ಜನರ ಜೇಬಿಗೆ ಕತ್ತರಿ ಹಾಕುತ್ತಲೇ 3 ವರ್ಷ ಸವೆಸಿದ್ದು ಒಂದು ಸಾಧನೆಯೇ?: ಜೋಶಿ
Pralhad Joshi: ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದು ಬಳಿಕ ಒಂದೊಂದೇ ಅಗತ್ಯತೆಗಳ ಬೆಲೆ ಏರಿಸಿ ಜನರ ಜೇಬಿಗೆ ಕತ್ತರಿ ಹಾಕುತ್ತಲೇ ಮೂರು ವರ್ಷ ಸವೆಸಿದ್ದು, ಜನರನ್ನು ದುಸ್ಥಿತಿಗೆ ತಳ್ಳಿರುವುದು ಈ ಸರ್ಕಾರದ ಸಾಧನೆಯೇ? ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.