ್ಯಂತರ ವರದಿ ಬಿಡುಗಡೆ ಮಾಡಲು ಸಂಸದ ಯದುವೀರ್‌ ಆಗ್ರಹ

ಧರ್ಮಸ್ಥಳ ಕೇಸ್: ಮಧ್ಯಂತರ ವರದಿ ಬಿಡುಗಡೆ ಮಾಡಲು ಸಂಸದ ಯದುವೀರ್‌ ಆಗ್ರಹ

Yaduveer Wadiyar:‌ ಜನರು ಶ್ರೀ ಕ್ಷೇತ್ರದ ಪರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಪವಿತ್ರ ದೇವಾಲಯದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ವಿರೋಧಿಸುತ್ತಿದ್ದಾರೆ. ಇಂತಹ ಅಪಪ್ರಚಾರವನ್ನು ಕೊನೆಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಬಿಜೆಪಿ, ಸರ್ಕಾರದಿಂದ ಉತ್ತರವನ್ನು ಕೋರಿದೆ ಎಂದಿದ್ದಾರೆ ಯದುವೀರ್.

Loading...