ಎಂಎಲ್‌ಸಿ ನಮೋಶಿಗೆ ಮಾತೃ ವಿಯೋಗ
ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಅವರ ತಾಯಿ ಭೂದೇವಿ ಗಂಗಾಧರ್ ನಮೋಶಿ (94) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಶನಿವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಅ.4ರಂದು (ಇಂದು) ಸಂಜೆ 4 ಗಂಟೆಗೆ ಕಲಬುರಗಿ ನಗರದ ಶಹಾಬಾದ್ ರಸ್ತೆಯಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ನಡೆಯಲಿದೆ