ಸಿಎಸ್‌ಆರ್ ಕಾರ್ಯಕ್ರಮದಡಿ ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳ ಅಭಿವೃದ್ಧಿ
ರಾಯಚೂರು ಜಿಲ್ಲೆಯು ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆಗಳಿಗೆ ಸೀಮಿತ ಸೌಕರ್ಯ ಹೊಂದಿ ದ್ದು, ಈ ನಿಟ್ಟಿನಲ್ಲಿ ಕೊರತೆಯನ್ನು ಎದುರಿಸುತ್ತಿದೆ. ಈ ಕೊರತೆಯನ್ನು ನೀಗಿಸಲು ಟಿಕೆಎಂ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ವಾತಾವರಣವನ್ನು ಉತ್ತಮಗೊಳಿಸುವ ಮತ್ತು ತಾಯಿ ಹಾಗೂ ಮಗುವಿಗೆ ಉತ್ತಮ ಆರೋಗ್ಯ ಸೇವೆ ದೊರಕಿಸುವ ಉದ್ದೇಶದಿಂದ ಹಲವು ಯೋಜನೆಗಳನ್ನು ಕೈಗೊಂಡಿದೆ.