ಮಕ್ಕಳ ಅಶ್ಲೀಲ ಚಿತ್ರ, ವಿಡಿಯೋ ಸಂಗ್ರಹವೂ ಅಪರಾಧ; ಹೈಕೋರ್ಟ್
ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳನ್ನು ಮೊಬೈಲ್ ಫೋನ್ನಲ್ಲಿ ಸಂಗ್ರಹಿಸಿಟ್ಟುಕೊಳ್ಳುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯಿದೆ (ಪೋಕ್ಸೊ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ (ಐಟಿ) ಅಪರಾಧವಾಗಲಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಕೇರಳದ ತ್ರಿಶೂರು ಜಿಲ್ಲೆಯ ಚೊಟ್ಟೂರುಪುರ ಕಿಲ್ಲನೂರಿನ ಪಿ.ಜೆ.ಬಿನೋಜ್ ಎಂಬಾತ ಪ್ರಕರಣದ ಕುರಿತು ಅರ್ಜಿ ಸಲ್ಲಿಸಿದ್ದ.